Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಭಾನುವಾರ, 6 ಡಿಸೆಂಬರ್ 2020 (08:49 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ವೃತ್ತಿರಂಗದಲ್ಲಿ ಉನ್ನತಿಯ ಯೋಗವಿದ್ದರೂ ಅಡೆತಡೆಗಳು ಇದ್ದೇ ಇರುತ್ತವೆ. ಅದನ್ನೆಲ್ಲಾ ದಾಟಿಕೊಂಡು ಹೋಗುವ ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು. ಆರ್ಥಿಕವಾಗಿ ಬಾಕಿ ಹಣ ವಸೂಲಾತಿ ಚಿಂತೆ ಕಾಡಲಿದೆ. ತಾಳ್ಮೆ, ಸಂಯಮ ಅಗತ್ಯ.

ವೃಷಭ: ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ಹಿನ್ನಡೆ ಕಂಡುಬಂದೀತು. ನಿಮ್ಮ ನೆರೆಹೊರೆಯವರಿಂದ ನಿಮಗೆ ಸಕಾಲದಲ್ಲಿ ನೆರವು ಸಿಕ್ಕೀತು.  ಹಿರಿಯರಿಗೆ ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವ ಯೋಗ ಎದುರಾಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಿಥುನ: ನಿಮ್ಮನ್ನು ಕಾಲೆಳೆಯುವವರು ಇದ್ದೇ ಇರುತ್ತಾರೆ. ಅವರನ್ನೆಲ್ಲಾ ಎದುರಿಸಿ ನಿಲ್ಲುವ ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು. ನಿರುದ್ಯೋಗಿಗಳಿಗೆ ಪಾಲಿಗೆ ಬಂದಿದ್ದೇ ಪಂಚಾಮೃತ ಎಂದು ತಿಳಿದುಕೊಳ್ಳಬೇಕು. ಆರ್ಥಿಕವಾಗಿ ಖರ್ಚು ವೆಚ್ಚಗಳ ಬಗ್ಗೆ ಹಿಡಿತವಿರಲಿ.

ಕರ್ಕಟಕ: ಮನಸ್ಸಿಗೆ ಖುಷಿಕೊಡುವ ಕೆಲಸ ಮಾಡಲಿದ್ದೀರಿ. ನಿಮ್ಮ ಕ್ರಿಯಾತ್ಮಕ ಯೋಜನೆಗಳಿಗೆ ತಕ್ಕ ಫಲ ಸಿಗಲಿದೆ. ಕೃಷಿಕರಿಗೆ ವ್ಯವಹಾರದಲ್ಲಿ ಮುನ್ನಡೆಯ ಯೋಗವಿದೆ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಉತ್ತಮ.

ಸಿಂಹ: ನಿಮ್ಮ ಕಷ್ಟನಷ್ಟಗಳಿಗೆ ಸಂಗಾತಿ ಹೆಗಲುಕೊಡಲಿದ್ದಾರೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚ ಮಾಡಲಿದ್ದೀರಿ. ಮಹಿಳೆಯರಿಗೆ ಸಂತಸದ ಸುದ್ದಿ ಆಲಿಸುವ ಯೋಗವಿದೆ.

ಕನ್ಯಾ: ನಿಮ್ಮ ಇಚ್ಛಾನುಸಾರ ನಿರ್ಧಾರ ತೆಗೆದುಕೊಳ್ಳುವುದರಿಂದ ಪ್ರೀತಿ ಪಾತ್ರರ ಮನಸ್ಸಿಗೆ ನೋವುಂಟಾದೀತು. ವೃತ್ತಿರಂಗದಲ್ಲಿ ಮೇಲಧಿಕಾರಿಗಳ ಅಸಹಕಾರ ಅಸಮಾಧಾನವುಂಟು ಮಾಡೀತು. ತಾಳ್ಮೆ, ಸಂಯಮವಿರಲಿ.

ತುಲಾ: ನಿಮ್ಮ ವೈಯಕ್ತಿಕ ಜೀವನದಲ್ಲಿ ಮೂರನೆಯವರಿಗೆ ಮೂಗು ತೂರಿಸಲು ಅವಕಾಶ ಮಾಡಿಕೊಡಬೇಡಿ. ಸಂಗಾತಿಗೆ ಅಚ್ಚರಿಯ ಉಡುಗೊರೆ ನೀಡಲಿದ್ದೀರಿ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿಯಾಗುವ ಯೋಗವಿದೆ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ವೃಶ್ಚಿಕ: ಬಿಡುವಿಲ್ಲದ ಕಾರ್ಯದೊತ್ತಡದಿಂದ ದೇಹಾಯಾಸವಾದೀತು. ಮಂಗಳ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಸಾಂಸಾರಿಕ ಸಮಸ್ಯೆಗಳನ್ನು ಆಪ್ತರೊಂದಿಗೆ ಹಂಚಿಕೊಂಡು ಮನಸ್ಸು ಹಗುರ ಮಾಡಿಕೊಳ್ಳಲಿದ್ದೀರಿ.

ಧನು: ನ್ಯಾಯಾಲಯ ಕಲಾಪಗಳಲ್ಲಿ ಮುನ್ನಡೆ ಕಂಡುಬರಲಿದೆ. ಮನೋಕಾಮನೆಗಳನ್ನು ಪೂರೈಸಲು ಖರ್ಚು ವೆಚ್ಚ ಮಾಡಲಿದ್ದೀರಿ. ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ಸಂಗಾತಿಯ ಸಲಹೆಗಳನ್ನು ಪಾಲಿಸಿದಲ್ಲಿ ಉತ್ತಮ.

ಮಕರ: ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ದೈವಾನುಕೂಲದಿಂದ ನೀವು ಅಂದುಕೊಂಡ ಕೆಲಸಗಳನ್ನು ಸುಗಮವಾಗಿ ನೆರವೇರಿಸಲಿದ್ದೀರಿ. ಬಂಧು ಮಿತ್ರರ ಚಾಡಿ ಮಾತುಗಳಿಗೆ ತಲೆಕೆಡಿಸಿಕೊಳ್ಳಬೇಕಾಗಿಲ್ಲ.

ಕುಂಭ: ಕಳೆದು ಹೋಗಿದ್ದ ಸಂಬಂಧಗಳು ಮರಳಿ ಕೂಡಿಕೊಳ್ಳಲಿವೆ. ಮಹಿಳೆಯರಿಗೆ ಒಡವೆ, ವಸ್ತ್ರ ಖರೀದಿ ಯೋಗ ಕೂಡಿಬರಲಿದೆ. ಅವಿವಾಹಿತರಿಗೆ ಯೋಗ್ಯ ಸಂಬಂಧಗಳು ಕೂಡಿಬರಲಿದೆ. ಕಿರು ಸಂಚಾರ ಮಾಡಬೇಕಾಗುತ್ತದೆ.

ಮೀನ: ಆರ್ಥಿಕವಾಗಿ ಧನಾದಾಯ ಉತ್ತಮವಾಗಿರಲಿದ್ದು, ವ್ಯವಹಾರದಲ್ಲಿ ಚೇತರಿಕೆ ಕಂಡುಬರಲಿದೆ. ಸಾಂಸಾರಿಕವಾಗಿ ಸುಖ ಸಮೃದ್ಧಿಯ ದಿನಗಳಿವು. ಸ್ವಯಂ ವ್ಯಾಪಾರಿಗಳಿಗೆ ಅನುಕೂಲಕರ ವಾತಾವರಣವಿರಲಿದೆ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಮಸ್ಯೆಗಳನ್ನು ಪರಿಹರಿಸಲು ಮಣ್ಣಿನ ಆನೆಯ ವಿಗ್ರಹದಿಂದ ಹೀಗೆ ಮಾಡಿ