ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಮಂಗಳವಾರ, 15 ಡಿಸೆಂಬರ್ 2020 (09:06 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ನಿಮ್ಮ ಉದ್ಯೋಗದಲ್ಲಿ ಅಸಮಾಧಾನ ಉಂಟಾಗಲಿದೆ. ಮಾಡಿದ ಕೆಲಸಕ್ಕೆ ತಕ್ಕ ಮನ್ನಣೆ ಸಿಗುತ್ತಿಲ್ಲ ಎಂಬ ಬೇಸರ ಕಾಡೀತು. ಯೋಗ್ಯ ವಯಸ್ಕರು ಸೂಕ್ತ ವೈವಾಹಿಕ ಸಂಬಂಧಕ್ಕಾಗಿ ಸುಬ್ರಹ್ಮಣ್ಯ ದೇವರ ಪ್ರಾರ್ಥನೆ ಮಾಡಿದರೆ ಉತ್ತಮ.

ವೃಷಭ: ವ್ಯಾಪಾರ, ವ್ಯವಹಾರದಲ್ಲಿ ಅನ್ಯರ ಒತ್ತಡಕ್ಕೆ ಮಣಿದು ನಿರ್ಧಾರ ತೆಗೆದುಕೊಳ್ಳಬೇಕಾಗಿ ಬರಬಹುದು. ಅನ್ಯರ ಮೆಚ್ಚುಗೆ ಪಡೆಯಲು ಹೋಗಿ ತೊಂದರೆಗೆ ಸಿಲುಕಿಕೊಳ್ಳಬೇಡಿ. ಹಿರಿಯರ ಸಲಹೆಗಳನ್ನು ಪಾಲಿಸದಲ್ಲಿ ಉತ್ತಮ.

ಮಿಥುನ: ಉದ್ಯೋಗ ಕ್ಷೇತ್ರದಲ್ಲಿ ಉನ್ನತಿಯ ಯೋಗ ಕಂಡುಬರಲಿದೆ. ವಾಹನ ಚಾಲನೆಯಲ್ಲಿ ಎಚ್ಚರಿಕೆ ಅಗತ್ಯ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶಗಳು ಒದಗಿಬರಲಿದೆ.

ಕರ್ಕಟಕ: ವೃತ್ತಿರಂಗದಲ್ಲಿ ಯಾರೂ ಊಹಿಸಿರದ ರೀತಿಯಲ್ಲಿ ಉನ್ನತ ಸ್ಥಾನಮಾನಕ್ಕೇರಲಿದ್ದೀರಿ. ಆರ್ಥಿಕವಾಗಿ ಸ್ಥಿತಿ ಗತಿ ಸುಧಾರಿಸಲಿದ್ದು, ಹೊಸ ವಸ್ತುಗಳ ಖರೀದಿ ಮಾಡಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.

ಸಿಂಹ: ಪ್ರಯತ್ನ ಮಾಡದೇ ಯಾವುದರಲ್ಲೂ ಫಲ ಸಿಗದು. ನಿರುತ್ಸಾಹ ಬಿಟ್ಟು ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಿ. ಸರಕಾರಿ ಉದ್ಯೋಗಿಗಳಿಗೆ ಉದ್ಯೋಗ ಕ್ಷೇತ್ರದಲ್ಲಿ ಕಾರ್ಯದೊತ್ತಡ ಅಧಿಕವಾಗಲಿದೆ. ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಿ.

ಕನ್ಯಾ: ಪ್ರತೀ ಕೆಲಸದಲ್ಲೂ ಎಚ್ಚರಿಕೆಯಿಂದ ಹೆಜ್ಜೆಯಿಡಬೇಕಾಗುತ್ತದೆ. ನಿಮ್ಮ ಮೇಲೆ ಅಸೂಯೆ ಪಡುವ ವ್ಯಕ್ತಿಗಳು ತೊಂದರೆಗೆ ಕೊಡಲು ಕಾಯುತ್ತಿರುತ್ತಾರೆ. ತಾಳ್ಮೆ, ಸಂಯಮ ಅಗತ್ಯ. ಕುಲದೇವರ ಪ್ರಾರ್ಥನೆ ಮಾಡಿ ಮುನ್ನಡೆಯಿರಿ.

ತುಲಾ: ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಇಂದು ನೀವು ಕೈಗೊಳ್ಳುವ ಕೆಲಸಗಳೆಲ್ಲವೂ ಯಶಸ್ವಿಯಾದೀತು. ಹೊಸ ವ್ಯವಹಾರಗಳಿಗೆ ಬಂಡವಾಳ ಹೂಡಿಕೆ ಮಾಡಲು ಸರಿಯಾದ ದಿನ. ಅನಗತ್ಯ ಚಿಂತೆ ಬೇಡ.

ವೃಶ್ಚಿಕ: ಪ್ರೀತಿ ಪಾತ್ರರನ್ನು ಬಹಳ ದಿನಗಳ ನಂತರ ಭೇಟಿಯಾದ ಖುಷಿ ನಿಮ್ಮದಾಗಲಿದೆ. ನೆರೆಹೊರೆಯವರ ಕಷ್ಟಗಳಿಗೆ ಸ್ಪಂದಿಸಲಿದ್ದೀರಿ. ಕೃಷಿಕರು ಮೈಮರೆತರೆ ದೊಡ್ಡ ಬೆಲೆ ತೆರಬೇಕಾದೀತು. ಹಿರಿಯರ ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಧನು: ಬೇರೆಯವರ ವಿಚಾರದಲ್ಲಿ ಅನಗತ್ಯ ಮೂಗು ತೂರಿಸುವುದನ್ನು ಬಿಡಿ. ವೈಯಕ್ತಿಕವಾಗಿ ಸಾಧನೆ ಮಾಡುವ ಅವಕಾಶಗಳು ಒದಗಿಬರಲಿವೆ. ಕ್ರಿಯಾತ್ಮಕವಾಗಿ ಯೋಚನೆ ಮಾಡಿದರೆ ಉತ್ತಮ. ಪ್ರೀತಿ ಪಾತ್ರರನ್ನು ಭೇಟಿಯಾಗಲಿದ್ದೀರಿ.

ಮಕರ: ಮಾನಸಿಕ ಒತ್ತಡಗಳಿಂದಾಗಿ ಕೆಲಸದ ಮೇಲೆ ಏಕಾಗ್ರತೆ ಕಡಿಮೆಯಾಗಬಹುದು. ನಿಮ್ಮ ಕಷ್ಟಗಳಿಗೆ ಸಂಗಾತಿಯ ಸಾಂತ್ವನ ಸಿಗಲಿದೆ. ನೂತನ ದಂಪತಿಗಳಿಗೆ ಹೊಂದಾಣಿಕೆಯ ಸಮಸ್ಯೆ ಕಾಡೀತು. ದೇವತಾ ಪ್ರಾರ್ಥನೆ ಮಾಡಿ.

ಕುಂಭ: ಅವಕಾಶ ಮತ್ತು ಸಂದರ್ಭಗಳು ನಿಮಗೆ ಪೂರಕವಾಗಿದ್ದು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಿ. ನಿರುತ್ಸಾಹ ಬದಿಗಿಟ್ಟು ಕೆಲಸ ಮಾಡಿದರೆ ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯನೆರವೇರಿಸಲು ಸಿದ್ಧತೆ ನಡೆಸುವಿರಿ.

ಮೀನ: ಅಧಿಕ ಓಡಾಟದಿಂದ ದೇಹಾಯಾಸವಾದೀತು. ಧಾರ್ಮಿಕ ಕಾರ್ಯಗಳಿಗಾಗಿ ಧನವಿನಿಯೋಗ ಮಾಡಲಿದ್ದೀರಿ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಕೊಂಚ ಬಿಡುವು ಸಿಗಲಿದೆ. ಮಕ್ಕಳ ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ದ್ವಾದಶ ರಾಶಿಯವರಿಗೆ 2026 ರಲ್ಲಿ ಪ್ರೇಮ ಸಂಬಂಧದ ಭವಿಷ್ಯ ಹೇಗಿರಲಿದೆ

ಭಯವಾಗುತ್ತಿದ್ದರೆ ಪ್ರಭು ರಾಮಚಂದ್ರನ ಈ ಸ್ತೋತ್ರವನ್ನು ಓದಿ

Horoscope 2026: ಈ ಮೂರು ರಾಶಿಯವರಿಗೆ 2026 ರಲ್ಲಿ ಶನಿ ದೆಸೆಯಿರಲಿದೆ

ಗಣೇಶ ಷೋಡಷ ನಾಮಾವಳಿಗಳು

ಈ ದೋಷವಿದ್ದರೆ ಸುಬ್ರಹ್ಮಣ್ಯ ಮಂಗಳಾಷ್ಟಕಂ ಇಂದು ತಪ್ಪದೇ ಓದಿ

ಮುಂದಿನ ಸುದ್ದಿ
Show comments