ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 16 ಡಿಸೆಂಬರ್ 2020 (08:48 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಏಳಿಗೆಯನ್ನು ತಡೆಯಲು ಯಾರಿಂದಲೂ ಸಾಧ‍್ಯವಾಗದು. ಆದರೆ ಸಾಂಸಾರಿಕವಾಗಿ ಹೊಂದಾಣಿಕೆ ಅಗತ್ಯ. ಅನಗತ್ಯ ಮನಸ್ತಾಪಗಳಿಗೆ ಎಡೆಮಾಡಿಕೊಡದಿರಿ. ಕುಲದೇವರ ಪ್ರಾರ್ಥನೆಯಿಂದ ನೆಮ್ಮದಿ.

ವೃಷಭ: ವೃತ್ತಿರಂಗದಲ್ಲಿ ನಿಮ್ಮ ಕಾರ್ಯಸಾಧನೆಗೆ ಇದುವರೆಗೆ ಇದ್ದ ಅಡೆತಡೆಗಳು ನಿವಾರಣೆಯಾಗಲಿದೆ. ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರಲಿದೆ. ಆರ್ಥಿಕವಾಗಿ ಭವಿಷ್ಯದ ದೃಷ್ಟಿಯಿಂದ ಸರಿಯಾದ ಯೋಜನೆ ಹಾಕಿಕೊಳ್ಳಬೇಕು.

ಮಿಥುನ: ಅನಗತ್ಯ ವಿಚಾರಗಳಿಗೆ ತಲೆಕೆಡಿಸಿಕೊಳ್ಳುವುದು ಬಿಟ್ಟು ನಿಮ್ಮ ಕೆಲಸದ ಕಡೆಗೆ ಗಮನ ಕೊಡಿ. ಹಿಂದೆ ಮಾಡಿದ ತಪ್ಪುಗಳು ಪುನರಾವರ್ತನೆಯಾಗದಂತೆ ಎಚ್ಚರಿಕೆ ವಹಿಸಿ. ಮನಸ್ಸಿಗೆ ಹತ್ತಿರವಾದವರನ್ನು ಭೇಟಿಯಾಗುವ ಯೋಗವಿದೆ.

ಕರ್ಕಟಕ: ಸಾಮಾಜಿಕವಾಗಿ ನಿಮ್ಮ ಕೆಲಸಕಾರ್ಯಗಳಿಗೆ ಜನಮನ್ನಣೆ ಸಿಗಲಿದೆ. ಮೆಚ್ಚಿನ ವ್ಯಕ್ತಿಗಳಿಂದ ಪ್ರಶಂಸೆಗೊಳಗಾಗಲಿದ್ದೀರಿ. ಮನೆಗೆ ಅನಿರೀಕ್ಷಿತವಾಗಿ ಬಂಧುಮಿತ್ರರ ಆಗಮನವಾಗಲಿದೆ. ದೇವತಾ ಪ್ರಾರ್ಥನೆ ಮರೆಯದಿರಿ.

ಸಿಂಹ: ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗಲಿದ್ದು, ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಕಾರ್ಯಾನುಕೂಲಕ್ಕೆ ಕೆಲವೊಂದು ಹೊಂದಾಣಿಕೆ ಮಾಡಿಕೊಳ್ಳಲಿದ್ದೀರಿ. ಇಷ್ಟಮಿತ್ರರ ಭೇಟಿಯಾಗುವ ಯೋಗ ಕೂಡಿಬರಲಿದೆ.

ಕನ್ಯಾ: ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಸಹಕಾರದಿಂದ ನಿಮ್ಮ ಕಾರ್ಯಸಾಧನೆಯಾಗಲಿದೆ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶಗಳು ಎದುರಾಗಲಿದೆ. ಸಂಗಾತಿಯ ಮಾತಿಗೆ ಕಿವಿಗೊಡಬೇಕಾಗುತ್ತದೆ. ಮಕ್ಕಳಿಂದ ಸಂತಸ ಸಿಗಲಿದೆ.

ತುಲಾ: ನಿರುದ್ಯೋಗಿಗಳು ಉದ್ಯೋಗ ಸಂದರ್ಶನ ನಿಮಿತ್ತ ದೂರದೂರಿಗೆ ಪ್ರಯಾಣ ಬೆಳೆಸಲಿದ್ದಾರೆ. ಆರ್ಥಿಕವಾಗಿ ಸಬಲರಾಗಲಿದ್ದು, ನಿಮ್ಮ ಬಹುದಿನಗಳ ಕನಸನ್ನು ನನಸು ಮಾಡಿಕೊಳ್ಳಲಿದ್ದೀರಿ. ದಿನದಂತ್ಯಕ್ಕೆ ನಿರೀಕ್ಷಿಸಿರದ ಸುದ್ದಿ ಕಾದಿದೆ.

ವೃಶ್ಚಿಕ: ಮಹಿಳೆಯರಿಗೆ ತವರಿನ ಕಡೆಯವರ ಭೇಟಿಯಾಗುವ ಯೋಗವಿದೆ. ಅಧಿಕ ಧನಲಾಭಕ್ಕಾಗಿ ಒಳ್ಳೆಯ ಅವಕಾಶಗಳನ್ನು ಹುಡುಕಾಡಲಿದ್ದೀರಿ. ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಲಿದ್ದೀರಿ. ಆರೋಗ್ಯದ ಕಡೆಗೆ ಗಮನವಿರಲಿ.

ಧನು: ನಿಮ್ಮ ಕೆಲವೊಂದು ಸಲಹೆಗಳು ಇತರರಿಗೆ ದುಬಾರಿಯಾದೀತು. ಆದರೆ ಉದ್ಯೋಗ ಕ್ಷೇತ್ರದಲ್ಲಿ ನೀವು ಕೈಗೊಳ್ಳುವ ಯಾವುದೇ ಕೆಲಸವೂ ಯಶಸ್ವಿಯಾಗಲಿದೆ. ವಿದ್ಯಾರ್ಥಿಗಳು ಆಲಸ್ಯತನ ಬಿಡಬೇಕಾಗುತ್ತದೆ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಮಕರ: ಕ್ರಿಯಾತ್ಮಕವಾಗಿ ಯೋಚಿಸುವುದರಿಂದ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಎಷ್ಟೋ ದಿನದಿಂದ ಹುಡುಕುತ್ತಿದ್ದ ವಸ್ತು ಇಂದು ತಾನಾಗೇ ಕೈ ಸೇರಲಿದೆ. ಮಾನಸಿಕವಾಗಿ ಕಾಡುತ್ತಿರುವ ಗೊಂದಲಗಳಿಗೆ ಸಂಗಾತಿಯಿಂದ ಪರಿಹಾರ ಸಿಗಲಿದೆ.

ಕುಂಭ: ನೀವು ಅತಿಯಾಗಿ ನಂಬಿಕೊಂಡಿದ್ದವರಿಂದಲೇ ವಂಚನೆಗೊಳಗಾಗುವ ಸಾಧ್ಯತೆಯಿದೆ. ವ್ಯವಹಾರದ ವಿಚಾರದಲ್ಲಿ ಎಚ್ಚರಿಕೆಯಿಂದ ಹೆಜ್ಜೆಯಿಡಬೇಕು. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ.

ಮೀನ: ಇಷ್ಟ ಮಿತ್ರರೊಂದಿಗೆ ನಿಮ್ಮ ಮನಸ್ಸಿನ ಭಾರ ಹಂಚಿಕೊಳ್ಳಲಿದ್ದೀರಿ. ಆರ್ಥಿಕವಾಗಿ ಹಣಕಾಸಿನ ತೊಂದರೆ ಕಂಡುಬರಬಹುದು. ವ್ಯಾಪಾರ, ವ್ಯವಹಾರದಲ್ಲಿ ಲಾಭ ಕಂಡುಬರಲಿದೆ. ನೆರೆಹೊರೆಯವರ ಚಾಡಿಮಾತುಗಳಿಗೆ ತಲೆಕೆಡಿಸಿಕೊಳ್ಳಬೇಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸಂಜೆ ದೀಪ ಹಚ್ಚುವ ಅತ್ಯಂತ ಮಂಗಳಕರ ಸಮಯ ಯಾವುದು ಗೊತ್ತಾ

ಮೇಷಾದಿ ದ್ವಾದಶ ರಾಶಿಫಲ 2026: ಖ್ಯಾತ ಜ್ಯೋತಿಷಿ ಶ್ರೀ ವೆಂಕಟೇಶ್ವರ ಭಟ್ ಅವರಿಂದ

ಬುಧವಾರ ಗಣೇಶನ ಅನುಗ್ರಹಕ್ಕೆ ಈ ಸ್ತೋತ್ರ ಓದಿ

ವೈಕುಂಠ ಏಕಾದಶಿ ದಿನವಾದ ಇಂದು ಮಹಾವಿಷ್ಣುವಿನ ಈ ಮಂತ್ರವನ್ನು ತಪ್ಪದೇ ಪಠಿಸಿ

ವಿವಾಹ, ಸಂತಾನಕ್ಕೆ ಅಡ್ಡಿಯಾಗುತ್ತಿದ್ದರೆ ಸುಬ್ರಹ್ಮಣ್ಯನ ಈ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments