ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಗುರುವಾರ, 17 ಡಿಸೆಂಬರ್ 2020 (08:54 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
 


ಮೇಷ: ನೀವು ಮಾಡಿದ ತಪ್ಪಿಗೆ ನೀವೇ ಬೆಲೆ ತೆರಬೇಕಾಗುತ್ತದೆ. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಹೆಸರು, ಪ್ರತಿಷ್ಠೆ ಹೆಚ್ಚಲಿದೆ. ಆರ್ಥಿಕವಾಗಿ ಹಣಕಾಸಿಗೆ ತೊಂದರೆಯಿರದು. ಆದರೆ ಭವಿಷ್ಯದ ದೃಷ್ಟಿಯಿಂದ ಕೆಲವು ಯೋಜನೆ ಹಾಕಿಕೊಳ್ಳುವುದು ಉತ್ತಮ.

ವೃಷಭ: ವ್ಯವಹಾರದಲ್ಲಿ ಇದುವರೆಗೆ ಇದ್ದ ಅಡೆತಡೆಗಳು ನಿವಾರಣೆಯಾಗಲಿದೆ. ಮನೆಗೆ ಹೊಸ ಅತಿಥಿಗಳ ಆಗಮನದಿಂದ ಸಂತಸವಾಗಲಿದೆ. ಅತಿಯಾಗಿ ಹೊಗಳುವವರನ್ನು ನಂಬಲು ಹೋಗಬೇಡಿ. ಭವಿಷ್ಯದ ಭದ್ರತೆಗೆ ಕೆಲವು ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ.

ಮಿಥುನ: ಆರ್ಥಿಕವಾಗಿ ನಿಮ್ಮ ಯೋಜನೆಗೆ ಫಲ ಸಿಗಲಿದೆ. ವ್ಯಾಪಾರಸ್ಥರಿಗೆ ವ್ಯವಹಾರದಲ್ಲಿ ಮುನ್ನಡೆ ಸಿಗಲಿದೆ. ವೃತ್ತಿರಂಗದಲ್ಲಿ ನಿಮಗೆ ಆಗದವರಿಂದ ಕಿರಿ ಕಿರಿ ತಪ್ಪದು. ಎಚ್ಚರಿಕೆಯಿಂದ ಹೆಜ್ಜೆಯಿಡಬೇಕು. ತಾಳ್ಮೆ, ಸಂಯಮವಿರಲಿ.

ಕರ್ಕಟಕ: ಕಾರ್ಯರಂಗದಲ್ಲಿ ವಿಘ್ನಗಳು ಇದ್ದರೂ ನಿಮ್ಮ ಬೆಳವಣಿಗೆಯನ್ನು ತಡೆಯಲು ಯಾರಿಂದಲೂ ಸಾಧ್ಯವಾಗದು. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ವಿದ್ಯಾರ್ಥಿಗಳಿಗೆ ಮುನ್ನಡೆಯ ಯೋಗವಿದೆ.

ಸಿಂಹ: ಆರ್ಥಿಕವಾಗಿ ನಿಮ್ಮ ಸ್ಥಿತಿಗತಿಯಲ್ಲಿ ಸುಧಾರಣೆ ಕಂಡುಬರಲಿದೆ. ಇಷ್ಟದೇವತೆಯ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಶುಭವಾಗಲಿದೆ. ಪ್ರೀತಿ ಪಾತ್ರರೊಂದಿಗೆ ನಿಮ್ಮ ಕಷ್ಟಗಳನ್ನು ಹಂಚಿಕೊಳ್ಳಲಿದ್ದೀರಿ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಕನ್ಯಾ: ಮನಸ್ಸಿಗೆ ಇಷ್ಟವಾದವರ ಜತೆ ನಿಮ್ಮ ಭಾವನೆಗಳನ್ನು ಹಂಚಿಕೊಳ್ಳಲಿದ್ದೀರಿ. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗಲಿದೆ. ಆರ್ಥಿಕವಾಗಿ ಹಣಕಾಸಿನ ಮುಗ್ಗಟ್ಟಿಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ಕಿರು ಓಡಾಟ ನಡೆಸಲಿದ್ದೀರಿ.

ತುಲಾ: ಮಿತ್ರರೊಂದಿಗೆ ಅಮೂಲ್ಯ ಸಮಯ ಕಳೆಯಲಿದ್ದೀರಿ. ಇಷ್ಟಭೋಜನ ಮಾಡುವ ಯೋಗವಿದೆ. ಸಾಂಸಾರಿಕವಾಗಿ ದಾಂಪತ್ಯ ಸುಖಕ್ಕೆ ಕೊರತೆಯಿರದು. ಆದರೆ ಔದ್ಯೋಗಿಕವಾಗಿ ಅಡೆತಡೆಗಳು ಬಂದೀತು. ಕುಲದೇವರ ಪ್ರಾರ್ಥನೆ ಮಾಡಿ.

ವೃಶ್ಚಿಕ: ಕಾರ್ಯರಂಗದಲ್ಲಿ ತಪ್ಪು ನಿರ್ಧಾರಗಳಿಂದಾಗಿ ಪಶ್ಚಾತ್ತಾಪ ಪಡಬೇಕಾದೀತು. ನಿರುದ್ಯೋಗಿಗಳಿಗೆ ಕೊನೆಯ ಕ್ಷಣದಲ್ಲಿ ಅವಕಾಶ ಕೈತಪ್ಪಿಹೋದ ನಿರಾಅಸೆಯಾದೀತು. ವಾಹನ ಖರೀದಿ ಯೋಗ ಸದ್ಯದಲ್ಲೇ ಕೂಡಿಬರುವುದು. ದಿನದಂತ್ಯಕ್ಕೆ ಅಚ್ಚರಿ ಕಾದಿದೆ.

ಧನು: ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರಲಿದೆ. ನಿರ್ಧಾರ ಕೈಗೊಳ್ಳಲು ಗೊಂದಲಗಳಾದಾಗ ಮನಸ್ಸಿನ ಮಾತಿಗೆ ಕಿವಿಗೊಡಿ. ಸಂಗಾತಿಯ ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ಧಾರ್ಮಿಕ ಕಾರ್ಯಗಳಿಗಾಗಿ ಧನವಿನಿಯೋಗ ಮಾಡಲಿದ್ದೀರಿ.

ಮಕರ: ಗೃಹಿಣಿಯರ ಬಹುಕಾಲದ ಬೇಡಿಕೆಗೆ ಸ್ಪಂದಿಸದೇ ಇದ್ದರೆ ಕೋಪತಾಪ ಗ್ಯಾರಂಟಿ. ಮಕ್ಕಳ ಭವಿಷ್ಯದ ಬಗ್ಗೆ ಯೋಜನೆ ರೂಪಿಸಲಿದ್ದೀರಿ. ಸ್ವಯಂ ವ್ಯಾಪಾರಿಗಳಿಗೆ ಆರ್ಥಿಕವಾಗಿ ಅಭಿವೃದ್ಧಿಗೆ ಅವಕಾಶಗಳು ಒದಗಿಬರಲಿವೆ. ಸರಿಯಾಗಿ ಬಳಸಿಕೊಳ್ಳಿ.

ಕುಂಭ: ಸಂಗಾತಿಯ ಮನಸ್ಸು ನೋಯಿಸುವ ಕೆಲಸ ಮಾಡಲು ಹೋದರೆ ಪಶ್ಚಾತ್ತಾಪ ಪಡಬೇಕಾಗುತ್ತದೆ. ಯೋಗ್ಯ ವಯಸ್ಕರಿಗೆ ಸೂಕ್ತ ಸಂಬಂಧಗಳು ಒದಗಿಬರಲಿವೆ. ಅತಿಯಾದ ವಿಶ್ವಾಸವೂ ಕೆಲವೊಮ್ಮೆ ಅನಾಹುತಕ್ಕೆ ಕಾರಣವಾದೀತು.

ಮೀನ: ಮಹಿಳೆಯರಿಗೆ ಔದ್ಯೋಗಿಕವಾಗಿ ಮುನ್ನಡೆಯ ಯೋಗವಿದೆ. ಸರಕಾರಿ ಕೆಲಸದಲ್ಲಿರುವವರಿಗೆ ಕಾರ್ಯದೊತ್ತಡ ಕೊಂಚ ಕಡಿಮೆಯಾಗಲಿದೆ. ದುಡುಕು ನಿರ್ಧಾರದಿಂದ ಅನಗತ್ಯ ವಿವಾದ ಮೈಮೇಲೆಳೆದುಕೊಳ್ಳಬೇಡಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸಂಕಟ ಮೋಚನ ಹನುಮಾನ್ ಅಷ್ಟಕಂ ಸ್ತೋತ್ರ

ಹಣಕಾಸಿನ ಸಮಸ್ಯೆಯಿದ್ದರೆ ಕನಕಧಾರಾ ಸ್ತೋತ್ರ ತಪ್ಪದೇ ಓದಿ

2026 ರಲ್ಲಿ ಯಾವ ರಾಶಿಯವರು ಯಾವ ದೇವರ ಪ್ರಾರ್ಥನೆ ಮಾಡಬೇಕು ಗಮನಿಸಿ

ಗಣೇಶ ಕವಚ ಸ್ತೋತ್ರವನ್ನು ಮಕ್ಕಳಿಗೆ ಹೇಳಿಸಿ

ಈ ಐದು ರಾಶಿಯವರಿಗೆ 2026 ರಲ್ಲಿ ಸ್ವಂತ ಮನೆ ಕನಸು ನನಸಾಗುತ್ತದೆ

ಮುಂದಿನ ಸುದ್ದಿ
Show comments