ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶುಕ್ರವಾರ, 18 ಡಿಸೆಂಬರ್ 2020 (08:42 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ನಿಮ್ಮ ಮನಸ್ಸಿಗೆ ಖುಷಿಕೊಡುವ ಕೆಲಸ ಮಾಡಲಿದ್ದೀರಿ. ಉದ್ಯೋಗ ಕ್ಷೇತ್ರದಲ್ಲಿ ಕ್ರಿಯಾತ್ಮಕ ಯೋಚನೆಗಳಿಗೆ ಬೆಂಬಲ ಸಿಗಲಿದೆ. ಸಂಗಾತಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ.

ವೃಷಭ: ಕಾರ್ಯನಿಮಿತ್ತವಾಗಿ ಅನಿರೀಕ್ಷಿತವಾಗಿ ದೂರ ಸಂಚಾರ ಮಾಡಬೇಕಾಗುತ್ತದೆ. ಸಂಚಾರದಲ್ಲಿ ಹೆಚ್ಚಿನ ಜಾಗ್ರತೆ ಅಗತ್ಯ. ಮನೆಯಲ್ಲಿ ಕಳ್ಳತನದ ಭೀತಿ ಎದುರಾಗಲಿದೆ. ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ.

ಮಿಥುನ: ನಿಮ್ಮ ಬೆಲೆ ಬಾಳುವ ವಸ್ತುಗಳ ಮೇಲೆ ಬೇರೆಯವರ ದೃಷ್ಟಿ ಬೀಳಲಿದೆ. ಎಚ್ಚರಿಕೆಯಿಂದ ಕಾಪಾಡಿ. ಹಿರಿಯರ ಸಲಹೆಗಳು ಉಪಯೋಗಕ್ಕೆ ಬರಲಿದೆ. ಸಂಗಾತಿಯ ದೇಹಾರೋಗ್ಯದಲ್ಲಿ ಏರುಪೇರಾದೀತು. ಕಾಳಜಿ ವಹಿಸಿ.

ಕರ್ಕಟಕ: ಮನಸ್ಸಿನ ಆಸೆ ಪೂರೈಸಲು ಕೆಲವೊಂದು ತ್ಯಾಗ ಮಾಡಬೇಕಾಗುತ್ತದೆ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿಯಾಗುವ ಯೋಗವಿದೆ. ಹಿರಿಯರಿಗೆ ಧಾರ್ಮಿಕ ಕ್ಷೇತ್ರಗಳ ಭೇಟಿಯಿಂದ ಮನಸ್ಸಿಗೆ ನೆಮ್ಮದಿ ಸಿಗುವುದು.

ಸಿಂಹ: ಅನಗತ್ಯ ಚಿಂತೆಗಳಿಗೆ ಕಡಿವಾಣ ಹಾಕುವುದು ಒಳಿತು. ಮಿತ್ರರ ಕಷ್ಟಗಳಿಗೆ ಸ್ಪಂದಿಸಲು ಹೋಗಿ ತೊಂದರೆಗೆ ಸಿಲುಕಿಕೊಳ್ಳಲಿದ್ದೀರಿ. ಆರ್ಥಿಕವಾಗಿ ಭವಿಷ್ಯದ ದೃಷ್ಟಿಯಿಂದ ಕೂಡಿಡುವ ಯೋಚನೆಗಳು ಬರಲಿವೆ. ತಾಳ್ಮೆಯಿರಲಿ.

ಕನ್ಯಾ: ಉದ್ಯೋಗ ಕ್ಷೇತ್ರದಲ್ಲಿ ಹಲವು ಅವಕಾಶಗಳು ಎದುರಾಗಲಿದ್ದು, ಯಾವುದನ್ನು ಬಳಸಬೇಕು ಎಂಬ ಗೊಂದಲಗಳು ಕಾಡೀತು. ಸಂಗಾತಿಯ ಅಭಿಪ್ರಾಯಗಳು ಮುಖ್ಯವಾಗಲಿದೆ. ಮಕ್ಕಳ ದೇಹಾರೋಗ್ಯದ ಬಗ್ಗೆ ಚಿಂತೆಯಾದೀತು.

ತುಲಾ: ಯೋಗ್ಯ ವಯಸ್ಕರಿಗೆ ಸದ್ಯದಲ್ಲೇ ಮನಸ್ಸಿಗೆ ಹಿಡಿಸಿದ ಸಂಬಂಧಗಳು ಕೂಡಿಬಂದೀತು. ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ವೃಶ್ಚಿಕ: ಮಾನಸಿಕವಾಗಿ ಋಣಾತ್ಮಕ ಚಿಂತೆಗಳು ಕಾಡಲಿದ್ದು, ಕೆಲಸ ಕಾರ್ಯಗಳಿಗೆ ನಿರುತ್ಸಾಹ ಕಂಡುಬಂದೀತು. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಕೈಗೊಂಡ ಕೆಲಸಗಳು ಯಶಸ್ವಿಯಾಗಲಿದೆ. ಚಿಂತೆ ಬೇಡ.

ಧನು: ಮನೆಯಲ್ಲಿ ಧನ ದಾನ್ಯಾದಿ ಸಂಪತ್ತು ವೃದ್ಧಿಯಾಗಲಿದೆ. ಸರಿಯಾದ ನಿರ್ಧಾರ ಕೈಗೊಂಡರೆ ಭವಿಷ್ಯದಲ್ಲಿ ಯಾವುದೇ ತೊಂದರೆಯಾಗದು. ಪ್ರೀತಿ ಪಾತ್ರರ ಭೇಟಿಯಾಗಲಿದ್ದು, ಮನಸ್ಸಿಗೆ ಸಂತಸವಾಗಲಿದೆ. ಕಿರು ಓಡಾಟ ನಡೆಸಬೇಕಾಗಬಹುದು.

ಮಕರ: ಕಾರ್ಯಕ್ಷೇತ್ರದಲ್ಲಿ ನಿಮ್ಮ ಕೆಲಸಗಳಲ್ಲಿ ಹಸ್ತಕ್ಷೇಪ ಮಾಡುವವರನ್ನು ದೂರವಿಡುವುದೇ ಉತ್ತಮ. ಸರಕಾರಿ ಅಧಿಕಾರಿಗಳಿಗೆ ಕಾರ್ಯದೊತ್ತಡವಿರಲಿದೆ. ಕೋರ್ಟು ಕಚೇರಿ ವ್ಯವಹಾರಗಳಿಗಾಗಿ ಓಡಾಟ ನಡೆಸಬೇಕಾದೀತು.

ಕುಂಭ: ದೇಹಾರೋಗ್ಯದ ಬಗ್ಗೆ ಅತೀವ ಕಾಳಜಿವಹಿಸಬೇಕಾದ ಸಮಯವಿದು. ಹಿತಶತ್ರುಗಳ ಹುನ್ನಾರಗಳು ಬೆಳಕಿಗೆ ಬರಲಿವೆ. ಮಹಿಳೆಯರಿಗೆ ಉದ್ಯೋಗದಲ್ಲಿ ಬಡ್ತಿ ಸಂಭವವಿದೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಏಕಾಗ್ರತೆ ವಹಿಸುವುದು ಅಗತ್ಯ.

ಮೀನ: ಅನಗತ್ಯ ಮಾತು, ಚಿಂತನೆಗಳಿಗೆ ಕಿವಿಗೊಡುವುದನ್ನು ಬಿಟ್ಟು, ನಿಮ್ಮ ಮನಸ್ಸಿನ ಮಾತಿನಂತೆ ನಡೆದುಕೊಳ್ಳಿ. ಸಂಗಾತಿಯ ಆಯ್ಕೆ ವಿಚಾರದಲ್ಲಿ ಗೊಂದಲಗಳು ಕಾಡೀತು. ಆರ್ಥಿಕವಾಗಿ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕುವುದು ಒಳಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಹಣಕಾಸಿನ ಸಮಸ್ಯೆ ನಿವಾರಣೆಗೆ ಓದಬೇಕಾದ ಗಣೇಶ ಸ್ತೋತ್ರ

ಮಂಗಳವಾರ ಆಂಜನೇಯನ ಕೃಪೆಗೆ ಹನುಮದಷ್ಟಕಂ ಓದಿ

ಶ್ರೀ ಕಾಲಭೈರವ ಬ್ರಹ್ಮ ಕವಚಂ ಸ್ತೋತ್ರವನ್ನು ತಪ್ಪದೇ ಓದಿ

ಶನಿ ಮಂತ್ರಗಳನ್ನು ಜಪಿಸಲು ಬೆಸ್ಟ್ ಟೈಂ ಯಾವುದು

ಲಕ್ಷ್ಮಿಯ ಅನುಗ್ರಹಕ್ಕಾಗಿ ಚತುರ್ವಿಂಶತಿ ಸ್ತೋತ್ರ

ಮುಂದಿನ ಸುದ್ದಿ
Show comments