ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಭಾನುವಾರ, 20 ಡಿಸೆಂಬರ್ 2020 (08:50 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಆರ್ಥಿಕವಾಗಿ ಅಗತ್ಯಕ್ಕಿಂತ ಹೆಚ್ಚು ವೆಚ್ಚವಾಗುತ್ತಿದೆ ಎಂಬ ಆತಂಕ ಕಾಡೀತು. ಮನೆಯ ಹಿರಿಯ ಸದಸ್ಯರ ಆರೋಗ್ಯ ಚಿಂತೆಗೀಡು ಮಾಡಲಿದೆ. ಆದರೆ ಅನಗತ್ಯ ವಾದ ವಿವಾದಗಳಿಂದ ದೂರವಿದ್ದರೆ ಉತ್ತಮ. ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಯೋಗವಿದೆ.

ವೃಷಭ: ಮನೆಗೆ ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನವಾಗಲಿದ್ದು, ಸಂತಸದ ವಾತಾವರಣವಿರಲಿದೆ. ಇಷ್ಟಭೋಜನ ಮಾಡುವ ಯೋಗ ಕೂಡಿಬರಲಿದೆ. ಯೋಗ್ಯ ವಯಸ್ಕರಿಗೆ ಉತ್ತಮ ವೈವಾಹಿಕ ಸಂಬಂಧಗಳು ಕೂಡಿಬರಲಿವೆ.

ಮಿಥುನ: ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆ ಬರಲಿದ್ದು, ನಿರುದ್ಯೋಗಿಗಳಿಗೆ ಸಮಾಧಾನವಾಗಲಿದೆ. ಬದಲಾವಣೆಗೆ ಮನಸ್ಸು ಹಾತೊರೆಯುವುದು. ಮಹಿಳೆಯರಿಗೆ ಚಿನ್ನಾಭರಣ ಖರೀದಿ ಯೋಗವಿದೆ. ಕಿರು ಸಂಚಾರ ಮಾಡಲಿದ್ದೀರಿ.

ಕರ್ಕಟಕ: ದೇಹಾರೋಗ್ಯದಲ್ಲಿ ಏರುಪೇರಾಗಲಿದ್ದು, ಆಸ್ಪತ್ರೆಗೆ ಅಲೆದಾಡುವ ಪರಿಸ್ಥಿತಿ ಎದುರಾಗಲಿದೆ. ಧಾರ್ಮಿಕ ಕಾರ್ಯಗಳಿಗೆ ವಿಘ‍್ನ ಭಯ ತೋರಿಬರಲಿದೆ. ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಉನ್ನತ ಹಂತಕ್ಕೇರುವ ಯೋಗವಿದೆ.

ಸಿಂಹ: ಶನಿಯ ಕಾಟದಿಂದಾಗಿ ನಿಮಗೆ ಕಾರ್ಯಾನುಕೂಲಕ್ಕೆ ಅಡ್ಡಿಯಾದೀತು. ಉದರ ಸಂಬಂಧೀ ಆರೋಗ್ಯ ಸಮಸ್ಯೆ ಕಂಡುಬರಲಿದೆ.  ಉದ್ಯೋಗ ಬದಲಾವಣೆಗೆ ಅವಕಾಶಗಳು ತೋರಿಬರಲಿವೆ. ಕುಲದೇವರ ಪ್ರಾರ್ಥನೆ ಮಾಡಿದರೆ ಉತ್ತಮ.

ಕನ್ಯಾ: ಕೆಟ್ಟ ಸ್ನೇಹ ಸಂಗದಿಂದ ಕೆಟ್ಟ ಯೋಚನೆಗಳು ಬಂದೀತು. ಹಿರಿಯರ ಮಾತುಗಳಿಗೆ ಕಿವಿಗೊಡಿ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ. ವಾಹನ ಚಾಲನೆ ವೃತ್ತಿಯಲ್ಲಿರುವವರಿಗೆ ಚಾಲನೆಯಲ್ಲಿ ಎಚ್ಚರಿಕೆ ಅಗತ್ಯ. ತಾಳ್ಮೆ, ಸಂಯಮ ಅಗತ್ಯ.

ತುಲಾ: ಬೇರೆಯವರ ಕೆಲಸಕ್ಕೆ ಸಹಕಾರ ಕೊಡುವ ಅನಿವಾರ್ಯತೆ ಎದುರಾಗಲಿದೆ. ಸಂಗಾತಿಯ ಸಲಹೆಗಳನ್ನು ಪಾಲಿಸದೇ ಇದ್ದರೆ ಮನೆಯಲ್ಲಿ ಶಾಂತಿ ಹಾಳಾಗುವುದು ಖಂಡಿತಾ. ಹೊಸ ಯೋಜನೆಗಳನ್ನು ಜಾರಿಗೆ ತರಲು ಮುಂದಾಗುತ್ತೀರಿ.

ವೃಶ್ಚಿಕ: ಪ್ರೀತಿ ಪಾತ್ರರೊಂದಿಗೆ ಇಂದು ಕಿರು ಸಂಚಾರ, ಸುಂದರ ಕ್ಷಣ ಕಳೆಯುವ ಯೋಗ ಎದುರಾಗಲಿದೆ. ಆರ್ಥಿಕವಾಗಿ ಅಧಿಕ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕುವುದು ಒಳಿತು. ನಿಮ್ಮ ಮನಸ್ಸಿನ ಮಾತಿಗೆ ಬೆಲೆಕೊಟ್ಟು ನಿರ್ಧಾರ ತೆಗೆದುಕೊಳ್ಳಿ.

ಧನು: ನಿಮ್ಮ ಕೆಲವೊಂದು ನಿರ್ಧಾರಗಳು ಪ್ರೀತಿ ಪಾತ್ರರಿಗೆ ಇಷ್ಟವಾಗದೇ ಹೋಗಬಹುದು. ನೆರೆಹೊರೆಯವರ ಮುಂದೆ ನಿಮ್ಮ ಗುಟ್ಟು ಬಯಲಾಗದಂತೆ ನೋಡಿಕೊಳ್ಳಿ. ಮನೆಯಲ್ಲಿ ಕಳ್ಳತನದ ಭೀತಿಯಿದ್ದು, ಎಚ್ಚರಿಕೆಯಿಂದಿರುವುದು ಉತ್ತಮ.

ಮಕರ: ವೃತ್ತಿರಂಗದಲ್ಲಿ ನಿಮ್ಮ ಒಳ್ಳೆಯತನದ ದುರುಪಯೋಗ ಮಾಡಿಕೊಳ್ಳುವವರಿರುತ್ತಾರೆ. ಎಚ್ಚರಿಕೆಯಿಂದ ನಡೆದುಕೊಳ್ಳಿ. ಮಹಿಳೆಯರಿಗೆ ಬಿಡುವಿಲ್ಲದ ಕೆಲಸದಿಂದಾಗಿ ದೇಹಾಯಾಸವಾದೀತು. ಸಾಂಸಾರಿಕವಾಗಿ ಹೊಂದಾಣಿಕೆ ಅಗತ್ಯ.

ಕುಂಭ: ಬೇರೆಯವರು ನಿಮ್ಮ ಮೇಲೆ ಅವರ ಅಭಿಪ್ರಾಯಗಳನ್ನು ಹೇರಲು ಪ್ರಯತ್ನಿಸುತ್ತಾರೆ. ಇಷ್ಟವಿಲ್ಲದೇ ಹೋದರೂ ಕೆಲವೊಂದು ಕೆಲಸಗಳನ್ನು ಮಾಡಬೇಕಾಗಿ ಬಂದೀತು. ವ್ಯಾಪಾರಿಗಳಿಗೆ ಆರ್ಥಿಕವಾಗಿ ಮುನ್ನಡೆಗೆ ಅವಕಾಶಗಳು ಒದಗಿಬರಲಿವೆ.

ಮೀನ: ಸಂಪತ್ತು ವೃದ್ಧಿಗೆ ನಾನಾ ಮಾರ್ಗಗಳನ್ನು ಕಂಡುಕೊಳ್ಳಲಿದ್ದೀರಿ. ಸ್ವಯಂ ವ್ಯಾಪಾರಿಗಳು ವ್ಯವಹಾರದಲ್ಲಿ ಚೇತರಿಕೆ ಕಾಣಲಿದ್ದಾರೆ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

2026 ರಲ್ಲಿ ಯಾವ ರಾಶಿಯವರು ಯಾವ ದೇವರ ಪ್ರಾರ್ಥನೆ ಮಾಡಬೇಕು ಗಮನಿಸಿ

ಗಣೇಶ ಕವಚ ಸ್ತೋತ್ರವನ್ನು ಮಕ್ಕಳಿಗೆ ಹೇಳಿಸಿ

ಈ ಐದು ರಾಶಿಯವರಿಗೆ 2026 ರಲ್ಲಿ ಸ್ವಂತ ಮನೆ ಕನಸು ನನಸಾಗುತ್ತದೆ

ಮಂಗಳವಾರ ದೇವಿಯ ಅನುಗ್ರಹಕ್ಕಾಗಿ ನವರತ್ನ ಮಾಲಿಕಾ ಸ್ತೋತ್ರ

ಶಿವ ಪಂಚಾಕ್ಷರಿ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments