Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಮಂಗಳವಾರ, 22 ಡಿಸೆಂಬರ್ 2020 (09:05 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ನೂತನ ಕಾರ್ಯಾರಂಭಕ್ಕೆ ವಿಘ್ನ ಭೀತಿ ಕಾಡೀತು. ದೂರ ಪ್ರಯಾಣ ಮಾಡುವ ಬಗ್ಗೆ ನಿರ್ಧಾರ ಕೈಗೊಳ‍್ಳಲು ಗೊಂದಲಗಳು ಉಂಟಾದಾಗ ಪ್ರೀತಿ ಪಾತ್ರರ ಸಲಹೆ ಪಡೆಯಲಿದ್ದೀರಿ. ಪೋಷಕರ ಆರೋಗ್ಯದ ಬಗ್ಗೆ ಕಾಳಜಿವಹಿಸಿ.

ವೃಷಭ: ಕಟ್ಟಡ ನಿರ್ಮಾಣ ಮುಂತಾದ ಕಾರ್ಮಿಕ ಕೆಲಸಗಾರರಿಗೆ ಕಾರ್ಯದೊತ್ತಡದಿಂದ ದೇಹಾಯಾಸವಾದೀತು. ಆರ್ಥಿಕವಾಗಿ ಭವಿಷ್ಯದ ದೃಷ್ಟಿಯಿಂದ ಹಣ ಕೂಡಿಡಲಿದ್ದಾರೆ. ವೃತ್ತಿರಂಗದ ಸಮಸ್ಯೆಗಳ ಪರಿಹಾರಕ್ಕೆ ಪ್ರಯತ್ನ ನಡೆಸಲಿದ್ದೀರಿ.

ಮಿಥುನ: ವೃತ್ತಿರಂಗದಲ್ಲಿ ನಿಮ್ಮ ಮುನ್ನಡೆಗೆ ಸಹಕಾರಿಯಾದ ವಾತಾವರಣ ಕಂಡುಬಂದೀತು. ಪ್ರೀತಿ ಪಾತ್ರರಿಗೆ ಅಚ್ಚರಿಯ ಉಡುಗೊರೆ ಕೊಡಲಿದ್ದೀರಿ. ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರಲಿದೆ. ಕಿರು ಸಂಚಾರ ಮಾಡಬೇಕಾಗಿ ಬರಲಿದೆ.

ಕರ್ಕಟಕ: ಕಾರ್ಯರಂಗದಲ್ಲಿ ನಿಮ್ಮ ಬೆನ್ನ ಹಿಂದೆ ಸಂಚು ನಡೆಸುವವರ ಹುನ್ನಾರಗಳು ಬೆಳಕಿಗೆ ಬರಲಿವೆ. ನೂತನ ಕಟ್ಟಡ ಕಾಮಗಾರಿ ಯೋಜನೆಗೆ ಚಾಲನೆ ನೀಡಲು ಇದು ಸಕಾಲ. ಧನ ಗಳಿಕೆಗೆ ನಾನಾ ಮೂಲಗಳನ್ನು ಕಂಡುಕೊಳ್ಳಲಿದ್ದೀರಿ.

ಸಿಂಹ: ನೀವು ಅಂದುಕೊಂಡಿದ್ದ ಕೆಲಸ ಪೂರ್ತಿಯಾಗಬೇಕಾದರೆ ತಾಳ್ಮೆ, ಸಂಯಮ ಅಗತ್ಯ. ಸಂಗಾತಿಯ ಮನಸ್ಸಿಗೆ ನೋವಾಗದಂತೆ ನಡೆದುಕೊಳ್ಳಿ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಶುಭವಾಗುವುದು.

ಕನ್ಯಾ: ಅನ್ಯರ ವಿಚಾರದಲ್ಲಿ ಅನಗತ್ಯ ಮೂಗು ತೂರಿಸಲು ಹೋಗಿ ನಿಮ್ಮ ಸಮಯ ವ್ಯರ್ಥ ಮಾಡಿ. ನಿರುದ್ಯೋಗಿಗಳಿಗೆ ಉತ್ತಮ ಉದ್ಯೋಗಾವಕಾಶಗಳು ಬರಲಿದ್ದು, ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಿ. ಖರ್ಚು ವೆಚ್ಚದ ಬಗ್ಗೆ ಗಮನಕೊಡಿ.

ತುಲಾ: ಬಿಡುವಿನ ವೇಳೆಯ ಸದುಪಯೋಗಪಡಿಸಿಕೊಳ‍್ಳುವ ಬಗ್ಗೆ ಯೋಚನೆ ಮಾಡಲಿದ್ದೀರಿ. ಹೊಸ ಉದ್ಯೋಗಾವಕಾಶಗಳನ್ನು ಹುಡುಕಾಡಲಿದ್ದೀರಿ. ಸಾಮಾಜಿಕವಾಗಿ ಕೀರ್ತಿ ಸಂಪಾದಿಸುವ ಯೋಗವಿದೆ.

ವೃಶ್ಚಿಕ: ಹಿಂದೆ ಮಾಡಿದ ತಪ್ಪಿಗೆ ಪಶ್ಚಾತ್ತಾಪ ಪಡುತ್ತಾ ಕೂತು ಇಂದಿನ ದಿನವನ್ನು ಹಾಳುಮಾಡಿಕೊಳ್ಳಬೇಡಿ. ಪ್ರೀತಿ ಪಾತ್ರರೊಂದಿಗೆ ಸುಂದರ ಕ್ಷಣ ಕಳೆಯಲಿದ್ದೀರಿ. ನೂತನ ದಂಪತಿಗೆ ಹೊಂದಾಣಿಕೆಗೆ ಸಮಯ ಬೇಕಾಗಬಹುದು.

ಧನು: ಆರೋಗ್ಯದ ಬಗ್ಗೆ ಅನಗತ್ಯ ಅನಾದರಣೆ ಸಲ್ಲದು. ಹಿರಿಯರ ಸೇವೆ ಮಾಡುವ ಭಾಗ್ಯ ನಿಮ್ಮದಾಗಲಿದೆ. ಬಂಧು ಮಿತ್ರರ ಭೇಟಿಗಾಗಿ ಮನಸ್ಸು ಹಾತೊರೆಯಲಿದೆ. ಮಹಿಳೆಯರಿಗೆ ತವರಿನ ಕಡೆಯಿಂದ ಉಡುಗೊರೆ ಸಿಗಲಿದೆ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ ಕೇಳಿಬರಲಿದೆ.

ಮಕರ: ನೀವು ಬಯಸಿದ್ದು ಒಂದು, ಆಗುವುದು ಇನ್ನೊಂದು ಆಗುವಂತಹ ಪರಿಸ್ಥಿತಿ ಎದುರಾಗಲಿದೆ. ವೃತ್ತಿರಂಗದಲ್ಲಿ ನಿಮ್ಮ ಕಾರ್ಯಸಾಧನೆಗೆ ಯಾರೂ ಅಡ್ಡಿ ಮಾಡಲಾಗದು. ಆರ್ಥಿಕವಾಗಿ ಅನಗತ್ಯ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ.

ಕುಂಭ: ಮಕ್ಕಳಿಂದ ಅನಿರೀಕ್ಷಿತವಾಗಿ ಸಂತಸದ ವಾರ್ತೆ ಕೇಳಿಬರಲಿದೆ. ಎಲ್ಲವೂ ನೀವಂದುಕೊಂಡಂತೆಯೇ ನಡೆಯುವುದರಿಂದ ಚಿಂತೆ ಬೇಡ. ಸಂಗಾತಿಯೊಂದಿಗೆ ಹೊಂದಾಣಿಕೆಯಿರಲಿ. ಕುಲದೇವರ ಪ್ರಾರ್ಥನೆ ಮಾಡಿ.

ಮೀನ: ತಾಂತ್ರಿಕ ವೃತ್ತಿಯವರಿಗೆ ವಿಘ್ನ ಭಯ ತೋರಿಬಂದೀತು. ಇನ್ನೊಬ್ಬರ ಮೆಚ್ಚುಗೆ ಗಳಿಸಲು ಹೋಗಿ ತೊಂದರೆಗೆ ಸಿಲುಕಿಕೊಳ್ಳಲಿದ್ಧೀರಿ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ವಿಘ್ನ ವಿನಾಯಕನ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ತಪ್ಪದೇ ಓದಿ

ಇಂದು ಅಂದುಕೊಂಡ ಕೆಲಸವಾಗಬೇಕಾದರೆ ಆಂಜನೇಯನ ಈ ಮಂತ್ರ ಹೇಳಿ

ಗ್ರಹಗತಿಗಳ ಸಮಸ್ಯೆಯಿದ್ದಲ್ಲಿ ಈ ಸ್ತೋತ್ರವನ್ನು ತಪ್ಪದೇ ಓದಿ

ಆಂಜನೇಯ ಅಷ್ಟಕಂ ಕನ್ನಡದಲ್ಲಿ ಇಲ್ಲಿದೆ ಈ ದೋಷವಿರುವವರು ತಪ್ಪದೇ ಓದಿ

ಜೀವನದಲ್ಲಿ ಶಾಂತಿ, ಮೋಕ್ಷ ಪ್ರಾಪ್ತಿಯಾಗಲು ಆದಿಲಕ್ಷ್ಮಿಯ ಈ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments