Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಗುರುವಾರ, 24 ಡಿಸೆಂಬರ್ 2020 (08:45 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಪೋಷಕರೊಂದಿಗೆ ಭಿನ್ನಾಭಿಪ್ರಾಯಗಳಾಗದಂತೆ ಎಚ್ಚರಿಕೆ ವಹಿಸಿ. ನಿಮ್ಮ ತಾಳ್ಮೆಯ ನಡೆಯೇ ನಿಮ್ಮ ಯಶಸ್ಸಿಗೆ ಮುನ್ನುಡಿ ಬರೆಯಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ. ಮಾಡಿದ ಕೆಲಸಕ್ಕೆ ತಕ್ಕ ಫಲ ಸಿಗಲಿದೆ.

ವೃಷಭ: ದೈಹಿಕವಾಗಿ ಆರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ಹಿಂದೆ ಮಾಡಿದ ತಪ್ಪಿಗೆ ಫಲ ಅನುಭವಿಸುವವ ಪರಿಸ್ಥಿತಿ ಎದುರಾಗಲಿದೆ. ಸಂಗಾತಿಯ ಮನಸ್ಸಿಗೆ ನೋವಾಗದಂತೆ ನಡೆದುಕೊಳ್ಳಿ. ಖರ್ಚು ವೆಚ್ಚದ ಬಗ್ಗೆ ಹಿಡಿತವಿರಲಿ.

ಮಿಥುನ: ಭೂ ಸಂಬಂಧಿ ವ್ಯವಹಾರಗಳು, ವ್ಯಾಜ್ಯಗಳು ಪರಿಹಾರವಾಗಲಿದೆ. ಆರ್ಥಿಕವಾಗಿ ಚೇತರಿಕೆ ಕಂಡುಬರಲಿದ್ದು, ಅಂದುಕೊಂಡ ಕೆಲಸಗಳನ್ನು ಪೂರ್ತಿ ಮಾಡಲಿದ್ದೀರಿ. ತಾಂತ್ರಿಕ ವೃತ್ತಿಯವರಿಗೆ ಉದ್ಯೋಗದಲ್ಲಿ ಮುನ್ನಡೆಯ ಯೋಗವಿದೆ.

ಕರ್ಕಟಕ: ಬದುಕು ಕಟ್ಟಿಕೊಳ್ಳುವ ನಿಮ್ಮ ಪ್ರಯತ್ನಕ್ಕೆ ಸಂಗಾತಿಯ ಸಾಥ್ ಸಿಗಲಿದೆ. ಹೊಸ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲಿದ್ದೀರಿ. ನೆರೆಹೊರೆಯವರ ಚಾಡಿಮಾತುಗಳಿಗೆ ತಲೆಕೆಡಿಸಿಕೊಳ್ಳಬೇಕಾಗಿಲ್ಲ. ತಾಳ್ಮೆಯಿರಲಿ.

ಸಿಂಹ: ರಾಜಕೀಯ ರಂಗದಲ್ಲಿರುವವರಿಗೆ ಮುನ್ನಡೆಯ ಯೋಗವಿದೆ. ಬಯಸಿದ ಸ್ಥಾನ ಮಾನ ನಿಮ್ಮದಾಗುವುದು. ಯೋಗ್ಯ ವಯಸ್ಕರಿಗೆ ಸೂಕ್ತ ಸಂಬಂಧಗಳು ಸ್ವಲ್ಪದರಲ್ಲೇ ಕೈ ತಪ್ಪಿ ಹೋಗಬಹುದು. ಹಾಗಿದ್ದರೂ ನಿರಾಸೆ ಬೇಡ. ಉತ್ತಮ ದಿನಗಳು ಮುಂದಿದೆ.

ಕನ್ಯಾ: ಬದುಕಿನಲ್ಲಿ ಆಶಾವಾದಿಯಾಗಿರುವುದು ತುಂಬಾ ಮುಖ್ಯ. ಕೈಗೆ ಸಿಕ್ಕ ಭಾಗ್ಯ ಬಾಯಿಗೆ ಬರಲಿಲ್ಲವೆಂದು ನಿರಾಶೆಯಾಗಬೇಡಿ. ಮಕ್ಕಳ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದ್ದು, ಸಾಂಸಾರಿಕವಾಗಿ ನೆಮ್ಮದಿಯಿರುವುದು.

ತುಲಾ: ವೃತ್ತಿರಂಗದಲ್ಲಿ ನಿಮ್ಮ ಮುನ್ನಡೆಗೆ ಅಡ್ಡಿ ಮಾಡುವವರ ಹುನ್ನಾರಗಳು ಬೆಳಕಿಗೆ ಬರಲಿವೆ. ಪ್ರೀತಿ ಪಾತ್ರರಿಗೆ ನಿಮ್ಮ ಮನಸ್ಸಿನ ಭಾವನೆಗಳನ್ನು ಹೇಳಲಿದ್ದೀರಿ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆ ಸಿಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಶ್ಚಿಕ: ದೈವಾನುಕೂಲದಿಂದ ವ್ಯಾವಹಾರಿಕವಾಗಿ ಇಂದು ನೀವು ಕೈ ಹಿಡಿಯಲಿರುವ ಕೆಲಸಗಳೆಲ್ಲವೂ ಯಶಸ್ವಿಯಾಗಲಿವೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು, ಆದರೆ ದುಂದು ವೆಚ್ಚ ಬೇಡ. ಭವಿಷ್ಯಕ್ಕೆ ಯೋಜನೆ ರೂಪಿಸಲಿದ್ದೀರಿ.

ಧನು: ನಿಮ್ಮ ತಪ್ಪಿಗೆ ತಕ್ಕ ಬೆಲೆ ತೆರಲಿದ್ದೀರಿ. ಮಾತಿನ ಮೇಲೆ ನಿಗಾ ಇಲ್ಲದಿದ್ದರೆ ಇತರರ ನಿಷ್ಠುರಕ್ಕೆ ಕಾರಣವಾಗಬೇಕಾದೀತು. ಕೆಳಹಂತದ ನೌಕರರಿಗೆ ಉದ್ಯೋಗ ಕಳೆದುಕೊಳ್ಳುವ ಭೀತಿ ಎದುರಾಗಲಿದೆ. ತಾಳ್ಮೆಯಿರಲಿ.

ಮಕರ: ನಿರುದ್ಯೋಗಿಗಳು ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆ ಬಾರದೇ ನಿರಾಶರಾಗಬಹುದು. ಆದರೆ ನಿಮ್ಮ ಪ್ರಯತ್ನ ಕೈ ಬಿಡಬೇಡಿ. ಮನೆಗೆ ಅನಿರೀಕ್ಷಿತ ಅತಿಥಿಗಳ ಆಗಮನವಾಗಲಿದ್ದು, ಖರ್ಚು ವೆಚ್ಚಗಳು ಹೆಚ್ಚಲಿವೆ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ಕುಂಭ: ಯಾರದೋ ತಪ್ಪಿಗೆ ನೀವು ಬಲಿಪಶುವಾಗುವಂತಹ ಪರಿಸ್ಥಿತಿ ಎದುರಾಗಬಹುದು. ಆದರೆ ಕೌಟುಂಬಿಕವಾಗಿ ಕುಟುಂಬ ಸದಸ್ಯರ ಬಲದಿಂದ ನಿಮ್ಮ ಕಷ್ಟಗಳು ಪರಿಹಾರವಾಗಲಿದೆ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶಗಳು ದೊರೆಯಲಿವೆ.

ಮೀನ: ನಿಮ್ಮ ಬಗ್ಗೆ ಯಾರು ಏನಂದುಕೊಳ್ಳುವರೋ ಎಂಬ ಕೀಳರಿಮೆ ಬೇಡ. ನಿಮ್ಮ ಮನಸ್ಸಿಗೆ ಹಿಡಿಸಿದ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಿ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಶುಭವಾಗುವುದು.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ಹೀಗಿದೆ