Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಗುರುವಾರ, 31 ಡಿಸೆಂಬರ್ 2020 (09:00 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಆರ್ಥಿಕ  ವಿಷಯದಲ್ಲಿ ಸರಿಯಾದ ಯೋಜನೆ ಹಾಕಿಕೊಳ್ಳಬೇಕು. ಇಲ್ಲದೇ ಹೋದರೆ ಭವಿಷ್ಯಕ್ಕೆ ತೊಂದರೆಯಾಗಬಹುದು. ಉದ್ಯೋಗ ವಿಚಾರದಲ್ಲಿ ನಿಮ್ಮ ಏಳಿಗೆಯನ್ನು ಯಾರಿಗೂ ತಡೆಯಲಾಗದು.

ವೃಷಭ: ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಬೇಕಾಗುತ್ತದೆ. ಉದ್ಯೋಗ ಕ್ಷೇತ್ರದಲ್ಲಿ ಅಸಮಾಧಾನದ ವಾತಾವರಣ ಉಂಟಾಗಬಹುದು. ಹಿರಿಯರಿಗೆ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿಯಾಗುವ ಯೋಗವಿದೆ. ಕುಲದೇವರ ಪ್ರಾರ್ಥನೆ ಮಾಡಿ.

ಮಿಥುನ: ಸಮಯ ನಿಮ್ಮ ಅನುಕೂಲಕ್ಕೆ ತಕ್ಕಂತೆ ಇರಲಿದೆ. ನೀವು ಅಂದುಕೊಂಡ ಕೆಲಸಗಳು ಸುಗಮವಾಗಿ ನೆರವೇರಲಿದೆ. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗ ಸಿಗದೇ ನಿರಾಸೆಯಾದೀತು. ವ್ಯಾಪಾರಿಗಳಿಗೆ ಮುನ್ನಡೆಯ ಯೋಗವಿದೆ.

ಕರ್ಕಟಕ: ವ್ಯಾಪಾರ ವ್ಯವಹಾರದಲ್ಲಿ ಒತ್ತಡ ಉಂಟಾದೀತು. ನಿಮ್ಮ ತಾಳ್ಮೆ ಪರೀಕ್ಷೆ ನಡೆಯುವ ಸಂದರ್ಭಗಳು ಎದುರಾದೀತು. ಕೌಟುಂಬಿಕವಾಗಿ ಸಂತೋಷದ ಕ್ಷಣಗಳು ನಿಮ್ಮದಾಗಲಿವೆ. ಶುಭ ಮಂಗಲ ಕಾರ್ಯದಲ್ಲಿ ಭಾಗಿಯಾಗಲಿದ್ದೀರಿ.

ಸಿಂಹ: ಅಧಿಕ ಕಾರ್ಯದೊತ್ತಡದಿಂದ ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ. ಶ್ರದ್ಧೆಯಿಂದ ಮಾಡಿದರೆ ನಿಮ್ಮ ಕೆಲಸಕ್ಕೆ ತಕ್ಕ ಫಲ ಸಿಗಲಿದೆ. ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರಲಿದೆ. ವಿದ್ಯಾರ್ಥಿಗಳಿಗೆ ಮುನ್ನಡೆಯ ಯೋಗವಿದೆ.

ಕನ್ಯಾ:  ಉದ್ಯೋಗ ಕ್ಷೇತ್ರದಲ್ಲಿ ನಾನಾ ರೀತಿಯ ಸಮಸ್ಯೆಗಳಿಂದ ಮನಸ್ಸು ಹೈರಾಣಾಗಲಿದೆ. ಬಾಕಿ ಹಣ ವಸೂಲಾತಿಗೆ ಕಷ್ಟಪಡಬೇಕಾಗುತ್ತದೆ. ಖರ್ಚು ವೆಚ್ಚಗಳ ಬಗ್ಗೆ ಮಿತಿಯಿರಲಿ. ದಾಂಪತ್ಯ ಜೀವನದಲ್ಲಿ ಹೊಂದಾಣಿಕೆ ಅಗತ್ಯ.

ತುಲಾ: ವೃತ್ತಿರಂಗದಲ್ಲಿ ಮೈಮರೆತರೆ ತಕ್ಕ ಫಲ ಅನುಭವಿಸಬೇಕಾದೀತು. ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ದೇಹಾರೋಗ್ಯದ ಬಗ್ಗೆ ನಿರ್ಲ್ಷ್ಯಕ್ಷ ಬೇಡ. ನೂತನ ದಂಪತಿಗಳಿಗೆ ಮಧುಚಂದ್ರದ ಭಾಗ್ಯ ಕೂಡಿಬರಲಿದೆ.

ವೃಶ್ಚಿಕ: ವ್ಯವಹಾರ, ವ್ಯಾಪಾರಗಳು ಕೈಗೂಡಲಿವೆ. ಆರ್ಥಿಕವಾಗಿ ಚೇತರಿಕೆ ಕಂಡುಬರಲಿದ್ದು, ಅಂದುಕೊಂಡಿದ್ದ ಕೆಲಸಗಳನ್ನು ಪೂರ್ತಿ ಮಾಡಲಿದ್ದೀರಿ. ಸಂಗಾತಿಯ ಇಚ್ಛೆಯಂತೆ ಗೃಹೋಪಯೋಗಿ ವಸ್ತುಗಳ ಖರೀದಿ ಮಾಡಲಿದ್ದೀರಿ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ಧನು: ನಿಮ್ಮ ಕೆಲಸಕ್ಕೆ ಇದುವರೆಗೆ ಇದ್ದ ತೊಡಕುಗಳು ನಿವಾರಣೆಯಾಗಲಿವೆ. ಸಮಯ, ಸಂದರ್ಭಗಳು ನಿಮಗೆ ಅನುಕೂಲಕರವಾಗಿದೆ. ಆದಾಯ ದ್ವಿಗುಣವಾಗಲಿದೆ. ಮನೆಗೆ ಅನಿರೀಕ್ಷಿತವಾಗಿ ಬಂಧುಮಿತ್ರರ ಆಗಮನವಾಗಲಿದೆ.

ಮಕರ: ಉದ್ಯೋಗ ಕ್ಷೇತ್ರದಲ್ಲಿ ಕಾರ್ಯದೊತ್ತಡ ಅಧಿಕವಾಗಲಿದೆ. ಮಾನಸಿಕವಾಗಿ ಋಣಾತ್ಮಕ ಚಿಂತೆಗಳು ಕಾಡಿ ಬಂದೀತು. ನಿಮ್ಮ ದುಃಖ ದುಮ್ಮಾನಗಳನ್ನು ಸಂಗಾತಿಯೊಂದಿಗೆ ಹಂಚಿಕೊಳ್ಳಲಿದ್ದೀರಿ. ಕಿರು ಸಂಚಾರ ಮಾಡಬೇಕಾಗುತ್ತದೆ.

ಕುಂಭ: ಕಾರ್ಯರಂಗದಲ್ಲಿ ನಿಮ್ಮ ಏಳಿಗೆಗೆ ಅಡ್ಡಿ ಮಾಡುವವರ ಬಗ್ಗೆ ಎಚ್ಚರಿಕೆಯಿಂದಿರಿ. ಸರಕಾರಿ ನೌಕರರಿಗೆ ಕಾರ್ಯಭಾರ ಕೊಂಚ ಕಡಿಮೆಯಾಗುವುದು. ಪ್ರೀತಿ ಪಾತ್ರರೊಂದಿಗೆ ಅಮೂಲ್ಯ ಸಮಯ ಕಳೆಯಲಿದ್ದೀರಿ. ಖರ್ಚು ವೆಚ್ಚಗಳ ಬಗ್ಗೆ ಮಿತಿಯಿರಲಿ.

ಮೀನ: ನಿಮ್ಮ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ. ಉದ್ಯೋಗ ರಂಗದಲ್ಲಿ ನಿಮ್ಮ ಕೆಲಸಗಳಿಗೆ ಸಹೋದ್ಯೋಗಿಗಳ ಸಹಕಾರ ಸಿಗಲಿದೆ. ಖರ್ಚು ವೆಚ್ಚಗಳು ಅಧಿಕವಾಗಲಿದೆ. ಅವಸರದಲ್ಲಿ ನಿರ್ಧಾರ ತೆಗೆದುಕೊಳ್ಳಲು ಹೋಗಬೇಡಿ. ತಾಳ್ಮೆ, ಸಂಯಮ ಅಗತ್ಯ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ಹೀಗಿದೆ