Daily Horoscope
✕

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 27 ಜನವರಿ 2021 (08:37 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ವೃತ್ತಿರಂಗದಲ್ಲಿ ಸದ್ಯದಲ್ಲೇ ನಿಮ್ಮ ಭಾಗ್ಯದ ಬಾಗಿಲು ತೆರೆಯಲಿದೆ. ನಿರುದ್ಯೋಗಿಗಳಿಗೆ ತಕ್ಕ ಉದ್ಯೋಗಾವಕಾಶಗಳು ದೊರೆಯಲಿವೆ. ಕೌಟುಂಬಿಕವಾಗಿ ಸಂಗಾತಿಯೊಂದಿಗೆ ಕೆಲವೊಂದು ವಿಚಾರಗಳನ್ನು ಹಂಚಿಕೊಳ್ಳಲು ಹಿಂಜರಿಯುವಿರಿ. ತಾಳ್ಮೆಯಿರಲಿ.

ವೃಷಭ: ಮನಸ್ಸಿನಾಳದಲ್ಲಿ ಕೊರೆಯುತ್ತಿದ್ದ ಚಿಂತೆಗಳಿಗೆ ಕಡಿವಾಣ ಹಾಕಲು ಪ್ರಯತ್ನ ನಡೆಸಲಿದ್ದೀರಿ. ವೃತ್ತಿರಂಗದಲ್ಲಿ ನಿಮ್ಮ ಏಳಿಗೆಯನ್ನು ತಡೆಯಲು ಯಾರಿಂದಲೂ ಸಾಧ್ಯವಾಗದು. ವಿದ್ಯಾರ್ಥಿಗಳಿಗೆ ಸಾಧನೆ ಮಾಡಬೇಕಾದರೆ ಪರಿಶ್ರಮವೂ ಅಗತ್ಯ.

ಮಿಥುನ: ಉದ್ಯೋಗ ಕ್ಷೇತ್ರದಲ್ಲಿ ಬರುವ ಸಮಸ್ಯೆಗಳಿಗೆ ಸಹೋದ್ಯೋಗಿಗಳ ನೆರವು ಸಿಗಲಿದೆ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಶುಭವಾಗುವುದು. ಹಿರಿಯರಿಗೆ ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ.

ಕರ್ಕಟಕ: ಬೇರೆಯವರ ಕಷ್ಟಕ್ಕೆ ಸ್ಪಂದಿಸಲು ಹೋಗಿ ತೊಂದರೆಗೆ ಸಿಲುಕಿಕೊಳ್ಳಬೇಡಿ. ಮಾನಸಿಕವಾಗಿ ಕಾಡುತ್ತಿದ್ದ ವಿಚಾರಗಳನ್ನು ಪ್ರೀತಿಪಾತ್ರರೊಂದಿಗೆ ಹಂಚಿಕೊಂಡು ಹಗುರವಾಗುವುದು ಉತ್ತಮ. ದೇವತಾ ಪ್ರಾರ್ಥನೆ ಮಾಡಿ.

ಸಿಂಹ: ನೀವು ಮಾಡುವ ಕೆಲಸಗಳಿಂದಲೇ ಸಮಾಜದಲ್ಲಿ ಸ್ಥಾನ ಮಾನ ಹೆಚ್ಚಲಿದೆ. ಇತರರಿಗೆ ಸಹಾಯ ಮಾಡುವ ಗುಣ ಮುಂದೊಂದು ನಿಮಗೆ ಒಳಿತು ಮಾಡಲಿದೆ. ಆರ್ಥಿಕವಾಗಿ ಹಣಕಾಸಿನ ತೊಂದರೆಗಳು ನಿವಾರಣೆಯಾಗಲಿದೆ.

ಕನ್ಯಾ: ಪ್ರೀತಿ ಪಾತ್ರರೊಂದಿಗೆ  ಸಮಯ ಕಳೆಯಲು ಸಾಧ‍್ಯವಾಗದೇ ಮನಸ್ಸಿಗೆ ಬೇಸರವಾದೀತು. ಬಯಸಿದ ವಸ್ತು ಖರೀದಿಸಲು ಖರ್ಚು ವೆಚ್ಚಗಳಾದೀತು. ಮಕ್ಕಳ ವಿಚಾರದಲ್ಲಿ ಎಚ್ಚರಿಕೆಯ ನಿರ್ಧಾರ ಕೈಗೊಳ್ಳುವುದು ಉತ್ತಮ.

ತುಲಾ: ವೃತ್ತಿರಂಗದಲ್ಲಿ ಅಭಿವೃದ್ಧಿದಾಯಕ ವಾತಾವರಣವಿದ್ದರೂ ಬದಲಾವಣೆಗೆ ಸಿದ್ಧರಾಗಬೇಕಾಗುತ್ತದೆ. ವ್ಯಾಪಾರಿಗಳಿಗೆ ಆದಾಯ ವೃದ್ಧಿಗೆ ಹೊಸ ದಾರಿಗಳು ಕಂಡುಬರಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ.

ವೃಶ್ಚಿಕ: ಇದುವರೆಗೆ ಕಾಡುತ್ತಿದ್ದ ವೃತ್ತಿರಂಗದ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಸಂಗಾತಿಯೊಂದಿಗೆ ಪರಾಮರ್ಶಿಸಿ ನಿರ್ಧಾರ ತೆಗೆದುಕೊಳ್ಳುವುದು ಸೂಕ್ತ. ಅನಿರೀಕ್ಷಿತವಾಗಿ ಪ್ರೀತಿ ಪಾತ್ರರನ್ನು ಭೇಟಿ ಮಾಡುವುದರಿಂದ ಮನಸ್ಸಿಗೆ ಸಂತಸವಾಗಲಿದೆ.

ಧನು: ಮನೆಯಲ್ಲಿ ಸಣ್ಣ ಪುಟ್ಟ ಮನಸ್ತಾಪಗಳು ಕಂಡುಬಂದೀತು. ಮಾತಿನ ಮೇಲೆ ನಿಗಾ ಇರಲಿ. ತಾಳ್ಮೆ, ಸಂಯಮ ಅಗತ್ಯ. ಶೈಕ್ಷಣಿಕ ರಂಗದಲ್ಲಿರುವವರಿಗೆ ಪ್ರಗತಿ ಯೋಗವಿದೆ. ಅನಿರೀಕ್ಷಿತ ಪ್ರಯಾಣಕ್ಕೆ ಸಿದ್ಧತೆ ನಡೆಸಲಿದ್ದೀರಿ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ಮಕರ: ಕಾರ್ಯನಿಮಿತ್ತ ಅಧಿಕ ಓಡಾಟದಿಂದ ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗವಿದೆ. ಕುಲದೇವರ ಪ್ರಾರ್ಥನೆ ಮಾಡಿದರೆ ಒಳಿತು.

ಕುಂಭ: ನಿಮ್ಮ ಮನಸ್ಸಿನಲ್ಲಿರುವ ವಿಚಾರವನ್ನು ಪ್ರೀತಿ ಪಾತ್ರರೊಂದಿಗೆ ಹಂಚಿಕೊಳ್ಳುವುದರಿಂದ ಹಗುರವಾಗಲಿದ್ದೀರಿ. ನೂತನ ದಂಪತಿಗಳಿಗೆ ಹೊಂದಾಣಿಕೆ ಕೊರತೆ ಉಂಟಾದೀತು. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ ಸಿಗಲಿದೆ.

ಮೀನ: ಹೊಸ ಕೆಲಸಗಳಿಗೆ ಕೈ ಹಾಕಲು ಇದು ಸಕಾಲ. ನಿಮ್ಮ ಕಾರ್ಯಸಾಧನೆಗೆ ಪೂರಕ ವಾತಾವರಣವಿರಲಿದೆ. ದಾಂಪತ್ಯ ಸುಖಕ್ಕೆ ಕೊರತೆಯಿರದು. ವೃತ್ತಿರಂಗದಲ್ಲಿ ತಟಸ್ಥರಾಗಿರುವುದೇ ಉತ್ತಮ. ದೂರ ಸಂಚಾರಕ್ಕೆ ಸಿದ್ಧತೆ ನಡೆಸುವಿರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ನಿತ್ಯ ಬೆಳಿಗ್ಗೆ ಈ ಸೂರ್ಯ ಸ್ತೋತ್ರ ಪಠಿಸಿದರೆ ಸಕಲ ರೋಗಗಳಿಂದ ಮುಕ್ತಿ

ಶನಿಯ ಪವರ್ ಫುಲ್ ಮಂತ್ರಗಳಲ್ಲಿ ಇದೂ ಒಂದು

ಲಕ್ಷ್ಮೀ ದೇವಿಯ ಅನುಗ್ರಹಕ್ಕಾಗಿ ಓದಿ ಶ್ರೀ ಭದ್ರಲಕ್ಷ್ಮಿ ಸ್ತೋತ್ರಂ

ಭಯ ನಿವಾರಣೆಗಾಗಿ ಗುರು ರಾಘವೇಂದ್ರ ಆಪತ್ಪರಿಹರಣ ಸ್ತೋತ್ರ

ಶ್ರೀ ಗಣನಾಯಕಾಷ್ಟಕಂ ಸ್ತೋತ್ರಂ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments