ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶನಿವಾರ, 30 ಜನವರಿ 2021 (08:47 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಸಿಟ್ಟಿನ ಭರದಲ್ಲಿ ನಿರ್ಧಾರ ಕೈಗೊಳ್ಳಲು ಹೋಗಿ ಅವಾಂತರ ಮಾಡಿಕೊಳ್ಳಿ. ಸಂಗಾತಿಯ ಮನಸ್ಸು ಅರಿತು ನಡೆದುಕೊಳ್ಳಿ. ಆರ್ಥಿಕವಾಗಿ ಭವಿಷ್ಯದ ದೃಷ್ಟಿಯಿಂದ ಕೆಲವೊಂದು ಯೋಜನೆ ಹಮ್ಮಿಕೊಳ್ಳಲಿದ್ದೀರಿ.

ವೃಷಭ: ಶೀತ ಸಂಬಂಧೀ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆ ಚಿಂತೆಗೆ ಕಾರಣವಾದೀತು. ದೂರ ಪ್ರಯಾಣ ಕೆಲವು ದಿನಗಳ ಕಾಲ ಮುಂದೂಡುವುದೇ ಉತ್ತಮ. ಹತ್ತು ಹಲವು ಚಿಂತೆಗಳನ್ನು ಕೆಲವು ದಿನ ಮರೆತು ಪ್ರೀತಿ ಪಾತ್ರರೊಂದಿಗೆ ಕಾಲ ಕಳೆಯಿರಿ.

ಮಿಥುನ: ಹುಟ್ಟುಗುಣ ಸುಟ್ಟರೂ ಬದಲಾಗದು ಅಂತಾರಲ್ಲ, ಹಾಗೆಯೇ ಕೆಲವೊಂದು ಬದಲಾಯಿಸಲು ಹೋಗದಿರುವುದೇ ಉತ್ತಮ. ಬೇರೆಯವರ ವಿಚಾರದಲ್ಲಿ ಅನಗತ್ಯ ಚಿಂತೆ ಬೇಡ. ಆರ್ಥಿಕವಾಗಿ ಖರ್ಚು ವೆಚ್ಚಗಳ ಬಗ್ಗೆ ಹಿಡಿತವಿರಲಿ.

ಕರ್ಕಟಕ: ಆತುರದ ನಿರ್ಧಾರದಿಂದ ತೊಂದರೆಯೇ ಹೆಚ್ಚು. ವೃತ್ತಿರಂಗದಲ್ಲಿ ಬರುವ ಸಮಸ್ಯೆಗಳ ನಿವಾರಣೆಗೆ ಸಹೋದ್ಯೋಗಿಗಳ ನೆರವು ಪಡೆಯುವಿರಿ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚಗಳಾದೀತು.

ಸಿಂಹ: ಎಷ್ಟೋ ದಿನದಿಂದ ನೀವು ಹುಡುಕುತ್ತಿದ್ದ ವಸ್ತು ಇಂದು ತಾನಾಗೇ ನಿಮ್ಮ ಕೈ ಸೇರಲಿದೆ. ಬಯಸಿದ ವ್ಯಕ್ತಿಗಳ ಭೇಟಿಯಿಂದ ಮನಸ್ಸಿಗೆ ಸಂತಸವಾಗಲಿದೆ. ವೈಯಕ್ತಿಕ ಆರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ದೇವತಾ ಪ್ರಾರ್ಥನೆ ಮರೆಯದಿರಿ.

ಕನ್ಯಾ: ನಿಮ್ಮ ಉದ್ದೇಶಿತ ಕೆಲಸಗಳಿಗೆ ಕೆಲವೊಂದು ಅಡ್ಡಿ ಆತಂಕಗಳು ಎದುರಾಗಲಿವೆ. ನಯವಂಚಕರೊಂದಿಗೆ ವ್ಯವಹರಿಸುವಾಗ ಎಚ್ಚರ. ವ್ಯಾಪಾರಿಗಳಿಗೆ ಮುನ್ನಡೆಯ ಯೋಗವಿದೆ. ವಿದ್ಯಾರ್ಥಿಗಳ ಕಠಿಣ ಪರಿಶ್ರಮ ಅಗತ್ಯ.

ತುಲಾ: ಗೃಹಿಣಿಯರಿಗೆ ಸಂಪತ್ತು ವೃದ್ಧಿಯಾಗಲಿದೆ. ಬಯಸಿದ ವಸ್ತುಗಳ ಖರೀದಿಗೆ ಇದು ಸಕಾಲ. ಕಾರ್ಯರಂಗದಲ್ಲಿ ಪ್ರತಿಷ್ಠಿತರ ಸಹವಾಸದಿಂದ ಕೆಲಸ ಸುಗಮವಾಗಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಭ್ಯವಾಗಲಿದೆ.

ವೃಶ್ಚಿಕ: ಶುಭ ಮಂಗಲ ಕಾರ್ಯಗಳು ವಿಳಂಬವಾಗಿ ನೆರವೇರೀತು. ತಾಳ್ಮೆ, ಸಂಯಮ ಅಗತ್ಯ. ಉದ್ಯೋಗ ಕ್ಷೇತ್ರದಲ್ಲಿ ಸ್ವಜನ ಪಕ್ಷಪಾತದಿಂದ ಮನಸ್ಸಿಗೆ ಬೇಸರವಾದೀತು. ಹಿರಿಯರಿಗೆ ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಯೋಗ ಕೂಡಿಬರಲಿದೆ.

ಧನು: ಆಡಿದ ಮಾತಿನಂತೆ ನಡದುಕೊಳ್ಳಲು ಕಲಿಯಿರಿ. ಕಿರಿಯರ ವಿಚಾರದಲ್ಲಿ ಅನಗತ್ಯವಾಗಿ ಮೂಗು ತೂರಿಸಲು ಹೋಗಬೇಡಿ. ಸಂಗಾತಿಯ ಮಾತುಗಳಿಗೆ ಕಿವಿಗೊಡಿ. ಆರ್ಥಿಕವಾಗಿ ಹಣಕಾಸಿಗೆ ತೊಂದರೆಯಿರದು. ಮಿತವಾಗಿ ವೆಚ್ಚ ಮಾಡಿ.

ಮಕರ: ಆಪ್ತರೊಂದಿಗೆ ಸಮಾಲೋಚನೆ ಮಾಡುವುದರಿಂದ ನಿಮ್ಮ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಯೋಗ್ಯ ವಯಸ್ಕರಿಗೆ ನಿಧಾನವಾಗಿಯಾದರೂ ಸೂಕ್ತ ಸಂಬಂಧಗಳು ಕೂಡಿಬರಲಿವೆ. ಕೃಷಿಕರಿಗೆ ಲಾಭವಿಲ್ಲದಿದ್ದರೂ ನಷ್ಟವಾಗದು. ಚಿಂತೆ ಬೇಡ.

ಕುಂಭ: ಮನಸ್ಸಿನಲ್ಲೇ ಕೊರಗುತ್ತಿದ್ದ ವಿಚಾರಕ್ಕೆ ಪರಿಹಾರ ಕಂಡುಕೊಳ್ಳಲಿದ್ದೀರಿ. ಕೆಲಸದ ವಿಚಾರದಲ್ಲಿ ವಿಳಂಬದ ನಿರ್ಧಾರ ಒಳ್ಳೆಯದಲ್ಲ. ಸಂಗಾತಿಯ ಸಲಹೆಗಳನ್ನು ಸ್ವೀಕರಿಸಬೇಕಾಗುತ್ತದೆ. ಮಕ್ಕಳ ಭವಿಷ್ಯಕ್ಕೆ ಯೋಜನೆ ರೂಪಿಸಲಿದ್ದೀರಿ.

ಮೀನ: ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಓಡಾಟ ನಡೆಸಬೇಕಾಗುತ್ತದೆ. ನಿಮ್ಮ ಪ್ರಾಮಾಣಿಕತೆಗೆ ತಕ್ಕ ಬೆಲೆ ಸಿಗುವುದು. ಋಣಾತ್ಮಕ ಚಿಂತೆಗಳು ಕಾಡದಂತೆ ನೋಡಿಕೊಳ್ಳಿ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಫಲಿತಾಂಶ ಸಿಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸಂಜೆ ದೀಪ ಹಚ್ಚುವಾಗ ಪಠಿಸಬಹುದಾದ ಸ್ತೋತ್ರಗಳು ಇಲ್ಲಿವೆ

ಕೆಟ್ಟ ದೃಷ್ಟಿ ನಿವಾರಿಸಿ ಸಂಪತ್ತು ವೃದ್ಧಿಗೆ ಈ ಲಕ್ಷ್ಮೀ ಮಂತ್ರ ಪಠಿಸಿ

ಸಂಜೆ ದೀಪ ಹಚ್ಚುವ ಅತ್ಯಂತ ಮಂಗಳಕರ ಸಮಯ ಯಾವುದು ಗೊತ್ತಾ

ಮೇಷಾದಿ ದ್ವಾದಶ ರಾಶಿಫಲ 2026: ಖ್ಯಾತ ಜ್ಯೋತಿಷಿ ಶ್ರೀ ವೆಂಕಟೇಶ್ವರ ಭಟ್ ಅವರಿಂದ

ಬುಧವಾರ ಗಣೇಶನ ಅನುಗ್ರಹಕ್ಕೆ ಈ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments