Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 3 ಫೆಬ್ರವರಿ 2021 (08:45 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಉದ್ಯೋಗ ಕ್ಷೇತ್ರದಲ್ಲಿ ಹಲವು ಅವಕಾಶಗಳು ಬರಲಿವೆ. ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಿ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ. ಯಂತ್ರೋಪಕರಣಗಳ ಕೆಲಸ ಮಾಡುವವರಿಗೆ ಮುನ್ನಡೆಯ ಯೋಗವಿದೆ.

ವೃಷಭ: ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಕೆಲಸಗಳು ಯಶಸ್ವಿಯಾಗಲಿವೆ. ಸಂಗಾತಿಗೆ ಅನಿರೀಕ್ಷಿತ ಉಡುಗೊರೆ ನೀಡಲಿದ್ದಾರೆ. ಯೋಗ್ಯ ವಯಸ್ಕರಿಗೆ ಸದ್ಯದಲ್ಲೇ ಕಂಕಣ ಬಲ ಕೂಡಿಬರಲಿದೆ.

ಮಿಥುನ: ಮನಸ್ಸು ಗೊಂದಲದ ಗೂಡಾಗಲಿದ್ದು, ನಿರ್ಧಾರ ತೆಗೆದುಕೊಳ‍್ಳಲು ಹಿಂದೆ ಮುಂದೆ ನೋಡುವ ಪರಿಸ್ಥಿತಿ ಎದುರಾದೀತು. ಸ್ವಯಂ ವೃತ್ತಿಯವರಿಗೆ ಶತ್ರು ಕಾಟದಿಂದ ಮುಕ್ತಿ ಸಿಗಲಿದೆ. ಆಸ್ತಿ ವಿವಾದಗಳಿಗೆ ಪರಿಹಾರ ಕಂಡುಕೊಳ್ಳಲಿದ್ದೀರಿ.

ಕರ್ಕಟಕ: ನಿಮ್ಮ ಬಹುದಿನಗಳ ಕನಸು ನನಸು ಮಾಡಿಕೊಳ್ಳಲು ಪ್ರಯತ್ನ ಮುಂದುವರಿಸಲಿದ್ದೀರಿ. ಆರ್ಥಿಕವಾಗಿ ಹಣಕಾಸಿನ ವಿಚಾರದಲ್ಲಿ ಇದುವರೆಗೆ ಇದ್ದ ಸಮಸ್ಯೆಗಳು ನಿವಾರಣೆಯಾಗಲಿವೆ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ.

ಸಿಂಹ: ನಿಮ್ಮ ಒಳ್ಳೆಯ ನಿರ್ಧಾರಕ್ಕೆ ಸಂಗಾತಿಯ ಸಹಕಾರ ಸಿಗಲಿದೆ. ಸಣ್ಣ ಮಟ್ಟದ ವ್ಯಾಪಾರಿಗಳಿಗೆ ಆರ್ಥಿಕ ಅಭಿವೃದ್ಧಿಗೆ ಅವಕಾಶಗಳು ಸಿಗಲಿವೆ. ಸಾಮಾಜಿಕವಾಗಿ ಉನ್ನತ ಸ್ಥಾನ ಮಾನ ಗಳಿಸಲಿದ್ದೀರಿ. ಕಿರು ಓಡಾಟ ನಡೆಸಲಿದ್ದೀರಿ.

ಕನ್ಯಾ: ಅತಿಯಾದ ತಾಳ್ಮೆಯೂ ಒಮ್ಮೊಮ್ಮೆ ಉಪಯೋಗಕ್ಕೆ ಬರದು. ವೃತ್ತಿರಂಗದಲ್ಲಿ ಮೇಲಧಿಕಾರಿಗಳೊಂದಿಗೆ ಕಿರಿ ಕಿರಿ ಮಾಡಿಕೊಳ್ಳಲಿದ್ಧೀರಿ. ಸಾಲ ಬಾಧೆಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರಲಿದೆ.

ತುಲಾ: ಹಿರಿಯರ ಹಿಂದೆ ನೀಡಿದ ಕೆಲವೊಂದು ಸಲಹೆಗಳು ಇಂದು ಉಪಯೋಗಕ್ಕೆ ಬರಲಿದೆ. ಕಷ್ಟ ಕಾಲದಲ್ಲಿ ಮಿತ್ರರ ಸಹಾಯ ಸಿಗುವುದು. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆ ಬರಲಿದೆ. ದಿನದಂತ್ಯಕ್ಕೆ ಅಚ್ಚರಿ ಸುದ್ದಿ.

ವೃಶ್ಚಿಕ: ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲು ಮನಸ್ಸು ಹಾತೊರೆಯುತ್ತದೆ. ನಿಮ್ಮ ನೇರ ನುಡಿ ಕೆಲವರ ನಿಷ್ಠುರಕ್ಕೆ ಕಾರಣವಾಗಬಹುದು. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚಗಳಾಗಲಿವೆ. ದೇವತಾ ಪ್ರಾರ್ಥನೆ ಮಾಡಿ.

ಧನು: ನಿಮಗೆ ಸಿಕ್ಕ ಸ್ಥಾನ ಮಾನವನ್ನು ಉಳಿಸಿಕೊಳ್ಳುವ ಜವಾಬ್ಧಾರಿ ನಿಮ್ಮ ಮೇಲಿರಲಿದೆ. ಮಾತಿನ ಮೇಲೆ ನಿಗಾ ಇಡಿ. ಸಂಗಾತಿಯ ಸಂತೋಷಕ್ಕೆ ಕಾರಣರಾಗಲಿದ್ದೀರಿ. ವೃತ್ತಿರಂಗದಲ್ಲಿ ನಿಮ್ಮ ಆತ್ಮಾಭಿಮಾನಕ್ಕೆ ಧಕ್ಕೆ ತರುವ ಕೆಲಸ ಮಾಡಬೇಡಿ.

ಮಕರ: ನಿಮ್ಮ ಮನದಿಂಗಿತವನ್ನು ಪ್ರೀತಿ ಪಾತ್ರರಲ್ಲಿ ಹಂಚಿಕೊಳ್ಳಲಿದ್ದೀರಿ. ಕೆಳ ಹಂತದ ನೌಕರರಿಗೆ ಉನ್ನತ ಸ್ಥಾನಕ್ಕೇರುವ ಅವಕಾಶ ತೋರಿಬರಲಿದೆ. ಯಾವುದೇ ಕೆಲಸ ಮಾಡುವ ಮುನ್ನ ಕುಟುಂಬಸ್ಥರ ಅಭಿಪ್ರಾಯ ತಿಳಿದುಕೊಳ್ಳಿ.

ಕುಂಭ: ನಿಮ್ಮ ಮನಸ್ಸಿನ ದುಃಖ ಪ್ರೀತಿ ಪಾತ್ರರೊಂದಿಗೆ ಹಂಚಿಕೊಳ್ಳಲು ಉತ್ತಮ ಅವಕಾಶ ಸಿಗಲಿದೆ. ವೃತ್ತಿರಂಗದಲ್ಲಿ ನಿಮಗೆ ಎದುರಾಗಿರುವ ತೊಡಕುಗಳು ನಿವಾರಣೆಯಾಗಲಿವೆ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಮೀನ: ಸರಕಾರಿ ನೌಕರರಿಗೆ ಸ್ಥಾನ ಪಲ್ಲಟವಾಗುವ ಸಾಧ‍್ಯತೆಯಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿಗೆ ಖರ್ಚು ವೆಚ್ಚಗಳಾದೀತು. ಕಾರ್ಯನಿಮಿತ್ತ ಕಿರು ಓಡಾಟ ನಡೆಸುವಿರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Shani Mantra: ಶನಿ ರಕ್ಷಾಸ್ತವಃ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ತಪ್ಪದೇ ಇಂದು ಓದಿ

Ram Navami 2025: ದಿನಾಂಕ, ಶುಭ ಮುಹೂರ್ತ ಇಲ್ಲಿದೆ

Saraswathi Mantra: ವಿದ್ಯೆ ತಲೆಗೆ ಹತ್ತಬೇಕೆಂದರೆ ಸರಸ್ವತಿಯ ಈ ಸ್ತೋತ್ರ ಓದಿ

Krishna Mantra: ಶ್ರೀಕೃಷ್ಣಾಷ್ಟಕಂ ಪ್ರತಿನಿತ್ಯ ಓದಿ: ಕನ್ನಡದಲ್ಲಿ ಇಲ್ಲಿದೆ

Lakshmi Mantra: ಹಣಕಾಸಿನ ಸಮಸ್ಯೆಯಿದ್ದರೆ ತಪ್ಪದೇ ಈ ಮಂತ್ರ ಓದಿ

ಮುಂದಿನ ಸುದ್ದಿ
Show comments