ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
ಮೇಷ: ಜೀವನದ ಸಣ್ಣ ಪುಟ್ಟ ಖುಷಿಗಳ ಕಡೆಗೆ ಗಮನಕೊಡಿ. ಬೇಡದ ವಿಚಾರಗಳಿಗೆ ಮೂಗು ತೂರಿಸಲು ಹೋಗಬೇಡಿ. ದೇಹಾರೋಗ್ಯದಲ್ಲಿ ಸಣ್ಣ ಪುಟ್ಟ ಸಮಸ್ಯೆಗಳು ಕಂಡುಬಂದೀತು. ಕಾರ್ಯನಿಮಿತ್ತ ಕಿರು ಸಂಚಾರ ನಡೆಸಲಿದ್ದೀರಿ.
ವೃಷಭ: ಕೌಟುಂಬಿಕ ಮನಸ್ತಾಪಗಳಿಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ಸಾಮಾಜಿಕ ಚಟುವಟಿಕೆಗಳಿಂದ ಮನಸ್ಸಿಗೆ ಸಂತೋಷ ಸಿಗಲಿದೆ. ವೃತ್ತಿರಂಗದಲ್ಲಿ ಬರುವ ಮಿಥ್ಯಾರೋಪಗಳಿಗೆ ತಲೆಕೆಡಿಸಿಕೊಳ್ಳಬೇಕಾಗಿಲ್ಲ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.
ಮಿಥುನ: ಮನೆಯಲ್ಲಿ ಶುಭ ಮಂಗಲ ಕಾರ್ಯಗಳನ್ನು ನೆರವೇರಿಸಲು ಸಿದ್ದತೆ ನಡೆಸಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಹಿರಿಯರಿಗೆ ದೇವತಾ ಕಾರ್ಯಕ್ರಮಗಳಲ್ಲಿ ಭಾಗಿಯಾಗುವ ಯೋಗ.
ಕರ್ಕಟಕ: ವೃತ್ತಿರಂಗದಲ್ಲಿ ನಿಮ್ಮ ಸಹನೆಯ ಪರೀಕ್ಷೆ ನಡೆಯಲಿದೆ. ಮೇಲಧಿಕಾರಿಗಳಿಂದ ಕಿರಿ ಕಿರಿ ಇರಲಿದೆ. ನಿರುದ್ಯೋಗಿಗಳಿಗೆ ಅನೇಕ ಉದ್ಯೋಗಾವಕಾಶಗಳು ಬರಲಿವೆ. ಬಳಸಿಕೊಳ್ಳಿ. ದಿನದಂತ್ಯಕ್ಕೆ ಅಚ್ಚರಿ ಸುದ್ದಿ.
ಸಿಂಹ: ನೀವು ಅಂದುಕೊಂಡಿದ್ದ ಕೆಲಸಗಳು ಅನಿರೀಕ್ಷಿತವಾಗಿ ನಡೆದುಹೋಗಲಿದೆ. ಮಾನಸಿಕವಾಗಿ ಬಾಧೆ ನೀಡುತ್ತಿದ್ದ ವಿಚಾರಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳಲಿದ್ದೀರಿ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಉತ್ತಮ.
ಕನ್ಯಾ: ಅರ್ಧಕ್ಕೇ ನಿಂತ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ವೈಯಕ್ತಿಕ ವಿಚಾರಗಳನ್ನು ಆಪ್ತರೊಂದಿಗೆ ಹೇಳಿಕೊಳ್ಳಲಿದ್ದೀರಿ. ಆರ್ಥಿಕವಾಗಿ ಹಣ ಗಳಿಕೆಗೆ ನಾನಾ ಮಾರ್ಗಗಳನ್ನು ಕಂಡುಕೊಳ್ಳಲಿದ್ದೀರಿ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.
ತುಲಾ: ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆ ಬರಲಿದೆ. ವೃತ್ತಿರಂಗದಲ್ಲಿ ಉನ್ನತ ಸ್ಥಾನಕ್ಕೇರುವ ಅವಕಾಶಗಳು ಒದಗಿಬರಲಿವೆ. ಆರ್ಥಿಕವಾಗಿ ಅನಗತ್ಯ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕುವುದು ಉತ್ತಮ.
ವೃಶ್ಚಿಕ: ಮೆಚ್ಚಿನ ವ್ಯಕ್ತಿಗಳನ್ನು ಭೇಟಿಯಾಗುವ ನಿಮ್ಮ ಕನಸು ಸದ್ಯದಲ್ಲೇ ನನಸಾಗಲಿದೆ. ವಿದ್ಯಾರ್ಥಿಗಳಿಗೆ ಸಾಧನೆಗೆ ತಕ್ಕ ಪುರಸ್ಕಾರ ಸಂದಾಯವಾಗಲಿದೆ. ಕಲಾ ಕ್ಷೇತ್ರದಲ್ಲಿರುವವರಿಗೆ ಕೀರ್ತಿ ಸಂಪಾದಿಸುವ ಯೋಗ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.
ಧನು: ಅವಿವಾಹಿತರಿಗೆ ವೈವಾಹಿಕ ಪ್ರಸ್ತಾಪಗಳು ಬರಲಿವೆ. ನೆರೆಹೊರೆಯವರು ನಿಮ್ಮ ಗುಟ್ಟು ತಿಳಿಯಲು ಪ್ರಯತ್ನಿಸುತ್ತಾರೆ. ಸಂಗಾತಿಯ ಮಾತಿಗೆ ಕಿವಿಗೊಡಿ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ. ತಾಳ್ಮೆ, ಸಂಯಮ ಅಗತ್ಯವಿದೆ.
ಮಕರ: ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಅಂದುಕೊಂಡಿದ್ದ ಕೆಲಸಗಳು ಸುಗಮವಾಗಿ ನೆರವೇರಲಿದೆ. ವ್ಯಾಪಾರಿಗಳಿಗೆ ಆರ್ಥಿಕವಾಗಿ ಲಾಭದಾಯಕ ದಿನಗಳಿವು. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.
ಕುಂಭ: ಮನೆಯಲ್ಲಿ ಧಾರ್ಮಿಕ ಕಾರ್ಯಗಳನ್ನು ನೆರವೇರಿಸಲಿದ್ದೀರಿ. ವ್ಯಾಪಾರ, ವ್ಯವಹಾರದಲ್ಲಿ ಕೊಂಚ ಚೇತರಿಕೆ ಕಂಡುಬರಲಿದ್ದು, ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯಾಗಲಿದೆ. ಮನೆಗೆ ಅನಿರೀಕ್ಷಿತ ಅತಿಥಿಗಳ ಆಗಮನ ಸಾಧ‍್ಯತೆ.
ಮೀನ: ನೂತನ ದಂಪತಿಗಳಿಗೆ ಏಕಾಂತದ ಕ್ಷಣ ಕಳೆಯುವ ಯೋಗ. ಹೊಸ ವ್ಯವಹಾರದಲ್ಲಿ ಹೂಡಿಕೆ ಮಾಡಲು ಕೆಲವು ದಿನ ಕಾಯುವುದು ಉತ್ತಮ. ಸಂಗಾತಿಯ ಬಹುದಿನಗಳ ಬೇಡಿಕೆ ಈಡೇರಿಸಲಿದ್ದೀರಿ. ಇಷ್ಟದೇವರ ಪ್ರಾರ್ಥನೆ ಮಾಡುವುದನ್ನು ಮರೆಯದಿರಿ.