Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 10 ಫೆಬ್ರವರಿ 2021 (08:45 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಉದ್ಯೋಗ ಕ್ಷೇತ್ರದಲ್ಲಿ ಮಾಡದ ತಪ್ಪಿಗೆ ಅನಿಸಿಕೊಳ್ಳುವ ದುರ್ವಿಧಿ ನಿಮ್ಮದಾಗಲಿದೆ. ಆದರೆ ತಾಳ್ಮೆ, ಸಂಯಮ ಕಳೆದುಕೊಳ್ಳಬೇಡಿ. ಹೊಸ ಅವಕಾಶಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಹಣಕಾಸಿನ ಖರ್ಚು ವೆಚ್ಚದ ಬಗ್ಗೆ ಕಡಿವಾಣವಿರಲಿ.

ವೃಷಭ: ನಿಮ್ಮ ಕೈಗೆ ಸಿಗದ ವಸ್ತುವಿನ ಬಗ್ಗೆ ಅತಿಯಾದ ವ್ಯಾಮೋಹ ಬೇಡ. ವೃತ್ತಿರಂಗದಲ್ಲಿ ಸಮಸ್ಯೆಗಳಿಗೆ ಸಹೋದ್ಯೋಗಿಗಳ ನೆರವು ಸಿಗಲಿದೆ. ಕೃಷಿಕರಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದ ಸ್ಥಿತಿಯಾದೀತು. ತಾಳ್ಮೆಯಿರಲಿ.

ಮಿಥುನ: ಮನಸ್ಸಿನ ಆಸೆ ಪೂರೈಸಲು ಕೆಲವೊಂದು ತ್ಯಾಗ ಮಾಡಬೇಕಾಗುತ್ತದೆ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಸಂಗಾತಿಯ ಬಹುದಿನಗಳ ಕನಸು ನನಸಾಗಿಸಲಿದ್ದೀರಿ. ಹಿರಿಯರಿಗೆ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.

ಕರ್ಕಟಕ: ಎಂದೋ ಅಂದುಕೊಂಡಿದ್ದ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಕಾರ್ಯರಂಗದಲ್ಲಿ ವಿಘ್ನಭಯ ಕಂಡುಬಂದೀತು. ಹಿತಶತ್ರುಗಳ ಬಗ್ಗೆ ಎಚ್ಚರಿಕೆಯಿರಲಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ಸಿಂಹ: ವೈಯಕ್ತಿಕ ಲಾಭಗಳಿಗಾಗಿ ಸ್ನೇಹಿತರೊಂದಿಗೆ ಬಾಂಧವ್ಯ ಹಾಳು ಮಾಡಿಕೊಳ್ಳಬೇಡಿ. ಪ್ರೇಮಿಗಳ ಗುಟ್ಟು ಮನೆಯವರ ಎದುರು ಬಹಿರಂಗವಾಗಲಿದೆ. ಕಲಾ ಕ್ಷೇತ್ರದಲ್ಲಿರುವವರಿಗೆ ಕೀರ್ತಿ ಸಂಪಾದಿಸುವ ಯೋಗವಿದೆ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ಕನ್ಯಾ: ನೆರೆಹೊರೆಯವರು ನಿಮ್ಮ ಗುಟ್ಟು ತಿಳಿಯಲು ಕಾತುರರಾಗಿರುತ್ತಾರೆ. ನಿಮ್ಮ ಸಾಂಸಾರಿಕ ವಿಚಾರದಲ್ಲಿ ಮೂರನೆಯವರಿಗೆ ಮೂಗು ತೂರಿಸಲು ಅವಕಾಶ ಕೊಡಬೇಡಿ. ಧನಾದಾಯ ಗಳಿಕೆ ಹೆಚ್ಚಿಸಲು ಮಾರ್ಗ ಕಂಡುಕೊಳ್ಳಲಿದ್ಧೀರಿ.

ತುಲಾ: ಮಾನಸಿಕವಾಗಿ ಒಂದು ರೀತಿಯ ಋಣಾತ್ಮಕ ಯೋಚನೆಗಳು ಕಂಡುಬರಲಿದ್ದು, ಕೆಲಸದಲ್ಲಿ ನಿರುತ್ಸಾಹ ಮೂಡಿಬರಲಿದೆ. ಸಂಗಾತಿಯೊಂದಿಗೆ ಮನಸ್ಸಿನ ಮಾತುಗಳನ್ನು ಹಂಚಿಕೊಳ್ಳಲಿದ್ಧೀರಿ. ಕುಲದೇವರ ಪ್ರಾರ್ಥನೆ ಮಾಡಿ.

ವೃಶ್ಚಿಕ: ಇಷ್ಟ ವ್ಯಕ್ತಿಗಳ ಭೇಟಿ, ಭೋಜನ ಮನಸ್ಸಿಗೆ ಖುಷಿ ನೀಡಲಿದೆ. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ಸಂತೋಷ ಸಿಗಲಿದೆ. ವೃತ್ತಿರಂಗದಲ್ಲಿ ಉನ್ನತ ಸ್ಥಾನಕ್ಕೇರುವ ಯೋಗವಿದೆ. ವ್ಯಾಪಾರಿಗಳಿಗೆ ಮುನ್ನಡೆಯ ಯೋಗ.

ಧನು: ಪರ ದೂಷಣೆ, ಪರ ನಿಂದನೆಗೆ ಕಿವಿಗೊಟ್ಟು ಮನಸ್ಸು ಹಾಳು ಮಾಡಿಕೊಳ್ಳಬೇಡಿ. ವಿದ್ಯಾರ್ಥಿಗಳಿಗೆ ಅಭ್ಯಾಸದ ಕಡೆಗೆ ಹೆಚ್ಚಿನ ಗಮನ ಕೊಡಬೇಕಾಗುತ್ತದೆ. ಯಂತ್ರೋಪಕರಣಗಳ ವೃತ್ತಿಯಲ್ಲಿರುವವರಿಗೆ ಮುನ್ನಡೆಯ ಯೋಗವಿದೆ.

ಮಕರ: ಆದಾಯವಿದ್ದಷ್ಟೇ ಅನಿರೀಕ್ಷಿತ ಖರ್ಚು ವೆಚ್ಚಗಳೂ ತಲೆದೋರಲಿವೆ. ಮಿತ್ರರ ಕಷ್ಟಗಳಿಗೆ ಸ್ಪಂದಿಸಲಿದ್ದೀರಿ. ವಾಹನ ಖರೀದಿ ಯೋಗ ಸದ್ಯದಲ್ಲೇ ನನಸಾಗಲಿದೆ. ಕಾಮಗಾರಿ ಕೆಲಸಗಳನ್ನು ಕೆಲವು ಕಾಲ ಮುಂದೂಡುವುದು ಒಳಿತು.

ಕುಂಭ: ನಿಮ್ಮ ಕೆಲವೊಂದು ಮಾತುಗಳಿಗೆ ಪ್ರೀತಿ ಪಾತ್ರರ ಮನಸ್ಸಿಗೆ ನೋವುಂಟು ಮಾಡೀತು. ಮಾತಿನ ಮೇಲೆ ನಿಗಾ ಇರಲಿ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಹಳೆಯ ಮಿತ್ರನ ಭೇಟಿ ಯೋಗವಿದೆ.

ಮೀನ: ನಿಮ್ಮ ಚಂಚಲ ಮನಸ್ಸಿನಿಂದಾಗಿ ನಿರ್ಧಾರ ತೆಗೆದುಕೊಳ್ಳಲು ಕಷ್ಟವಾದೀತು. ಸಂಗಾತಿಯ ಸಲಹೆಗೆ ಕಿವಿಗೊಡಬೇಕಾಗುತ್ತದೆ. ನೂತನ ಕಾರ್ಯಾರಂಭಕ್ಕೆ ಸಿದ್ಧತೆ ನಡೆಸಲಿದ್ದೀರಿ. ಸರಕಾರಿ ನೌಕರರಿಗೆ ಕಾರ್ಯದೊತ್ತಡವಿರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಇಂದು ಅಂದುಕೊಂಡ ಕೆಲಸವಾಗಬೇಕಾದರೆ ಆಂಜನೇಯನ ಈ ಮಂತ್ರ ಹೇಳಿ

ಗ್ರಹಗತಿಗಳ ಸಮಸ್ಯೆಯಿದ್ದಲ್ಲಿ ಈ ಸ್ತೋತ್ರವನ್ನು ತಪ್ಪದೇ ಓದಿ

ಆಂಜನೇಯ ಅಷ್ಟಕಂ ಕನ್ನಡದಲ್ಲಿ ಇಲ್ಲಿದೆ ಈ ದೋಷವಿರುವವರು ತಪ್ಪದೇ ಓದಿ

ಜೀವನದಲ್ಲಿ ಶಾಂತಿ, ಮೋಕ್ಷ ಪ್ರಾಪ್ತಿಯಾಗಲು ಆದಿಲಕ್ಷ್ಮಿಯ ಈ ಸ್ತೋತ್ರ ಓದಿ

ಲಕ್ಷ್ಮೀ ನರಸಿಂಹ ಕವಚ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments