ಮೇಷ: ಮುಂದಿನ ಭವಿಷ್ಯಕ್ಕಾಗಿ ಉತ್ತಮ ಯೋಜನೆಗಳನ್ನು ಹಾಕಿಕೊಳ್ಳಲಿದ್ದೀರಿ. ಬರವಣಿಗೆ ಕ್ಷೇತ್ರದಲ್ಲಿರುವವರಿಗೆ ಉನ್ನತ ಸಾಧನೆ ಮಾಡುವ ಅವಕಾಶ. ದೇಹಾರೋಗ್ಯದಲ್ಲಿ ಕೊಂಚ ಸುಧಾರಣೆ ಕಂಡುಬರಲಿದೆ. ಮಿಥ್ಯಾರೋಪಗಳಿಗೆ ತಲೆಕೆಡಿಸಿಕೊಳ್ಳಬೇಕಾಗಿಲ್ಲ.
ವೃಷಭ: ರಾಜಕೀಯ ರಂಗದಲ್ಲಿರುವವರು ವರ್ಚಸ್ಸು ಕಳೆದುಕೊಳ್ಳಲಿದ್ದಾರೆ. ಅನಗತ್ಯ ವಿಚಾರಗಳಲ್ಲಿ ಮೂಗು ತೂರಿಸಲು ಹೋಗಿ ವಿವಾದಕ್ಕೀಡಾಗಬೇಡಿ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಕೊಂಚ ಬಿಡುವು ಸಿಗಲಿದೆ. ದೇವತಾ ಪ್ರಾರ್ಥನೆ ಮಾಡಿ.
ಮಿಥುನ: ವೃತ್ತಿರಂಗದಲ್ಲಿ ನಿಮ್ಮ ಸಾಧನೆಯನ್ನು ತಡೆಯಲು ಯಾರಿಂದಲೂ ಸಾಧ್ಯವಾಗದು. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಗಮನಹರಿಸುವುದು ಸೂಕ್ತ. ವ್ಯಾಪಾರಿಗಳಿಗೆ ಅನಿರೀಕ್ಷಿತ ಲಾಭಗಳು ಕಂಡುಬರಲಿದೆ. ದಿನದಂತ್ಯಕ್ಕೆ ಅಚ್ಚರಿ ಸುದ್ದಿ.
ಕರ್ಕಟಕ: ಯಾರದೋ ತಪ್ಪಿಗೆ ನೀವು ಬೆಲೆ ತೆರುವ ಸಂದರ್ಭ ಒದಗಿಬರಲಿದೆ. ತಾಳ್ಮೆ, ಸಂಯಮವಿರಲಿ. ಮಕ್ಕಳ ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಬೇಕಾಗುತ್ತದೆ. ಹಿತ ಶತ್ರುಗಳ ಹುನ್ನಾರಗಳು ಬೆಳಕಿಗೆ ಬರಲಿವೆ. ಚಿಂತೆ ಬೇಡ.
ಸಿಂಹ: ವ್ಯಾಪಾರಿಗಳಿಗೆ ವ್ಯವಹಾರದಲ್ಲಿ ಯಾರನ್ನೂ ನಂಬಲಾಗದ ಪರಿಸ್ಥಿತಿ ಎದುರಾಗಲಿದೆ. ಆರ್ಥಿಕವಾಗಿ ಧನಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಅಧಿಕಾರಿ ವರ್ಗದವರಿಗೆ ಕಾರ್ಯದೊತ್ತಡವಿರಲಿದೆ. ತಾಳ್ಮೆಯಿರಲಿ.
ಕನ್ಯಾ: ನಿಮ್ಮ ಸತತ ಪ್ರಯತ್ನಕ್ಕೆ ತಕ್ಕ ಪ್ರತಿಫಲ ಸಿಕ್ಕೇ ಸಿಗುತ್ತದೆ. ಮೇಲಧಿಕಾರಿಗಳ ಪ್ರಶಂಸೆಗೊಳಗಾಗಲಿದ್ದೀರಿ. ಸಂಗಾತಿಗೆ ಅನಿರೀಕ್ಷಿತ ಉಡುಗೊರೆ ನೀಡಲಿದ್ದೀರಿ. ಪ್ರೇಮಿಗಳಿಗೆ ಸುಂದರ ಕ್ಷಣ ಕಳೆಯುವ ಯೋಗ ಕೂಡಿಬರಲಿದೆ.
ತುಲಾ: ನಿಮ್ಮ ಮನದಿಚ್ಛೆಯ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ವೈಯಕ್ತಿಕ ಜೀವನದಲ್ಲಿ ಹೊಸ ಅತಿಥಿಗಳ ಆಗಮನದ ವಿಚಾರ ಮನಸ್ಸಿಗೆ ಖುಷಿ ನೀಡಲಿದೆ. ಕೃಷಿಕರಿಗೆ ಆರ್ಥಿಕವಾಗಿ ಲಾಭವಾಗಲಿದೆ. ಕಿರು ಸಂಚಾರ ಮಾಡಲಿದ್ದೀರಿ.
ವೃಶ್ಚಿಕ: ಯೋಗ್ಯ ವಯಸ್ಕರಿಗೆ ಸೂಕ್ತ ಸಂಬಂಧಗಳು ಕೂಡಿಬರಲಿವೆ. ಹಿರಿಯರಿಗೆ ದೇಹಾರೋಗ್ಯದಲ್ಲಿ ಏರುಪೇರಾದೀತು, ಉಪೇಕ್ಷೆ ಬೇಡ. ಕೆಳ ಹಂತದ ನೌಕರರಿಗೆ ಉದ್ಯೋಗದಲ್ಲಿ ಮುಂಬಡ್ತಿ ಯೋಗ. ಖರ್ಚು ವೆಚ್ಚದ ಬಗ್ಗೆ ಮಿತಿಯಿರಲಿ.
ಧನು: ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದ್ದು, ಸಂತೋಷವಾಗಲಿದೆ. ಸಂಗಾತಿಯ ಪ್ರೀತಿಗೆ ಪಾತ್ರರಾಗಲಿದ್ದೀರಿ. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆಬರಲಿದೆ. ನೆಂಟರಿಷ್ಟರ ಭೇಟಿ ಯೋಗವಿದೆ.
ಮಕರ: ದೈವಾನುಗ್ರಹದಿಂದ ಇಂದು ನೀವು ಕೈ ಹಿಡಿಯಲಿರುವ ಕೆಲಸಗಳು ಸುಸ್ರೂತ್ರವಾಗಿ ನೆರವೇರಲಿದೆ. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಪ್ರಾಮಾಣಿಕತೆ ಗುರುತಿಸಲ್ಪಡುವುದು. ವಿದ್ಯಾರ್ಥಿಗಳು ಶಿಕ್ಷಕರ ಪ್ರಶಂಸೆಗೊಳಗಾಗಲಿದ್ದಾರೆ.
ಕುಂಭ: ನೂತನ ದಂಪತಿಗಳಿಗೆ ಸುಂದರ ಕ್ಷಣ ಕಳೆಯುವ ಯೋಗ. ಮನೆಗೆ ಅನಿರೀಕ್ಷಿತವಾಗಿ ಬಂಧುಮಿತ್ರರ ಆಗಮನಾಗಲಿದ್ದು, ಖುಷಿಯಾಗಲಿದೆ. ಆದರೆ ಹಣಕಾಸಿನ ಖರ್ಚು ವೆಚ್ಚದ ಬಗ್ಗೆ ಮಿತಿಯಿರಲಿ.
ಮೀನ: ಯಾವುದೋ ವಸ್ತುವಿಗಾಗಿ ಹಂಬಲಿಸುತ್ತಿದ್ದ ನಿಮಗೆ ಇಂದು ತಾನಾಗಿಯೇ ಕೈಸೇರಲಿದೆ. ಸಂಗಾತಿಯ ಬಹುದಿನಗಳ ಆಸೆ ನೆರವೇರಿಸಲಿದ್ದೀರಿ. ಹಣಕಾಸಿನ ಸ್ಥಿತಿ ಗತಿ ಸುಧಾರಿಸಲಿದೆ. ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ.