Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಭಾನುವಾರ, 14 ಫೆಬ್ರವರಿ 2021 (08:57 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

 
ಮೇಷ: ಮನೆಗೆ ಅನಿರೀಕ್ಷಿತ ಅತಿಥಿಗಳ ಆಗಮನವಾಗಲಿದೆ. ಗೃಹಿಣಿಯರಿಗೆ ಬಿಡುವಿಲ್ಲದ ಕೆಲಸ ಕಾರ್ಯಗಳಿರುತ್ತವೆ. ಅನಿರೀಕ್ಷಿತವಾಗಿ ಕೆಲವೊಂದು ಖರ್ಚು ವೆಚ್ಚಗಳಿಗೆ ಸಿದ್ಧರಾಗಬೇಕಾಗುತ್ತದೆ. ಕಿರು ಓಡಾಟ ನಡೆಸುವಿರಿ.

ವೃಷಭ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮತನಕ್ಕೆ ಬೆಲೆ ಸಿಗದಂತಾದೀತು. ಆದರೆ ತಾಳ್ಮೆ, ಸಂಯಮ ಕಳೆದುಕೊಳ್ಳಬೇಡಿ. ಕೆಲವೊಂದು ಸಾರಿ ಪರಿಸ್ಥಿತಿಗೆ ತಕ್ಕಂತೆ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಿಥುನ: ಹಿರಿಯರಿಗೆ ತಮ್ಮ ಆಪ್ತೇಷ್ಟರ ಭೇಟಿಯಾದ ಸಂತೋಷ ಸಿಗಲಿದೆ. ನಾಲಿಗೆ ಚಪಲಕ್ಕೆ ಕಡಿವಾಣ ಹಾಕದೇ ಇದ್ದರೆ ಆರೋಗ್ಯ ಸಮಸ್ಯೆ ತಪ್ಪದು. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡಲಿದ್ದೀರಿ.

ಕರ್ಕಟಕ: ಇಚ್ಛಾನುಸಾರ ಕೆಲಸ ಮಾಡಲು ಹೋಗಿ ಎಡವಟ್ಟು ಮಾಡಿಕೊಳ್ಳಲಿದ್ದೀರಿ. ಅರ್ಧಕ್ಕೇ ನಿಂತ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಮನಸ್ಸಿನಲ್ಲಿ ಅಂದುಕೊಂಡ ವಿಚಾರವನ್ನು ಸಂಗಾತಿ ಜೊತೆ ಹಂಚಿಕೊಳ್ಳಲಿದ್ಧೀರಿ. ದಿನದಂತ್ಯಕ್ಕೆ ಅಚ್ಚರಿ ಸುದ್ದಿ.

ಸಿಂಹ: ನಿಮ್ಮ ಸ್ವಭಾವಕ್ಕೆ ವಿರುದ್ಧವಾಗಿ ನಡೆದುಕೊಳ್ಳಬೇಕಾಗುತ್ತದೆ. ಅನಿವಾರ್ಯವಾಗಿ ಕೆಲವೊಂದು ಹೊಂದಾಣಿಕೆಗೆ ಸಿದ್ಧರಾಗಬೇಕಾಗುತ್ತದೆ. ನೂತನ ದಂಪತಿಗಳಿಗೆ ಮಧುಚಂದ್ರದ ಭಾಗ್ಯ ಒದಗಿಬರಲಿದೆ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಕನ್ಯಾ: ಭಾವವೇಶಕ್ಕೊಳಗಾಗಿ ನಿರ್ಧಾರ ತೆಗೆದುಕೊಳ್ಳಲು ಹೋಗಬೇಡಿ. ನಿರುದ್ಯೋಗಿಗಳು ಸ್ವಯಂ ಉದ್ಯೋಗದ ಬಗ್ಗೆ ಯೋಚನೆ ಮಾಡಲಿದ್ದಾರೆ. ಸಾಲಗಾರರ ಕಾಟಕ್ಕೆ ಮುಕ್ತಿ ಸಿಗಲಿದೆ. ದೈವಾನುಗ್ರಹದಿಂದ ಹೊಸ ಕೆಲಸಗಳಿಗೆ ಕೈ ಹಾಕಿದರೆ ಯಶಸ್ಸು ಸಿಗಲಿದೆ.

ತುಲಾ: ಎಷ್ಟೋ ದಿನದಿಂದ ಮಾಡಬೇಕೆಂದುಕೊಂಡಿದ್ದ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ವಾಹನ ರಿಪೇರಿ ನಿಮಿತ್ತ ಖರ್ಚು ವೆಚ್ಚಗಳಾದೀತು. ಕೌಟುಂಬಿಕವಾಗಿ ನಿಮ್ಮ ಕೆಲವೊಂದು ಧೃಢ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ. ತಾಳ್ಮೆಯಿರಲಿ.

ವೃಶ್ಚಿಕ: ಭವಿಷ್ಯದ ದೃಷ್ಟಿಯಿಂದ ಕೆಲವೊಂದು ಹೊಸ ಯೋಜನೆ ಹಾಕಿಕೊಳ್ಳಲಿದ್ದೀರಿ. ಆರ್ಥಿಕವಾಗಿ ಹಣಕಾಸಿನ ಮುಗ್ಗಟ್ಟು ನಿವಾರಣೆಗೆ ದಾರಿ ಕಂಡುಕೊಳ್ಳಲಿದ್ದೀರಿ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಪಡದೇ ಯಶಸ್ಸು ಸಿಗದು. 

ಧನು: ನೆರೆಹೊರೆಯವರು ನಿಮ್ಮ ಕಷ್ಟಕ್ಕೆ ಸ್ಪಂದಿಸಲಿದ್ದಾರೆ. ಸಂಗಾತಿಯ ದೇಹಾರೋಗ್ಯದ ಬಗ್ಗೆ ಕಾಳಜಿವಹಿಸುವುದು ಸೂಕ್ತ. ನಿಮ್ಮ ಪ್ರೀತಿ ಪಾತ್ರರೊಂದಿಗೆ ಅಮೂಲ್ಯ ಸಮಯ ಕಳೆಯಲಿದ್ದೀರಿ. ವ್ಯಾಪಾರಿಗಳಿಗೆ ಮುನ್ನಡೆಯ ಯೋಗವಿದೆ.

ಮಕರ: ನಿಮ್ಮ ದುಃಖ ದುಮ್ಮಾನಗಳನ್ನು ಆಪ್ತರೊಂದಿಗೆ ಹಂಚಿಕೊಂಡು ಹಗುರವಾಗಲಿದ್ದೀರಿ. ದಾಂಪತ್ಯ ಜೀವನದಲ್ಲಿ ಹೊಂದಾಣಿಕೆ ಅಗತ್ಯ. ದಾಯಾದಿ ಕಲಹಗಳಿಗೆ ಹಿರಿಯರ ಸಲಹೆ ಪಡೆಯಲಿದ್ದೀರಿ. ಕುಲದೇವರ ಪ್ರಾರ್ಥನೆ ಮಾಡಿ.

ಕುಂಭ: ನಿಮ್ಮ ಪ್ರಬುದ್ಧ ಆಲೋಚನೆಗಳಿಂದ ಸಂಭಾವ್ಯ ಸಮಸ್ಯೆಗಳಿಂದ ಪಾರಾಗಲಿದ್ದೀರಿ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶಗಳು ಒದಗಿಬರಲಿವೆ. ಇನ್ನೊಬ್ಬರ ಕಷ್ಟಕ್ಕೆ ಸ್ಪಂದಿಸಲಿದ್ದೀರಿ. ದೇಹಾರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಮೀನ: ವಿಪರೀತ ಕೆಲಸದೊತ್ತಡದಿಂದ ದೇಹಾಯಾಸವಾದೀತು. ಸಂಗಾತಿಯ ಕಷ್ಟಗಳಿಗೆ ಹೆಗಲುಕೊಡಲಿದ್ದೀರಿ. ಮಿತ್ರರೊಂದಿಗೆ ಕಿರು ಪ್ರವಾಸಕ್ಕೆ ಸಿದ್ಧತೆ ನಡೆಸಲಿದ್ದೀರಿ. ಮನಸ್ಸಿನಲ್ಲಿ ಕಾಡುತ್ತಿದ್ದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಿದ್ದೀರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Devi Mantra: ಮನೆಯಲ್ಲಿರುವ ಅವಿವಾಹಿತ ಕನ್ಯಾಮಣಿಗಳು ತಪ್ಪದೇ ಈ ಸ್ತೋತ್ರ ಓದಿ

Ardanaristaka Stothram: ವಿವಾಹಾದಿ ಸಮಸ್ಯೆಗಳಿಗೆ ಅರ್ಧನಾರೀಶ್ವರಾಷ್ಟಕಂ ಸ್ತೋತ್ರ ಓದಿ

Gayatri Mantra: ಗಾಯತ್ರಿ ಅಷ್ಟೋತ್ತರ ಶತನಾಮಾವಳಿ ಕನ್ನಡದಲ್ಲಿ ಇಲ್ಲಿದೆ

Shani Mantra: ಶನಿ ಕವಚ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ಇಂದು ತಪ್ಪದೇ ಓದಿ

Lucky number: ಹುಟ್ಟಿದ ದಿನಾಂಕಕ್ಕೆ ಅನುಸಾರವಾಗಿ ನಿಮ್ಮ ಅದೃಷ್ಟ ಸಂಖ್ಯೆ ಲೆಕ್ಕ ಹಾಕುವುದು ಹೇಗೆ ನೋಡಿ

ಮುಂದಿನ ಸುದ್ದಿ
Show comments