Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶುಕ್ರವಾರ, 19 ಫೆಬ್ರವರಿ 2021 (08:54 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ನಿಮ್ಮ ಮೇಲೆ ಅನಗತ್ಯವಾಗಿ ಅಪವಾದ ಮಾಡುವವರನ್ನು ಅಲಕ್ಷಿಸುವುದೇ ಉತ್ತಮ. ವಿನಾಕಾರಣ ಇನ್ನೊಬ್ಬರ ವಿಚಾರದಲ್ಲಿ ಮೂಗು ತೂರಿಸಲು ಹೋಗಬೇಡಿ. ದೇಹಾರೋಗ್ಯದ ಕಡೆಗೆ ಗಮನಕೊಡಿ. ಖರ್ಚು ವೆಚ್ಚಗಳು ಮಿತಿಯಲ್ಲಿರಲಿ.

ವೃಷಭ: ಸರಕಾರಿ ನೌಕರರು ಲೆಕ್ಕಪತ್ರಗಳ ವಿಚಾರದಲ್ಲಿ ಎಚ್ಚರವಾಗಿರಬೇಕು. ಅಪರಿಚಿತರನ್ನು ನಂಬಿ ಹೂಡಿಕೆ ಮಾಡಲು ಹೋಗಬೇಡಿ. ಸಂಗಾತಿಯು ನೀಡುವ ಸಲಹೆಗಳು ಉಪಯೋಗಕ್ಕೆ ಬರಲಿದೆ. ಕಿರು ಓಡಾಟ ನಡೆಸಲಿದ್ದೀರಿ.

ಮಿಥುನ: ನೆನೆಗುದಿಗೆ ಬಿದ್ದಿದ್ದ ಕೆಲಸಗಳನ್ನು ಪೂರ್ತಿ ಮಾಡಲು ಪ್ರಯತ್ನಿಸಲಿದ್ದೀರಿ. ವೈಯಕ್ತಿಕ ಹಿತಸಾಧನೆಯ ಬಗ್ಗೆ ಹೆಚ್ಚು ಗಮನಕೊಡಲಿದ್ದೀರಿ. ಮನೆಗೆ ಅನಿರೀಕ್ಷಿತ ನೆಂಟರಿಷ್ಟರ ಆಗಮನವಾದೀತು. ವಿದ್ಯಾರ್ಥಿಗಳಿಗೆ ಮುನ್ನಡೆಯ ಯೋಗವಿದೆ.

ಕರ್ಕಟಕ: ನಿರುದ್ಯೋಗಿಗಳು ಪಾಲಿಗೆ ಬಂದಿದ್ದು ಪಂಚಾಮೃತ ಎಂದು ತಿಳಿದು ಮುನ್ನಡೆಯಬೇಕು. ವೃತ್ತಿರಂಗದಲ್ಲಿ ಯಾರನ್ನೂ ಹಗುರವಾಗಿ ಪರಿಗಣಿಸಬೇಡಿ. ಧನಗಳಿಕೆಗೆ ನಾನಾ ಮಾರ್ಗಗಳನ್ನು ಕಂಡುಕೊಳ್ಳಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಸಿಂಹ: ಚಿತ್ರ ವಿಚಿತ್ರ ಯೋಚನೆಗಳಿಂದ ಮಾನಸಿಕವಾಗಿ ಒಂದು ರೀತಿಯ ಹಿಂಜರಿಕೆ ಉಂಟಾದೀತು. ನಿಮ್ಮ ಮನಸ್ಸಿನ ಭಾವನೆಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳವುದು ಸೂಕ್ತ. ಆಸ್ತಿ ಕಲಹಗಳ ಪರಿಹಾರಕ್ಕೆ ಕೋರ್ಟು ಮೆಟ್ಟಿಲೇರಲಿದ್ದೀರಿ.

ಕನ್ಯಾ: ಕಾರ್ಯರಂಗದಲ್ಲಿ ಹೊಸಜನರ ಭೇಟಿ ನಿಮ್ಮ ಮುನ್ನಡೆಗೆ ಸಹಕಾರಿಯಾಗಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ನೆರೆಹೊರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಕಿಲ್ಲ. ದೇವತಾ ಪ್ರಾರ್ಥನೆ ಮಾಡಿ.

ತುಲಾ: ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗ ಸಿಗುವ ಸೂಚನೆ ಸಿಗಲಿದೆ. ಧಾರ್ಮಿಕವಾಗಿ ಭಕ್ತಿಭಾವ ಹೆಚ್ಚಲಿದೆ. ಹಿರಿಯರಿಗೆ ದೇಹಾರೋಗ್ಯದಲ್ಲಿ ಸಣ್ಣ ಪುಟ್ಟ ಸಮಸ್ಯೆ ಕಂಡುಬಂದೀತು. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ವೃಶ್ಚಿಕ: ನಿಮಗೆ ಇಷ್ಟವಾದ ಭೋಜನ ಸವಿಯುವ ಯೋಗ ನಿಮ್ಮದಾಗುವುದು. ಮಿತ್ರರೊಂದಿಗೆ ಇಷ್ಟಸ್ಥಳಕ್ಕೆ ಭೇಟಿ ನೀಡಲಿದ್ದೀರಿ. ದಾಂಪತ್ಯದಲ್ಲಿ ಹೊಂದಾಣಿಕೆ ಕೊರತೆ ಉಂಟಾದೀತು. ಮಾತಿನ ಮೇಲೆ ನಿಗಾ ಇರಲಿ.

ಧನು: ನಿಮ್ಮ ತಪ್ಪು ತಿಳುವಳಿಕೆಯಿಂದ ಆಪ್ತರ ಮೇಲೆ ಮುನಿಸು ಮಾಡಿಕೊಳ್ಳಲಿದ್ದೀರಿ. ಮಕ್ಕಳ ವಿಚಾರದಲ್ಲಿ ಅನಗತ್ಯ ಚಿಂತೆ ಮಾಡುವುದು ಬೇಡ. ಯಂತ್ರೋಪಕರಣಗಳ ವೃತ್ತಿಯಲ್ಲಿರುವವರಿಗೆ ಮುನ್ನಡೆಯ ಯೋಗ. ಹಣಕಾಸಿನ ಹರಿವಿಗೆ ತೊಂದರೆಯಿರದು.

ಮಕರ: ಸಂಚಾರದಲ್ಲಿ ಹೆಚ್ಚಿನ ಜಾಗ್ರತೆ ಅಗತ್ಯ. ಆರ್ಥಿಕ ಪರಿಸ್ಥಿತಿಯಲ್ಲಿ ಅಭಿವೃದ್ಧಿ ಕಂಡುಬರಲಿದೆ. ಉದ್ಯೋಗಸ್ಥರು ಅನಿರೀಕ್ಷಿತ ಬದಲಾವಣೆಗೆ ಸಿದ್ಧರಾಗಬೇಕಾಗುತ್ತದೆ. ಮಹಿಳೆಯರಿಗೆ ಚಿನ್ನಾಭರಣ ಖರೀದಿ ಯೋಗವಿದೆ.

ಕುಂಭ: ಉದ್ಯೋಗ ಕ್ಷೇತ್ರದಲ್ಲಿ ಇದುವರೆಗೆ ಇದ್ದ ಸಮಸ್ಯೆಗಳು ಹಂತ ಹಂತವಾಗಿ ನಿವಾರಣೆಯಾಗಲಿದೆ. ಗೆಳೆಯರ ಉತ್ತಮ ಸಲಹೆ ಸ್ವೀಕರಿಸಲಿದ್ದೀರಿ. ಸಂಗಾತಿಯೊಂದಿಗೆ ಸುಂದರ ಕ್ಷಣ ಕಳೆಯಲಿದ್ದೀರಿ. ಮಕ್ಕಳ ಭವಿಷ್ಯಕ್ಕೆ ಯೋಜನೆ ರೂಪಿಸಲಿದ್ದೀರಿ.

ಮೀನ: ಉದ್ಯೋಗಿಗಳಿಗೆ ಕೆಲಸದಲ್ಲಿ ಶ್ರದ್ಧಾಭಾವದ ಕೊರತೆ ಕಂಡುಬಂದೀತು. ಹಿತಶತ್ರುಗಳ ಕಾಟದಿಂದ ಹಿನ್ನಡೆಯಾದೀತು. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ವಾಹನ ಸವಾರರು ಚಾಲನೆಯಲ್ಲಿ ಎಚ್ಚರಿಕೆಯಿಂದಿರಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Lakshmi Mantra: ಧನಾಭಿವೃದ್ಧಿ ಆಗಬೇಕಾದ ಧನಲಕ್ಷ್ಮೀ ಸ್ತೋತ್ರ ಓದಿ

Raghavendra swamy mantra: ಶ್ರೀ ರಾಘವೇಂದ್ರ ಕವಚ ಸ್ತೋತ್ರಂ ಭಕ್ತಿಯಿಂದ ಓದಿ

Devi Mantra: ಮನೆಯಲ್ಲಿರುವ ಅವಿವಾಹಿತ ಕನ್ಯಾಮಣಿಗಳು ತಪ್ಪದೇ ಈ ಸ್ತೋತ್ರ ಓದಿ

Ardanaristaka Stothram: ವಿವಾಹಾದಿ ಸಮಸ್ಯೆಗಳಿಗೆ ಅರ್ಧನಾರೀಶ್ವರಾಷ್ಟಕಂ ಸ್ತೋತ್ರ ಓದಿ

Gayatri Mantra: ಗಾಯತ್ರಿ ಅಷ್ಟೋತ್ತರ ಶತನಾಮಾವಳಿ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments