ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಭಾನುವಾರ, 28 ಫೆಬ್ರವರಿ 2021 (08:52 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಬಿಡುವಿನ ವೇಳೆಯ ಸದುಪಯೋಗಪಡಿಸಿಕೊಳ್ಳಲಿದ್ದೀರಿ. ಕ್ರಿಯಾತ್ಮಕ ಕೆಲಸಗಳಿಗೆ ಚಾಲನೆ ನೀಡಿ. ಮಕ್ಕಳೊಂದಿಗೆ ಸಂತೋಷದ ಕ್ಷಣ ಕಳೆಯಲಿದ್ದೀರಿ. ಆರ್ಥಿಕವಾಗಿ ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಬೇಕಾಗುತ್ತದೆ.

ವೃಷಭ: ವೃತ್ತಿರಂಗದಲ್ಲಿ ನಾನಾ ರೀತಿಯ ಸಮಸ್ಯೆಗಳು ಎದುರಾದೀತು. ಆದರೆ ಅದನ್ನು ಬೇರೆಯವರ ಮೇಲೆ ತೋರಿಸಲು ಹೋಗಿ ಶಾಂತಿ ಹಾಳುಮಾಡಬೇಡಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಭಾಗ್ಯ ಕೂಡಿಬರಲಿದೆ.

ಮಿಥುನ: ದೇಹಾರೋಗ್ಯದಲ್ಲಿ ಏರುಪೇರು ಕಂಡುಬಂದೀತು. ಹಿರಿಯರಿಗೆ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುವ ಯೋಗ ಕೂಡಿಬರಲಿದೆ. ವಾಹನ ರಿಪೇರಿ, ಗೃಹ ಸಂಬಂಧೀ ಕೆಲಸಗಳಿಗೆ ಖರ್ಚು ವೆಚ್ಚಗಳಾದೀತು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕರ್ಕಟಕ: ಬಹುದಿನಗಳಿಂದ ಭೇಟಿಯಾಗಬೇಕೆಂದುಕೊಂಡಿದ್ದ ವ್ಯಕ್ತಿಗಳನ್ನು ಭೇಟಿಯಾಗಲಿದ್ದೀರಿ. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗಲಿದೆ. ನೂತನ ದಂಪತಿಗಳಿಗೆ ಸಂತಾನ ಫಲ ಸೂಚನೆ ದೊರೆಯಲಿದೆ. ವಿದ್ಯಾರ್ಥಿಗಳಿಗೆ ಮುನ್ನಡೆಯ ಯೋಗವಿದೆ.

ಸಿಂಹ: ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಇಂದು ನೀವಂದುಕೊಂಡ ಕೆಲಸ ನೆರವೇರಲಿದೆ. ಕೋರ್ಟು ಕಚೇರಿ ಕೆಲಸಗಳಿಗೆ ಸಿದ್ಧತೆ ನಡೆಸಲಿದ್ದೀರಿ. ದಾಯಾದಿ ಕಲಹಗಳಿಗೆ ಹಿರಿಯರಿಂದ ಪರಿಹಾರ ಸಿಗಲಿದೆ.

ಕನ್ಯಾ: ಬೇರೆಯವರ ಇಷ್ಟ-ಕಷ್ಟಗಳಿಗೆ ಬೆಲೆಕೊಟ್ಟು ನಿರ್ಧಾರ ಕೈಗೊಳ್ಳಬೇಕಾಗುತ್ತದೆ. ಪೋಷಕರ ಮನಸ್ಸಿಗೆ ನೋವುಂಟುಮಾಡಬೇಡಿ. ನಾಲಿಗೆ ಚಪಲಕ್ಕೆ ಕಡಿವಾಣ ಹಾಕದೇ ಹೋದಲ್ಲಿ ಆರೋಗ್ಯ ಸಮಸ್ಯೆ ಎದುರಾದೀತು.

ತುಲಾ: ಎಷ್ಟೋ ದಿನದಿಂದ ಮಾಡಬೇಕೆಂದುಕೊಂಡಿದ್ದ ನಿಮ್ಮ ಪ್ರಿಯವಾದ ಹವ್ಯಾಸಗಳಿಗೆ ಚಾಲನೆ ನೀಡಲಿದ್ದೀರಿ. ಸಾಮಾಜಿಕವಾಗಿ ಸ್ಥಾನ ಮಾನಗಳಿಸಲಿದ್ದೀರಿ. ಸಂಗಾತಿಗೆ ಅಚ್ಚರಿಯ ಉಡುಗೊರೆ ನೀಡಿ ಸಂತೋಷ ನೀಡುವಿರಿ.

ವೃಶ್ಚಿಕ: ಮನಸ್ಸಿನ ಆಸೆಗಳಿಗೆ ಕಡಿವಾಣ ಹಾಕಬೇಕಾಗುತ್ತದೆ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗವಿದೆ. ಶುಭ ಮಂಗಲ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ. ಆದಾಯವಿದ್ದಷ್ಟೇ ಖರ್ಚೂ ಇರಲಿದೆ. ಕಿರು ಓಡಾಟ ನಡೆಸುವಿರಿ.

ಧನು: ಸಂಗಾತಿಯ ಕೋಪ ತಾಪಕ್ಕೆ ಗುರಿಯಾಗಬೇಕಾದೀತು. ಯಾವುದೇ ನಿರ್ಧಾರ ಕೈಗೊಳ್ಳುವ ಮೊದಲು ಸರಿಯಾಗಿ ಪರಾಮರ್ಶಿಸಿ ಮುನ್ನಡೆಯಿರಿ. ಕೌಟುಂಬಿಕವಾಗಿ ಹೊಸ ಅತಿಥಿಗಳ ಆಗಮನಕ್ಕೆ ಸಿದ್ಧರಾಗಿ. ದೇವತಾ ಪ್ರಾರ್ಥನೆ ಮರೆಯದಿರಿ.

ಮಕರ: ಬೇರೆಯವರಿಗಾಗಿ ನಿಮ್ಮ ಇಷ್ಟಗಳನ್ನು ತ್ಯಾಗ ಮಾಡಬೇಕಾಗಿ ಬರಬಹುದು. ತಾಳ್ಮೆ, ಸಂಯಮವಿರಲಿ. ಸ್ವಯಂ ಉದ್ಯೋಗಿಗಳಿಗೆ ಆರ್ಥಿಕವಾಗಿ ಲಾಭವಾದೀತು. ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲು ಇದು ಸಕಾಲ.

ಕುಂಭ: ಅಧಿಕ ಕಾರ್ಯದೊತ್ತಡದಿಂದ ದೇಹಾಯಾಸವಾದೀತು. ನಿಮ್ಮ ಕೆಲವೊಂದು ಮಾತುಗಳು ಕುಟುಂಬ ಸದಸ್ಯರ ಮನಸ್ಸಿಗೆ ನೋವುಂಟುಮಾಡಬಹುದು. ತಾಳ್ಮೆಯಿರಲಿ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಪಡಬೇಕಾಗುತ್ತದೆ.

ಮೀನ: ಹೊಸ ಉದ್ಯೋಗ ಅರಸುವ ನಿಮ್ಮ ಪ್ರಯತ್ನಕ್ಕೆ ಮುನ್ನಡೆ ಸಿಗಲಿದೆ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ಶುಭ ಮಂಗಲ ಕಾರ್ಯದಲ್ಲಿ ಭಾಗಿಯಾಗಲಿದ್ದೀರಿ. ಇಷ್ಟ ಭೋಜನ ಮಾಡುವ ಯೋಗ. ಕುಲದೇವರ ಪ್ರಾರ್ಥನೆ ಮಾಡಿದರೆ ಒಳಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಂಗಳವಾರ ಓದಲೇಬೇಕಾದ ಹನುಮಾನ್ ಸುಪ್ರಭಾತಮ್

ಲಲಿತಾ ಪಂಚರತ್ನಂ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಬಾಲ ಮುಕುಂದಾಷ್ಟಕಂ ಮಕ್ಕಳಿಗೆ ಹೇಳಿಸಿ

ನಿಮ್ಮ ಈ ತಪ್ಪು ದಾರಿದ್ರ್ಯಕ್ಕೆ ಕಾರಣವಾಗಬಹುದು

ದೇವಿ ಅಪಾರಜಿತ ಸ್ತೋತ್ರಂ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments