Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಭಾನುವಾರ, 7 ಮಾರ್ಚ್ 2021 (08:46 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ನಿಮ್ಮ ಬಿಡುವಿನ ವೇಳೆಯ ಸದುಪಯೋಗ ಪಡೆದುಕೊಳ್ಳಲು ಯತ್ನಿಸುವಿರಿ. ವಿದ್ಯಾರ್ಥಿಗಳಿಗೆ ಎಷ್ಟೇ ಪ್ರಯತ್ನಪಟ್ಟರೂ ಫಲ ಸಿಗುತ್ತಿಲ್ಲ ಎಂಬ ನಿರಾಸೆ ಕಾಡೀತು. ಮಾನಸಿಕವಾಗಿ ನಿರುತ್ಸಾಹ ಕಂಡುಬರಲಿದೆ. ಭವಿಷ್ಯಕ್ಕೆ ಯೋಜನೆ ರೂಪಿಸಲಿದ್ದೀರಿ.

ವೃಷಭ: ಹೊಸ ವಸ್ತು, ಇಷ್ಟ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚ ಮಾಡಲಿದ್ದೀರಿ. ವೈಯಕ್ತಿಕವಾಗಿ ಪ್ರಗತಿ ಕಂಡುಬರಲಿದ್ದು, ಸಂತೋಷವಾಗಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ಉದ್ಯೋಗ ರಂಗದಲ್ಲಿ ಶತ್ರುಪೀಡೆ ನಾಶವಾಗಲಿದ್ದು, ನಿಮ್ಮ ಸ್ಥಾನ ಭದ್ರವಾಗಲಿದೆ. ಆರ್ಥಿಕವಾಗಿ ಹಣಕಾಸಿನ ಖರ್ಚು ವೆಚ್ಚಗಳು ಕಂಡುಬಂದೀತು. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕಾಗುತ್ತದೆ.

ಕರ್ಕಟಕ: ನಿಮ್ಮ ಮನಸ್ಸಿನ ಭಾವನೆಗಳ ಪ್ರಕಾರ ನಿರ್ಧಾರ ಕೈಗೊಳ್ಳಿ. ಬಂಧು ಮಿತ್ರರ ಆಗಮನದಿಂದ ಮನೆಯಲ್ಲಿ ಸಂಭ್ರಮದ ವಾತಾವರಣವಿರಲಿದೆ. ಹಿರಿಯರಿಗೆ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರುವುದು.

ಸಿಂಹ: ಅನಗತ್ಯ ಚಿಂತೆಗಳಿಗೆ ಕಡಿವಾಣ ಹಾಕಿ. ಸಕಾರಾತ್ಮಕವಾಗಿ ಯೋಚನೆ ಮಾಡುವುದರಿಂದ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಕಳೆದು ಹೋದ ವಸ್ತುವಿಗಾಗಿ ಹುಡುಕಾಟ ನಡೆಸಲಿದ್ದೀರಿ. ಶುಭ ಮಂಗಲ ಕಾರ್ಯದಲ್ಲಿ ಭಾಗಿಯಾಗಲಿದ್ದೀರಿ.

ಕನ್ಯಾ: ಪೋಷಕರೊಂದಿಗೆ ಭಿನ್ನಾಭಿಪ್ರಾಯಗಳಾಗದಂತೆ ಎಚ್ಚರಿಕೆ ವಹಿಸಿ. ನಿಮ್ಮ ವೈಯಕ್ತಿಕ ನಿರ್ಧಾರಗಳು ಬೇರೆಯವರ  ಅಸಮಾಧಾನಕ್ಕೆ ಕಾರಣವಾದೀತು. ತಾಳ್ಮೆ, ಸಂಯಮವಿರಲಿ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ.

ತುಲಾ: ಪ್ರೀತಿ ಪಾತ್ರರೊಂದಿಗೆ ಸುಂದರ ಕ್ಷಣ ಕಳೆಯಲಿದ್ದೀರಿ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡುವುದರಿಂದ ಅಂದುಕೊಂಡ ಕೆಲಸ ಪೂರ್ತಿಯಾಗುವುದು. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ವೃಶ್ಚಿಕ: ಬೇರೆಯವರು ನಿಮ್ಮ ಬಗ್ಗೆ ಹೇಳುವ ಅಭಿಪ್ರಾಯದಿಂದ ನಿಮ್ಮ ನಿರ್ಧಾರಗಳು ಬದಲಾಗಲಿವೆ. ಆರ್ಥಿಕವಾಗಿ ಸರಿಯಾದ ಯೋಜನೆ ಹಾಕಿಕೊಳ್ಳುವುದು ಮುಖ್ಯ. ವಾಹನ ಖರೀದಿ ಯೋಗ ಸದ್ಯದಲ್ಲೇ ನನಸಾಗಲಿದೆ.

ಧನು: ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫಲ ಸಿಗದೇ ಹೋದೀತು. ಆದರೆ ನಿರಾಶೆ ಬೇಡ. ಗೃಹಿಣಿಯರಿಗೆ ಅತಿಥಿಗಳ ಆಗಮನಕ್ಕೆ ಸಿದ್ಧತೆ ನಡೆಸಬೇಕಾಗುತ್ತದೆ. ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ. ಕುಲದೇವರ ಪ್ರಾರ್ಥನೆ ಮಾಡಿ.

ಮಕರ: ಮಾನಸಿಕವಾಗಿ ಕಾಡುತ್ತಿದ್ದ ಚಿಂತೆ, ಸಮಸ್ಯೆಗಳಿಗೆ ಆಪ್ತರೊಂದಿಗೆ ಸಮಾಲೋಚಿಸಿ ಪರಿಹಾರ ಕಂಡುಕೊ‍ಳ್ಳಲಿದ್ದೀರಿ. ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮೊದಲು ಕುಟುಂಬದವರೊಂದಿಗೆ ಚರ್ಚಿಸಿ ಮುನ್ನಡೆಯುವುದು ಅಗತ್ಯ.

ಕುಂಭ: ಎಷ್ಟೋ ದಿನದಿಂದ ಬಾಕಿಯಿದ್ದ ಕೆಲಸಗಳನ್ನು ಪೂರ್ತಿ ಮಾಡಲು ಪ್ರಯತ್ನ ನಡೆಸಲಿದ್ದೀರಿ. ಸಂಗಾತಿಯ ಮಾತುಗಳಿಗೆ ಕಿವಿಗೊಡಬೇಕಾಗುತ್ತದೆ. ಮಕ್ಕಳ ಭವಿಷ್ಯಕ್ಕೆ ಯೋಜನೆ ರೂಪಿಸಲಿದ್ದೀರಿ. ದಿನದಂತ್ಯಕ್ಕೆ ಅಚ್ಚರಿ ಸುದ್ದಿ.

ಮೀನ: ನಿಮ್ಮ ಉತ್ತಮ ಗುಣನಡತೆಗಳಿಂದ ಎಲ್ಲರ ಮನಸ್ಸಿಗೆ ಇಷ್ಟವಾಗಲಿದ್ದೀರಿ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿಗೆ ಖರ್ಚುವೆಚ್ಚವಾಗಲಿದೆ. ಹಣ ಗಳಿಕೆಗೆ ನಾನಾ ಮಾರ್ಗಗಳನ್ನು ಕಂಡುಕೊಳ‍್ಳಲಿದ್ದೀರಿ. ಕೃಷಿಕರಿಗೆ ಮುನ್ನಡೆಯಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ವಾಸ್ತು ಪ್ರಕಾರ ಡೈನಿಂಗ್ ಟೇಬಲ್ ಅಡುಗೆ ಮನೆಯಲ್ಲಿದ್ದರೆ ಒಳ್ಳೆಯದು. ಯಾಕೆ ಗೊತ್ತಾ?