Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 10 ಮಾರ್ಚ್ 2021 (08:55 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಸಾಮಾಜಿಕ ರಂಗದಲ್ಲಿರುವ ನಿಮಗಿರುವ ಪರಿಚಯ, ಪ್ರಭಾವ ಇಂದು ಉಪಯೋಗಕ್ಕೆ ಬರಲಿದೆ. ಸ್ನೇಹಿತರ ಕಷ್ಟಕ್ಕೆ ಸ್ಪಂದಿಸಲಿದ್ದೀರಿ. ಕೌಟುಂಬಿಕವಾಗಿ ಹೊಸ ವಸ್ತುಗಳ ಖರೀದಿಗೆ ಚಿಂತನೆ ನಡೆಸುವಿರಿ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ವೃಷಭ: ಕೆಲವೊಂದು ಘಟನೆಗಳು ನಿಮ್ಮ ಜೀವನವನ್ನು ಬದಲಾಯಿಸೀತು. ಉದ್ಯೋಗ ರಂಗದಲ್ಲಿ ಸ್ಥಾನ ಪಲ್ಲಟವಾಗುವ ಸಾಧ್ಯತೆಯಿದೆ. ಆರ್ಥಿಕವಾಗಿ ಧನ ಗಳಿಕೆಗೆ ನಾನಾ ಮಾರ್ಗಗಳನ್ನು ಹುಡುಕಾಡಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಿಥುನ: ಉದ್ವೇಗದಿಂದ ನಿರ್ಧಾರ ಕೈಗೊಳ್ಳುವ ಬದಲು ಸಮಾಧಾನ ಚಿತ್ತದಿಂದ ಬೇರೆಯವರು ಹೇಳುವ ಅಭಿಪ್ರಾಯಗಳಿಗೆ ಕಿವಿಗೊಡಿ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ವೃತ್ತಿರಂಗದಲ್ಲಿ ಹೊಸ ಜವಾಬ್ಧಾರಿಗಳಿಗೆ ಸಿದ್ದರಾಗಬೇಕಾಗುತ್ತದೆ.

ಕರ್ಕಟಕ: ವೃತ್ತಿ ನಿಮಿತ್ತವಾಗಿ ಅಧಿಕ ಓಡಾಟ ನಡೆಸಲಿದ್ದೀರಿ. ವ್ಯಾವಹಾರಿಕವಾಗಿ ಮುನ್ನಡೆಯ ಯೋಗವಿದೆ. ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ಯೋಗ್ಯ ವಯಸ್ಕರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ.

ಸಿಂಹ: ವೈಯಕ್ತಿಕ ವಿಚಾರದಲ್ಲಿ ಬರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ಸಂಗಾತಿಯ ಸಹಕಾರ ಸಿಗಲಿದೆ. ನಿಮ್ಮ ಆಪ್ತೇಷ್ಟರ ಭೇಟಿಯಾಗಲಿದ್ದೀರಿ. ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚ ಮಾಡಲಿದ್ದೀರಿ.

ಕನ್ಯಾ: ನಿಮ್ಮ ಸತತ ಪರಿಶ್ರಮದ ಫಲವಾಗಿ ವೈಯಕ್ತಿಕವಾಗಿ ಏಳಿಗೆ ಕಂಡುಬರಲಿದೆ. ಆರ್ಥಿಕವಾಗಿ ಹಿನ್ನಡೆಯಿದ್ದರೂ ಚಿಂತೆ ಮಾಡಬೇಕಾಗಿಲ್ಲ. ಸಾಮಾಜಿಕವಾಗಿ ಸ್ಥಾನ ಮಾನ ಹೆಚ್ಚಲಿದೆ. ಕಾರ್ಯಕ್ಷೇತ್ರದಲ್ಲಿ ಮಹತ್ವಪೂರ್ಣ ಸ್ಥಾನ ಪಡೆಯಲಿದ್ದೀರಿ.

ತುಲಾ: ವಿದ್ಯಾರ್ಥಿ ವರ್ಗದವರಿಗೆ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ನಿಮ್ಮ ಕೌಶಲ್ಯಕ್ಕೆ ಮನ್ನಣೆ ಸಿಗುವುದು. ವ್ಯಾಪಾರಿಗಳಿಗೆ ಹಣ ಗಳಿಕೆಗೆ ಅವಕಾಶ ಸಿಗುವುದು. ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗದಿಂದ ಲಾಭವಾಗಲಿದೆ.

ವೃಶ್ಚಿಕ: ಕಾರ್ಯರಂಗದಲ್ಲಿ ಹೆಚ್ಚಿನ ಅಭಿವೃದ್ಧಿಗೆ ಹೊಸ ಐಡಿಯಾಗಳನ್ನು ಜಾರಿಗೆ ತರಲಿದ್ದೀರಿ. ಕಟ್ಟಡ ಕಾಮಗಾರಿ ಕೆಲಸಕ್ಕೆ ಚಾಲನೆ ನೀಡುವಿರಿ. ನೂತನ ದಂಪತಿಗಳಿಗೆ ಸಂತಾನ ಫಲ ಸೂಚನೆ ದೊರೆಯಲಿದೆ. ದೇವತಾ ಪ್ರಾರ್ಥನೆ ಮಾಡಿ.

ಧನು: ನೀವು ಅರ್ಧಕ್ಕೇ ನಿಲ್ಲಿಸಿದ್ದ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಬೇರೆಯವರ ಅಭಿಪ್ರಾಯಗಳಿಗೆ ಅತಿಯಾಗಿ ಕಿವಿಗೊಡುತ್ತಿದ್ದರೆ ಕೆಲಸ ಹಾಳಾದೀತು. ಸಂಗಾತಿಯ ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಿ.

ಮಕರ: ಮಾನಸಿಕವಾಗಿ ಒಂದು ರೀತಿಯ ಋಣಾತ್ಮಕ ಭಾವನೆ ಕಾಡಲಿದೆ. ಕೆಲಸ ಕಾರ್ಯದಲ್ಲಿ ನಿರುತ್ಸಾಹ ಕಂಡುಬರಲಿದೆ. ವೃತ್ತಿರಂಗದಲ್ಲಿ ಮೇಲಧಿಕಾರಿಗಳಿಂದ ಕಿರಿ ಕಿರಿ ಕಂಡುಬಂದೀತು. ಹಳೆಯ ಸಂಭದಗಳು ಮರಳಿ ಕೂಡಲಿವೆ.

ಕುಂಭ: ವೃತ್ತಿರಂಗದಲ್ಲಿ ಆತುರದ ನಿರ್ಧಾರಕ್ಕೆ ಬೆಲೆ ತೆರಬೇಕಾದೀತು. ಕೆಲವೊಂದು ಮಹತ್ವದ ಬದಲಾವಣೆಗೆ ಸಿದ್ಧರಾಗಬೇಕಾಗುತ್ತದೆ. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ಹೆಚ್ಚಲಿದೆ. ಕಿರು ಸಂಚಾರ ಮಾಡಲಿದ್ದೀರಿ.

ಮೀನ: ದೈವಾನುಗ್ರಹದಿಂದ ನೀವು ಕೈಹಿಡಿದ ಕೆಲಸಗಳು ಯಶಸ್ವಿಯಾಗಿ ನೆರವೇರಲಿದೆ. ಉದ್ಯೋಗದಲ್ಲಿ ಲಾಭ ಪಡೆಯಲು ಶ್ರಮಿಸಲಿದ್ದೀರಿ. ಹಿರಿಯರಿಗೆ ಧಾರ್ಮಿಕ ಕೆಲಸಗಳಿಂದ ಮನಸ್ಸಿಗೆ ನೆಮ್ಮದಿ ಸಿಗುವುದು. ದೂರ ಸಂಚಾರದಲ್ಲಿ ಎಚ್ಚರಿಕೆಯಿರಲಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Raghavendra swamy mantra: ಶ್ರೀ ರಾಘವೇಂದ್ರ ಕವಚ ಸ್ತೋತ್ರಂ ಭಕ್ತಿಯಿಂದ ಓದಿ

Devi Mantra: ಮನೆಯಲ್ಲಿರುವ ಅವಿವಾಹಿತ ಕನ್ಯಾಮಣಿಗಳು ತಪ್ಪದೇ ಈ ಸ್ತೋತ್ರ ಓದಿ

Ardanaristaka Stothram: ವಿವಾಹಾದಿ ಸಮಸ್ಯೆಗಳಿಗೆ ಅರ್ಧನಾರೀಶ್ವರಾಷ್ಟಕಂ ಸ್ತೋತ್ರ ಓದಿ

Gayatri Mantra: ಗಾಯತ್ರಿ ಅಷ್ಟೋತ್ತರ ಶತನಾಮಾವಳಿ ಕನ್ನಡದಲ್ಲಿ ಇಲ್ಲಿದೆ

Shani Mantra: ಶನಿ ಕವಚ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ಇಂದು ತಪ್ಪದೇ ಓದಿ

ಮುಂದಿನ ಸುದ್ದಿ
Show comments