ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಗುರುವಾರ, 11 ಮಾರ್ಚ್ 2021 (08:49 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ವೃತ್ತಿರಂಗದಲ್ಲಿ ತಮ್ಮ ಬೇಳೆ ಬೇಯಿಸಿಕೊಳ್ಳುವವರ ಬಗ್ಗೆ ಹುಷಾರಾಗಿರಿ. ಆರ್ಥಿಕವಾಗಿ ಬರಬೇಕಾದ ಬಾಕಿ ಹಣ ಪಾವತಿಯಾಗಲಿದೆ. ಸಾಂಸಾರಿಕವಾಗಿ ಬೇಡದ ಮಾತುಗಳಿಂದ ಮನಸ್ಸು ಹಾಳಾದೀತು. ತಾಳ್ಮೆ, ಸಂಯವಿರಲಿ.

ವೃಷಭ: ರಾಜಕೀಯ ರಂಗದಲ್ಲಿರುವವರಿಗೆ ಮುನ್ನಡೆಯ ಯೋಗ ಕೂಡಿಬರಲಿದೆ. ಸ್ಥಾನ ಮಾನ ವೃದ್ಧಿಯಾಗಲಿದೆ. ಆದರೆ ನಿಮ್ಮ ಸಂಗಾತಿಯ ಮುನಿಸಿಗೆ ಕಾರಣವಾಗಬೇಕಾಗುತ್ತದೆ. ಹಿರಿಯರಿಗೆ ಧಾರ್ಮಿಕ ಕ್ಷೇತ್ರಗಳ ಭೇಟಿ ಯೋಗ.

ಮಿಥುನ: ಕೋಪದ ಭರದಲ್ಲಿ ತೆಗೆದುಕೊಳ್ಳುವ ನಿರ್ಧಾರದಿಂದ ಉತ್ತಮ ಫಲ ದೊರೆಯದು. ಇಷ್ಟ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗಲಿದೆ. ವೈಯಕ್ತಿಕ ಜೀವನದಲ್ಲಿ ಪ್ರಗತಿ ಕಂಡುಬರಲಿದೆ.

ಕರ್ಕಟಕ: ಇನ್ನೊಬ್ಬರ ಮೇಲೆ ಅತಿಯಾಗಿ ಅವಲಂಬಿಸುವುದು ಉತ್ತಮ ಲಕ್ಷಣವಲ್ಲ. ನಿಮ್ಮ ನಿರ್ಧಾರಗಳನ್ನು ನೀವೇ ತೆಗೆದುಕೊಳ್ಳಿ. ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗದಿಂದ ಲಾಭ ಸಿಗಲಿದೆ. ಕುಲದೇವರ ಪ್ರಾರ್ಥನೆ ಮಾಡಿ.

ಸಿಂಹ: ಅಧಿಕ ಓಡಾಟದಿಂದ ದೇಹಾಯಾಸವಾದೀತು. ವಾಹನ ಖರೀದಿಸುವ ನಿಮ್ಮ ಕನಸು ಸದ್ಯದಲ್ಲೇ ನನಸಾಗಲಿದೆ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಸಂಗಾತಿಯ ಮೆಚ್ಚುಗೆಗೆ ಪಾತ್ರರಾಗಲಿದ್ದೀರಿ.

ಕನ್ಯಾ: ಸಾಮಾಜಿಕ ರಂಗದಲ್ಲಿ ನಿಮ್ಮ ಕೀರ್ತಿ ಹೆಚ್ಚಲಿದೆ. ಆದಾಯ ವೃದ್ಧಿಯಾಗಲಿದೆ. ಆದರೆ ಅನಿರೀಕ್ಷಿತ ಖರ್ಚು ವೆಚ್ಚಗಳು ಕಂಗೆಡಿಸಲಿವೆ. ಮಕ್ಕಳ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಹೊಸ ಕೆಲಸಗಳನ್ನು ಪ್ರಾರಂಭಿಸಲು ಕೆಲವು ದಿನ ಕಾಯುವುದು ಒಳಿತು.

ತುಲಾ: ಕಟ್ಟಡ ಕಾಮಗಾರಿ ಕೆಲಸಗಳು ಅರ್ಧಕ್ಕೇ ನಿಂತು ಹೋಗಲಿವೆ. ಆರ್ಥಿಕವಾಗಿ ಹಣಕಾಸಿನ ಅಡಚಣೆ ಕಂಡುಬಂದೀತು. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ದೊರೆಯಲಿದೆ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶ ಸಿಗಲಿದೆ.

ವೃಶ್ಚಿಕ: ನಿಮ್ಮ ಹೊಸ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಇದು ಸಕಾಲ. ಕಳೆದು ಹೋದ ವಸ್ತುವಿಗಾಗಿ ಹುಡುಕಾಟ ನಡೆಸಲಿದ್ದೀರಿ. ಹಿರಿಯರ ಸಲಹೆಗಳನ್ನು ಪಾಲಿಸುವುದು ಉತ್ತಮ. ಕೋರ್ಟು ಕಚೇರಿ ಕೆಲಸಗಳಲ್ಲಿ ಮುನ್ನಡೆ ಸಿಗಲಿದೆ.

ಧನು: ಯೋಗ್ಯ ವಯಸ್ಕರು ಸೂಕ್ತ ಸಂಗಾತಿಯನ್ನು ಹುಡುಕಲಿದ್ದಾರೆ. ಮನಸ್ಸಿನ ಮಾತುಗಳಿಗೆ ಬೆಲೆಕೊಡಿ. ಕ್ರಿಯಾತ್ಮಕ ಕೆಲಸಗಳಿಂದ ಸಮಸ್ಯೆ ಬಗೆಹರಿಸಿಕೊಳ್ಳುವಿರಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಚಿಂತೆ ಬೇಡ.

ಮಕರ: ವ್ಯಾವಹಾರಿಕವಾಗಿ ಲಾಭದಾಯಕ ದಿನಗಳಿವು. ಆದರೆ ನಯವಂಚಕರ ಮಾತಿಗೆ ಮರುಳಾಗಬೇಡಿ. ಸಂಗಾತಿಯ ಸಲಹೆಗಳನ್ನು ಪಾಲಿಸಿದಲ್ಲಿ ಉತ್ತಮ. ಮನೆಯಲ್ಲಿ ನೆಮ್ಮದಿಯ ವಾತಾವರಣವಿರಲಿದೆ. ದಿನದಂತ್ಯಕ್ಕೆ ಅಚ್ಚರಿ ಸುದ್ದಿ.

ಕುಂಭ: ಮನಸ್ಸಿನಲ್ಲಿ ಕೊರೆಯುತ್ತಿದ್ದ ಯೋಚನೆಗಳನ್ನು ಆಪ್ತರೊಂದಿಗೆ ಹಂಚಿಕೊಂಡು ಹಗುರವಾಗಲಿದ್ದೀರಿ. ವಿದ್ಯಾರ್ಥಿಗಳು ಶಿಕ್ಷಕ ವರ್ಗದವರ ಪ್ರಶಂಸೆಗೊಳಗಾಗಲಿದ್ದಾರೆ. ಮನೆಯಲ್ಲಿ ಶುಭ ಮಂಗಲ ಕಾರ್ಯಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಮೀನ: ಧಾರ್ಮಿಕ ಕೆಲಸಗಳಿಗಾಗಿ ಸಂಚಾರ ಮಾಡಲಿದ್ದೀರಿ. ಆರ್ಥಿಕವಾಗಿ ಹಣಕಾಸಿನ ಖರ್ಚು ವೆಚ್ಚ ಅನಿವಾರ್ಯ. ಸಾಂಸಾರಿಕವಾಗಿ ಭಿನ್ನಾಭಿಪ್ರಾಯಕ್ಕೆ ಎಡೆಮಾಡಿಕೊಡದಿರಿ. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸೋಮವಾರ ಕಾಶೀ ವಿಶ್ವನಾಥನ ಪ್ರಾರ್ಥನೆ ಮಾಡಿ

ದೇವರ ಕೋಣೆಯಲ್ಲಿ ಒಂದೇ ದೀಪ ಹಚ್ಚಬಾರದೇ, ಏನಿದರ ಅರ್ಥ, ಇಲ್ಲಿದೆ ಮಾಹಿತಿ

ಸುಬ್ರಹ್ಮಣ್ಯನ ಅನುಗ್ರಹಕ್ಕೆ ಈ ಸ್ತೋತ್ರವನ್ನು ಓದಿ

ಅಂಬಾ ಪಂಚರತ್ನ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಗುರುವಾರ ಮಹಾವಿಷ್ಣುವಿನ ಅನುಗ್ರಹಕ್ಕೆ ಈ ಸ್ತೋತ್ರವನ್ನು ತಪ್ಪದೇ ಓದಿ

ಮುಂದಿನ ಸುದ್ದಿ
Show comments