ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶುಕ್ರವಾರ, 19 ಮಾರ್ಚ್ 2021 (08:50 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಉದ್ಯೋಗ ಕ್ಷೇತ್ರದಲ್ಲಿ ಒಂದೇ ರೀತಿಯ ಕೆಲಸದಿಂದ ಬೇಸರ ಮೂಡೀತು. ಆದರೆ ಆರ್ಥಿಕವಾಗಿ ಹಣಕಾಸಿನ ದೃಷ್ಟಿಯಿಂದ ನೀವು ಪರಿಶ್ರಮ ಪಡಲೇಬೇಕಾಗುತ್ತದೆ. ಸಂಗಾತಿಯ ಬಯಕೆಗಳನ್ನು ಈಡೇರಿಸಬೇಕಾಗುತ್ತದೆ.

ವೃಷಭ: ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗಲಿದೆ. ನೂತನ ದಂಪತಿಗಳಿಗೆ ಮಧುಚಂದ್ರ ಭಾಗ್ಯ ಒದಗಿಬರುವುದು. ಕೌಟುಂಬಿಕವಾಗಿ ಸಂತಸದ ವಾತಾವರಣವಿರಲಿದೆ. ಆರ್ಥಿಕವಾಗಿ ಖರ್ಚು ವೆಚ್ಚಗಳು ಹಿಡಿತದಲ್ಲಿರಲಿ.

ಮಿಥುನ: ಎಷ್ಟೋ ದಿನದಿಂದ ಮಾಡಬೇಕೆಂದುಕೊಂಡಿದ್ದ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಬಯಸಿದ ವಸ್ತುಗಳು ತಾನಾಗೇ ಕೈಸೇರಲಿದೆ. ಧಾರ್ಮಿಕ ಕಾರ್ಯಗಳಿಗೆ ಧನವಿನಿಯೋಗ ಮಾಡಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕರ್ಕಟಕ: ನಿಮ್ಮ ಅತಿಯಾದ ಆತ್ಮವಿಶ್ವಾಸವೇ ಕೆಲವೊಮ್ಮೆ ಮುಳುವಾಗುವ ಸಾಧ‍್ಯತೆಯಿದೆ. ಸತತ ಪ್ರಯತ್ನದಿಂದ ಫಲ ಸಿಗಬಹುದು. ವೃತ್ತಿರಂಗದಲ್ಲಿ ಮೇಲಧಿಕಾರಿಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ತಾಳ್ಮೆಯಿರಲಿ.

ಸಿಂಹ: ಎಷ್ಟೋ ದಿನದಿಂದ ಭೇಟಿಯಾಗಬೇಕೆಂದುಕೊಂಡಿದ್ದ ವ್ಯಕ್ತಿಗಳು ಇಂದು ಅನಿರೀಕ್ಷಿತವಾಗಿ ನಿಮ್ಮ ಎದುರು ಬರಲಿದ್ದಾರೆ. ಅಂದುಕೊಂಡ ಕೆಲಸಗಳು ಸುಗಮವಾಗಿ ನೆರವೇರುವುದು. ವ್ಯಾಪಾರಿಗಳು, ವಾಣಿಜ್ಯೋದ್ಯಮಿಗಳಿಗೆ ಮುನ್ನಡೆಯ ದಿನ.

ಕನ್ಯಾ: ಯೋಗ್ಯ ವಯಸ್ಕರು ಸೂಕ್ತ ಸಂಗಾತಿಗಾಗಿ ಅನ್ವೇಷಣೆ ಮುಂದುವರಿಸಲಿದ್ದಾರೆ. ಕಾರ್ಯರಂಗದಲ್ಲಿ ಶತ್ರುಬಾಧೆ ಕಂಡುಬಂದೀತು. ಸಂಗಾತಿಯ ಸಾಂತ್ವನ ಮನಸ್ಸಿಗೆ ನೆಮ್ಮದಿ ನೀಡಲಿದೆ. ವಿದ್ಯಾರ್ಥಿಗಳಿಗೆ ಮುನ್ನಡೆಯ ದಿನವಿದು.

ತುಲಾ: ಅಧಿಕ ಕಾರ್ಯದೊತ್ತಡದಿಂದ ದೇಹಾಯಾಸವಾಗದಂತೆ ನೋಡಿಕೊಳ್ಳಿ. ಇಷ್ಟಮಿತ್ರರ ಭೇಟಿ ಮನಸ್ಸಿಗೆ ಸಂತೋಷ ನೀಡಲಿದೆ. ಹಣಕಾಸಿನ ಮುಗ್ಗಟ್ಟುಗಳು ದೂರವಾಗಲಿದೆ. ಹೊಸ ವಾಹನ ಖರೀದಿಗೆ ಮುಂದಾಗಲಿದ್ದೀರಿ.

ವೃಶ್ಚಿಕ: ವಿದ್ಯಾರ್ಥಿಗಳಿಗೆ ಭವಿಷ್ಯದ ಬಗ್ಗೆ ಚಿಂತೆಯಾದೀತು. ಹೊಸ ಯೋಜನೆಗಳನ್ನು ಹಾಕಿಕೊಳ್ಳಲಿದ್ಧೀರಿ. ಆಸ್ತಿ ವಿಚಾರವಾಗಿ ಹಿರಿಯರೊಂದಿಗೆ ಭಿನ್ನಾಭಿಪ್ರಾಯ ಮೂಡೀತು. ತಾಳ್ಮೆ, ಸಂಯಮ ಅಗತ್ಯ. ಸ್ವಯಂ ವ್ಯಾಪಾರಿಗಳಿಗೆ ಮುನ್ನಡೆ.

ಧನು: ಬಂಧು ಮಿತ್ರರ ಭೇಟಿಯಿಂದ ಮನಸ್ಸಿಗೆ ಸಂತೋಷವಾಗಲಿದೆ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಲಿದ್ದೀರಿ. ಸಂಗಾತಿಯ ಬಹುದಿನಗಳ ಕನಸು ನನಸು ಮಾಡಲಿದ್ದೀರಿ. ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ.

ಮಕರ: ವೈಯಕ್ತಿಕ ಸಮಸ್ಯೆಗಳನ್ನು ಪ್ರೀತಿ ಪಾತ್ರರೊಂದಿಗೆ ಹಂಚಿಕೊಂಡು ಹಗುರವಾಗಲಿದ್ದೀರಿ. ವೃತ್ತಿರಂಗದಲ್ಲಿ ನಿಮ್ಮ ಕಾಲೆಳೆಯುವವರ ಬಗ್ಗೆ ಎಚ್ಚರಿಕೆಯಿಂದಿರಿ. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡಲು ಖರ್ಚು ವೆಚ್ಚಗಳಾದೀತು.

ಕುಂಭ: ಮನೆಯ ವಿಚಾರದಲ್ಲಿ ನಿರ್ಧಾರ ತೆಗೆದುಕೊಳ್ಳುವ ಮೊದಲು ಸಂಗಾತಿಯೊಂದಿಗೆ ಪರಾಮರ್ಶಿಸಿ. ಹಿರಿಯರಿಗೆ ಪುಣ್ಯ ಕ್ಷೇತ್ರಗಳ ಸಂದರ್ಶನ ಯೋಗವಿದೆ. ಯೋಗ್ಯ ವಯಸ್ಕರು ಶೀಘ್ರದಲ್ಲೇ ಕಂಕಣ ಭಾಗ್ಯ ಪಡೆಯಲಿದ್ದಾರೆ. ಚಿಂತೆ ಬೇಡ.

ಮೀನ: ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಉನ್ನತ ಸ್ತರಕ್ಕೇರುವ ಯೋಗ ಕಂಡುಬರಲಿದೆ. ಪಾಲಿಗೆ ಬಂದ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಿ. ನಿರುದ್ಯೋಗಿಗಳಿಗೆ ಸ್ವ ಉದ್ಯೋಗದಿಂದ ಲಾಭವಾದೀತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಈ ಐದು ರಾಶಿಯವರಿಗೆ 2026 ರಲ್ಲಿ ಸ್ವಂತ ಮನೆ ಕನಸು ನನಸಾಗುತ್ತದೆ

ಮಂಗಳವಾರ ದೇವಿಯ ಅನುಗ್ರಹಕ್ಕಾಗಿ ನವರತ್ನ ಮಾಲಿಕಾ ಸ್ತೋತ್ರ

ಶಿವ ಪಂಚಾಕ್ಷರಿ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಈ ಐದು ರಾಶಿಯವರಿಗೆ 2026 ರಲ್ಲಿ ಮದುವೆ ಯೋಗವಿದೆ

ಶನಿವಾರದಂದು ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಲೇ ಬೇಡಿ

ಮುಂದಿನ ಸುದ್ದಿ
Show comments