Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಬುಧವಾರ, 31 ಮಾರ್ಚ್ 2021 (07:37 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಹಿರಿಯರಿಗೆ ದೇಹಾರೋಗ್ಯದಲ್ಲಿ ಸಮಸ್ಯೆಗಳು ಕಂಡುಬಂದೀತು. ಸಾಂಸಾರಿಕವಾಗಿ ಸಂಬಂಧಗಳು ಕೆಡದಂತೆ ಕಾಪಾಡಿಕೊಳ್ಳಲು ಕೆಲವು ಹೊಂದಾಣಿಕೆ ಮಾಡಬೇಕಾಗುತ್ತದೆ. ಮೇಲಧಿಕಾರಿಗಳೊಂದಿಗೆ ವ್ಯವಹರಿಸುವಾಗ ಎಚ್ಚರವಿರಲಿ.

ವೃಷಭ: ಆತುರದಲ್ಲಿ ವಿವೇಕರಹಿತವಾಗಿ ಕೈಗೊಳ್ಳುವ ನಿರ್ಧಾರದಿಂದ ತೊಂದರೆಯಾದೀತು. ಶುಭ ಮಂಗಲ ಕಾರ್ಯಗಳಲ್ಲಿ ಭಾಗಿಯಾಗಲು ಆಹ್ವಾನ ಬರಲಿದೆ. ವ್ಯವಹಾರದಲ್ಲಿ ಆರ್ಥಿಕವಾಗಿ ಮುನ್ನಡೆಯಿದ್ದೀತು. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ಕುಟುಂಬದಲ್ಲಿ ಇದುವರೆಗೆ ಇದ್ದ ಸಂಘರ್ಷದ ವಾತಾವರಣ ತಿಳಿಯಾಗಲಿದೆ. ಮಾತಿನ ಮೇಲೆ ನಿಗಾ ಇರಲಿ. ಸಂಗಾತಿಯ ಬಹುದಿನಗಳ ಬೇಡಿಕೆ ಪೂರೈಸಲಿದ್ದೀರಿ. ವಾಹನ ಸಂಚಾರದಲ್ಲಿ ಅಪಘಾತದ ಭಯವಿದೆ, ಎಚ್ಚರ.

ಕರ್ಕಟಕ: ಅವಿವಾಹಿತರಿಗೆ ವೈವಾಹಿಕ ಸಂಬಂಧಗಳು ಕೂಡಿಬಂದೀತು. ಕೌಟುಂಬಿಕವಾಗಿ ಸಂಭ್ರಮಾಚರಣೆಗೆ ಸೂಕ್ತ ಸಮಯ. ನೂತನ ದಂಪತಿಗಳಿಗೆ ಸುಂದರ ಕ್ಷಣ ಕಳೆಯುವ ಯೋಗ ಕೂಡಿಬರಲಿದೆ. ಅನಗತ್ಯ ಚಿಂತೆ ಬೇಡ.

ಸಿಂಹ: ವೃತ್ತಿರಂಗದಲ್ಲಿ ಕಾರ್ಯಬಾಹುಳ್ಯ ಅಧಿಕವೆನಿಸಲಿದೆ. ಉದ್ಯೋಗ ಬದಲಾವಣೆಗೆ ಚಿಂತನೆ ನಡೆಸಲಿದ್ದೀರಿ. ಹೊಸದಾಗಿ ಸೃಷ್ಟಿಯಾಗುವ ಸಂಬಂಧಗಳಿಂದ ಲಾಭವಾಗಲಿದೆ. ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಪರಿಶ್ರಮಪಡಬೇಕಾದ ದಿನಗಳಿವು.

ಕನ್ಯಾ: ಕೌಟುಂಬಿಕವಾಗಿ ನಿಮ್ಮ ಕೆಲವೊಂದು ನಡೆ-ನುಡಿಗಳು ಇತರ ಸದಸ್ಯರ ಅಸಮಾಧಾನಕ್ಕೆ ಕಾರಣವಾದೀತು. ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ ಕಂಡುಬರಲಿದ್ದು, ವ್ಯಾವಹಾರಿಕವಾಗಿ ಚೇತರಿಕೆ ಕಂಡುಬರಲಿದೆ. ಕಿರು ಸಂಚಾರ ಮಾಡುವಿರಿ.

ತುಲಾ: ದೂರ ಸಂಚಾರದಿಂದ ದೇಹಾಯಾಸವಾದೀತು. ಮನೆಗೆ ಅನಿರೀಕ್ಷಿತವಾಗಿ ನೆಂಟರಿಷ್ಟರ ಆಗಮನವಾಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ಹೆಚ್ಚಿನ ಹೊಣೆಗಾರಿಕೆ ಹೆಗಲಿಗೇರಲಿದೆ. ಖರ್ಚು ವೆಚ್ಚಗಳ ಬಗ್ಗೆ ನಿಯಂತ್ರಣವಿರಲಿ.

ವೃಶ್ಚಿಕ: ನಿಮ್ಮನ್ನು ಪುಸಲಾಯಿಸಿ ಕೆಲಸ ಮಾಡಿಸಿಕೊಳ್ಳುವವರ ಬಗ್ಗೆ ಎಚ್ಚರಿಕೆಯಿಂದಿರಿ. ಸಾಮರ್ಥ್ಯಕ್ಕಿಂತ ಹೆಚ್ಚಿನ ಕೆಲಸ ಮಾಡಿದರೆ ಆರೋಗ್ಯ ಸಮಸ್ಯೆ ಕಂಡುಬಂದೀತು. ನಿರುದ್ಯೋಗಿಗಳು ಸೂಕ್ತ ಉದ್ಯೋಗಕ್ಕೆ ಕಾಯುವುದು ಒಳಿತು.

ಧನು: ಕೆಲಸ ಕಾರ್ಯಗಳಲ್ಲಿ ಕಷ್ಟಗಳು ಬರುವುದು ಸಾಮಾನ್ಯ. ಅವುಗಳನ್ನು ಎದುರಿಸಿಕೊಂಡು ಹೋಗುವ ಆತ್ಮವಿಶ್ವಾಸ ಬೆಳೆಸಿಕೊಳ್ಳಿ. ಸಹೋದ್ಯೋಗಿಗಳ ಸಹಕಾರ ಸಿಗಲಿದೆ. ಧಾರ್ಮಿಕವಾಗಿ ಭಕ್ತಿ ಭಾವ ಹೆಚ್ಚೀತು. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಮಕರ: ಮನಸ್ಸಿಗೆ ಒಂದು ರೀತಿಯ ನಿರುತ್ಸಾಹ ಕಾಡಲಿದ್ದು, ಯಾಂತ್ರಿಕವಾಗಿ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊ‍ಳ್ಳಲಿದ್ದೀರಿ. ವಿದ್ಯಾರ್ಥಿಗಳು ಏಕಾಗ್ರತೆಯಿಂದ ಅಭ್ಯಾಸ ಮಾಡಿದರೆ ಯಶಸ್ಸು ಕಟ್ಟಿಟ್ಟ ಬುತ್ತಿ. ಅತಿಥಿಗಳ ಆಗಮನಕ್ಕೆ ಸಿದ್ಧರಾಗಿ.

ಕುಂಭ: ಯಾವುದೇ ವಿಚಾರದಲ್ಲೂ ಆತುರದ ತೀರ್ಮಾನ ತೆಗೆದುಕೊಳ್ಳುವುದು ಒಳ್ಳೆಯದಲ್ಲ. ಅರ್ಧಕ್ಕೇ ನಿಂತ ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಮಹಿಳೆಯರಿಗೆ ಕಾರ್ಯದೊತ್ತಡದಿಂದ ಬಿಡುವು ಸಿಗಲಿದೆ.

ಮೀನ: ಉದ್ಯೋಗ ರಂಗದಲ್ಲಿ ಸಹೋದ್ಯೋಗಿಗಳೊಂದಿಗಿನ ಭಿನ್ನಾಭಿಪ್ರಾಯಗಳು ಸರಿ ಹೋಗಲಿವೆ.  ಆತ್ಮೀಯರೊಂದಿಗೆ ಉತ್ತಮ ಕ್ಷಣ ಕಳೆಯಲಿದ್ದೀರಿ. ಉದ್ಯೋಗ ಅನ್ವೇಷಣೆಯಲ್ಲಿದ್ದವರಿಗೆ ಸಿಹಿ ಸುದ್ದಿ. ಇಷ್ಟ ದೇವರ ಪ್ರಾರ್ಥನೆ ಮಾಡಿ.

Share this Story:

Follow Webdunia kannada

ಮುಂದಿನ ಸುದ್ದಿ

ಎತ್ತರದಿಂದ ಬೀಳುತ್ತಿರುವ ಕನಸು ಬಿದ್ದರೆ ಏನರ್ಥ ಗೊತ್ತಾ?