ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶನಿವಾರ, 17 ಏಪ್ರಿಲ್ 2021 (09:01 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ನಿಮ್ಮ ವರಮಾನದಲ್ಲಿ ಕೊಂಚ ಸುಧಾರಣೆಯಾಗಲಿದೆ. ನಿಧಾನವಾಗಿ ಸಹಜ ಸ್ಥಿತಿಗೆ ಮರಳಲಿದ್ದೀರಿ. ದೈಹಿಕ ಆರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಯೋಜನೆ ರೂಪಿಸಲಿದ್ದೀರಿ. ತಾಳ್ಮೆಯಿರಲಿ.

ವೃಷಭ: ವೃತ್ತಿರಂಗದಲ್ಲಿ ಒಳ್ಳೆಯ ದಿನಗಳಿಗಾಗಿ ತಾಳ್ಮೆಯಿಂದ ಕಾಯುವುದು ಉತ್ತಮ. ವ್ಯಾವಹಾರಿಕವಾಗಿ ನಿಮ್ಮನ್ನು ವಂಚಿಸುವವರಿರುತ್ತಾರೆ. ಎಚ್ಚರಿಕೆಯಿಂದಿರಿ. ಸಂಗಾತಿಯ ಬೇಡಿಕೆ ಪೂರೈಸಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.

ಮಿಥುನ:ಸಾಂಸಾರಿಕವಾಗಿ ಅಭಿವೃದ್ಧಿ ಕಂಡುಬರಲಿದೆ. ಶುಭ ಮಂಗಲ ಕಾರ್ಯಗಳು ನಿರ್ವಿಘ್ನವಾಗಿ ನೆರವೇರಲಿದೆ. ಉದ್ಯೋಗದಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸಲಿದ್ದೀರಿ. ಮಿತ್ರರ ಕಷ್ಟಗಳಿಗೆ ನೆರವಾಗುವಿರಿ. ಚಿಂತೆ ಬೇಡ.

ಕರ್ಕಟಕ: ಆರ್ಥಿಕವಾಗಿ ನಾನಾ ರೀತಿಯ ಖರ್ಚು ವೆಚ್ಚಗಳು ಕಂಡುಬರಲಿದೆ. ಹೊಸ ಯೋಜನೆಗಳನ್ನು ಪ್ರಾರಂಭಿಸಲು ಕೆಲವು ದಿನ ಕಾಯುವುದು ಉತ್ತಮ. ಕೋರ್ಟು ಕಚೇರಿ ಕೆಲಸಗಳು ಅನಿರೀಕ್ಷಿತ ರೀತಿಯಲ್ಲಿ ನೆರವೇರಲಿದೆ.

ಸಿಂಹ: ನೀವು ಮನಸ್ಸಿನಲ್ಲಿ ಅಂದುಕೊಂಡಿದ್ದು ಒಂದು, ಆಗುವುದು ಇನ್ನೊಂದು ಎಂಬ ಪರಿಸ್ಥಿತಿ ಎದುರಾದೀತು. ಪ್ರೇಮಿಗಳ ಗುಟ್ಟು ಮನೆಯವರ ಎದುರು ಬಹಿರಂಗವಾಗಲಿದೆ. ಕೌಟುಂಬಿಕವಾಗಿ ತಾಳ್ಮೆ, ಸಮಾಧಾನವೇ ನಿಮ್ಮ ಅಸ್ತ್ರವಾಗಲಿದೆ.

ಕನ್ಯಾ: ಯಾವುದೇ ಕೆಲಸವಾದರೂ ಛಲದಿಂದ ಮುಂದುವರಿದಲ್ಲಿ ಯಶಸ್ಸು ನಿಮ್ಮದಾಗಲಿದೆ. ಸಂಗಾತಿಯ ಸಲಹೆಗಳು ಉಪಯೋಗಕ್ಕೆ ಬರಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ದಿನದಂತ್ಯಕ್ಕೆ ಅಚ್ಚರಿ ಸುದ್ದಿ.

ತುಲಾ: ಕುಟುಂಬಸ್ಥರ ಸಹಕಾರದೊಂದಿಗೆ ಸಂಭಾವ್ಯ ಸಮಸ್ಯೆಗಳಿಂದ ಪಾರಾಗಲಿದ್ದೀರಿ. ವೃತ್ತಿರಂಗದಲ್ಲಿ ಮುನ್ನಡೆಗೆ ಪೂರಕವಾದ ವಾತಾವರಣವಿರಲಿದೆ. ಮೇಲಧಿಕಾರಿಗಳಿಂದ ಪ್ರಶಂಸೆಗೊಳಗಾಗಲಿದ್ದೀರಿ. ಚಿಂತೆ ಬೇಡ.

ವೃಶ್ಚಿಕ: ದೇಹಾರೋಗ್ಯದಲ್ಲಿ ಏರುಪೇರು ಕಂಡುಬಂದೀತು. ಆದರೆ ಆತಂಕಪಡುವ ಅಗತ್ಯವಿಲ್ಲ. ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚ ಮಾಡಲಿದ್ದೀರಿ. ಇಷ್ಟದೇವರ ದೇವಾಲಯ ಸಂದರ್ಶನ ಮಾಡುವ ಯೋಗ ಕೂಡಿಬರಲಿದೆ.

ಧನು: ಇಂದಿನ ದಿನ ಕೇಳಿಬರುವ ಶುಭ ವಾರ್ತೆಯೊಂದು ನಿಮ್ಮನ್ನು ದಿನವಿಡೀ ಉಲ್ಲಸಿತರಾಗಿಡಲಿದೆ. ನೂತನ ದಂಪತಿಗಳಿಗೆ ಸಂತೋಷದಾಯಕ ಕ್ಷಣ ಕಳೆಯುವ ಯೋಗ. ಇಷ್ಟ ಭೋಜನ ಮಾಡಲಿದ್ದೀರಿ. ಆದರೆ ಆರೋಗ್ಯದ ಬಗ್ಗೆ ಉಪೇಕ್ಷೆ ಬೇಡ.

ಮಕರ: ಕಾರ್ಯಕ್ಷೇತ್ರದಲ್ಲಿ ಹೆಚ್ಚಿನ ಕಾರ್ಯಭಾರದಿಂದಾಗಿ ದೇಹಾಯಾಸವಾದೀತು. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕಾಗುತ್ತದೆ. ಸಾಮಾಜಿಕವಾಗಿ ಸ್ಥಾನ ಮಾನ ವೃದ್ಧಿಗೊಳ್ಳಲಿದೆ.

ಕುಂಭ: ಉದ್ಯೋಗ ವ್ಯವಹಾರದಲ್ಲಿ ನಿಮ್ಮ ಮುನ್ನಡೆಯನ್ನು ಯಾರೂ ತಡೆಯಲಾಗದು. ಸಾಮಾಜಿಕವಾಗಿ ಗೌರವ ಪ್ರಾಪ್ತಿಯಾಗಲಿದೆ. ಮಕ್ಕಳಿಂದ ಶುಭ ವಾರ್ತೆ ಕೇಳಿಬಂದೀತು. ವಿದ್ಯಾರ್ಥಿಗಳಿಗೆ ಉತ್ತಮ ಫಲ ಸಿಗುವುದು.

ಮೀನ: ಉದ್ಯೋಗ ಬೇಟೆ ನಡೆಸುತ್ತಿರುವ ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು ಎದುರಾಗಲಿವೆ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿ ಯೋಗ. ಮನಸ್ಸಿನ ಭಾವನೆಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳಲಿದ್ದೀರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸಂಜೆ ದೀಪ ಹಚ್ಚುವಾಗ ಪಠಿಸಬಹುದಾದ ಸ್ತೋತ್ರಗಳು ಇಲ್ಲಿವೆ

ಕೆಟ್ಟ ದೃಷ್ಟಿ ನಿವಾರಿಸಿ ಸಂಪತ್ತು ವೃದ್ಧಿಗೆ ಈ ಲಕ್ಷ್ಮೀ ಮಂತ್ರ ಪಠಿಸಿ

ಸಂಜೆ ದೀಪ ಹಚ್ಚುವ ಅತ್ಯಂತ ಮಂಗಳಕರ ಸಮಯ ಯಾವುದು ಗೊತ್ತಾ

ಮೇಷಾದಿ ದ್ವಾದಶ ರಾಶಿಫಲ 2026: ಖ್ಯಾತ ಜ್ಯೋತಿಷಿ ಶ್ರೀ ವೆಂಕಟೇಶ್ವರ ಭಟ್ ಅವರಿಂದ

ಬುಧವಾರ ಗಣೇಶನ ಅನುಗ್ರಹಕ್ಕೆ ಈ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments