ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಮಂಗಳವಾರ, 20 ಏಪ್ರಿಲ್ 2021 (08:55 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ವ್ಯಾಪಾರ ವ್ಯವಹಾರದಲ್ಲಿ ಮುನ್ನಡೆ ಕಂಡುಬರಲಿದೆ. ವೃತ್ತಿರಂಗದಲ್ಲಿ ಹೆಚ್ಚಿನ ಕಾರ್ಯದೊತ್ತಡದಿಂದ ದೇಹಾಯಾಸವಾದೀತು. ಸಾಂಸಾರಿಕವಾಗಿ ನಿಮ್ಮ ತಾಳ್ಮೆ ಪರೀಕ್ಷೆ ನಡೆಯಲಿದೆ. ದೇವತಾ ಪ್ರಾರ್ಥನೆ ಮಾಡಿ.

ವೃಷಭ: ನೆರೆಹೊರೆಯವರು ನಿಮ್ಮ ಗುಟ್ಟುಗಳನ್ನು ತಿಳಿಯಲು ಬಯಸುತ್ತಾರೆ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಶುಭವಾಗಲಿದೆ. ಸಾಂಸಾರಿಕವಾಗಿ ಹೆಚ್ಚಿನ ಜವಾಬ್ಧಾರಿ ಹೆಗಲಿಗೇರಲಿದೆ.

ಮಿಥುನ: ಸಾಂಸಾರಿಕವಾಗಿ ನಿಮ್ಮ ಕೆಲವೊಂದು ನಿರ್ಧಾರಗಳು ಇತರರ ಅಸಮಾಧಾನಕ್ಕೆ ಗುರಿಯಾದೀತು. ತಾಳ್ಮೆ, ಸಂಯಮ ಅಗತ್ಯ. ಆರ್ಥಿಕವಾಗಿ ಹಣಗಳಿಕೆಗೆ ನಾನಾ ಮಾರ್ಗ ಕಂಡುಕೊಳ್ಳಲಿದ್ದೀರಿ. ದಿನದಂತ್ಯಕ್ಕೆ ನೆಮ್ಮದಿ.

ಕರ್ಕಟಕ: ವ್ಯಾಪಾರ, ವ್ಯವಹಾರದಲ್ಲಿ ಲಾಭ-ನಷ್ಟ ಎರಡೂ ಸಮನಾಗಿರಲಿದೆ. ಅಪರಿಚಿತರನ್ನು ನಂಬಿ ವ್ಯವಹಾರ ಮಾಡಲು ಹೋಗಬೇಡಿ. ಸಾಲಗಾರರ ಕಾಟದಿಂದ ಮುಕ್ತಿ ಪಡೆಯಲು ಪ್ರಯತ್ನಿಸಲಿದ್ದೀರಿ. ಕಿರು ಸಂಚಾರ ಮಾಡಲಿದ್ದೀರಿ.

ಸಿಂಹ: ಉದ್ಯೋಗ ಕ್ಷೇತ್ರದಲ್ಲಿ ಕಷ್ಟಗಳು ಬಂದಾಗ ಸಹೋದ್ಯೋಗಿಗಳ ಸಹಕಾರ ಪಡೆಯಲಿದ್ದೀರಿ. ಕೋರ್ಟು ಕಚೇರಿ ಕೆಲಸಗಳಿಗಾಗಿ ಅಲೆದಾಟ ನಡೆಸಬೇಕಾಗಬಹುದು. ಹಿರಿಯರಿಗೆ ದೇಹಾರೋಗ್ಯದಲ್ಲಿ ಏರುಪೇರಾದೀತು.

ಕನ್ಯಾ: ಸಮಸ್ಯೆಗಳು ಬಂದಾಗ ಹಿರಿಯರಿಂದ ಉಪಯುಕ್ತ ಸಲಹೆ ಪಡೆಯಲಿದ್ದೀರಿ. ನಿಮ್ಮ ಕೆಲವೊಂದು ಮಾತುಗಳಿಂದ ನಿಷ್ಠುರಕ್ಕೊಳಗಾಗಲಿದ್ದೀರಿ. ಯೋಗ್ಯ ವಯಸ್ಕರು ಸೂಕ್ತ ಸಂಬಂಧಕ್ಕಾಗಿ ಕೆಲವು ದಿನ ಕಾಯುವುದು ಒಳಿತು.

ತುಲಾ: ಮನೆಯಲ್ಲಿ ಶುಭ ಮಂಗಲ ಕಾರ್ಯಗಳ ಸಿದ್ಧತೆಗಾಗಿ ಓಡಾಟ ನಡೆಸಲಿದ್ದೀರಿ. ಸಹೋದರ ವರ್ಗದವರೊಂದಿಗೆ ಭಿನ್ನಾಭಿಪ್ರಾಯಗಳಾಗದಂತೆ ಎಚ್ಚರಿಕೆ ವಹಿಸಿ. ಸರಕಾರಿ ವೃತ್ತಿಯವರಿಗೆ ಕೆಲಸದೊತ್ತಡ ತಪ್ಪದು.

ವೃಶ್ಚಿಕ: ಇಂದು ನಿಮ್ಮ ಮಾತೇ ನಿಮಗೆ ಬಂಡವಾಳವಾಗಲಿದೆ. ಅನ್ಯರ ವಿಚಾರದಲ್ಲಿ ಮೂಗು ತೂರಿಸಲು ಹೋಗಿ ನಿಷ್ಠುರಕ್ಕೊಳಗಾಗಬೇಡಿ. ನಿರುದ್ಯೋಗಿಗಳು ಉದ್ಯೋಗ ಪಡೆಯಲು ಹರಸಾಹಸ ಪಡಬೇಕಾಗಬಹುದು. ತಾಳ್ಮೆಯಿರಲಿ.

ಧನು: ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶಗಳು ತೋರಿಬರಲಿದೆ. ದಾಯಾದಿಗಳ ಕಿರಿ ಕಿರಿ ಕಂಡುಬರಬಹುದು. ಮಿತ್ರರ ಕಷ್ಟಕ್ಕೆ ಸ್ಪಂದಿಸಲಿದ್ದೀರಿ. ತಾಂತ್ರಿಕ ವೃತ್ತಿಯವರಿಗೆ ಮುನ್ನಡೆಯ ಯೋಗವಿದೆ. ಕುಲದೇವರ ಪ್ರಾರ್ಥಿಸಿ.

ಮಕರ: ವೃತ್ತಿರಂಗದಲ್ಲಿ ನಿಮ್ಮ ಕ್ರಿಯಾಶೀಲ ಯೋಚನೆಗಳಿಗೆ ಮನ್ನಣೆ ಸಿಗಲಿದೆ. ಮೇಲಧಿಕಾರಿಗಳಿಂದ ಪ್ರಶಂಸೆಗೊಳಗಾಗಲಿದ್ದೀರಿ. ಕೌಟುಂಬಿಕವಾಗಿ ಅತಿಥಿಗಳ ಆಗಮನಕ್ಕೆ ಸಿದ್ಧರಾಗಿ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಕುಂಭ: ಹಿರಿಯರಿಗೆ ಮೈ ಕೈ ನೋವು ಇತ್ಯಾದಿ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆ ಕಂಡುಬರಲಿದೆ. ಸಾಮಾಜಿಕವಾಗಿ ನಿಮ್ಮ ಕೀರ್ತಿ ಹೆಚ್ಚಲಿದೆ. ಗೃಹೋಪಯೋಗಿ ವಸ್ತುಗಳಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ನೂತನ ದಂಪತಿಗಳಿಗೆ ಶುಭದಿನ.

ಮೀನ: ಮಕ್ಕಳ ವಿಚಾರದಲ್ಲಿ ಸಂಗಾತಿಯೊಂದಿಗೆ ಭಿನ್ನಾಭಿಪ್ರಾಯಗಳಾದೀತು. ಅನಗತ್ಯ ವಿಚಾರಗಳನ್ನು ಮನಸ್ಸಿಗೆ ಹಚ್ಚಿಕೊಳ್ಳಬೇಡಿ. ಸಾಂಸಾರಿಕವಾಗಿ ಖರ್ಚು ವೆಚ್ಚಗಳ ಹೊಣೆ ಹೆಗಲಿಗೆ ಬೀಳಲಿದೆ. ದೇವತಾ ಪ್ರಾರ್ಥನೆ ಮಾಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸುಬ್ರಹ್ಮಣ್ಯನ ಅನುಗ್ರಹಕ್ಕೆ ಈ ಸ್ತೋತ್ರವನ್ನು ಓದಿ

ಅಂಬಾ ಪಂಚರತ್ನ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಗುರುವಾರ ಮಹಾವಿಷ್ಣುವಿನ ಅನುಗ್ರಹಕ್ಕೆ ಈ ಸ್ತೋತ್ರವನ್ನು ತಪ್ಪದೇ ಓದಿ

ಗಣಪತಿಯ ಅನುಗ್ರಹಕ್ಕಾಗಿ ಇಂದು ಈ ಸ್ತೋತ್ರವನ್ನು ಪಠಿಸಿ

ಇಂದು ಚಂದ್ರಗ್ರಹಣ: ಕರ್ನಾಟಕದಲ್ಲಿ ಎಷ್ಟು ಹೊತ್ತು ಗೋಚರ, ಈ ರಾಶಿಗೆ ಲಾಭದಾಯಕ

ಮುಂದಿನ ಸುದ್ದಿ
Show comments