Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶನಿವಾರ, 24 ಏಪ್ರಿಲ್ 2021 (08:50 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ನಾಜೂಕಾರಿ ಪರಿಸ್ಥಿತಿ ನಿಭಾಯಿಸುವ ನಿಮ್ಮ ಬಗ್ಗೆ ಮೇಲಧಿಕಾರಿಗಳಿಂದ ಪ್ರಶಂಸೆ ವ್ಯಕ್ತವಾಗಲಿದೆ. ಆರ್ಥಿಕವಾಗಿ ಹಣಕಾಸಿನ ಖರ್ಚು ವೆಚ್ಚಗಳು ಚಿಂತೆಗೆ ಕಾರಣವಾಗಬಹುದು. ಹೊಸ ಯೋಜನೆಗಳಿಗೆ ಕೈ ಹಾಕಲು ಇದು ಸಕಾಲ.

ವೃಷಭ: ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ಆದರೆ ಅದರ ಸದುಪಯೋಗ ಪಡಿಸಿಕೊಳ್ಳುವಲ್ಲಿ ಸೋಲಲಿದ್ದೀರಿ. ಹಿರಿಯರ ಸಲಹೆಗಳನ್ನು ಪಾಲಿಸಿದರೆ ಉತ್ತಮ. ಸಂಗಾತಿಗೆ ಅಚ್ಚರಿಯ ಉಡುಗೊರೆ ಕೊಡಲಿದ್ದೀರಿ.

ಮಿಥುನ: ನಾಲಿಗೆ ಚಪಲಕ್ಕೆ ಕಡಿವಾಣ ಹಾಕದೇ ಹೋದಲ್ಲಿ ಉದರ ಸಂಬಂಧೀ ಆರೋಗ್ಯ ಸಮಸ್ಯೆ ತಪ್ಪಿದ್ದಲ್ಲ.ಕೆಳ ಹಂತದ ನೌಕರರಿಗೆ ಮುಂಬಡ್ತಿ ಯೋಗ ಕೂಡಿಬರಲಿದೆ. ವಿದ್ಯಾರ್ಥಿಗಳಿಗೆ ಕಠಿಣ ಪರೀಕ್ಷೆಗಳು ಎದುರಾಗಲಿವೆ.

ಕರ್ಕಟಕ: ಶುಭ ಮಂಗಲ ಕಾರ್ಯಗಳು ಅಡೆತಡೆಯಿಲ್ಲದೇ ನಿರ್ವಿಘ್ನವಾಗಿ ನೆರವೇರಲಿದೆ. ಅವಿವಾಹಿತರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಕೂಡಿಬರಲಿವೆ. ದಾಯಾದಿ ಕಲಹಗಳಿಗೆ ಹಿರಿಯರ ಮಧ್ಯಸ್ಥಿಕೆಯೇ ಉತ್ತಮ. ದಿನದಂತ್ಯಕ್ಕೆ ಅಚ್ಚರಿ ಸುದ್ದಿ.

ಸಿಂಹ: ಮಹಿಳೆಯರು ಬಿಡುವಿನ ದಿನದ ಖುಷಿ ಅನುಭವಿಸಲಿದ್ದಾರೆ. ಹೊಸ ಮಿತ್ರರನ್ನು ಸಂಪಾದಿಸುವಿರಿ. ಅನಗತ್ಯ ವಿಚಾರಗಳಿಗೆ ವಾದ ವಿವಾದಗಳಾಗದಂತೆ ಎಚ್ಚರಿಕೆ ವಹಿಸಿ. ದೂರ ಸಂಚಾರಗಳನ್ನು ಮುಂದೂಡುವುದು ಒಳ್ಳೆಯದು.

ಕನ್ಯಾ: ಮನಸ್ಸಿನ ಭಾವನೆಗಳನ್ನು ಆಪ್ತರೊಂದಿಗೆ ಹಂಚಿಕೊಂಡು ಹಗುರವಾಗಲಿದ್ದೀರಿ.ನಿಮ್ಮ ಬಗ್ಗೆ ಅಸೂಯೆ ಪಡುವ ಜನರಿಂದ ದೂರವಿದ್ದರೆ ಉತ್ತಮ. ಗೃಹ ಕೃತ್ಯಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಸಂಗಾತಿಯ ಮೆಚ್ಚುಗೆಗೆ ಪಾತ್ರರಾಗುವಿರಿ.

ತುಲಾ: ಮಕ್ಕಳ ಬಹುದಿನಗಳ ಬೇಡಿಕೆ ಪೂರೈಸಲು ಖರ್ಚು ವೆಚ್ಚ ಮಾಡಲಿದ್ದೀರಿ. ಇಷ್ಟ ಮಿತ್ರರ ಭೇಟಿ, ಭೋಜನ ಮನಸ್ಸಿಗೆ ಖುಷಿಕೊಡಲಿದೆ. ಸಂಗಾತಿಯೊಂದಿಗೆ ವಾಗ್ವಾದವಾಗದಂತೆ ಎಚ್ಚರಿಕೆ ವಹಿಸಿ. ತಾಳ್ಮೆ, ಸಂಯಮವಿರಲಿ.

ವೃಶ್ಚಿಕ: ಸ್ವಯಂ ಉದ್ಯೋಗಿಗಳಿಗೆ ಭವಿಷ್ಯದ ಬಗ್ಗೆ ಚಿಂತೆಯಾಗಲಿದೆ. ಆರ್ಥಿಕವಾಗಿ ಹಣಕಾಸಿನ ಗಳಿಕೆಗೆ ಅನ್ಯ ಮಾರ್ಗಗಳ ಬಗ್ಗೆ ಯೋಚನೆ ಮಾಡಲಿದ್ದೀರಿ. ಹಿರಿಯರಿಗೆ ವಾತ ಸಂಬಂಧೀ ಆರೋಗ್ಯ ಸಮಸ್ಯೆ ಕಾಡೀತು. ಎಚ್ಚರಿಕೆಯಿರಲಿ.

ಧನು: ಬೇರೆಯವರು ನಿಮ್ಮ ಬಗ್ಗೆ ಏನು ಯೋಚಿಸುತ್ತಾರೋ ಎಂಬ ಅತಿಯಾದ ಕಲ್ಪನೆಯೇ ನಿಮ್ಮನ್ನು ಚಿಂತೆಗೆ ದೂಡಲಿದೆ. ಸಂಗಾತಿಯೊಂದಿಗೆ ಮನಸ್ಸಿನ ಮಾತುಗಳನ್ನು ಹಂಚಿಕೊಳ್ಳಲಿದ್ದೀರಿ. ಮಕ್ಕಳಿಂದ ಸಂತಸದ ವಾರ್ತೆ ಕೇಳಿಬರಲಿದೆ.

ಮಕರ: ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಓಡಾಟ ನಡೆಸುವಿರಿ. ಅತಿಥಿಗಳ ಆಗಮನಕ್ಕೆ ಸಿದ್ಧರಾಗಿ. ಹಣಕಾಸಿನ ಮುಗ್ಗಟ್ಟುಗಳು ತೋರಿಬಂದಾಗ ಮಿತ್ರರ ಸಹಾಯ ಪಡೆಯಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.

ಕುಂಭ: ಸಹೋದರ ವರ್ಗದವರೊಂದಿಗೆ ಆಸ್ತಿ ವಿಚಾರವಾಗಿ ಭಿನ್ನಾಭಿಪ್ರಾಯಗಳಾಗದಂತೆ ಎಚ್ಚರಿಕೆ ವಹಿಸಿ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕಾಗುತ್ತದೆ. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ.

ಮೀನ: ಆಪ್ತರ ಬುದ್ಧಿ ಮಾತುಗಳನ್ನು ಉಪೇಕ್ಷಿಸುವುದು ಒಳ್ಳೆಯದಲ್ಲ. ಮಹಿಳೆಯರಿಗೆ ಚಿನ್ನಾಭರಣಗಳನ್ನು ಸಂರಕ್ಷಿಸುವ ಹೊಣೆಗಾರಿಕೆ ಹೆಗಲಿಗೇರಲಿದೆ. ಕ್ರೀಡಾಳುಗಳಿಗೆ ಉತ್ತಮ ಅವಕಾಶಗಳು ಒದಗಿಬರಲಿವೆ. ಅನಗತ್ಯ ಚಿಂತೆ ಬೇಡ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Ardanaristaka Stothram: ವಿವಾಹಾದಿ ಸಮಸ್ಯೆಗಳಿಗೆ ಅರ್ಧನಾರೀಶ್ವರಾಷ್ಟಕಂ ಸ್ತೋತ್ರ ಓದಿ

Gayatri Mantra: ಗಾಯತ್ರಿ ಅಷ್ಟೋತ್ತರ ಶತನಾಮಾವಳಿ ಕನ್ನಡದಲ್ಲಿ ಇಲ್ಲಿದೆ

Shani Mantra: ಶನಿ ಕವಚ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ಇಂದು ತಪ್ಪದೇ ಓದಿ

Lucky number: ಹುಟ್ಟಿದ ದಿನಾಂಕಕ್ಕೆ ಅನುಸಾರವಾಗಿ ನಿಮ್ಮ ಅದೃಷ್ಟ ಸಂಖ್ಯೆ ಲೆಕ್ಕ ಹಾಕುವುದು ಹೇಗೆ ನೋಡಿ

Tulsi Mantra: ಹೆಣ್ಣು ಮಕ್ಕಳಿಗಾಗಿ ತುಳಸಿ ಅಷ್ಟೋತ್ತರ ಮಂತ್ರ ಇಲ್ಲಿದೆ

ಮುಂದಿನ ಸುದ್ದಿ
Show comments