Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಭಾನುವಾರ, 2 ಮೇ 2021 (08:35 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಕೆಲವೊಂದು ವಿಚಾರಗಳು ಮಾನಸಿಕವಾಗಿ ನಿಮ್ಮನ್ನು ಕುಗ್ಗುವಂತೆ ಮಾಡಲಿವೆ. ಅನಿರೀಕ್ಷಿತವಾಗಿ ಖರ್ಚು ವೆಚ್ಚಗಳು ಎದುರಾದೀತು. ಹಿಂದಿನ ಘಟನೆಗಳನ್ನು ಮೆಲುಕು ಹಾಕುತ್ತಾ ನಿರುತ್ಸಾಹಕ್ಕೊಳಗಾಗದಿರಿ. ಕಿರು ಓಡಾಟ ನಡೆಸಲಿದ್ದೀರಿ.

ವೃಷಭ: ಸಂದಿಗ್ಧದ ಪರಿಸ್ಥಿತಿಯಲ್ಲಿ ನಿಮ್ಮ ಮನಸ್ಸಿನ ಮಾತುಗಳಿಗೆ ಕಿವಿಗೊಡುವುದು ಉತ್ತಮ. ಸಂಗಾತಿಯ ಬಹುದಿನಗಳ ಬೇಡಿಕೆ ಈಡೇರಿಸಲಿದ್ದೀರಿ. ನಿಮ್ಮ ಪ್ರಯತ್ನ ಬಲಕ್ಕೆ ತಕ್ಕ ಫಲ ಸಿಗುವುದು. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ಮಿಥುನ: ಪ್ರೀತಿ ಪಾತ್ರರ ಕೋಪತಾಪಗಳಿಗೆ ಗುರಿಯಾಗಲಿದ್ದೀರಿ. ವಿದ್ಯಾರ್ಥಿಗಳಿಗೆ ಪ್ರಯತ್ನಕ್ಕೆ ತಕ್ಕ ಫಲ ಸಿಗದೇ ನಿರಾಸೆಯಾದೀತು. ಆರ್ಥಿಕ ಪರಿಸ್ಥಿತಿಯಲ್ಲಿ ಏರುಪೇರಾದೀತು. ಕಷ್ಟದ ದಿನಗಳನ್ನು ಎದುರಿಸಲು ಸಿದ್ಧರಾಗಿ.

ಕರ್ಕಟಕ: ನಿಮ್ಮ ಕೆಲವೊಂದು ನಿರ್ಧಾರಗಳಿಗೆ ಕುಟುಂಬಸ್ಥರ ಬೆಂಬಲ ಸಿಗದೇ ಹೋದೀತು. ಇಷ್ಟಾರ್ಥ ಸಿದ್ಧಿಗಾಗಿ ದೇವರ ಮೊರೆ ಹೋಗಲಿದ್ದೀರಿ. ಯೋಗ್ಯ ವಯಸ್ಕರು ಸೂಕ್ತ ಸಂಬಂಧಕ್ಕಾಗಿ ಕಾಯಬೇಕಾದೀತು. ದೇವತಾ ಪ್ರಾರ್ಥನೆ ಮಾಡಿ.

ಸಿಂಹ: ದೂರ ಸಂಚಾರದಿಂದ ದೇಹಾಯಾಸವಾದೀತು. ನಿಮ್ಮ ಕಾರ್ಯ ಸಾಧನೆಗಾಗಿ ಅಪರಿಚಿತರೊಂದಿಗೆ ವ್ಯವಹಾರ ಮಾಡಬೇಕಾಗುತ್ತದೆ. ಧನ ಗಳಿಕೆಗೆ ನಾನಾ ಮಾರ್ಗಗಳು ಕಂಡುಬರಲಿದೆ. ಮನಸ್ಸಿನ ಮಾತಿಗೆ ಕಿವಿಗೊಡಿ.

ಕನ್ಯಾ: ಹಿರಿಯರ ದೇಹಾರೋಗ್ಯದಲ್ಲಿ ಏರುಪೇರಾದೀತು. ಅನಿರೀಕ್ಷಿತವಾಗಿ ಹಳೆಯ ಮಿತ್ರರನ್ನು ಭೇಟಿಯಾಗಲಿದ್ದೀರಿ. ಸರಕಾರಿ ಉದ್ಯೋಗಿಗಳಿಗೆ ಕಾಗದ ಪತ್ರಗಳನ್ನು ಜೋಪಾನ ಮಾಡುವ ತಲೆನೋವು ಎದುರಾದೀತು.

ತುಲಾ: ನಿಮ್ಮ ಮಾತಿನಿಂದಲೇ ಇತರರ ಅಸಮಾಧಾನಕ್ಕೆ ಗುರಿಯಾಗಲಿದ್ದೀರಿ. ತಾಳ್ಮೆ, ಸಂಯಮವಿರಲಿ. ಉದ್ಯೋಗ ಕ್ಷೇತ್ರದಲ್ಲಿ ಮುಂಬಡ್ತಿ ಪಡೆಯುವ ನಿಮ್ಮ ಕನಸು ಸದ್ಯದಲ್ಲೇ ನನಸಾಗಲಿದೆ. ಕಿರು ಸಂಚಾರ ಮಾಡುವಿರಿ.

ವೃಶ್ಚಿಕ: ಪ್ರೀತಿ ಪಾತ್ರರ ಯೋಗ ಕ್ಷೇಮಕ್ಕಾಗಿ ಕೆಲವೊಂದು ತ್ಯಾಗ ಮಾಡಬೇಕಾಗುತ್ತದೆ. ಯಾವುದೇ ವಸ್ತುವಿನ ಮೇಲೆ ಅತಿಯಾದ ವ್ಯಾಮೋಹ ಬೇಡ. ವಿದ್ಯಾರ್ಥಿಗಳಿಗೆ ಕಠಿಣ ಪರೀಕ್ಷೆ ಎದುರಾಗಲಿದೆ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ಧನು: ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವುದರಿಂದ ಮನಸ್ಸಿನ ಭಾರ ಕೊಂಚ ಹಗುರವಾಗಲಿದೆ. ಬೇರೆಯವರ ಕಷ್ಟಕ್ಕೆ ಸ್ಪಂದಿಸಲು ಹೋಗಿ ಸಂಕಷ್ಟಕ್ಕೆ ಸಿಲುಕಬೇಡಿ. ನೆರೆಹೊರೆಯವರೊಂದಿಗೆ ನೀರಿಗಾಗಿ ವಾಗ್ವಾದ ನಡೆದೀತು. ಎಚ್ಚರ.

ಮಕರ: ಪತ್ನಿಯ ಮನದಾಸೆ ಪೂರೈಸಲು ಪ್ರಯತ್ನಪಡಲಿದ್ದೀರಿ. ನೂತನ ದಂಪತಿಗಳಲ್ಲಿ ಹೊಂದಾಣಿಕೆ ಕೊರತೆ ಕಂಡುಬಂದೀತು. ಹಿರಿಯರ ಸಲಹೆ ಪಾಲಿಸಿರಿ. ವ್ಯಾಪಾರಿಗಳಿಗೆ ಆರ್ಥಿಕವಾಗಿ ಲಾಭ ಗಳಿಸಲು ಅವಕಾಶ ಸಿಗಲಿದೆ.

ಕುಂಭ: ಅನಗತ್ಯವಾಗಿ ಮಾನಸಿಕವಾಗಿ ಚಿಂತೆ ಮಾಡುವುದರಿಂದ ಕೆಲಸದಲ್ಲಿ ಉತ್ಸಾಹ ಕಳೆದುಕೊಳ್ಳಲಿದ್ಧೀರಿ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗವಿದೆ. ಮಕ್ಕಳ ದೇಹಾರೋಗ್ಯದ ಬಗ್ಗೆ ಕಾಳಜಿ ವಹಿಸಿ.

ಮೀನ: ನಾವು ಎಣಿಸಿದ ರೀತಿಯಲ್ಲಿ ಕಾರ್ಯಗಳು ನಡೆಯುತ್ತಿಲ್ಲ ಎಂಬ ಭಾವನೆ ಕಾಡಲಿದೆ. ಸಾಂಸಾರಿಕವಾಗಿ ನಿಮ್ಮ ಮಾತಿನಿಂದ ಭಿನ್ನಾಭಿಪ್ರಾಯಗಳಾಗದಂತೆ ಎಚ್ಚರಿಕೆ ವಹಿಸಿ. ಕಾರ್ಯನಿಮಿತ್ತ ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ಹೀಗಿದೆ