Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಸೋಮವಾರ, 3 ಮೇ 2021 (09:03 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಕಷ್ಟಪಟ್ಟು ದುಡಿದರೆ ಅದಕ್ಕೆ ತಕ್ಕ ಫಲ ಸಿಗಲಿದೆ. ಆರ್ಥಿಕವಾಗಿ ಹಣಕಾಸಿಗೆ ತೊಂದರೆಯಾಗದು. ಆದರೆ ಅನಗತ್ಯ ವೆಚ್ಚಗಳಿಗೆ ಕಡಿವಾಣ ಹಾಕಬೇಕಿದೆ. ವೈಯಕ್ತಿಕ ಸಮಸ್ಯೆಗಳನ್ನು ಆಪ್ತರೊಂದಿಗೆ ಹಂಚಿಕೊಂಡು ಹಗುರವಾಗಲಿದ್ದೀರಿ.

ವೃಷಭ: ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯುವ ಯೋಗ ನಿಮ್ಮದಾಗುವುದು. ದೂರ ಸಂಚಾರಗಳನ್ನು ರದ್ದುಗೊಳಿಸಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಿಥುನ: ಸ್ವಯಂ ಉದ್ಯೋಗಿಗಳಿಗೆ ಭವಿಷ್ಯದ ಚಿಂತೆ ಕಾಡಲಿದೆ. ಭವಿಷ್ಯದ ಬಗ್ಗೆ ಹೊಸ ಯೋಜನೆ ಹಾಕಿಕೊಳ್ಳಲಿದ್ದೀರಿ. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ದೊರೆಯಲಿದೆ. ಚಿಂತೆ ಬೇಡ.

ಕರ್ಕಟಕ: ನಿಮ್ಮನ್ನು ಬಹುದಿನಗಳಿಂದ ಕಾಡುತ್ತಿರುವ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ಕಷ್ಟದ ಸಮಯದಲ್ಲಿ ಸಂಗಾತಿಯ ಸಲಹೆಗಳು ಸಮಯೋಚಿತವೆನಿಸಲಿದೆ. ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿರಲಿ.

ಸಿಂಹ: ನಿಮ್ಮ ಕಾರ್ಯಸಾಧನೆಗೆ ಅನೇಕ ಅಡ್ಡಿ ಆತಂಕಗಳು ಎದುರಾದರೂ ಧೈರ್ಯಗುಂದಬೇಡಿ. ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚ ಮಾಡಲಿದ್ದೀರಿ. ಸರಕಾರಿ ನೌಕರರಿಗೆ ಕಾರ್ಯದೊತ್ತಡ ತಪ್ಪದು.

ಕನ್ಯಾ: ತಾಳ್ಮೆಯೇ ಇಂದು ನಿಮ್ಮ ಪ್ರಮುಖ ಅಸ್ತ್ರವಾಗಲಿದೆ. ನಿಮ್ಮ ಕೆಲಸ ಕಾರ್ಯಗಳು ಮೇಲಧಿಕಾರಿಗಳ ಪ್ರಶಂಸೆಗೆ ಪಾತ್ರವಾಗಲಿದೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಏಕಾಗ್ರತೆಯ ಕೊರತೆ ಉಂಟಾಗಬಹುದು. ಕುಲದೇವರ ಪ್ರಾರ್ಥನೆ ಮಾಡಿ.

ತುಲಾ: ಬಯಸಿದ್ದು ಸಿಗಬೇಕಾದರೆ ಇನ್ನೊಂದನ್ನು ತ್ಯಾಗ ಮಾಡುವಂತಹ ಪರಿಸ್ಥಿತಿ ನಿಮ್ಮದಾಗಲಿದೆ. ಸಾಂಸಾರಿಕವಾಗಿ ಭಿನ್ನಾಭಿಪ್ರಾಯಗಳು ಬರದಂತೆ ಎಚ್ಚರಿಕೆ ವಹಿಸಿ. ಕೃಷಿಕರಿಗೆ ಬೆಳೆ ನಷ್ಟದ ಭೀತಿ. ತಾಳ್ಮೆ, ಸಂಯಮ ಅಗತ್ಯ.

ವೃಶ್ಚಿಕ: ಮನೆಯಲ್ಲಿ ಶುಭ ಮಂಗಲ ಕಾರ್ಯಗಳನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಬೇಕಾಗುತ್ತದೆ. ಉದ್ಯೋಗ ಕ್ಷೇತ್ರದಲ್ಲಿ ಹೊಂದಾಣಿಕೆಯಿಂದ ನಡೆದುಕೊಂಡರೆ ಎಲ್ಲವೂ ಸುಗಮವಾಗಲಿದೆ. ದಿನದಂತ್ಯಕ್ಕೆ ಅಚ್ಚರಿ ಸುದ್ದಿ.

ಧನು: ವ್ಯಾಪಾರ, ವ್ಯವಾಹರಸ್ಥರಿಗೆ ಹಿನ್ನಡೆಯುಂಟಾಗಲಿದೆ. ವೃತ್ತಿರಂಗದಲ್ಲಿ ಅಂದುಕೊಂಡಿದ್ದು ಆಗಬೇಕಾದರೆ ಸಹೋದ್ಯೋಗಿಗಳ ನೆರವು ಪಡೆಯಬೇಕಾಗುತ್ತದೆ. ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ಎಚ್ಚರಿಕೆಯಿರಲಿ.

ಮಕರ: ಅನಗತ್ಯ ವಿವಾದಗಳನ್ನು ಮೈಮೇಲೆಳೆದುಕೊಳ್ಳಬೇಡಿ. ನೆರೆಹೊರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ಕೋರ್ಟು ಕಚೇರಿ ವ್ಯವಹಾರಗಳನ್ನು ಮುಂದೂಡುವುದು ಉತ್ತಮ.

ಕುಂಭ: ಪ್ರೀತಿ ಪಾತ್ರರ ಅಗಲುವಿಕೆ ಮನಸ್ಸಿಗೆ ಬೇಸರವುಂಟುಮಾಡೀತು. ವೈಯಕ್ತಿಕವಾಗಿ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಕೊಂಚ ಬಿಡುವು ಸಿಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ಮೀನ: ಮನಸ್ಸಿನಲ್ಲಿ ಅಂದುಕೊಂಡಿದ್ದನ್ನು ಕಾರ್ಯರೂಪಕ್ಕೆ ತರಲಿದ್ದೀರಿ. ಕ್ರಿಯಾತ್ಮಕ ಕೆಲಸಗಳು ಮನಸ್ಸಿಗೆ ಖುಷಿ ಕೊಡಲಿವೆ. ಕೌಟುಂಬಿಕವಾಗಿ ಭಿನ್ನಾಭಿಪ್ರಾಯಗಳು ತಿಳಿಗೊಳ್ಳಲಿವೆ. ಆರ್ಥಿಕವಾಗಿ ಚೇತರಿಕೆ ಕಂಡುಬಂದೀತು.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ಹೀಗಿದೆ