ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಮಂಗಳವಾರ, 8 ಜೂನ್ 2021 (08:50 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಕಾರ್ಯದೊತ್ತಡದಿಂದಾಗಿ ಕೋಪ-ತಾಪಗಳು ಕಂಡುಬಂದೀತು. ಆರ್ಥಿಕವಾಗಿ ಹಣ ಹೊಂದಿಸುವ ಚಿಂತೆ ಕಾಡಲಿದೆ. ಸಾಂಸಾರಿಕವಾಗಿ ಸಂಗಾತಿಯೊಂದಿಗೆ ಹೊಂದಾಣಿಕೆಯಿಂದ ನಡೆದುಕೊಳ್ಳಿ. ಮಕ್ಕಳಿಂದ ಸಂತಸ ಸಿಗಲಿದೆ.

ವೃಷಭ: ಹಣಕಾಸಿನ ವಿಚಾರವಾಗಿ ಆಪ್ತರೊಂದಿಗೆ ಭಿನ್ನಾಭಿಪ್ರಾಯ ಕಂಡುಬಂದೀತು. ತಾಳ್ಮೆಯಿಂದ ವ್ಯವಹರಿಸಿ. ವೃತ್ತಿರಂಗದಲ್ಲಿ ನಿಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಿಥುನ: ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದ್ದು, ಎಲ್ಲವೂ ಮನದಿಚ್ಛೆಯಂತೇ ನಡೆಯಲಿದೆ. ಸಾಂಸಾರಿಕವಾಗಿ ಸಂತೋಷ, ನೆಮ್ಮದಿಯ ದಿನಗಳಿವು. ಪ್ರೀತಿ ಪಾತ್ರರೊಂದಿಗೆ ಸಮಯ ಕಳೆಯಲಿದ್ದೀರಿ. ದೇವತಾ ಪ್ರಾರ್ಥನೆ ಮರೆಯದಿರಿ.

ಕರ್ಕಟಕ: ಪಾಲುದಾರಿಕೆ ವ್ಯವಹಾರದಲ್ಲಿ ಕೊಂಚ ಚೇತರಿಕೆ ಕಂಡುಬರಲಿದೆ. ಹಣಕಾಸಿನ ಮುಗ್ಗಟ್ಟು ಪರಿಹಾರವಾದೀತು. ಆದರೆ ಅನಿಯಮಿತ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕುವುದು ಒಳಿತು. ನಿರುದ್ಯೋಗಿಗಳಿಗೆ ತಾತ್ಕಾಲಿಕ ವೃತ್ತಿ ಸಿಗಲಿದೆ.

ಸಿಂಹ: ನಿಮ್ಮ ಮಾತಿನ ಮೋಡಿಯಿಂದಲೇ ಎದುರಾಳಿಗಳನ್ನು ಬೆರಗುಗೊಳಿಸಲಿದ್ದೀರಿ. ವೃತ್ತಿರಂಗದಲ್ಲಿ ಮೇಲಧಿಕಾರಿಗಳಿಂದ ಪ್ರಶಂಸೆ ಸಿಗಲಿದೆ. ವಿದ್ಯಾರ್ಥಿಗಳಿಗೆ ಏಕಾಗ್ರತೆ ಭಂಗವಾಗಬಹುದು. ಕೃಷಿಕರಿಗೆ ವ್ಯವಹಾರದಲ್ಲಿ ಲಾಭವಿಲ್ಲದಿದ್ದರೂ ನಷ್ಟವಾಗದು.

ಕನ್ಯಾ: ಬೇರೆಯವರು ನಿಮ್ಮ ಕೆಲಸ ನೋಡಿ ಮೆಚ್ಚುವಂತೆ ನಡೆದುಕೊಳ್ಳಲಿದ್ದೀರಿ. ನಿಮ್ಮ ಮಾತೇ ನಿಮ್ಮ ಪ್ರಧಾನ ಅಸ್ತ್ರವಾಗಲಿದೆ. ಸಂಗಾತಿಯ ಮಾತಿಗೆ ಕಿವಿಗೊಡಬೇಕಾಗುತ್ತದೆ. ಧಾರ್ಮಿಕ ಕಾರ್ಯಗಳಲ್ಲಿ ಶ್ರದ್ಧೆ ಕಂಡುಬರುವುದು.

ತುಲಾ: ನಿಮ್ಮ ಆದಾಯ, ಖರ್ಚು ವೆಚ್ಚದ ವಿವರಗಳನ್ನು ಸರಿಯಾಗಿಟ್ಟುಕೊಳ್ಳಿ. ವೈಯಕ್ತಿಕವಾಗಿ ನಿಮ್ಮ ಸಮಸ್ಯೆಗಳನ್ನು ಆಪ್ತರೊಂದಿಗೆ ಹಂಚಿಕೊಂಡು ಪರಿಹಾರ ಕಂಡುಕೊಳ‍್ಳಲಿದ್ದೀರಿ. ಪ್ರೀತಿ ಪಾತ್ರ ಮನದಿಂಗಿತ ನೆರವೇರಿಸಲಿದ್ದೀರಿ.

ವೃಶ್ಚಿಕ: ಉದ್ವೇಗ, ಹಠ, ಕೋಪದಿಂದ ಕೆಲಸ ಸಾಧಿಸಲಾಗದು ಎಂಬುದನ್ನು ಮನಗಾಣಲಿದ್ದೀರಿ. ಹಿರಿಯರ ಸಲಹೆಗಳಿಗೆ ಕಿವಿಗೊಡಬೇಕಾಗುತ್ತದೆ. ಕಷ್ಟದಲ್ಲಿರುವ ಮಿತ್ರರಿಗೆ ಸಹಾಯ ಮಾಡಲಿದ್ದೀರಿ. ಕಿರು ಓಡಾಟ ನಡೆಸಬೇಕಾಗುತ್ತದೆ.

ಧನು: ನಿಮ್ಮ ವೈಯಕ್ತಿಕ ವಿಚಾರದಲ್ಲಿ ಮೂರನೆಯವರು ಮೂಗು ತೂರಿಸಲು ಅವಕಾಶ ಕೊಡಬೇಡಿ. ಮನಸ್ಸಿನಲ್ಲಿ ಅಂದುಕೊಂಡಿದ್ದನ್ನು ಕಾರ್ಯರೂಪಕ್ಕೆ ತರಲಿದ್ದೀರಿ. ಹಿರಿಯರ ಇಷ್ಟಾರ್ಥ ಪೂರೈಸಲು ಮುಂದಾಗಲಿದ್ದೀರಿ.

ಮಕರ: ಮಾನಸಿಕವಾಗಿ ಬೇಡದ ಯೋಚನೆಗಳನ್ನು ಬದಿಗಿಟ್ಟು ಸಕಾರಾತ್ಮಕವಾಗಿ ಯೋಚಿಸಿ ಕೆಲಸ ಮಾಡಿ. ಕಳೆದು ಹೋದ ವಸ್ತುವಿಗಾಗಿ ಹುಡುಕಾಟ ನಡೆಸಲಿದ್ದೀರಿ. ಮಾತು ಕಡಿಮೆ ಮಾಡಿ ಕೆಲಸದ ಕಡೆಗೆ ಗಮನ ಕೊಡಿ. ಅನಗತ್ಯ ಚಿಂತೆ ಬೇಡ.

ಕುಂಭ: ವರ್ತಕ ವರ್ಗದವರಿಗೆ ವ್ಯವಹಾರದ ಚಿಂತೆ ಕಾಡಲಿದೆ. ಆದಾಯ ಕುಂಠಿತವಾಗಿ ಖರ್ಚು ವೆಚ್ಚಗಳು ಅಧಿಕವಾದೀತು. ಮಾನಸಿಕವಾಗಿ ಋಣಾತ್ಮಕ ಚಿಂತನೆಗಳು ಬಾರದಂತೆ ಎಚ್ಚರಿಕೆ ವಹಿಸಿ. ಗೃಹ ಕೃತ್ಯಗಳಿಂದ ಕೊಂಚ ಬಿಡುವು ಪಡೆಯಲಿದ್ದೀರಿ.

ಮೀನ: ವೈಯಕ್ತಿಕವಾಗಿ ನಿಮ್ಮಿಂದ ಹಿಂದೆ ಲಾಭ ಪಡೆದವರು ಈಗ ನಿಮ್ಮ ನೆರವಿಗೆ ಬರಲಿದ್ದೀರಿ. ವ್ಯವಹಾರದಲ್ಲಿ ಏಳು ಬೀಳುಗಳು ಸಾಮಾನ್ಯ. ತಾಳ್ಮೆ, ಸಂಯಮವಿರಲಿ. ಕಾರ್ಯದೊತ್ತಡದಿಂದ ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸಂಕಟ ಮೋಚನ ಹನುಮಾನ್ ಅಷ್ಟಕಂ ಸ್ತೋತ್ರ

ಹಣಕಾಸಿನ ಸಮಸ್ಯೆಯಿದ್ದರೆ ಕನಕಧಾರಾ ಸ್ತೋತ್ರ ತಪ್ಪದೇ ಓದಿ

2026 ರಲ್ಲಿ ಯಾವ ರಾಶಿಯವರು ಯಾವ ದೇವರ ಪ್ರಾರ್ಥನೆ ಮಾಡಬೇಕು ಗಮನಿಸಿ

ಗಣೇಶ ಕವಚ ಸ್ತೋತ್ರವನ್ನು ಮಕ್ಕಳಿಗೆ ಹೇಳಿಸಿ

ಈ ಐದು ರಾಶಿಯವರಿಗೆ 2026 ರಲ್ಲಿ ಸ್ವಂತ ಮನೆ ಕನಸು ನನಸಾಗುತ್ತದೆ

ಮುಂದಿನ ಸುದ್ದಿ
Show comments