Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶುಕ್ರವಾರ, 11 ಜೂನ್ 2021 (08:40 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಸಾಂಸಾರಿಕವಾಗಿ ಸಮಸ್ಯೆಗಳು ಪರಿಹಾರವಾಯಿತೆಂದುಕೊಳ್ಳುವಷ್ಟರಲ್ಲೇ ಹೊಸ ಸಮಸ್ಯೆಗಳು ಉದ್ಭವವಾಗಲಿದೆ. ಸಂಗಾತಿಯೊಂದಿಗೆ ತಾಳ್ಮೆಯಿಂದ ವ್ಯವಹರಿಸಿ. ಆರ್ಥಿಕವಾಗಿ ಭವಿಷ್ಯದ ದೃಷ್ಟಿಯಿಂದ ಹೊಸ ಯೋಜನೆ ಹಾಕಿಕೊಳ್ಳುವಿರಿ.

ವೃಷಭ: ವೃತ್ತಿರಂಗದಲ್ಲಿ ನಿಮ್ಮ ಶತ್ರುಗಳಿಗೆ ಸೋಲಾಗಲಿದೆ. ಮೇಲಧಿಕಾರಿಗಳಿಂದ ಪ್ರಶಂಸೆಗೊಳಗಾಗಲಿದ್ದೀರಿ. ಆದರೆ ಆರ್ಥಿಕ ಪರಿಸ್ಥಿತಿ ಚಿಂತೆಗೆ ಕಾರಣವಾಗಲಿದೆ. ಸಂಗಾತಿಯ ಸಮಾಧಾನಕರ ಮಾತುಗಳು ನೆಮ್ಮದಿ ನೀಡಲಿದೆ.

ಮಿಥುನ: ನಿಮ್ಮನ್ನು ಅತಿಯಾಗಿ ಹೊಗಳುವವರ ಬಗ್ಗೆ ಎಚ್ಚರಿಕೆಯಿಂದಿರಿ. ಕಾರ್ಯಕ್ಷೇತ್ರದಲ್ಲಿ ನಿಮ್ಮ ಬಗ್ಗೆ ಇತರರಿಗೆ ಸದಭಿಪ್ರಾಯ ಮೂಡಲಿದೆ. ನಿರ್ಧಾರ ತೆಗೆದುಕೊಳ್ಳುವಾಗ ಗೊಂದಲಗಳು ಕಾಡೀತು. ತಾಳ್ಮೆ, ಸಂಯಮವಿರಲಿ.

ಕರ್ಕಟಕ: ಕಾರ್ಯರಂಗದಲ್ಲಿ ಅಡೆತಡೆಗಳು ಸಾಮಾನ್ಯ. ಎಲ್ಲವನ್ನೂ ನಿಭಾಯಿಸಿಕೊಂಡು ಹೋಗುವ ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು. ಅನಿರೀಕ್ಷಿತವಾಗಿ ಬರುವ ವಾರ್ತೆ ನಿಮ್ಮನ್ನು ಸಂತೋಷಪಡಿಸಲಿದೆ. ಆಪ್ತರ ಭೇಟಿ ಸಂಭವ.

ಸಿಂಹ: ಮಾತು ಮಾತಿಗೆ ಸಿಡುಕುವುದರಿಂದ ಸಂಬಂಧಗಳು ಹಾಳಾದಿತಷ್ಟೇ. ಸಂಗಾತಿಯೊಂದಿಗೆ ಹೊಂದಾಣಿಕೆಯಿಂದ ನಡೆದುಕೊಳ್ಳಿ. ಮಕ್ಕಳ ಭವಿಷ್ಯದ ಬಗ್ಗೆ ನಿರ್ಧಾರ ಮಾಡಲಿದ್ದೀರಿ. ಕಾರ್ಯನಿಮಿತ್ತ ದೂರ ಸಂಚಾರಕ್ಕೆ ಸಿದ್ಧತೆ ನಡೆಸುವಿರಿ.

ಕನ್ಯಾ: ನಿಮ್ಮ ಆತ್ಮವಿಶ್ವಾಸ ಸತತ ಪ್ರಯತ್ನದಿಂದ ಕೈಹಿಡಿದ ಕೆಲಸಗಳು ಸುಸ್ರೂತ್ರವಾಗಿ ನೆರವೇರಲಿದೆ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಕೊಂಚ ಬಿಡುವು ಸಿಗಲಿದೆ. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿ ವಹಿಸಬೇಕಾಗುತ್ತದೆ.

ತುಲಾ: ಬೇರೆಯವರು ನಿಮ್ಮ ಬಗ್ಗೆ ಏನು ತಿಳಿದುಕೊಳ್ಳುತ್ತಾರೋ ಎಂಬ ಕೀಳರಿಮೆ ಬಿಡಿ. ಕಳೆದು ಹೋದ ಸಂಬಂಧಗಳು ಮರಳಿ ಕೂಡಲಿವೆ. ಸಾಂಸಾರಿಕವಾಗಿ ನೆಮ್ಮದಿಯ ದಿನಗಳು. ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿರಲಿ.

ವೃಶ್ಚಿಕ: ಹೊಸ ಸ್ಥಳಗಳಿಗೆ ಭೇಟಿ ಕೊಡಲಿದ್ದೀರಿ. ನಿಮ್ಮ ಕಾರ್ಯಸಾಧನೆಗಾಗಿ ಸತತ ಪ್ರಯತ್ನವಿರಬೇಕಾಗುತ್ತದೆ. ಮೇಲಧಿಕಾರಿಗಳೊಂದಿಗೆ ಸಂಘರ್ಷಕ್ಕಿಳಿಯಬೇಡಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.

ಧನು: ವೈಯಕ್ತಿಕವಾಗಿ ನಿಮ್ಮ ಒಳ್ಳೆಯ ಗುಣಗಳ ದುರ್ಲಾಭ ಪಡೆಯಲು ಯಾರಿಗೂ ಅವಕಾಶ ಕೊಡಬೇಡಿ. ನಯವಂಚಕರಿಂದ ದೂರವಿದ್ದರೆ ಉತ್ತಮ. ಸಂಗಾತಿಯ ಸಲಹೆಗಳು ಉಪಯೋಗಕ್ಕೆ ಬರಲಿವೆ. ತಾಳ್ಮೆಯಿರಲಿ.

ಮಕರ: ವಿದ್ಯಾರ್ಥಿಗಳಿಗೆ ಭವಿಷ್ಯದ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಇದು ಸಕಾಲ. ನಿಮ್ಮ ಆತ್ಮೀಯರ ಮನಸ್ಸಿಗೆ ನೋವುಂಟು ಮಾಡುವ ಕೆಲಸ ಮಾಡಬೇಡಿ. ಪ್ರೇಮಿಗಳಿಗೆ ಶುಭ ದಿನ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ಕುಂಭ: ಅತಿಯಾದ ಆತ್ಮವಿಶ್ವಾಸವೂ ಒಳ್ಳೆಯದಲ್ಲ. ಆರ್ಥಿಕವಾಗಿ ಆದಾಯಕ್ಕೆ ಕೊರತೆಯಿರದು. ಆದರೆ ಸರಿಯಾದ ಯೋಜನೆ ಇಲ್ಲದೇ ಹೋದರೆ ಭವಿಷ್ಯದಲ್ಲಿ ತೊಂದರೆಯಾದೀತು. ಅವಿವಾಹಿತರಿಗೆ ಸೂಕ್ತ ಸಂಬಂಧ ಕೂಡಿಬರಲಿದೆ.

ಮೀನ: ನಿಮ್ಮ ಮನಸ್ಸಿಗೆ ಇಷ್ಟವಾದವರ ಜೊತೆ ಮನಸ್ಸು ಬಿಚ್ಚಿ ಮಾತನಾಡಲಿದ್ದೀರಿ. ಸಾಂಸಾರಿಕವಾಗಿ ಭಿನ್ನಾಭಿಪ್ರಾಯಗಳು ಬಂದರೂ ಹಿರಿಯರ ಮಧ್ಯಸ್ಥಿಕೆಯಿಂದ ಸರಿದೂಗಿಸಿಕೊಂಡು ಹೋಗಲಿದ್ದೀರಿ. ಮಹಿಳೆಯರಿಗೆ ಉದ್ಯೋಗದಲ್ಲಿ ಮುನ್ನಡೆ ಸಿಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ