ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಭಾನುವಾರ, 13 ಜೂನ್ 2021 (08:59 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಉದ್ಯೋಗ ಕ್ಷೇತ್ರದಲ್ಲಿ ನಿರೀಕ್ಷಿತ ಕೆಲಸಗಳು ಸರಾಗವಾಗಿ ನಡೆಯಲಿದೆ. ವಿದ್ಯಾರ್ಥಿಗಳ ಅಭ್ಯಾಸಕ್ಕೆ ಅಡೆತಡೆಗಳಾದರೂ ಅಂತಿಮ ಯಶಸ್ಸು ಸಿಗಲಿದೆ. ಆರ್ಥಿಕವಾಗಿ ಖರ್ಚು ವೆಚ್ಚದ ಬಗ್ಗೆ ನಿಗಾ ಇರಲಿ.

ವೃಷಭ: ಎಚ್ಚರಿಕೆಯಿಂದ ಕಾರ್ಯನಿರ್ವಿಸಿದಲ್ಲಿ ವಂಚಕರ ಪಿತೂರಿಯಿಂದ ಪಾರಾಗಬಹುದು. ಸಾಂಸಾರಿಕವಾಗಿ ಪತ್ನಿಯಿಂದ ಉತ್ತಮ ಸಲಹೆ ಸೂಚನೆಗಳು ಸಿಗಲಿವೆ. ದಾಯಾದಿ ಕಲಹಗಳು ಮನಸ್ಸಿಗೆ ಕಿರಿ ಕಿರಿಯಾದೀತು. ತಾಳ್ಮೆಯಿರಲಿ.

ಮಿಥುನ: ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಉದಾಸೀನ ಪ್ರವೃತ್ತಿ ಕಂಡುಬರಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚ ಮಾಡಲಿದ್ದೀರಿ. ಕುಲದೇವರ ಪ್ರಾರ್ಥನೆ ಮಾಡಿ.

ಕರ್ಕಟಕ: ಸರಕಾರಿ ಉದ್ಯೋಗಿಗಳಿಗೆ ವರ್ಗಾವಣೆಯ ಭೀತಿ ಕಂಡುಬರಲಿದೆ. ಸಹೋದ್ಯೋಗಿಗಳಿ ಕಷ್ಟಕ್ಕೆ ನೆರವಾಗಲಿದ್ದೀರಿ. ಹಿರಿಯರಿಗೆ ದೇಹಾರೋಗ್ಯದಲ್ಲಿ ಸಣ್ಣ ಪುಟ್ಟ ಸಮಸ್ಯೆಗಳು ಕಂಡುಬಂದೀತು. ಕಾರ್ಯನಿಮಿತ್ತ ಓಡಾಟ ನಡೆಸಲಿದ್ದೀರಿ.

ಸಿಂಹ: ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸಲಿದ್ದೀರಿ. ನೆರೆಹೊರೆಯವರೊಂದಿಗೆ ಧ್ವೇಷ ಕಟ್ಟಿಕೊಳ್ಳಲು ಹೋಗಬೇಡಿ. ವಾಹನ ಸವಾರರಿಗೆ ಅಪಘಾತದ ಭಯವಿದೆ. ಕಟ್ಟಡ ಕಾಮಗಾರಿ ಕೆಲಸಕ್ಕೆ ಚಾಲನೆ ನೀಡಲಿದ್ದೀರಿ.

ಕನ್ಯಾ: ವಿದ್ಯಾರ್ಥಿಗಳ ಮನೋಕಾಮನೆಗಳು ಪೂರ್ತಿಯಾಗಲಿವೆ. ಅರ್ಧಕ್ಕೇ ನಿಂತ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗವಿದೆ. ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರಲಿದೆ.

ತುಲಾ: ವ್ಯಾಪಾರಿ ವರ್ಗದವರ ಕಾರ್ಯಕ್ಕೆ ಉತ್ತಮ ಫಲ ದೊರೆಯಲಿದೆ. ಕೃಷಿಕರಿಗೆ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಇಂದು ಯಾರಿಗೂ ಸಾಲ ಕೊಡಲು ಹೋಗಬೇಡಿ, ಮರಳಿ ಬಾರದು. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ವೃಶ್ಚಿಕ: ಕಾರ್ಯರಂಗದಲ್ಲಿ ನಿಮ್ಮ ಏಳಿಗೆ ಇತರರ ಅಸೂಯೆಗೆ ಕಾರಣವಾಗಬಹುದು. ಹಿತ ವಂಚಕರೊಂದಿಗೆ ಎಚ್ಚರಿಕೆಯಿಂದ ವರ್ತಿಸಿ. ಮನೆಗೆ ಅನಿರೀಕ್ಷಿತ ಅತಿಥಿಗಳ ಆಗಮನಕ್ಕೆ ಸಿದ್ಧರಾಗಿ. ನೂತನ ದಂಪತಿಗಳಿಗೆ ಸುಂದರ ಕ್ಷಣ ಕಳೆಯುವ ಯೋಗ.

ಧನು: ಮನೆಯಲ್ಲಿ ಸಾಮರಸ್ಯದ ವಾತಾವರಣವಿರಲಿದೆ. ನಿಮ್ಮ ಅಭಿಪ್ರಾಯಗಳಿಗೆ ಕುಟುಂಬ ಸದಸ್ಯರ ಬೆಂಬಲ ಸಿಗುವುದು. ವಿದ್ಯಾರ್ಥಿಗಳಿಗೆ ಭವಿಷ್ಯಕ್ಕೆ ತಯಾರಿ ನಡೆಸಬೇಕಾಗುತ್ತದೆ. ಕೋರ್ಟು ಕಚೇರಿ ವ್ಯವಹಾರಗಳಿಗೆ ಸಿದ್ಧತೆ ನಡೆಸಲಿದ್ದೀರಿ.

ಮಕರ: ಗೃಹಿಣಿಯರ ಬಹುದಿನಗಳ ಬೇಡಿಕೆ ಈಡೇರಲಿದೆ. ಮಾನಸಿಕವಾಗಿ ಬಹುವಾಗಿ ಕಾಡುತ್ತಿದ್ದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ಸಂಗಾತಿಯೊಂದಿಗೆ ಮನಸ್ತಾಪ ಮಾಡಿಕೊಳ್ಳಬೇಡಿ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ.

ಕುಂಭ: ಕಷ್ಟದಲ್ಲಿರುವವರಿಗೆ ಸಹಾಯ ಮಾಡಿ ಮನಸ್ಸಿಗೆ ಸಂತೃಪ್ತಿಯಾಗಲಿದೆ. ಮಕ್ಕಳಿಂದ ಶುಭ ವಾರ್ತೆ ಕೇಳಿಬಂದೀತು. ವ್ಯಾಪಾರಿಗಳಿಗೆ ಲಾಭವಿಲ್ಲದಿದ್ದರೂ ಹಾಕಿದ ಬಂಡವಾಳಕ್ಕೆ ನಷ್ಟವಾಗದು. ಉದ್ಯೋಗ ಬದಲಾವಣೆಗೆ ಚಿಂತನೆ ಮಾಡಲಿದ್ದೀರಿ.

ಮೀನ: ಮಹಿಳೆಯರಿಗೆ ಗೃಹಕೃತ್ಯಗಳಿಂದ ದೇಹ ಹೈರಾಣಾದೀತು. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಹೊಸ ಬಂಡವಾಳ ಹೂಡಿಕೆಗೆ ಇದು ಸಕಾಲವಲ್ಲ. ದಾಂಪತ್ಯದಲ್ಲಿ ಸಾಮರಸ್ಯದ ಕೊರತೆ ಕಂಡುಬಂದೀತು. ತಾಳ್ಮೆಯಿರಲಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗ್ರಹ ದೋಷ ನಿವಾರಣೆಗೆ ಈ ಸ್ತೋತ್ರವನ್ನು ಓದಿ

ಶುಕ್ರವಾರ ದೇವಿಯ ಈ ಸ್ತೋತ್ರವನ್ನು ಓದಿ

ಗುರು ಅಷ್ಟಕಂ ಸ್ತೋತ್ರ ಇಲ್ಲಿದೆ, ಓದುವುದರ ಫಲವೇನು ತಿಳಿದುಕೊಳ್ಳಿ

ವಿದ್ಯಾರ್ಥಿಗಳು ಯಶಸ್ಸಿಗಾಗಿ ಸರಸ್ವತಿಯ ಈ ಸ್ತೋತ್ರ ಓದಿ

ಮಂಗಳವಾರ ಆಂಜನೇಯನ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments