ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಸೋಮವಾರ, 14 ಜೂನ್ 2021 (08:43 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳೊಂದಿಗೆ ವೈಚಾರಿಕ ಭಿನ್ನಾಭಿಪ್ರಾಯಗಳುಂಟಾದೀತು. ಯಾವುದನ್ನೂ ಗಂಭೀರವಾಗಿ ಪರಿಗಣಿಸಬೇಕಾಗಿಲ್ಲ. ಹೊಸ ಸವಾಲುಗಳಿಗೆ ಸಿದ್ಧರಾಗಿ. ಆರ್ಥಿಕವಾಗಿ ಧನಗಳಿಕೆಗೆ ಹೊಸ ಮಾರ್ಗ ಕಂಡುಬರಲಿದೆ.

ವೃಷಭ: ನಿಮ್ಮ ಕಾರ್ಯಕ್ಷೇತ್ರದಲ್ಲಿ ಇನ್ನೊಬ್ಬರ ಹಸ್ತಕ್ಷೇಪಕ್ಕೆ ಅವಕಾಶ ಕೊಡದಿರಿ. ವೈಯಕ್ತಿಕವಾಗಿ ನಿಮ್ಮ ಬೆಳವಣಿಗೆ ಸಹಿಸದವರಿಂದ ದೂರವಿದ್ದರೆ ಉತ್ತಮ. ಹಿರಿಯರ ಸಮಯೋಚಿತ ಸಲಹೆಗಳು ಉಪಯೋಗಕ್ಕೆ ಬರಲಿವೆ.

ಮಿಥುನ: ವೃತ್ತಿರಂಗದಲ್ಲಿ ಸಹೋದ್ಯೋಗಿಗಳ ದುರ್ವ್ಯವಹಾರಹಳನ್ನು ಬಯಲಿಗೆಳೆಯಲಿದ್ದೀರಿ. ವಾಹನ ಸವಾರರಿಗೆ ಅಪಘಾತದ ಭಯವಿದ್ದು, ಚಾಲನೆಯಲ್ಲಿ ಎಚ್ಚರಿಕೆಯಿರಲಿ. ಆರ್ಥಿಕವಾಗಿ ಅನಗತ್ಯ ಖರ್ಚು ವೆಚ್ಚಗಳಿಗೆ ಕಡಿವಾಣವಿರಲಿ.

ಕರ್ಕಟಕ: ನಿರುದ್ಯೋಗಿಗಳು ಬಹುದಿನಗಳಿಂದ ಬಯಸುತ್ತಿದ್ದ ಉದ್ಯೋಗಕ್ಕೆ ಸಂದರ್ಶನ ಕರೆ ಬರಲಿದೆ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಕೊಂಚ ವಿರಾಮ ಸಿಗಲಿದೆ. ವೈಯಕ್ತಿಕವಾಗಿ ದೇಹಾರೋಗ್ಯದ ಬಗ್ಗೆ ಕಾಳಜಿ ವಹಿಸಿ.

ಸಿಂಹ: ನೆರೆಹೊರೆಯವರು ನಿಮ್ಮ ಬಗ್ಗೆ ತಿಳಿದುಕೊಳ್ಳಲು ಬಯಸುತ್ತಾರೆ. ನೀವು ಆಡುವ ಪ್ರತೀ ಮಾತಿನಲ್ಲೂ ಎಚ್ಚರಿಕೆಯಿರಲಿ. ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆಗೆ ಸಹಕಾರಿಯಾದ ವಾತಾವರಣವಿರಲಿದೆ. ನೆಮ್ಮದಿಗಾಗಿ ಕುಲದೇವರ ಪ್ರಾರ್ಥನೆ ಮಾಡಿ.

ಕನ್ಯಾ: ಆರ್ಥಿಕವಾಗಿ ನಿಮ್ಮ ಸ್ಥಿತಿ ಗತಿ ಸುಧಾರಿಸಲಿದ್ದು, ಪಾಲು ಬಂಡವಾಳ ಹೂಡಿಕೆಗೆ ಇದು ಸಕಾಲ. ವ್ಯಾಪಾರಿಗಳಿಗೆ ಚೇತರಿಕೆಗೆ ಅವಕಾಶ ಸಿಗಲಿದೆ. ಸಂಗಾತಿಗೆ ಅಚ್ಚರಿಯ ಉಡುಗೊರೆ ಕೊಡಲಿದ್ದೀರಿ. ದೇವತಾ ಪ್ರಾರ್ಥನೆ ಮರೆಯದಿರಿ.

ತುಲಾ: ಗೃಹೋಪಕರಣಗಳ ಖರೀದಿಗೆ ಖರ್ಚು ವೆಚ್ಚಗಳಾದೀತು. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ. ಮಾತಿನ ಮೇಲೆ ಹಿಡಿತವಿರಲಿ. ತಾಳ್ಮೆ, ಸಂಯಮ ಅಗತ್ಯ.

ವೃಶ್ಚಿಕ: ಮನಸ್ಸಿನಲ್ಲಿ ಅಂದುಕೊಂಡಿದ್ದ ಕೆಲಸಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಿದ್ದೀರಿ. ಪತ್ನಿಯ ಸೂಕ್ತ ಸಲಹೆಗಳು ಪಾಲಿಸಿದರೆ ಉತ್ತಮ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಏಕಾಗ್ರತೆಯ ಕೊರತೆಯುಂಟಾದೀತು.

ಧನು: ಅರ್ಧಕ್ಕೇ ನಿಂತ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಹಿರಿಯರಿಗೆ ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಯೋಗ ಕೂಡಿಬರಲಿದೆ. ನೂತನ ದಂಪತಿಗಳಿಗೆ ಸಂತಾನ ಫಲ ಸೂಚನೆ ದೊರೆಯಲಿದೆ. ದಿನದಂತ್ಯಕ್ಕೆ ಶುಭ ಸಮಾಚಾರ.

ಮಕರ: ನೀವು ಅಂದುಕೊಂಡಿದ್ದು ಒಂದು ಆಗುವುದು ಇನ್ನೊಂದು ಎಂಬ ಪರಿಸ್ಥಿತಿ ನಿಮ್ಮದಾದೀತು. ಕ್ರಿಯಾತ್ಮಕವಾಗಿ ಯೋಚಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಿ. ರಾಜಕೀಯ ರಂಗದಲ್ಲಿರುವವರಿಗೆ ಅಪವಾದದ ಭೀತಿ.

ಕುಂಭ: ಸಮಾಜಮುಖೀ ಕೆಲಸಗಳಿಂದ ಎಲ್ಲರ ಗಮನ ಸೆಳೆಯಲಿದ್ದೀರಿ. ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ದೊರೆಯಲಿದೆ. ಹಿರಿಯರು ಸಂಪಾದಿಸಿದ್ದನ್ನು ಜತನ ಮಾಡುವ ಹೊಣೆಗಾರಿಕೆ ನಿಮ್ಮದಾಗುವುದು. ತಾಳ್ಮೆಯಿರಲಿ.

ಮೀನ: ಆರೋಗ್ಯದಲ್ಲಿ ಸಣ್ಣ ಪುಟ್ಟ ಸಮಸ್ಯೆಗಳು ಚಿಂತೆಗೆ ಕಾರಣವಾಗಲಿದೆ. ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಉನ್ನತಿಯ ಯೋಗವಿದೆ. ವ್ಯಾಪಾರಿಗಳಿಗೆ ವ್ಯವಹಾರದಲ್ಲಿ ಮುನ್ನಡೆ ಕಂಡುಬರಲಿದೆ. ಕಿರು ಸಂಚಾರ ಮಾಡುವಿರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿದೋಷ ನಿವಾರಣೆಗೆ ಈ ಕಿರು ಮಂತ್ರ ಸಾಕು

ಸಂಜೆ ದೀಪ ಹಚ್ಚುವಾಗ ಪಠಿಸಬಹುದಾದ ಸ್ತೋತ್ರಗಳು ಇಲ್ಲಿವೆ

ಕೆಟ್ಟ ದೃಷ್ಟಿ ನಿವಾರಿಸಿ ಸಂಪತ್ತು ವೃದ್ಧಿಗೆ ಈ ಲಕ್ಷ್ಮೀ ಮಂತ್ರ ಪಠಿಸಿ

ಸಂಜೆ ದೀಪ ಹಚ್ಚುವ ಅತ್ಯಂತ ಮಂಗಳಕರ ಸಮಯ ಯಾವುದು ಗೊತ್ತಾ

ಮೇಷಾದಿ ದ್ವಾದಶ ರಾಶಿಫಲ 2026: ಖ್ಯಾತ ಜ್ಯೋತಿಷಿ ಶ್ರೀ ವೆಂಕಟೇಶ್ವರ ಭಟ್ ಅವರಿಂದ

ಮುಂದಿನ ಸುದ್ದಿ
Show comments