Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಗುರುವಾರ, 17 ಜೂನ್ 2021 (08:59 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಮನಸ್ಸಿನ ಉದ್ವೇಗಗಳಿಗೆ ಕಡಿವಾಣ ಹಾಕಬೇಕಾಗುತ್ತದೆ. ಭಾವನಾತ್ಮಕ ಸನ್ನಿವೇಶಗಳು ಎದುರಾದೀತು. ಪ್ರೀತಿ ಪಾತ್ರರಿಂದ ಸಂತೋಷದ ವಾರ್ತೆ ಕೇಳಿಬರಲಿದೆ. ಆರ್ಥಿಕವಾಗಿ ಹಣಕಾಸಿನ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ.

ವೃಷಭ: ವೃತ್ತಿರಂಗದಲ್ಲಿ ಅತ್ಯುತ್ಸಾಹದಿಂದ ಕೆಲಸ ಮಾಡಿದರೂ ನಿರಾಸೆ ಎದುರಿಸುವ ಪ್ರಸಂಗಗಳು ಬಂದೀತು. ತಾಳ್ಮೆ, ಸಂಯಮವಿರಲಿ. ಆರ್ಥಿಕವಾಗಿ ಅಭಿವೃದ್ಧಿ ಕಂಡುಬರಲಿದೆ. ಸಂಗಾತಿಯೊಂದಿಗೆ ಪರಾಮರ್ಶಿಸಿ ನಿರ್ಧಾರ ತೆಗೆದುಕೊಳ್ಳಿ.

ಮಿಥುನ: ಅತ್ತ ಲಾಭವೂ ಇಲ್ಲದ, ನಷ್ಟವೂ ಇಲ್ಲದ ದಿನ ನಿಮ್ಮದಾಗಲಿದೆ. ಎಲ್ಲವನ್ನೂ ಸಮನಾಗಿ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ವಿದ್ಯಾರ್ಥಿಗಳಿಗೆ ಭವಿಷ್ಯದ ಚಿಂತೆಯಾದೀತು.

ಕರ್ಕಟಕ: ಅತಿಯಾದ ವ್ಯಾಮೋಹ ಬಿಟ್ಟು ಸಿಕ್ಕಿದ್ದಕ್ಕೆ ತೃಪ್ತಿ ಪಟ್ಟುಕೊಂಡರೆ ನಿಮಗೇ ಒಳ್ಳೆಯದು. ಸ್ನೇಹಿತರೊಂದಿಗೆ ಸಂತೋಷದ ಕ್ಷಣ ಕಳೆಯಲಿದ್ದೀರಿ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿ ಯೋಗ ಕೂಡಿಬರಲಿದೆ.

ಸಿಂಹ: ಅತಿಯಾದ ವಿಶ್ವಾಸವಿಟ್ಟುಕೊಂಡಿದ್ದವರಿಂದ ನಂಬಿಕೆ ದ್ರೋಹವಾದೀತು. ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯಿರಲಿ. ನೆರೆಹೊರೆಯವರ ವಿಶ್ವಾಸ ಗಳಿಸಲು ಪ್ರಯತ್ನಿಸಲಿದ್ದೀರಿ. ನಿರುದ್ಯೋಗಿಗಳಿಗೆ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ.

ಕನ್ಯಾ: ಹೊಸದಾಗಿ ವೃತ್ತಿಜೀವನ ಆರಂಭಿಸಿದವರಿಗೆ ಸವಾಲುಗಳು ಎದುರಾಗಲಿವೆ. ಕ್ರಿಯಾತ್ಮಕವಾಗಿ ಯೋಚಿಸಬೇಕಾಗುತ್ತದೆ. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ದೊರೆಯಲಿದೆ.

ತುಲಾ: ಎಷ್ಟೇ ಕಷ್ಟ ಬಂದರೂ ನಿಮ್ಮ ಆದರ್ಶಗಳನ್ನು ಬಿಟ್ಟು ನಡೆಯಬೇಡಿ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ಪ್ರೀತಿ ಪಾತ್ರರಿಗೆ ಅಚ್ಚರಿಯ ಉಡುಗೊರೆ ಕೊಡಲಿದ್ದೀರಿ. ಧಾರ್ಮಿಕ ವಿಚಾರದಲ್ಲಿ ಆಸಕ್ತಿ ಮೂಡಲಿದೆ. ದೇವತಾ ಪ್ರಾರ್ಥನೆ ಮಾಡಿ.

ವೃಶ್ಚಿಕ: ಬೇರೆಯವರು ನಿಮ್ಮ ಬಗ್ಗೆ ಏನು ತಿಳಿದುಕೊಳ್ಳುವರೋ ಎಂಬ ಕೀಳರಿಮೆ ಬೇಡ. ನಿಮ್ಮ ಮನಸ್ಸಿಗೆ ಸರಿ ಎನಿಸಿದ್ದನ್ನು ಮಾಡಿ. ಸಂಗಾತಿಯೊಂದಿಗೆ ಸುಂದರ ಕ್ಷಣ ಕಳೆಯುವ ಯೋಗ. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.

ಧನು: ಕಾರ್ಯನಿಮಿತ್ತ ದೂರ ಸಂಚಾರಕ್ಕೆ ಸಿದ್ಧರಾಗಬೇಕಾಗುತ್ತದೆ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ. ನಿಮ್ಮ ಅಭಿಪ್ರಾಯಗಳನ್ನು ಇತರರ ಮೇಲೆ ಹೇರಲು ಹೋಗಬೇಡಿ. ವೃತ್ತಿರಂಗದಲ್ಲಿ ಏರಿಳಿತಗಳು ಸಾಮಾನ್ಯ.

ಮಕರ: ಮಕ್ಕಳಿಗೆ ಕ್ರಿಯಾತ್ಮಕ ಕೆಲಸಗಳು ಮನಸ್ಸಿಗೆ ಉಲ್ಲಾಸ ನೀಡಲಿದೆ. ಬಹಳ ದಿನಗಳ ನಂತರ ಬಂಧು ಮಿತ್ರರ ಸಮಾಗಮವಾಗಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯಗಳನ್ನು ನೆರವೇರಿಸಲಿದ್ದೀರಿ. ಅನಗತ್ಯ ಚಿಂತೆ ಬೇಡ.

ಕುಂಭ: ನಿಮಗೇ ಅರಿವಿಲ್ಲದಂತೇ ಇತರರಿಗೆ ನಿಮ್ಮಿಂದ ಸಹಾಯವಾಗಲಿದೆ. ನಿಮ್ಮ ಒಳ್ಳೆಯ ಕೆಲಸಗಳಿಗೆ ತಕ್ಕ ಪ್ರತಿಫಲ ಸಿಗಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಕುಲದೇವರನ್ನು ಪ್ರಾರ್ಥಿಸಿದರೆ ಉತ್ತಮ.

ಮೀನ: ದೈವಾನುಕೂಲದಿಂದ ಇಂದು ನೀವು ಕಾರ್ಯಕ್ಷೇತ್ರದಲ್ಲಿ ಮುನ್ನಡೆ ಗಳಿಸಲಿದ್ದೀರಿ. ದೇಹಾರೋಗ್ಯದಲ್ಲಿ ಸಣ್ಣ ಪುಟ್ಟ ಸಮಸ್ಯೆ ಕಂಡುಬಂದೀತು. ಆದರೆ ಅನಗತ್ಯ ಚಿಂತೆ ಬೇಡ. ಮೇಲಧಿಕಾರಿಗಳೊಂದಿಗಿನ ಭಿನ್ನಾಭಿಪ್ರಾಯ ಸರಿಪಡಿಸಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Durga Mantra: ದುರ್ಗಾ ಅಷ್ಟೋತ್ತರ ಮಂತ್ರ ಕನ್ನಡದಲ್ಲಿ ಇಲ್ಲಿದೆ ನೋಡಿ

Shiva mantra: ಇಂದು ಶಿವ ಅಷ್ಟೋತ್ತರ ತಪ್ಪದೇ ಓದಿ

Surya Mantra: ಇಂದು ಸೂರ್ಯನ ಕುರಿತಾದ ಈ ಸ್ತೋತ್ರವನ್ನು ತಪ್ಪದೇ ಓದಿ

Anjaneya Mantra: ಶನಿದೋಷವಿದ್ದವರು ಆಂಜನೇಯನ ಈ ಸ್ತೋತ್ರವನ್ನು ಓದಿ

Lakshmi Mantra: ಮನಸ್ಸಿನ ಭಯ ದೂರ ಮಾಡಲು ಧೈರ್ಯ ಲಕ್ಷ್ಮಿ ಸ್ತೋತ್ರ ಇಲ್ಲಿದೆ ನೋಡಿ

ಮುಂದಿನ ಸುದ್ದಿ
Show comments