Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶನಿವಾರ, 19 ಜೂನ್ 2021 (08:58 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ನಿಮ್ಮ ಉದ್ಯೋಗದ ಯಶಸ್ಸಿಗಾಗಿ ಕೆಲವೊಂದು ತ್ಯಾಗ ಮಾಡಬೇಕಾಗುತ್ತದೆ. ಅನಗತ್ಯ ವಿಚಾರಗಳ ಬಗ್ಗೆ ತಲೆಕೆಡಿಸಿಕೊಳ್ಳಬೇಕಾಗಿಲ್ಲ. ವಿದ್ಯಾರ್ಥಿಗಳಿಗೆ ಭವಿಷ್ಯಕ್ಕೆ ಪೂರಕವಾದ ಅವಕಾಶಗಳು ಒದಗಿಬರಲಿವೆ.

ವೃಷಭ: ಕಾರ್ಯಕ್ಷೇತ್ರದಲ್ಲಿ ಉನ್ನತ ಸ್ಥಾನಕ್ಕೇರುವ ಯೋಗ ಕೂಡಿಬರಲಿದೆ. ಆರ್ಥಿಕವಾಗಿ ಅನಗತ್ಯ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕಲಿದ್ದೀರಿ. ಪ್ರೀತಿ ಪಾತ್ರರೊಂದಿಗೆ ಸಮಯ ಕಳೆಯಲು ಮನಸ್ಸು ಹಾತೊರೆಯಲಿದೆ.

ಮಿಥುನ: ಇಷ್ಟ ದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಶುಭವಾಗುವುದು. ನಾಲಿಗೆ ಚಪಲಕ್ಕೆ ಕಡಿವಾಣ ಹಾಕದೇ ಇದ್ದರೆ ಆರೋಗ್ಯ ಸಮಸ್ಯೆ ಕಾಡೀತು. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.

ಕರ್ಕಟಕ: ಹಿರಿಯರಿಗೆ ದೇಹಾರೋಗ್ಯದಲ್ಲಿ ಏರುಪೇರಾಗುವ ಸಾಧ‍್ಯತೆ ಎದುರಾಗಲಿದೆ. ಅನಿರೀಕ್ಷಿತ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ. ವ್ಯಾಪಾರಿಗಳಿಗೆ ಆರ್ಥಿಕವಾಗಿ ಕೊಂಚ ಚೇತರಿಕೆಯ ದಿನಗಳು ಬರಲಿವೆ.

ಸಿಂಹ: ವ್ಯಾವಹಾರಿಕವಾಗಿ ಕೆಲವೊಂದು ಸಮಸ್ಯೆಗಳು ಕಂಡುಬಂದರೆ ಕ್ರಿಯಾತ್ಮಕವಾಗಿ ಯೋಚಿಸಿ ಪರಿಹಾರ ಕಂಡುಕೊಳ್ಳಬೇಕಾಗುತ್ತದೆ. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗಲಿದೆ. ಕುಲದೇವರ ಪ್ರಾರ್ಥನೆ ಮಾಡಿ.

ಕನ್ಯಾ: ನಿಮ್ಮ ಪ್ರೀತಿ ಪಾತ್ರರಿಗೆ ಅನಿರೀಕ್ಷಿತ ಉಡುಗೊರೆ ಕೊಡುವ ಮೂಲಕ ಸಂತೋಷ ನೀಡಲಿದ್ದೀರಿ. ಸಾಂಸಾರಿಕವಾಗಿ ಹೊಸ ಅತಿಥಿಗಳ ಆಗಮನಕ್ಕೆ ಸಿದ್ಧರಾಗಲಿದ್ದೀರಿ. ಹಿರಿಯರಿಗೆ ಧಾರ್ಮಿಕ ಕೆಲಸಗಳಿಂದ ನೆಮ್ಮದಿ ಸಿಗಲಿದೆ.

ತುಲಾ: ವೈಯಕ್ತಿಕವಾಗಿ ಕೆಲವೊಂದು ಸಮಸ್ಯೆಗಳು ನಿಮ್ಮನ್ನು ಹೈರಾಣಾಗಿಸಲಿದೆ. ಆದರೆ ಪ್ರೀತಿ ಪಾತ್ರರ ಸಹಾಯ ಒದಗಿಬರಲಿದೆ. ಕಟ್ಟಡ ಕಾಮಗಾರಿ ಕೆಲಸಗಳನ್ನು ಪೂರ್ತಿ ಮಾಡಲು ಮುಂದಾಗಲಿದ್ದೀರಿ. ತಾಳ್ಮೆಯಿರಲಿ.

ವೃಶ್ಚಿಕ: ನೀವು ಅಂದುಕೊಂಡ ಕೆಲಸಗಳು ಪೂರ್ತಿಯಾದ ಸಂತೋಷ ನಿಮಗೆ ಸಿಗಲಿದೆ. ಸಂಗಾತಿಯೊಂದಿಗೆ ಹೊಂದಾಣಿಕೆಯಿಂದ ನಡೆದುಕೊಳ್ಳಿ. ಮನಸ್ಸಿನಲ್ಲಿ ಅಂದುಕೊಂಡ ಕೆಲಸಗಳನ್ನು ಪೂರ್ತಿ ಮಾಡಲಿದ್ದೀರಿ.

ಧನು: ನಿಮ್ಮ ಮಾತಿನಿಂದಲೇ ಇತರರಿಗೆ ನೋವಾಗುವ ಸಂದರ್ಭ ಎದುರಾದೀತು. ತಾಳ್ಮೆ, ಸಂಯಮದಿಂದ ನಡೆದುಕೊಳ್ಳಿ. ಶೈಕ್ಷಣಿಕ ರಂಗದಲ್ಲಿರುವವರಿಗೆ ಭವಿಷ್ಯದ ಚಿಂತೆ ಕಾಡಲಿದೆ. ಕೃಷಿಕರಿಗೆ ಲಾಬವೂ ಇಲ್ಲದ ನಷ್ಟವೂ ಆಗದ ದಿನ.

ಮಕರ: ಭವಿಷ್ಯದ ಬಗ್ಗೆ ಯೋಚಿಸಿ ಕೆಲವೊಂದು ಮಹತ್ವದ ನಿರ್ಧಾರ ತೆಗೆದುಕೊಳ್ಳಲಿದ್ದೀರಿ. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ಆರ್ಥಿಕವಾಗಿ ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ. ಅನಗತ್ಯ ಚಿಂತೆ ಬೇಡ.

ಕುಂಭ: ಕಾರ್ಯರಂಗದಲ್ಲಿ ನಿಮ್ಮ ಮುನ್ನಡೆಗೆ ಅಡ್ಡಿ ಆತಂಕಗಳು ಎದುರಾದೀತು. ಆಪ್ತರೊಂದಿಗೆ ಸುಂದರ ಕ್ಷಣ ಕಳೆಯಲಿದ್ದೀರಿ. ಅವಿವಾಹಿತ ಕನ್ಯಾಮಣಿಗಳಿಗೆ ಸೂಕ್ತ ಸಂಬಂಧಗಳು ಒದಗಿಬರಲಿದೆ. ದಿನದಂತ್ಯಕ್ಕೆ ಶುಭ ಸುದ್ದಿ.

ಮೀನ: ಮಹಿಳೆಯರಿಗೆ ಅಲಂಕಾರಿಕ ವಸ್ತುಗಳನ್ನು ಖರೀದಿಸಲು ಖರ್ಚು ವೆಚ್ಚಗಳಾಗಲಿವೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ಮನೆಗೆ ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನವಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ