ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
ಮೇಷ: ಬೇರೆಯವರ ಬಗ್ಗೆ ಇಲ್ಲಸಲ್ಲದ ಯೋಚನೆ ಮಾಡಿಕೊಂಡು ನಿಮ್ಮ ಆರೋಗ್ಯ ಹಾಳುಮಾಡಿಕೊಳ್ಳಬೇಡಿ. ಆಪ್ತರೊಂದಿಗೆ ಮಾತನಾಡುವುದರಿಂದ ಮನಸ್ಸಿನ ಭಾರ ಕಡಿಮೆಯಾಗಲಿದೆ. ಆರ್ಥಿಕವಾಗಿ ಅನಿರೀಕ್ಷಿತ ಖರ್ಚುಗಳು ಕಂಡುಬಂದೀತು.
ವೃಷಭ: ಸಾಂಸಾರಿಕವಾಗಿ ಪತಿ-ಪತ್ನಿಯರಲ್ಲಿ ವಿರಸ ಮೂಡಿಬರಲಿದೆ. ಕೆಲವೊಂದು ವಿಚಾರಗಳನ್ನು ಹಿರಿಯರೊಂದಿಗೆ ಪರಾಮರ್ಶಿಸುವುದರಿಂದ ಪರಿಹಾರ ಸಿಗಲಿದೆ. ಕೃಷಿಕರಿಗೆ ಕಾರ್ಯಕ್ಷೇತ್ರದಲ್ಲಿ ಮುನ್ನಡೆ ಒದಗಿಬರಲಿದೆ.
ಮಿಥುನ: ವ್ಯಾವಹಾರಿಕವಾಗಿ ನಿಮ್ಮ ಏಳಿಗೆಯನ್ನು ಯಾರೂ ತಡೆಯಲಾಗದು. ಆರ್ಥಿಕವಾಗಿ ಹಂತ ಹಂತವಾಗಿ ಚೇತರಿಕೆ ಕಂಡುಬರಲಿದೆ. ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶನಕ್ಕೆ ಕರೆಬರಲಿದೆ. ಕಿರು ಸಂಚಾರ ಮಾಡಲಿದ್ದೀರಿ.
ಕರ್ಕಟಕ: ಅನಗತ್ಯ ಮಾತುಗಳಿಂದು ಪ್ರೀತಿ ಪಾತ್ರರ ಮನಸ್ಸಿಗೆ ನೋವುಂಟು ಮಾಡಬೇಡಿ. ಹಿಂದೆ ಆದ ತಪ್ಪುಗಳಿಂದ ಹೊಸ ಪಾಠ ಕಲಿಯಲಿದ್ದೀರಿ. ಪ್ರೀತಿ ಪಾತ್ರ ವಸ್ತು ಕಳೆದು ಹೋದ ನೋವು ಕಾಡಲಿದೆ. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.
ಸಿಂಹ: ವೃತ್ತಿರಂಗದಲ್ಲಿ ಹೊಸ ವಿಚಾರಗಳು ನಿಮ್ಮನ್ನು ಉನ್ನತ ಮಟ್ಟಕ್ಕೆ ಕರೆದೊಯ್ಯಲಿದೆ. ವ್ಯಾಪಾರಿಗಳಿಗೆ ಹೊಸ ವ್ಯವಹಾರಗಳು ಕೈ ಹಿಡಿಯಲಿವೆ. ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ. ಕುಲದೇವರ ಪ್ರಾರ್ಥನೆ ಮರೆಯದಿರಿ.
ಕನ್ಯಾ: ನಿಮ್ಮದಲ್ಲದ ವಿಚಾರಗಳ ಬಗ್ಗೆ ಅನಗತ್ಯ ಮೂಗು ತೂರಿಸಲು ಹೋಗಬೇಡಿ. ಮಕ್ಕಳ ವಿಚಾರದಲ್ಲಿ ಸಂತೋಷದ ವಾರ್ತೆ ಕೇಳಿಬಂದೀತು. ಮನೆಯಲ್ಲಿ ಅತಿಥಿಗಳ ಆಗಮನದಿಂದ ಸಂಭ್ರಮದ ವಾತಾವರಣವಿರಲಿದೆ.
ತುಲಾ: ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಭಾಗ್ಯ ಕೂಡಿಬರಲಿದೆ. ನಿಮ್ಮ ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯುವ ಯೋಗ ಕೂಡಿಬರಲಿದೆ. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.
ವೃಶ್ಚಿಕ: ವೈಯಕ್ತಿಕ ವಿಚಾರದಲ್ಲಿ ಮೂರನೆಯವರು ಮಧ್ಯಪ್ರವೇಶಿಸಲು ಅವಕಾಶ ಕೊಡಬೇಡಿ. ದಾಂಪತ್ಯದಲ್ಲಿ ಹೊಂದಾಣಿಕೆಯಿಂದ ನಡೆದುಕೊಳ್ಳುವುದು ಮುಖ್ಯ. ವ್ಯವಹಾರದಲ್ಲಿ ಆರ್ಥಿಕವಾಗಿ ಮುನ್ನಡೆ ಕಂಡುಬಂದೀತು.
ಧನು: ಪ್ರಸಕ್ತ ವಿದ್ಯಮಾನಗಳು ನಿಮ್ಮ ಮನಸ್ಸಿನ ದುಃಖ ಹೆಚ್ಚು ಮಾಡಲಿದೆ. ಅರ್ಧಕ್ಕೇ ನಿಂತ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಸಣ್ಣ ಪುಟ್ಟ ವಿಚಾರಗಳಿಗೆ ಆವೇಶಕ್ಕೊಳಗಾಗದಿರಿ. ಸಂಗಾತಿಯ ಮಾತಿಗೆ ಕಿವಿಗೊಡಿ.
ಮಕರ: ಉದ್ಯೋಗ ಕ್ಷೇತ್ರದಲ್ಲಿ ಹೊಸದನ್ನು ಸಾದಿಸುವ ಉತ್ಸಾಹ ಕಂಡುಬರಲಿದೆ. ಕಟ್ಟಡ ಕಾಮಗಾರಿ ಕೆಲಸಗಳು ಪುನರಾರಂಭವಾಗಲಿದೆ. ಹೊಸ ಜನರ ಭೇಟಿಯಿಂದ ಕಾರ್ಯ ಸಾಧನೆಯಾಗಲಿದೆ. ಪರಿಶ್ರಮಕ್ಕೆ ತಕ್ಕ ಫಲವಿರುವುದು.
ಕುಂಭ: ಎಂದೋ ಅಂದುಕೊಂಡಿದ್ದ ಕೆಲಸಗಳು ಇಂದು ಸುಲಲಿತವಾಗಿ ನೆರವೇರಲಿದೆ. ನಿಮ್ಮ ವಿಚಾರಧಾರೆಗಳಿಗೆ ಮನೆಯವರ ಸಹಮತ ಸಿಗಲಿದೆ. ಗೃಹಿಣಿಯರಿಗೆ ಗೃಹಕೃತ್ಯಗಳಿಂದ ಕೊಂಚ ಬಿಡುವು ಸಿಗಲಿದೆ.
ಮೀನ: ಮಹಿಳೆಯರಿಗೆ ಚಿನ್ನಾಭರಣ ಖರೀದಿ ಮಾಡುವ ಯೋಗ ಸದ್ಯದಲ್ಲೇ ಕೂಡಿಬರಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಸರಕಾರಿ ಉದ್ಯೋಗಿಗಳಿಗೆ ಕಾರ್ಯದೊತ್ತಡ ಕಂಡುಬಂದೀತು.