Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಭಾನುವಾರ, 27 ಜೂನ್ 2021 (08:03 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಸಾಧನೆಗೆ ತಕ್ಕ ಬೆಲೆ ಸಿಗದೇ ನಿರಾಸೆಯಾದೀತು. ಕ್ರಿಯಾತ್ಮಕ ಕೆಲಸಗಳಿಂದ ಜನ ಮನ ಗೆಲ್ಲಲಿದ್ದೀರಿ. ಮನೆಗೆ ಅತಿಥಿಗಳ ಆಗಮನವಾಗಲಿದೆ. ಇಷ್ಟ ಭೋಜನ ಮಾಡುವ ಯೋಗ ಕೂಡಿಬರಲಿದೆ.

ವೃಷಭ: ವ್ಯಾಪಾರಿಗಳಿಗೆ ವ್ಯವಹಾರದಲ್ಲಿ ಹೆಚ್ಚಿನ ಮುನ್ನಡೆ ಕಂಡುಬರಲಿದೆ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ನಿಮ್ಮ ಕೆಲಸಗಳನ್ನು ಪ್ರಾರಂಭಿಸಿದರೆ ಅಂದುಕೊಂಡದ್ದು ಆಗಲಿದೆ. ಇಷ್ಟಮಿತ್ರರ ಭೇಟಿ ಯೋಗ ಕೂಡಿಬರಲಿದೆ.

ಮಿಥುನ: ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಧಗಳು ಕೂಡಿಬರಲಿದೆ. ಹಿರಿಯರಿಗೆ ಧಾರ್ಮಿಕ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ಸಿಗುವುದು. ಪ್ರೀತಿ ಪಾತ್ರರ ಮೇಲೆ ನಿಮ್ಮ ಅಭಿಪ್ರಾಯಗಳನ್ನು ಹೇರಲು ಹೋಗಬೇಡಿ.

ಕರ್ಕಟಕ: ಒಂದನ್ನು ಪಡೆದುಕೊಳ್ಳಬೇಕಾದರೆ ಇನ್ನೊಂದನ್ನು ಕಳೆದುಕೊಳ್ಳುವ ಸ್ಥಿತಿ ನಿಮ್ಮದಾದೀತು. ನಿಮ್ಮ ಏಳಿಗೆಗೆ ಹಿತಶತ್ರುಗಳಿಂದಲೇ ಅಡೆತಡೆ ಎದುರಾದೀತು. ಸಂಗಾತಿಯ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ.

ಸಿಂಹ: ನಿಮ್ಮ ಮನದಾಸೆ ಪೂರೈಸಲು ಕೆಲವೊಂದು ತ್ಯಾಗ ಮಾಡಬೇಕಾಗುತ್ತದೆ. ಹಿರಿಯರು ಪಾಲಿಸಿಕೊಂಡು ಬಂದ ಆಚಾರಗಳನ್ನು ಮುಂದುವರಿಸುವ ಜವಾಬ್ಧಾರಿ ನಿಮ್ಮ ಹೆಗಲಿಗೇರಲಿದೆ. ಕಾರ್ಯನಿಮಿತ್ತ ಕಿರು ಓಡಾಟ ನಡೆಸುವಿರಿ.

ಕನ್ಯಾ: ನಾಲಿಗೆ ಚಪಲಕ್ಕೆ ಕಡಿವಾಣ ಹಾಕದೇ ಇದ್ದರೆ ತೊಂದರೆ ಅನುಭವಿಸಬೇಕಾದೀತು. ದೂರ ಸಂಚಾರ ಕೊನೆಯ ಕ್ಷಣದಲ್ಲಿ ರದ್ದಾಗಲಿದೆ. ಆರ್ಥಿಕವಾಗಿ ಅನಿರೀಕ್ಷಿತ ಖರ್ಚು ವೆಚ್ಚಗಳು ಎದುರಾಗಲಿವೆ. ದೇವತಾ ಪ್ರಾರ್ಥನೆ ಮಾಡಿ.

ತುಲಾ: ಜೀವನದಲ್ಲಿ ಮಹತ್ತರ ನಿರ್ಧಾರಗಳನ್ನು ತೆಗೆದುಕೊಳ್ಳುವ ಕಾಲ. ಸುದೀರ್ಘ ಕಾಲದ ಚಿಂತೆಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ಕೃಷಿಕರಿಗೆ ವ್ಯವಹಾರಕ್ಕೆ ಅನುಕೂಲಕರ ವಾತಾವರಣವಿರಲಿದೆ. ಅನಗತ್ಯ ಚಿಂತೆ ಬೇಡ.

ವೃಶ್ಚಿಕ: ನಿಮ್ಮದಲ್ಲದ ತಪ್ಪಿಗೆ ಬೆಲೆ ತೆರುವ ಪ್ರಸಂಗ ಬಂದೀತು. ತಾಳ್ಮೆ, ಸಂಯಮ ಅಗತ್ಯ. ನೂತನ ದಂಪತಿಗಳು ಸುಂದರ ಕ್ಷಣ ಕಳೆಯಲಿದ್ದಾರೆ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡಲಿದ್ದೀರಿ.

ಧನು: ನಿಮ್ಮ ಉದ್ದೇಶ ಈಡೇರಿಕೆಗಾಗಿ ಇತರರಿಗೆ ನೋವುಂಟು ಮಾಡಬೇಡಿ. ಅನಗತ್ಯ ಮಾತುಗಳಿಗೆ ಕಡಿವಾಣ ಹಾಕುವುದು ಉತ್ತಮ. ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ಆರೋಗ್ಯದಲ್ಲಿ ಸುಧಾರಣೆಯಾಗುವುದು.

ಮಕರ: ಎಷ್ಟೋ ದಿನದಿಂದ ಅಂದುಕೊಂಡಿದ್ದ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗದ ಐಡಿಯಾಗಳು ಹೊಳೆಯಲಿವೆ. ಸರಕಾರಿ ಲೆಕ್ಕಪತ್ರಗಳ ಬಗ್ಗೆ ಜೋಪಾನವಿರಲಿ. ಕುಲದೇವರ ಪ್ರಾರ್ಥನೆ ಮಾಡಿದರೆ ಉತ್ತಮ.

ಕುಂಭ: ಮಾನಸಿಕವಾಗಿ ಕೊರೆಯುತ್ತಿರುವ ವಿಚಾರಗಳನ್ನು ಆಪ್ತರೊಂದಿಗೆ ಹಂಚಿಕೊಂಡು ಹಗುರವಾಗಲಿದ್ದೀರಿ. ವಿಚಾರವಂತರ ಸಹವಾಸದಿಂದ ಉತ್ತಮ ಯೋಚನೆಗಳು ಬರಲಿದೆ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಬಿಡುವು.

ಮೀನ: ವ್ಯಾವಹಾರಿಕವಾಗಿ ನಿಮ್ಮ ಏಳಿಗೆಗೆ ಅಡೆತಡೆಯಿರದು. ಆರ್ಥಿಕವಾಗಿ ಹಣಕಾಸಿನ ಹರಿವು ಉತ್ತಮವಾಗಿದ್ದು, ಅಂದುಕೊಂಡ ಕೆಲಸಗಳನ್ನು ನೆರವೇರಿಸಲಿದ್ದೀರಿ. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿ ವಹಿಸಬೇಕಾಗುತ್ತದೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ