Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಮಂಗಳವಾರ, 6 ಜುಲೈ 2021 (08:39 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಒಣ ಪ್ರತಿಷ್ಠೆ ಬದಿಗಿಟ್ಟು ಕೆಲಸದತ್ತ ಗಮನಕೊಡುವುದು ಉತ್ತಮ. ಬಂಧು ಮಿತ್ರರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ನೂತನ ವೃತ್ತಿ ಜೀವನ ಆರಂಭಿಸಲು ಸಕಾಲ. ಕಿರು ಸಂಚಾರ ಮಾಡಲಿದ್ದೀರಿ.

ವೃಷಭ: ವೈಯಕ್ತಿಕವಾಗಿ ನಿಮ್ಮ ಖುಷಿ ಬಯಸುವವರಿಗೆ ನೋವುಂಟು ಮಾಡುವ ಕೆಲಸ ಮಾಡಬೇಡಿ. ಆದಾಯ ವೃದ್ಧಿಗೆ ದಾರಿಗಳನ್ನು ಕಂಡುಕೊಳ್ಳಲಿದ್ದೀರಿ. ಮಾನಸಿಕವಾಗಿ ನೆಮ್ಮದಿ ಪಡೆಯುವುದು ನಿಮ್ಮ ಕೈಯಲ್ಲೇ ಇದೆ. ತಾಳ್ಮೆಯಿರಲಿ.

ಮಿಥುನ: ಆತ್ಮೀಯರೊಂದಿಗಿನ ಮಾತುಕತೆ ನಿಮ್ಮ ಸಂತೋಷ ವೃದ್ಧಿ ಮಾಡಲಿದೆ. ಹಿರಿಯರಿಗೆ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆ ಕಂಡುಬಂದೀತು. ಹೊಸದಾಗಿ ಮದುವೆಯಾದವರಿಗೆ ಹೊಂದಾಣಿಕೆ ಕೊರತೆ ಉಂಟಾದೀತು. ಸಂಯಮ ಅಗತ್ಯ.

ಕರ್ಕಟಕ: ಕಾರ್ಯರಂಗದಲ್ಲಿ ಹೊಸ ಜನರ ಭೇಟಿಯಿಂದ ಕಾರ್ಯಸಾಧನೆಗೆ ಅನುಕೂಲವಾಗಲಿದೆ. ವ್ಯಾಪಾರಿಗಳಿಗೆ ಕೊಂಚ ಚೇತರಿಕೆ ಕಂಡುಬರಲಿದೆ. ಅವಿವಾಹಿತರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಒದಗಿಬರಲಿದೆ. ದೇವತಾ ಪ್ರಾರ್ಥನೆ ಮಾಡಿ.

ಸಿಂಹ: ಹಿರಿಯರು ಕಾಲ ಕಾಲಕ್ಕೆ ಕೊಡುವ ಸಲಹೆ, ಮಾರ್ಗದರ್ಶನಗಳನ್ನು ತಪ್ಪದೇ ಪಾಲಿಸಿ. ವೃತ್ತಿರಂಗದಲ್ಲಿ ನಿಮ್ಮ ಕ್ರಿಯಾತ್ಮಕ ಕೆಲಸಗಳಿಗೆ ಮೇಲಧಿಕಾರಿಗಳಿಂದ ಪ್ರಶಂಸೆ ಸಿಗಲಿದೆ. ರಾಜಕೀಯ ರಂಗದಲ್ಲಿರುವವರಿಗೆ ಮುನ್ನಡೆ.

ಕನ್ಯಾ: ನೀವು ಅಂದುಕೊಂಡಿದ್ದು ಒಂದು, ಆಗುವುದು ಇನ್ನೊಂದು ಎಂಬ ಪರಿಸ್ಥಿತಿ ಎದುರಾದೀತು. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ಸಂಗಾತಿಯ ಪ್ರೀತ್ಯಾದರಗಳಿಗೆ ಪಾತ್ರರಾಗಲಿದ್ದೀರಿ.

ತುಲಾ: ಪರರ ವಸ್ತುವಿನ ಮೇಲೆ ಅತಿಯಾದ ಮೋಹ ಬೇಡ. ಕಳೆದುಕೊಂಡ ಸಂಬಂಧಗಳು ಕೂಡಿಸಲು ಪ್ರಯತ್ನ ನಡೆಸಲಿದ್ದೀರಿ. ದಾಯಾದಿ ಕಲಹಗಳಿಗೆ ಹಿರಿಯರ ಮಧ್ಯಸ್ಥಿಕೆ ಒಳಿತು. ಕುಲದೇವರ ಪ್ರಾರ್ಥನೆ ಮಾಡಿ.

ವೃಶ್ಚಿಕ: ಸಕಾಲದಲ್ಲಿ ಆರ್ಥಿಕ ನೆರವು ಸಿಗುವುದರಿಂದ ಸಂಭಾವ್ಯ ಕಷ್ಟದಿಂದ ಪಾರಾಗಲಿದ್ದೀರಿ. ನಿರುದ್ಯೋಗಿಗಳು ನಿರಾಶರಾಗಬೇಕಿಲ್ಲ, ಭವಿಷ್ಯದ ಬಗ್ಗೆ ಭರವಸೆಯಿರಲಿ. ಕೋರ್ಟು ಕಚೇರಿ ಕಲಾಪಗಳಿಗೆ ಸಿದ್ಧತೆ ನಡೆಸಲಿದ್ದೀರಿ.

ಧನು: ನೆರೆಹೊರೆಯವರ ಜೊತೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಕಂಡುಬರಲಿದ್ದು, ಸಂತೋಷವಾಗಲಿದೆ. ಆರ್ಥಿಕವಾಗಿ ಧನಾಗಮನಕ್ಕೆಕ್ಕೆ ಕೊರತೆಯಿರದು. ಅಧಿಕ ಖರ್ಚು ವೆಚ್ಚಗಳಿಗೆ ಕಡಿವಾಣವಿರಲಿ.

ಮಕರ: ಎಷ್ಟೋ ದಿನದಿಂದ ಮಾಡಬೇಕೆಂದುಕೊಂಡಿದ್ದ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಕೊಡು ಕೊಳ್ಳುವಿಕೆ ವ್ಯವಹಾರದಲ್ಲಿ ಲಾಭ ಕಂಡುಕೊಳ್ಳಲಿದ್ದೀರಿ. ಸರಕಾರಿ ಉದ್ಯೋಗಸ್ಥರಿಗೆ ಕಾರ್ಯದೊತ್ತಡ ಕೊಂಚ ಕಡಿಮೆಯಾಗಲಿದೆ.

ಕುಂಭ: ಬೇರೆಯವರು ಮಾಡುವ ತಪ್ಪುಗಳಿಗೆ ನೀವು ಹೊಣೆಯಾಗುವ ಸಂದಿಗ್ಧತೆ ಎದುರಾದೀತು. ಸಂಗಾತಿಯ ಮಾತುಗಳಿಗೆ ಕಿವಿಗೊಡುವುದು ಉತ್ತಮ. ಬಂಧು ಮಿತ್ರರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ಮಕ್ಕಳ ದೇಹಾರೋಗ್ಯದ ಬಗ್ಗೆ ಗಮನವಿರಲಿ.

ಮೀನ: ವೃತ್ತಿರಂಗದಲ್ಲಿ ಸಹೋದ್ಯೋಗಿಗಳ ನೆರವಿನಿಂದ ಸಂಭಾವ್ಯ ಸಮಸ್ಯೆಯಿಂದ ಪಾರಾಗಲಿದ್ದೀರಿ. ಆದಾಯ ಗಳಿಕೆಗೆ ಹೊಸ ದಾರಿ ಕಂಡುಕೊಳ್ಳುವಿರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Anjaneya Mantra: ಆಂಜನೇಯ ಅಷ್ಟೋತ್ತರ ಮಂತ್ರವನ್ನು ತಪ್ಪದೇ ಓದಿ

Lakshmi Mantra: ಧನಾಭಿವೃದ್ಧಿ ಆಗಬೇಕಾದ ಧನಲಕ್ಷ್ಮೀ ಸ್ತೋತ್ರ ಓದಿ

Raghavendra swamy mantra: ಶ್ರೀ ರಾಘವೇಂದ್ರ ಕವಚ ಸ್ತೋತ್ರಂ ಭಕ್ತಿಯಿಂದ ಓದಿ

Devi Mantra: ಮನೆಯಲ್ಲಿರುವ ಅವಿವಾಹಿತ ಕನ್ಯಾಮಣಿಗಳು ತಪ್ಪದೇ ಈ ಸ್ತೋತ್ರ ಓದಿ

Ardanaristaka Stothram: ವಿವಾಹಾದಿ ಸಮಸ್ಯೆಗಳಿಗೆ ಅರ್ಧನಾರೀಶ್ವರಾಷ್ಟಕಂ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments