Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಗುರುವಾರ, 15 ಜುಲೈ 2021 (08:33 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಪ್ರೀತಿ ಪಾತ್ರರ ಆಶೋತ್ತರಗಳನ್ನು ಪೂರೈಸಬೇಕಾಗುತ್ತದೆ. ಇಲ್ಲ ಸಲ್ಲದ ವಿಚಾರಕ್ಕೆ ವಿವಾದ ಮೈಮೇಲೆಳದುಕೊಳ್ಳಬೇಡಿ. ಸರ್ಕಾರಿ ಕೆಲಸಗಳಿಗಾಗಿ ಓಡಾಟ ನಡೆಸಲಿದ್ದೀರಿ. ತಾಳ್ಮೆ ಅಗತ್ಯ.

ವೃಷಭ: ಬಾಡಿಗೆದಾರರಿಗೆ ಮನೆ ಮಾಲಿಕರಿಂದ ಕಿರಿ ಕಿರಿ ಎದುರಾದೀತು. ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿರಲಿ. ಸರಕಾರಿ ಕೆಲಸದಲ್ಲಿರುವವರಿಗೆ ಮುನ್ನಡೆಯ ಯೋಗವಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಿಥುನ: ಅನಿರೀಕ್ಷಿತವಾಗಿ ಹಳೆಯ ಮಿತ್ರರನ್ನು ಭೇಟಿಯಾಗುವ ಯೋಗ ಕೂಡಿಬರಲಿದೆ. ಹಿರಿಯರಿಗೆ ದಾನ ಧರ್ಮಾದಿಗಳಿಂದ ನೆಮ್ಮದಿ ಸಿಗಲಿದೆ. ವೈಯಕ್ತಿಕ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ.

ಕರ್ಕಟಕ: ವೈಚಾರಿಕವಾಗಿ ನಿಮ್ಮ ಆತ್ಮೀಯರೊಂದಿಗೆ ಭಿನ್ನಾಭಿಪ್ರಾಯಗಳು ಕಂಡುಬಂದೀತು. ಸಂಗಾತಿಯ ಸೂಕ್ತ ಸಲಹೆಗಳನ್ನು ಪಾಲಿಸುವುದು ಉತ್ತಮ. ಕೃಷಿಕರಿಗೆ ವ್ಯವಹಾರಗಳು ಸರಾಗವಾಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ಸಿಂಹ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮದಲ್ಲದ ತಪ್ಪಿಗೆ ತಲೆದಂಡವಾದೀತು. ಎಚ್ಚರಿಕೆಯಿಂದ ಕಾರ್ಯನಿರ್ವಹಿಸಿ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗವಿದೆ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ವಾಹನ ಸಂಚಾರದಲ್ಲಿ ಎಚ್ಚರಿಕೆಯಿರಲಿ.

ಕನ್ಯಾ: ಅರ್ಧಕ್ಕೇ ನಿಂತ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಅನಿರೀಕ್ಷಿತ ಖರ್ಚು ವೆಚ್ಚಗಳು ಕಂಡುಬಂದೀತು. ಸೂಕ್ತವಾದ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳುವುದರಿಂದ ಸಂಭಾವ್ಯ ಅಪಾಯ ತಪ್ಪಲಿದೆ. ತಾಳ್ಮೆ, ಸಂಯಮ ಅಗತ್ಯ.

ತುಲಾ: ಎಷ್ಟೋ ದಿನಗಳಿಂದ ಮಾಡಬೇಕೆಂದಿದ್ದ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಶುಭವಾಗಲಿದೆ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ.

ವೃಶ್ಚಿಕ: ನಿಮಗಾಗಿ ಬಂದ ಅವಕಾಶಗಳನ್ನು ವ್ಯರ್ಥ ಮಾಡದೇ ಸದುಪಯೋಗಪಡಿಸಿಕೊಳ್ಳಿ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ಆದರೆ ಯಾರಿಗೂ ಸಾಲ ಕೊಡುವ ಸಾಹಸ ಮಾಡಬೇಡಿ. ದಿನದಂತ್ಯಕ್ಕೆ ಅಚ್ಚರಿ ಸುದ್ದಿ.

ಧನು: ಇಷ್ಟು ದಿನ ನಿಮ್ಮನ್ನು ಕಾಡುತ್ತಿದ್ದ ಮನೋವೇದನೆ ದೂರವಾಗಲಿದೆ. ಮಕ್ಕಳಿಂದ ಸಂತೋಷದ ವಾರ್ತೆ ಕೇಳಿಬರಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚ ಮಾಡಲಿದ್ದೀರಿ. ದೂರ ಸಂಚಾರಕ್ಕೆ ಸಿದ್ಧತೆ ನಡೆಸುವಿರಿ.

ಮಕರ: ನಿರ್ಧಾರಗಳು ಕೈಗೊಳ್ಳುವಾಗ ಗೊಂದಲಗಳಾದೀತು. ಮನಸ್ಸಿನ ಭಾವನೆಗಳಿಗೆ ಬೆಲೆಕೊಡಿ. ಯೋಗ್ಯ ವಯಸ್ಕರಿಗೆ ವೈವಾಹಿಕ ಸಂಬಂಧಗಳು ಕೂಡಿಬರಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವುದರಿಂದ ಮನಸ್ಸಿಗೆ ನೆಮ್ಮದಿ ಸಿಗುವುದು.

ಕುಂಭ: ವ್ಯಾಪಾರ, ವಹಿವಾಟಿನಲ್ಲಿ ನಿವ್ವಳ ಲಾಭ ಕಂಡುಬರುವುದು. ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ಚಾಲನೆ ನೀಡಲು ಇದು ಸಕಾಲ. ಮಹಿಳೆಯರಿಗೆ ಗೃಹ ಕೃತ್ಯಗಳಿಂದ ಕೊಂಚ ಬಿಡುವು ಸಿಗಲಿದೆ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯುವಿರಿ.

ಮೀನ: ಹಿರಿಯರ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ಅಲೆದಾಡುವ ಪರಿಸ್ಥಿತಿ ಬಂದೀತು. ಯಾವುದನ್ನೂ ಹಗುರವಾಗಿ ಪರಿಗಣಸದಿರಿ. ಕೌಟುಂಬಿಕವಾಗಿ ಹೆಚ್ಚಿನ ಜವಾಬ್ಧಾರಿಗಳು ಹೆಗಲಿಗೇರಲಿವೆ. ಕಿರು ಸಂಚಾರ ಮಾಡಲಿದ್ದೀರಿ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ