Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶುಕ್ರವಾರ, 16 ಜುಲೈ 2021 (08:40 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಉದ್ಯೋಗ ಕ್ಷೇತ್ರದಲ್ಲಿ ಸಮಾನ ಮನಸ್ಕರ ಜೊತೆ ನಿಮ್ಮ ಸಮಸ್ಯೆಗಳನ್ನು ಹಂಚಿಕೊಳ್ಳಲಿದ್ದೀರಿ. ಕ್ರಿಯಾತ್ಮಕ ಯೋಚನೆಗಳಿಗೆ ಬೆಲೆ ಸಿಗಲಿದೆ. ಆರ್ಥಿಕವಾಗಿ ಹೊಸ ಯೋಜನೆಗಳಿಗೆ ಕೈ ಹಾಕಲು ಕೆಲವು ದಿನ ಕಾಯುವುದು ಉತ್ತಮ.

ವೃಷಭ: ನಿರುದ್ಯೋಗಿಗಳು ಉದ್ಯೋಗ ಸಂದರ್ಶನ ನಿಮಿತ್ತ ದೂರದೂರಿಗೆ ಪ್ರಯಾಣ ಮಾಡಲಿದ್ದಾರೆ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ. ಮನೆಗೆ ಅನಿರೀಕ್ಷಿತ ನೆಂಟರಿಷ್ಟರ ಆಗಮನವಾಗಲಿದೆ. ದಾಂಪತ್ಯದಲ್ಲಿ ಹೊಂದಾಣಿಕೆಯಿರಲಿ.

ಮಿಥುನ: ದೇಹಾರೋಗ್ಯದಲ್ಲಿ ಇದುವರೆಗೆ ಇದ್ದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಶುಭವಾಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕರ್ಕಟಕ: ವೃತ್ತಿರಂಗದಲ್ಲಿ ಸಹೋದ್ಯೋಗಿಗಳ ಕಷ್ಟಕ್ಕೆ ನೆರವಾಗಲಿದ್ದೀರಿ. ಉದ್ಯೋಗದಲ್ಲಿ ಸ್ಥಾನ ಪಲ್ಲಟವಾಗುವ ಭೀತಿ ಎದುರಾಗಲಿದೆ. ವೈಯಕ್ತಿಕ ಸಮಸ್ಯೆಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳಲಿದ್ದೀರಿ. ದಿನದಂತ್ಯಕ್ಕೆ ಶುಭ ಸುದ್ದಿ.

ಸಿಂಹ: ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಕೂಡಿಬರಲಿವೆ. ಮಾತಿನ ಮೇಲೆ ನಿಗಾ ಇರದೇ ಹೋದಲ್ಲಿ ಆಪ್ತರೊಂದಿಗೆ ಭಿನ್ನಾಭಿಪ್ರಾಯ ಖಂಡಿತಾ. ವ್ಯಾಪಾರಿಗಳಿಗೆ ಉನ್ನತಿಗೇರುವ ಅವಕಾಶಗಳು ಒದಗಿಬರಲಿವೆ.

ಕನ್ಯಾ: ಕೌಟುಂಬಿಕವಾಗಿ ಕೆಲವೊಂದು ವಿಚಾರಗಳು ನಿಮ್ಮನ್ನು ಚಿಂತೆಗೀಡು ಮಾಡಲಿದೆ. ವ್ಯವಹಾರದಲ್ಲಿ ಹಿತಶತ್ರುಗಳ ಕಾಟ ಕಂಡುಬಂದೀತು. ಹಣ ಗಳಿಕೆಗೆ ಅನ್ಯ ಮಾರ್ಗಗಳ ಬಗ್ಗೆ ಯೋಚನೆ ಮಾಡಲಿದ್ದೀರಿ. ಮಕ್ಕಳಿಂದ ಸಂತೋಷ ಸಿಗಲಿದೆ.

ತುಲಾ: ನಿಮ್ಮದಲ್ಲದ ವಸ್ತುವಿನ ಬಗ್ಗೆ ಅತಿಯಾದ ವ್ಯಾಮೋಹ ಬೇಡ. ಪ್ರೀತಿ ಪಾತ್ರರ ಅಗಲುವಿಕೆ ನೋವು ಕಾಡಲಿದೆ. ಹಿರಿಯರಿಗೆ ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಯೋಗ ಕಾಡಿಬಂದೀತು. ದೇವತಾ ಪ್ರಾರ್ಥನೆ ಮಾಡಿದರೆ ಉತ್ತಮ.

ವೃಶ್ಚಿಕ: ನಿರುದ್ಯೋಗಿಗಳು ಬಯಸಿದ ಉದ್ಯೋಗಕ್ಕೆ ಸಂದರ್ಶನಕ್ಕೆ ಕರೆ ಬರದೇ ನಿರಾಸೆ ಅನುಭವಿಸಲಿದ್ದಾರೆ. ಸ್ವಯಂ ವೃತ್ತಿಯವರಿಗೆ ಮುನ್ನಡೆಯ ಯೋಗವಿದೆ. ಲೇವಾದೇವಿ ವ್ಯವಹಾರಗಳಿಗೆ ಅಡೆತಡೆ ಉಂಟಾದೀತು. ತಾಳ್ಮೆಯಿರಲಿ.

ಧನು: ಇಷ್ಟ ಮಿತ್ರರ ಭೇಟಿ, ಭೋಜನ ಮನಸ್ಸಿಗೆ ಖುಷಿ ಕೊಡಲಿದೆ. ಬೇರೆಯವರ ಬಗ್ಗೆ ಅತಿಯಾದ ಕಾಳಜಿಯೂ ಕೆಲವೊಮ್ಮೆ ತೊಂದರೆ ಉಂಟು ಮಾಡೀತು. ವಿದ್ಯಾರ್ಥಿಗಳಿಗೆ ಶೈಕ್ಷಣಿಕ ರಂಗದಲ್ಲಿ ಉನ್ನತ ಅವಕಾಶಗಳು ಸಿಗಲಿವೆ.

ಮಕರ: ನಿಮ್ಮ ಪಾಲಿಗೆ ಬಂದ ಅವಕಾಶಗಳನ್ನು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಲು ವಿಫಲರಾಗಲಿದ್ದೀರಿ. ನಿಮ್ಮ ಆತ್ಮೀಯರ ಮಾತೇ ಕೆಲವೊಮ್ಮೆ ನಿಮಗೆ ಶತ್ರುವಾದೀತು. ವ್ಯಾಪಾರಿಗಳಿಗೆ ಕೊಂಚ ಚೇತರಿಕೆ ಕಂಡುಬರಲಿದೆ.

ಕುಂಭ: ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಬಡ್ತಿ ಯೋಗ ಕಂಡುಬರಲಿದೆ. ನಿಮ್ಮ ಇಚ್ಛಿತ ಕೆಲಸಗಳನ್ನು ಸುಗಮವಾಗಿ ನೆರವೇರಿಸಲಿದ್ದೀರಿ. ಸಾಂಸಾರಿಕವಾಗಿ ಸಂಗಾತಿಯೊಂದಿಗೆ ಹೊಂದಾಣಿಕೆ ಅಗತ್ಯ. ಖರ್ಚು ವೆಚ್ಚದ ಬಗ್ಗೆ ನಿಗಾ ಇರಲಿ.

ಮೀನ: ನಿಮ್ಮ ಮನಸ್ಸಿನ ಭಾವನೆಗೆ ತಕ್ಕಂತೆ ನಿರ್ಧಾರ ತೆಗೆದುಕೊಳ್ಳಲಿದ್ದೀರಿ. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗಲಿದೆ. ಸಂತಾನ ಹೀನ ದಂಪತಿಗಳು ದೇವರ ಮೊರೆ ಹೋಗಲಿದ್ದಾರೆ. ಸರಕಾರಿ ಲೆಕ್ಕ ಪತ್ರಗಳನ್ನು ಜೋಪಾನ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ