Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಸೋಮವಾರ, 19 ಜುಲೈ 2021 (08:38 IST)
ಬೆಂಗಳೂರು: ದ್ವಾದಶ ರಾಶಿಗಳ ಇಂದಿನ ಫಲಾಫಲಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.


ಮೇಷ: ದೇಹಾರೋಗ್ಯದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ಅನಗತ್ಯ ಚಿಂತೆಗಳಿಗೆ ಕಡಿವಾಣ ಹಾಕುವುದು ಉತ್ತಮ. ಸಂಗಾತಿಯ ಸಲಹೆಗಳನ್ನು ಪಾಲಿಸಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿ ಕಟ್ಟುನಿಟ್ಟು ಅಗತ್ಯ.

ವೃಷಭ: ಬೇರೆಯವರು ನಿಮ್ಮ ಬಗ್ಗೆ ಏನಂದುಕೊಳ್ಳುವರೋ ಎಂಬ ಕೀಳರಿಮೆ ಬೇಡ. ಉದ್ಯೋಗ ಕ್ಷೇತ್ರದಲ್ಲಿ ನಿರುತ್ಸಾಹ ಕಂಡುಬರದಂತೆ ಎಚ್ಚರಿಕೆ ವಹಿಸಿ. ಇಂದು ಯಾರಿಗೂ ಸಾಲ ಕೊಡಲು ಹೋಗಬೇಡಿ. ಕೈ ಸುಟ್ಟುಕೊಳ್ಳಬೇಕಾದೀತು.

ಮಿಥುನ: ನಿಮ್ಮ ಬಳಿ ಈ ಹಿಂದೆ ಸಹಾಯ ಮಾಡಿದ್ದವರು ಇಂದು ನಿಮಗೆ ಆಗಿರಬರಲಿದ್ದಾರೆ. ನಿರುದ್ಯೋಗಿಗಳು ಸ್ವಯಂ ಉದ್ಯೋಗದ ಕಡೆಗೆ ಚಿಂತನೆ ನಡೆಸಲಿದ್ದಾರೆ. ವೈಯಕ್ತಿಕ ಸುಖಕ್ಕಾಗಿ ಕೆಲವೊಂದು ತ್ಯಾಗ ಮಾಡಬೇಕಾಗಿ ಬರಲಿದೆ.

ಕರ್ಕಟಕ: ಅಧಿಕ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕಲು ಪ್ರಯತ್ನಿಸಲಿದ್ದೀರಿ. ನೂತನ ವ್ಯವಹಾರಗಳಿಗೆ ಕೈ ಹಾಕಲು ಕೆಲವು ದಿನ ಕಾಯುವುದು ಉತ್ತಮ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ದಿನದಂತ್ಯಕ್ಕೆ ಅಚ್ಚರಿ ಸುದ್ದಿ.

ಸಿಂಹ: ನೀವು ಮುನ್ನಡೆಯಬೇಕು ಎಂದುಕೊಂಡಾಗಲೆಲ್ಲಾ ವಿಘ್ನಗಳು ಎದುರಾದೀತು. ಎಲ್ಲವನ್ನೂ ನಿಭಾಯಿಸಿಕೊಂಡು ಹೋಗುವ ತಾಳ್ಮೆ ರೂಢಿಸಿಕೊಳ್ಳಿ. ಗೃಹೋಪಯೋಗಿ ವಸ್ತುಗಳಿಗಾಗಿ ಖರ್ಚು ವೆಚ್ಚಗಳಾದೀತು. ತಾಳ್ಮೆಯಿರಲಿ.

ಕನ್ಯಾ: ವೃತ್ತಿರಂಗದಲ್ಲಿ ನಿಮ್ಮ ಕ್ಷೇತ್ರದಲ್ಲಿ ಮೂಗು ತೂರಿಸುವವರನ್ನು ಅಲಕ್ಷಿಸುವುದು ಉತ್ತಮ. ಅಧಿಕ ಕಾರ್ಯದೊತ್ತಡದಿಂದ ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ. ಇಷ್ಟಮಿತ್ರರ ಭೇಟಿಯಾಗಲಿದ್ದೀರಿ. ಕಿರು ಸಂಚಾರ ಮಾಡಬೇಕಾಗುತ್ತದೆ.

ತುಲಾ: ಮಹಿಳೆಯರಿಗೆ ಗೃಹಕೃತ್ಯಗಳಿಂದ ಕೊಂಚ ಬಿಡುವು ಸಿಗಲಿದೆ. ಯಾಂತ್ರಿಕ ಪದವೀಧರರಿಗೆ ಸೂಕ್ತ ಉದ್ಯೋಗ ಸಿಗಲಿದೆ. ಹಿರಿಯರು ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಬೇಕಾಗುತ್ತದೆ. ಶುಭ ಮಂಗಲ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ.

ವೃಶ್ಚಿಕ: ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶನಕ್ಕಾಗಿ ದೂರ ಪ್ರಯಾಣ ಮಾಡಬೇಕಾಗುತ್ತದೆ. ಮನೆಯಲ್ಲಿ ಕಳ್ಳತನದ ಭೀತಿಯಿದೆ. ಹಿರಿಯರಿಂದ ಬಂದ ಬಳವಳಿಗಳನ್ನು ಕಳೆದುಕೊಳ್ಳುವ ಭೀತಿ ಎದುರಾಗಲಿದೆ. ಹೊಸ ವ್ಯವಹಾರ ಶುರು ಮಾಡಲು ಸಕಾಲ.

ಧನು: ನಿಮ್ಮ ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಜಾರಿಗೊಳಿಸಲು ಸಕಾಲ. ನಾಟಕೀಯ ವರ್ತನೆ ತೋರುವವರ ಜತೆ ಎಚ್ಚರಿಕೆಯಿಂದ ವ್ಯವಹರಿಸಿ. ಸರಕಾರಿ ಕೆಲಸದಲ್ಲಿರುವವರಿಗೆ ಮುಂಬಡ್ತಿ ಯೋಗವಿದೆ. ಹಿರಿಯರ ಸಲಹೆಯನ್ನು ಪಾಲಿಸಿದರೆ ಉತ್ತಮ.

ಮಕರ: ಇದುವರೆಗೆ ಇದ್ದ ಸಮಸ್ಯೆಗಳು ನಿವಾರಣೆಯಾಗಿ ಆರ್ಥಿಕವಾಗಿ ಚೇತರಿಕೆ ಕಂಡುಬರಲಿದೆ. ವಾಹನ ಸವಾರರಿಗೆ ಅಪಘಾತದ ಭಯ ಕಾಡೀತು. ಮನೆಗೆ ಬಂಧು ಮಿತ್ರರ ಆಗಮನವಾಗಲಿದೆ. ವಿದ್ಯಾರ್ಥಿಗಳಿಗೆ ಏಕಾಗ್ರತೆಗೆ ಭಂಗವಾಗಬಹುದು.

ಕುಂಭ: ಸರಿಯಾದ ಸಮಯದಲ್ಲಿ ಸರಿಯಾದ ನಿರ್ಧಾರ ಕೈಗೊಳ್ಳುವುದರಿಂದ ವೃತ್ತಿರಂಗದಲ್ಲಿ ಸಂಭಾವ್ಯ ಅಪಾಯ ತಪ್ಪಿಸಬಹುದು. ಕೆಳಹಂತದ ನೌಕರರಿಗೆ ಉದ್ಯೋಗದಲ್ಲಿ ಮುಂಬಡ್ತಿ ಯೋಗ. ಕುಲದೇವರ ಪ್ರಾರ್ಥನೆ ಮಾಡಿ.

ಮೀನ: ಸರಿಯಾದ ತಯಾರಿ ನಡೆಸಿ ಹೆಜ್ಜೆಯಿಡುವುದರಿಂದ ಗುರಿ ತಲುಪಬಹುದು. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಇರುವುದು. ಅವಿವಾಹಿತರ ವಿವಾಹ ಪ್ರಸ್ತಾಪಗಳು ಸ್ವಲ್ಪದರಲ್ಲೇ ಕೈ ತಪ್ಪಿಹೋಗಲಿವೆ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗುತ್ತದೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ