Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಸೋಮವಾರ, 26 ಜುಲೈ 2021 (08:37 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ವೃತ್ತಿರಂಗದಲ್ಲಿ ನಿಮ್ಮ ಸಮಯೋಚಿತ ಕೆಲಸದಿಂದ ಸಂಭಾವ್ಯ ಸಮಸ್ಯೆಗಳು ದೂರವಾಗಲಿದ್ದು, ಮೇಲಧಿಕಾರಿಗಳಿಂದ ಪ್ರಶಂಸೆಗೊಳಗಾಗಲಿದ್ದೀರಿ. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ದುಂದು ವೆಚ್ಚಗಳಿಗೆ ಕಡಿವಾಣ ಹಾಕಿ.

ವೃಷಭ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಮಾನಹಾನಿಯಾಗುವ ಘಟನೆಗಳು ನಡೆದೀತು. ಎಚ್ಚರಿಕೆಯಿಂದ ವರ್ತಿಸಿ. ಆರ್ಥಿಕವಾಗಿ ಹೊಸ ಯೋಜನೆಗಳಿಗೆ ಕೈ ಹಾಕಲು ಕೆಲವು ದಿನ ಕಾಯುವುದು ಉತ್ತಮ. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ನಿಮ್ಮ ಮನಸ್ಸಿನಲ್ಲಿ ನಡೆಯುತ್ತಿರುವ ಗೊಂದಲಗಳಿಗೆ ಉತ್ತರ ಕಂಡುಕೊಳ್ಳಲಿದ್ದೀರಿ. ಪ್ರೀತಿ ಪಾತ್ರರೊಂದಿಗೆ ಪ್ರವಾಸ ಮಾಡುವ ಯೋಗ ಕೂಡಿಬರಲಿದೆ. ವಿದ್ಯಾರ್ಥಿಗಳಿಗೆ ಶೈಕ್ಷಣವಾಗಿ ಉನ್ನತಿಗೇರುವ ಅವಕಾಶಗಳಿವೆ.

ಕರ್ಕಟಕ: ನಿರುದ್ಯೋಗಿಗಳು ಪಾಲಿಗೆ ಬಂದ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಬೇಕು. ವ್ಯಾಪಾರಿಗಳಿಗೆ ಚೇತರಿಕೆ ಕಂಡುಬರಲಿದ್ದು, ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ಕಿರು ಸಂಚಾರ ಮಾಡಲಿದ್ದೀರಿ.

ಸಿಂಹ: ಬೇರೆಯವರು ನಿಮ್ಮ ಬಗ್ಗೆ ಹೇಳುವ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ಸಂಗಾತಿಯೊಂದಿಗೆ ಚರ್ಚಿಸಿ ನಿರ್ಧಾರಗಳನ್ನು ತೆಗೆದುಕೊಳ್ಳಿ. ಮಕ್ಕಳಿಂದ ಸಂತೋಷ ಸಿಗಲಿದೆ. ಅನಿರೀಕ್ಷಿತ ಉಡುಗೊರೆಗಳು ಸಿಗಲಿವೆ.

ಕನ್ಯಾ: ಮಾನಸಿಕವಾಗಿ ನಿಮ್ಮನ್ನು ಕಾಡುತ್ತಿದ್ದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ಇಷ್ಟಮಿತ್ರರೊಂದಿಗೆ ಭೋಜನ ಮಾಡುವ ಯೋಗವಿದೆ. ಅಧಿಕ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ. ಕುಲದೇವರ ಪ್ರಾರ್ಥನೆ ಮಾಡಿ.

ತುಲಾ: ವ್ಯವಹಾರದಲ್ಲಿ ಲಾಭ-ನಷ್ಟ ಸಾಮಾನ್ಯ. ಎರಡನ್ನೂ ಸಮನಾಗಿ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ನಿಮ್ಮ ಮನಸ್ಸಿನಲ್ಲಿ ಅಂದುಕೊಂಡಿದ್ದ ಕೆಲಸಗಳನ್ನು ಕಾರ್ಯರೂಪಕ್ಕೆ ತರಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಶ್ಚಿಕ: ವ್ಯಾಪಾರ, ವಹಿವಾಟುಗಳು ಇಂದು ನಿಶ್ಚಿತ ರೂಪದಲ್ಲಿ ಕೈಗೂಡಲಿದೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ಆದರೆ ಸಾಲ ಕೊಡಲು ಹೋಗಬೇಡಿ. ವಾಹನ ಸವಾರರು ಚಾಲನೆಯಲ್ಲಿ ಎಚ್ಚರಿಕೆಯಿಂದಿರಬೇಕು.

ಧನು: ಹೊಸ ಯೋಚನೆಗಳನ್ನು ಕಾರ್ಯಗತಗೊಳಿಸಲು ಶ್ರಮಿಸಲಿದ್ದೀರಿ. ಸ್ವಯಂ ವ್ಯಾಪಾರ, ವ್ಯವಹಾರ ನಡೆಸುವವರಿಗೆ ಮುನ್ನಡೆಯ ಯೋಗವಿದೆ. ಕಟ್ಟಡ ಕಾಮಗಾರಿ ಕೆಲಸ ಮಾಡಲು ಚಿಂತನೆ ನಡೆಸಲಿದ್ದೀರಿ. ತಾಳ್ಮೆ, ಸಂಯಮವಿರಲಿ.

ಮಕರ: ಅರ್ಧಕ್ಕೇ ನಿಂತ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ನಿಮ್ಮ ಮೆಚ್ಚಿನ ವ್ಯಕ್ತಿಗಳನ್ನು ಸದ್ಯದಲ್ಲೇ ಭೇಟಿಯಾಗಲಿದ್ದೀರಿ. ಹಿರಿಯರಿಗೆ ಧಾರ್ಮಿಕ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ದೂರ ಸಂಚಾರಕ್ಕೆ ಸಿದ್ಧತೆ ನಡೆಸುವಿರಿ.

ಕುಂಭ: ಮನಸ್ಸಿನಲ್ಲಿ ಅಂದುಕೊಂಡ ಕೆಲಸಗಳನ್ನು ಜಾರಿಗೆ ತರಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಭಾಗ್ಯ ಕೂಡಿಬರಲಿದೆ. ಮಹಿಳೆಯರಿಗೆ ಮಂಗಳ ವಸ್ತ್ರ ಖರೀದಿ ಯೋಗವಿದೆ. ಖರ್ಚು ವೆಚ್ಚದ ಬಗ್ಗೆ ನಿಗಾ ಇರಲಿ.

ಮೀನ: ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಅಪವಾದಗಳ ಭೀತಿಯಿದೆ. ಸರಕಾರಿ ನೌಕರರಿಗೆ ಉದ್ಯೋಗ ಕ್ಷೇತ್ರದಲ್ಲಿ ಕಾರ್ಯದೊತ್ತಡ ಕಂಡುಬಂದೀತು. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ