ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 4 ಆಗಸ್ಟ್ 2021 (08:38 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಉದ್ಯೋಗ ಕ್ಷೇತ್ರದಲ್ಲಿ ಉನ್ನತ ಸ್ಥಾನಮಾನಕ್ಕಾಗಿ ಶತಪ್ರಯತ್ನ ನಡೆಸಬೇಕಾಗುತ್ತದೆ. ಬಹುದಿನಗಳ ಮನದಾಸೆ ಪೂರ್ತಿ ಮಾಡಲಿದ್ದೀರಿ. ಆರ್ಥಿಕವಾಗಿ ಖರ್ಚು ವೆಚ್ಚಗಳು ಕಂಡುಬರಲಿವೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಷಭ: ನಿಮ್ಮ ವೈಯಕ್ತಿಕ ಸಮಸ್ಯೆಗಳನ್ನು ವೃತ್ತಿರಂಗದಲ್ಲಿ ತಂದು ಗೊಂದಲಕ್ಕೀಡಾಗಬೇಡಿ.  ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ದೊರೆಯಲಿದೆ. ಸರಕಾರಿ ಉದ್ಯೋಗಿಗಳಿಗೆ ಕಾರ್ಯದೊತ್ತಡವಿರಲಿದೆ. ತಾಳ್ಮೆ, ಸಂಯಮ ಅಗತ್ಯ.

ಮಿಥುನ: ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಇಷ್ಟ ದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಶುಭವಾಗಲಿದೆ. ದಾಯಾದಿಗಳೊಂದಿಗಿನ ವಿವಾದ ಬಗೆಹರಿಸಲು ಮುಂದಾಗಲಿದ್ದೀರಿ.

ಕರ್ಕಟಕ: ಅಧಿಕ ಕಾರ್ಯದೊತ್ತಡದಿಂದ ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ. ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸಲಿದ್ದೀರಿ. ಹಿರಿಯರಿಗೆ ಪುಣ್ಯ ಕ್ಷೇತ್ರಗಳ ಸಂದರ್ಶನ ಯೋಗವಿದೆ. ಕಿರು ಸಂಚಾರ ಮಾಡಲಿದ್ದೀರಿ.

ಸಿಂಹ: ಹೊಸದಾಗಿ ಪರಿಚಯವಾಗುವ ವ್ಯಕ್ತಿಗಳಿಂದ ನಿಮ್ಮ ಕಾರ್ಯಸಾಧನೆಗೆ ಅನುಕೂಲವಾಗಲಿದೆ. ನಿರುದ್ಯೋಗಿಗಳಿಗೆ ನಿರಂತರ ಪ್ರಯತ್ನಕ್ಕೆ ಫಲ ಸಿಗಲಿದೆ. ಆರ್ಥಿಕವಾಗಿ ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ.

ಕನ್ಯಾ: ಭವಿಷ್ಯದ ದೃಷ್ಟಿಯಿಂದ ಕೆಲವೊಂದು ಮಹತ್ವದ ನಿರ್ಧಾರ ಕೈಗೊಳ‍್ಳಲಿದ್ದೀರಿ. ಸ್ವಯಂ ವ್ಯಾಪಾರಿಗಳಿಗೆ ಲಾಭವಿಲ್ಲದಿದ್ದರೂ ಹಾಕಿದ ಬಂಡವಾಳಕ್ಕೆ ನಷ್ಟವಾಗದು. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ತುಲಾ: ಅರ್ಧಕ್ಕೇ ನಿಂತ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಬೇಕಾಗುತ್ತದೆ. ಸನ್ಮಿತ್ರರ ಸಂಘ ಒಳಿತುಂಟು ಮಾಡಲಿದೆ. ವಿದ್ಯಾರ್ಥಿಗಳಿಗೆ ಹೊಸ ವಿಚಾರಗಳನ್ನು ಕಲಿಯುವ ಉತ್ಸಾಹ ಬರುವುದು.

ವೃಶ್ಚಿಕ: ವೃತ್ತಿರಂಗದಲ್ಲಿ ನಿಮ್ಮ ಸಹೋದ್ಯೋಗಿಗಳ ಸಹಾಯಕ್ಕೆ ಧಾವಿಸಲಿದ್ದೀರಿ. ಕ್ರಿಯಾತ್ಮಕ ಕೆಲಸಗಳು ಇತರರ ಮೆಚ್ಚುಗೆಗೆ ಪಾತ್ರವಾಗಲಿದೆ. ಯೋಗ್ಯ ವಯಸ್ಕರು ಸೂಕ್ತ ಸಂಬಂಧಕ್ಕೆ ಕೆಲವು ದಿನ ಕಾಯುವುದು ಉತ್ತಮ.

ಧನು: ಮನಸ್ಸಿನ ಮಾತುಗಳನ್ನು ಇತರರೊಂದಿಗೆ ಹಂಚಿಕೊಂಡು ಹಗುರವಾಗಲಿದ್ದೀರಿ. ನೆರೆಹೊರೆಯವರು ನಿಮ್ಮ ಗುಟ್ಟು ತಿಳಿದುಕೊಳ್ಳಲು ಪ್ರಯತ್ನಿಸಲಿದ್ದಾರೆ. ಕೃಷಿಕರಿಗೆ ವ್ಯವಹಾರಕ್ಕೆ ಅಡೆತಡೆಯಾದೀತು. ದೇವತಾ ಪ್ರಾರ್ಥನೆ ಮಾಡಿ.

ಮಕರ: ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶಗಳು ಒದಗಿಬಂದೀತು. ನಿರುದ್ಯೋಗಿಗಳು ಪಾಲಿಗೆ ಬಂದಿದ್ದು ಪಂಚಾಮೃತ ಎಂದುಕೊಳ್ಳಬೇಕಾಗುತ್ತದೆ. ದಾಂಪತ್ಯದಲ್ಲಿ ಹೊಂದಾಣಿಕೆ ಕೊರತೆ ಉಂಟಾದೀತು.

ಕುಂಭ: ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆಗೆ ಅವಕಾಶಗಳು ತೋರಿಬರಲಿವೆ. ವ್ಯವಹಾರದಲ್ಲಿ ನಿಮ್ಮ ಕೆಲಸ ಕಾರ್ಯಗಳಿಗೆ ಅಡ್ಡಿ ಆತಂಕಗಳು ಎದುರಾದರೂ ಅಂತಿಮ ಜಯ ಸಿಗಲಿದೆ. ಕಳೆದು ಹೋದ ವಸ್ತುವಿಗಾಗಿ ಹುಡುಕಾಟ ನಡೆಸಲಿದ್ದೀರಿ.

ಮೀನ: ಬೇರೆಯವರು ನಿಮ್ಮ ಬಗ್ಗೆ ಏನಂದುಕೊಳ್ಳುವರೋ ಎಂಬ ಹಿಂಜರಿಕೆ ಬೇಡ. ಸಂತಾನಾಪೇಕ್ಷಿತ ದಂಪತಿಗಳು ದೇವರ ಮೊರೆ ಹೋಗಲಿದ್ದಾರೆ. ಧಾರ್ಮಿಕ ಕಾರ್ಯಗಳಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಜ್ಯೋತಿಷ್ಯ ಪ್ರಕಾರ ಸಿಂಹ ರಾಶಿಯವರು ಯಾವ ಆಹಾರ ಸೇವಿಸಬೇಕು

ನವಗ್ರಹಗಳ ದೋಷ ನಿವಾರಣೆಗೆ ಈ ಮಂತ್ರ ಓದಿ

ಜ್ಯೋತಿಷ್ಯದ ಪ್ರಕಾರ ಕರ್ಕಟಕ ರಾಶಿಯವರ ಆಹಾರ ಕ್ರಮ ಹೇಗಿರಬೇಕು

ಲಕ್ಷ್ಮೀ ಅಷ್ಟೋತ್ತರ ಶತನಾಮ ಸ್ತೋತ್ರ

ಯುಗಾದಿ ಪಂಚಾಂಗ ಶ್ರವಣ: ಈ ವರ್ಷ ಮಳೆ, ಬೆಳೆ, ಆದಾಯ ಹೇಗಿರಲಿದೆ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments