Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶನಿವಾರ, 7 ಆಗಸ್ಟ್ 2021 (08:39 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಅದೃಷ್ಟವಶಾತ್ ಇಂದು ನೀವು ಅಂದುಕೊಂಡ ಕೆಲಸಗಳು ನೆರವೇರಲಿದೆ. ಬೇರೆಯವರು ನಿಮ್ಮ ಬಗ್ಗೆ ಹೇಳುವ ಚಾಡಿ ಮಾತುಗಳಿಗೆ ತಲೆಕೆಡಿಸಿಕೊಳ್ಳಬೇಕಾಗಿಲ್ಲ. ಮಕ್ಕಳ ವಿದ್ಯಾಭ್ಯಾಸ ನಿಮಿತ್ತ ಮಹತ್ವದ ನಿರ್ಧಾರ ಕೈಗೊಳ್ಳಲಿದ್ದೀರಿ.

ವೃಷಭ: ಹಲವು ವ್ಯವಹಾರಗಳನ್ನು ಮೈಮೇಲೆಳೆದುಕೊಂಡರೆ ಗೊಂದಲಗಳೇ ಜಾಸ್ತಿಯಾಗುವುದು. ಹಿರಿಯರೊಂದಿಗೆ ಅನಗತ್ಯ ಸಂಘರ್ಷ ಬೇಡ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ಕಿರು ಸಂಚಾರ ಮಾಡಲಿದ್ದೀರಿ.

ಮಿಥುನ: ಕೌಟುಂಬಿಕವಾಗಿ ಅಭಿವೃದ್ಧಿ ನೆಮ್ಮದಿ ಕಂಡುಬರಲಿದೆ. ಅನಿರೀಕ್ಷಿತ ಅತಿಥಿಗಳ ಆಗಮನದಿಂದ ಸಂತೋಷ ಹೆಚ್ಚಾಗಲಿದೆ. ಆರ್ಥಿಕವಾಗಿ ಖರ್ಚು ವೆಚ್ಚಗಳ ಬಗ್ಗೆ ನಿಗಾ ಇರಲಿ. ಕೃಷಿಕರಿಗೆ ವ್ಯವಹಾರಕ್ಕೆ ಅನುಕೂಲ.

ಕರ್ಕಟಕ: ನಿಮ್ಮ ಬಗ್ಗೆ ಇನ್ನೊಬ್ಬರು ಹೇಳುವ ಮಾತುಗಳು ನಿಮಗೆ ಪಥ್ಯವಾಗದೇ ಇದ್ದೀತು. ತಾಳ್ಮೆ, ಸಂಯಮ ಅಗತ್ಯ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ. ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ.

ಸಿಂಹ: ಭವಿಷ್ಯದ ದೃಷ್ಟಿಯಿಂದ ಕೆಲವೊಂದು ನಿರ್ಧಾರ ಕೈಗೊಳ್ಳಲಿದ್ದೀರಿ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚಗಳಾಗುವುದು. ಇಷ್ಟ ಮಿತ್ರರ ಭೇಟಿಯಿಂದ ಮನಸ್ಸಿಗೆ ಸಂತೋಷವಾಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ಕನ್ಯಾ: ನಿಮ್ಮ ಮನಸ್ಸಿನಲ್ಲಿರುವ ಭಾವನೆಗಳಿಗೆ, ಯೋಜನೆಗಳಿಗೆ ಸಂಗಾತಿಯ ಸಹಕಾರ ಸಿಗಲಿದೆ. ಮಕ್ಕಳ ದೇಹಾರೋಗ್ಯದಲ್ಲಿ ಏರುಪೇರಾದೀತು. ಬಹಳ ದಿನಗಳ ನಂತರ ಆಪ್ತರ ಭೇಟಿಯಾದ ಖುಷಿ ಸಿಗಲಿದೆ.

ತುಲಾ: ನಿರುದ್ಯೋಗಿಗಳು ಉದ್ಯೋಗಕ್ಕಾಗಿ ಪಡುತ್ತಿದ್ದ ಪ್ರಯತ್ನಕ್ಕೆ ಫಲ ಸಿಗಲಿದೆ. ಸ್ವಯಂ ವೃತ್ತಿಯವರಿಗೆ ಆರ್ಥಿಕವಾಗಿ ಲಾಭ ಕಂಡುಬಂದೀತು. ನೂತನ ದಂಪತಿಗಳಿಗೆ ಸುಂದರ ಕ್ಷಣ ಕಳೆಯುವ ಯೋಗವಿದೆ. ಚಿಂತೆ ಬೇಡ.

ವೃಶ್ಚಿಕ: ಮನಸ್ಸಿನಲ್ಲಿ ಅಂದುಕೊಂಡಿದ್ದ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲಿದ್ದೀರಿ. ಕಷ್ಟದ ಸಮಯದಲ್ಲಿ ಮಿತ್ರರಿಂದ ಸಹಾಯ ಒದಗಿಬರುವುದು. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಪಡೆಯಲು ಶ್ರಮಪಡಬೇಕಾದೀತು.

ಧನು: ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿಗೆ ಖರ್ಚು ವೆಚ್ಚಗಳಾದೀತು. ವಾಹನ ಸಂಚಾರದಲ್ಲಿ ಅಪಘಾತದ ಭೀತಿಯಿದ್ದು, ಎಚ್ಚರಿಕೆ ಅಗತ್ಯ. ಹೊಸ ಜನರ ಭೇಟಿ, ಪರಿಚಯದಿಂದ ವ್ಯವಹಾರಕ್ಕೆ ಅನುಕೂಲವಾಗಲಿದೆ.

ಮಕರ: ವ್ಯಾಪಾರ, ವ್ಯವಹಾರ ಕ್ಷೇತ್ರದಲ್ಲಿ ನಿಮ್ಮ ಬೆನ್ನ ಹಿಂದೆ ಪಿತೂರಿ ನಡೆಸುವವರ ಸಂಚು ಬಯಲಾಗಲಿದೆ. ಶತ್ರು ಬಾಧೆ ನಾಶವಾಗಲಿದ್ದು, ನೆಮ್ಮದಿ ಕಂಡುಬರುವುದು. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ. ತಾಳ್ಮೆಯಿರಲಿ.

ಕುಂಭ: ವೃತ್ತಿರಂಗದಲ್ಲಿ ಮೇಲ್ದರ್ಜೆಗೇರುವ ನಿಮ್ಮ ಕನಸು ಸದ್ಯದಲ್ಲೇ ನನಸಾಗಲಿದೆ. ಆರ್ಥಿಕವಾಗಿ ಹಣಕಾಸಿನ ಖರ್ಚು ವೆಚ್ಚಗಳು ಕಂಡುಬಂದರೂ ಆದಾಯಕ್ಕೆ ಕೊರತೆಯಾಗದು. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ.

ಮೀನ: ಕಾರ್ಯ ನಿಮಿತ್ತ ದೂರ ಸಂಚಾರ ಮಾಡಲಿದ್ದು, ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ. ಭೂಮಿ ಖರೀದಿ ವ್ಯವಹಾರದಲ್ಲಿ ಲಾಭ ಕಂಡುಬರಲಿದೆ. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ಚಿಂತೆ ಬೇಡ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Lakshmi Mantra: ರಾಜ್ಯದಲ್ಲಿ ಸರಾಸರಿ ಗರಿಷ್ಠ ತಾಪಮಾನ 34 ಡಿಗ್ರಿಯಷ್ಟಿರಲಿದೆ ಎಂದು ವರದಿಗಳು ಹೇಳುತ್ತಿವೆ.

Subramanya mantra: ನಾಗದೋಷ, ವಿವಾಹಕ್ಕೆ ಸಮಸ್ಯೆಯಾಗಿದ್ದ ಸುಬ್ರಹ್ಮಣ್ಯನ ಈ ಸ್ತೋತ್ರ ಓದಿ

Mruthyunjaya Mantra: ರೋಗ ಭಯ, ಮೃತ್ಯು ಭಯವಿದ್ದರೆ ಮೃತ್ಯುಂಜಯ ಅಷ್ಟೋತ್ತರ ತಪ್ಪದೇ ಓದಿ

Anjaneya Mantra: ಆಂಜನೇಯ ಅಷ್ಟೋತ್ತರ ಮಂತ್ರವನ್ನು ತಪ್ಪದೇ ಓದಿ

Lakshmi Mantra: ಧನಾಭಿವೃದ್ಧಿ ಆಗಬೇಕಾದ ಧನಲಕ್ಷ್ಮೀ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments