ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಸೋಮವಾರ, 9 ಆಗಸ್ಟ್ 2021 (08:38 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ನಿಮ್ಮ ಆಂತರಿಕ ವಿಚಾರಗಳನ್ನು ಇತರರೊಂದಿಗೆ ಹಂಚಿಕೊಳ್ಳುವ ಮೊದಲು ಯೋಚನೆ ಮಾಡಿ. ಉದ್ಯೋಗ ರಂಗದಲ್ಲಿ ಹಿತಶತ್ರುಗಳ ಕಾಟದಿಂದ ಮುಕ್ತಿ ಸಿಗಲಿದೆ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಲಿದ್ದೀರಿ.

ವೃಷಭ: ಸರಕಾರಿ ಕೆಲಸಗಳನ್ನು ಪೂರ್ತಿ ಮಾಡಲು ಅಲೆದಾಡುವ ಪರಿಸ್ಥಿತಿ ಎದುರಾದೀತು. ವೈಯಕ್ತಿಕ ಕಷ್ಟಗಳಿಗೆ ಮಿತ್ರರು ಹೆಗಲು ಕೊಡಲಿದ್ದಾರೆ. ವ್ಯಾಪಾರೀ ವರ್ಗದವರಿಗೆ ಉನ್ನತಿಯ ಯೋಗವಿದೆ. ತಾಳ್ಮೆ, ಸಂಯಮ ಅಗತ್ಯ.

ಮಿಥುನ: ಸ್ವಯಂ ವೃತ್ತಿಯವರಿಗೆ ಅಡೆತಡೆಗಳು ಬಂದರೂ ಕ್ರಿಯಾತ್ಮಕವಾಗಿ ಯೋಚಿಸುವುದರಿಂದ ಪರಿಹಾರ ಸಿಗಲಿದೆ. ಸಾಮಾಜಿಕವಾಗಿ ಕೀರ್ತಿ ಸಂಪಾದಿಸುವ ಯೋಗವಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ಕರ್ಕಟಕ: ಹಿಂದೆ ಮಾಡಿದ ತಪ್ಪುಗಳ ಬಗ್ಗೆ ಯೋಚಿಸುತ್ತಾ ಕೂರುವುದರಲ್ಲಿ ಅರ್ಥವಿಲ್ಲ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶಗಳು ಸಿಗಲಿವೆ. ಕಾರ್ಯರಂಗದಲ್ಲಿ ನಿಮ್ಮ ಕೆಲಸವಾಗಬೇಕಾದರೆ ಮೇಲಧಿಕಾರಿಗಳ ಮನ ಒಲಿಸಬೇಕಾಗುತ್ತದೆ.

ಸಿಂಹ: ವಿದ್ಯಾರ್ಥಿಗಳು ಕೆಟ್ಟ ಸ್ನೇಹ ಸಂಗದಿಂದ ದೂರವಿದ್ದರೆ ಉತ್ತಮ. ಹಿರಿಯರ ಮಾತುಗಳು ಈಗ ಅಪಥ್ಯವೆನಿಸಿದರೂ ಮುಂದೆ ಅದರ ಮಹತ್ವ ತಿಳಿಯಲಿದೆ. ನಿರುದ್ಯೋಗಿಗಳು ಶನಿದೇವರ ಪ್ರಾರ್ಥನೆ ನಡೆಸಿ ಮುನ್ನಡೆದರೆ ಉತ್ತಮ.

ಕನ್ಯಾ: ಹಲವು ದಿನಗಳ ನಂತರ ಪ್ರೀತಿ ಪಾತ್ರರನ್ನು ಭೇಟಿಯಾದ ಸಂತೋಷ ನಿಮ್ಮದಾಗುವುದು. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಶುಭವಾಗುವುದು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ತುಲಾ: ಮಕ್ಕಳ ವಿಚಾರದಲ್ಲಿ ನಿರ್ಧಾರ ತೆಗೆದುಕೊಳ್ಳುವಾಗ ಸಂಗಾತಿಯೊಂದಿಗೆ ಪರಾಮರ್ಶಿಸುವುದು ಉತ್ತಮ. ವ್ಯಾಪಾರಿಗಳಿಗೆ ಆರ್ಥಿಕವಾಗಿ ಲಾಭ ಗಳಿಸಲು ಅವಕಾಶಗಳು ಸಿಗಲಿವೆ. ದೇವತಾ ಪ್ರಾರ್ಥನೆ ಮಾಡಿ.

ವೃಶ್ಚಿಕ: ಮನಸ್ಸು ತೋರಿದಂತೆ ನಿರ್ಧಾರ ತೆಗೆದುಕೊಳ್ಳುತ್ತಾ ಹೋದರೆ ಸಂಕಷ್ಟಕ್ಕೆ ಸಿಲುಕಬೇಕಾಗುತ್ತದೆ. ಆರ್ಥಿಕವಾಗಿ ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಕೊಂಚ ಬಿಡುವುದ ಸಿಗಲಿದೆ.

ಧನು: ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚ ಮಾಡಲಿದ್ದೀರಿ. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ಬಹಳ ದಿನಗಳ ನಂತರ ಬಂಧು ಮಿತ್ರರ ಭೇಟಿ ಮನಸ್ಸಿಗೆ ಸಂತೋಷ ಕೊಡಲಿದೆ.

ಮಕರ: ವೃತ್ತಿರಂಗದಲ್ಲಿ ಉನ್ನತ ಹಂತಕ್ಕೇರುವ ನಿಮ್ಮ ಕನಸು ಸದ್ಯದಲ್ಲೇ ನನಸಾಗುವುದು. ಸಾಹಿತ್ಯ ಕ್ಷೇತ್ರದಲ್ಲಿರುವವರಿಗೆ ಕೀರ್ತಿ ಸಂಪಾದಿಸುವ ಯೋಗ. ಮಕ್ಕಳ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಧಾರ್ಮಿಕ ಕೆಲಸಗಳಿಂದ ನೆಮ್ಮದಿ.

ಕುಂಭ: ಬಹುದಿನಗಳ ಕನಸು ನನಸು ಮಾಡಿಕೊಳ್ಳಲು ಮುಂದಾಗಲಿದ್ದೀರಿ. ಕೊಡು-ಕೊಳ್ಳುವ ವ್ಯವಹಾರದಲ್ಲಿ ಲಾಭ ಕಂಡುಬರಲಿದೆ. ಯೋಗ್ಯ ವಯಸ್ಕರಿಗೆ ಶೀಘ‍್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಚಿಂತೆ ಬೇಡ.

ಮೀನ: ಆರ್ಥಿಕವಾಗಿ ಅನಿರೀಕ್ಷಿತ ಖರ್ಚು ವೆಚ್ಚಗಳು ಕಂಡುಬರಲಿದ್ದು, ಸಾಲ ಪಾವತಿ ಚಿಂತೆ ಕಾಡಲಿದೆ. ಸಂಗಾತಿಯ ಸಲಹೆಗಳು ಉಪಯೋಗಕ್ಕೆ ಬರಲಿದೆ. ಹಿರಿಯರಿಗೆ ಪುಣ್ಯ ಕ್ಷೇತ್ರಗಳ ಸಂದರ್ಶನ ಯೋಗ. ದಿನದಂತ್ಯಕ್ಕೆ ನೆಮ್ಮದಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಈ ಐದು ರಾಶಿಯವರಿಗೆ 2026 ರಲ್ಲಿ ಸ್ವಂತ ಮನೆ ಕನಸು ನನಸಾಗುತ್ತದೆ

ಮಂಗಳವಾರ ದೇವಿಯ ಅನುಗ್ರಹಕ್ಕಾಗಿ ನವರತ್ನ ಮಾಲಿಕಾ ಸ್ತೋತ್ರ

ಶಿವ ಪಂಚಾಕ್ಷರಿ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಈ ಐದು ರಾಶಿಯವರಿಗೆ 2026 ರಲ್ಲಿ ಮದುವೆ ಯೋಗವಿದೆ

ಶನಿವಾರದಂದು ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಲೇ ಬೇಡಿ

ಮುಂದಿನ ಸುದ್ದಿ
Show comments