Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಗುರುವಾರ, 12 ಆಗಸ್ಟ್ 2021 (08:38 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಉದ್ಯೋಗ ಕ್ಷೇತ್ರದಲ್ಲಿ ನಿಮಗಿರುವ ಸವಾಲುಗಳನ್ನು ಎದುರಿಸಿ ನಿಲ್ಲುವ ಆತ್ಮಸ್ಥೈರ್ಯ ಬೆಳೆಸಿಕೊಳ್ಳಬೇಕು. ವ್ಯಾವಹಾರಿಕವಾಗಿ ಲಾಭ ಕಂಡುಬಂದರೂ ಹಿತಶತ್ರುಗಳ ಕಾಟ ತಪ್ಪದು. ತಾಳ್ಮೆ ಸಂಯಮವಿರಲಿ.

ವೃಷಭ: ನಿಮ್ಮ ಭವಿಷ್ಯದ ಜೀವನಕ್ಕೆ ಬೇಕಾದ ಯೋಜನೆಗಳನ್ನು ಹಾಕಿಕೊಳ್ಳಲಿದ್ದೀರಿ. ಯಾವುದೇ ನಿರ್ಧಾರ ಕೈಗೊಳ್ಳುವ ಮುನ್ನ ಸಂಗಾತಿಯೊಂದಿಗೆ ಪರಾಮರ್ಶಿಸಿ. ಹಿರಿಯರ ದೇಹಾರೋಗ್ಯದಲ್ಲಿ ಏರುಪೇರಾಗಬಹುದು, ಕಾಳಜಿಯಿರಲಿ.

ಮಿಥುನ: ಆಸ್ತಿ ವಿಚಾರವಾಗಿ ಸಹೋದರರೊಂದಿಗೆ ಭಿನ್ನಾಭಿಪ್ರಾಯಗಳಾದೀತು. ಎಚ್ಚರಿಕೆಯಿಂದ ವರ್ತಿಸಿ. ಮಾತಿನ ಮೇಲೆ ನಿಗಾ ಇರಲಿ. ಆರ್ಥಿಕವಾಗಿ ಅನಿರೀಕ್ಷಿತ ಖರ್ಚು ವೆಚ್ಚಗಳು ಎದುರಾದೀತು. ಕುಲದೇವರ ಪ್ರಾರ್ಥನೆ ಮಾಡಿ.

ಕರ್ಕಟಕ: ಹೊಸ ಬಂಡವಾಳ ಹೂಡಿಕೆ ಯೋಜನೆಗೆ ಕೈ ಹಾಕಲು ಇದು ಸಕಾಲ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ಸರಕಾರಿ ಲೆಕ್ಕಪತ್ರಗಳ ಬಗ್ಗೆ ನಿಗಾ ಇರಲಿ. ಸಂಗಾತಿಯ ಬಯಕೆ ಪೂರ್ತಿ ಮಾಡಲಿದ್ದೀರಿ.

ಸಿಂಹ: ಹೊಸ ಜನರ ಭೇಟಿ, ಮಾತುಕತೆಯಿಂದ ಹೊಸ ವಿಚಾರಗಳು ಹೊಳೆಯಲಿವೆ. ಸಾಂಸಾರಿಕವಾಗಿ ನೆಮ್ಮದಿಯ ದಿನಗಳಾಗಲಿವೆ. ನೂತನ ದಂಪತಿಗಳಿಗೆ ಸದ್ಯದಲ್ಲೇ ಮಧುಚಂದ್ರ ಯೋಗ ಕೂಡಿಬರುವುದು.

ಕನ್ಯಾ: ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳನ್ನು ಹೊರಲು ಸಿದ್ಧತೆ ನಡೆಸಬೇಕಾಗುತ್ತದೆ. ಸಂತಾನಾಪೇಕ್ಷಿತ ದಂಪತಿಗಳಿಗೆ ಶುಭ ಸೂಚನೆ ದೊರೆಯಲಿದೆ. ಧಾರ್ಮಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ.

ತುಲಾ: ನಿಮ್ಮ ಮನಸ್ಸಿನ ಭಾವನೆಗೆ ತಕ್ಕಂತೆ ನಿರ್ಧಾರ ತೆಗೆದುಕೊಳ್ಳಲಿದ್ದೀರಿ. ಸಂಗಾತಿಗೆ ಅಚ್ಚರಿಯ ಉಡುಗೊರೆ ನೀಡಲು ಸಿದ್ಧರಾಗಲಿದ್ದೀರಿ. ಬೇರೆಯವರ ಕಷ್ಟಕ್ಕೆ ಸ್ಪಂದಿಸುವ ನಿಮ್ಮ ಗುಣ ಎಲ್ಲರ ಮೆಚ್ಚುಗೆಗೆ ಪಾತ್ರವಾಗಲಿದೆ.

ವೃಶ್ಚಿಕ: ಕಾರ್ಯನಿಮಿತ್ತ ಅಧಿಕ ಓಡಾಟದಿಂದ ದೇಹಾಯಾಸವಾದೀತು. ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ಹಿರಿಯರೊಂದಿಗೆ ಅನಗತ್ಯ ಸಂಘರ್ಷ ಬೇಡ. ಕೃಷಿಕರಿಗೆ ಬೆಳೆ ಕೈಗೆ ಬಂದು ಲಾಭವಾಗಲಿದೆ.

ಧನು: ವೃತ್ತಿರಂಗದಲ್ಲಿ ನಿಮ್ಮ ಎದುರಾಳಿಗಳೂ ಬೆರಗಾಗುವಂತೆ ಕೆಲಸ ಮಾಡಲಿದ್ದೀರಿ. ಆರ್ಥಿಕವಾಗಿ ಅಭಿವೃದ್ಧಿ ಕಂಡುಬರಲಿದ್ದು, ಅನಗತ್ಯ ಚಿಂತೆಗಳಿಗೆ ಕಡಿವಾಣ ಹಾಕುವುದು ಉತ್ತಮ. ದೇವತಾ ಪ್ರಾರ್ಥನೆ ಮರೆಯದಿರಿ.

ಮಕರ: ನಿಮ್ಮ ವೈಯಕ್ತಿಕ ಸಮಸ್ಯೆಗಳನ್ನು ಇತರರೊಂದಿಗೆ ಹೇಳಿಕೊಳ್ಳಲು ಸಂಕೋಚ ಪಡಲಿದ್ಧೀರಿ. ಕಳೆದು ಹೋದ ಸಂಬಂಧಗಳನ್ನು ಮತ್ತೆ ಬೆಸೆಯುವ ಪ್ರಯತ್ನ ನಡೆಸುವಿರಿ. ವ್ಯಾಪಾರಿಗಳಿಗೆ ಮುನ್ನಡೆಯ ಯೋಗವಿದೆ.

ಕುಂಭ: ಎಷ್ಟೋ ದಿನಗಳ ನಂತರ ಇಷ್ಟಮಿತ್ರರ ಭೇಟಿಯಿಂದ ಮನಸ್ಸಿಗೆ ಸಂತೋಷ ಸಿಗಲಿದೆ. ಹಣಕಾಸಿನ ವಿಚಾರವಾಗಿ ಆಪ್ತರೊಂದಿಗೆ ಮನಸ್ತಾಪವಾಗದಂತೆ ಎಚ್ಚರಿಕೆ ವಹಿಸಿ. ನಿಮ್ಮ ಹಳೆಯ ಗುಟ್ಟುಗಳು ಬಯಲಿಗೆ ಬರಲಿವೆ.

ಮೀನ: ಅನಿರೀಕ್ಷಿತವಾಗಿ ಬರುವ ನೆಂಟರಿಷ್ಟರಿಂದ ಮನೆಯಲ್ಲಿ ಸಂಭ್ರಮದ ವಾತಾವರಣವಿರುವುದು. ಇಷ್ಟ ಭೋಜನ ಮಾಡುವ ಯೋಗ ನಿಮ್ಮದಾಗಲಿದೆ. ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಒದಗಿ ಬರಲಿವೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ