ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
ಮೇಷ: ನೂತನ ಕೆಲಸಗಳಿಗೆ ಕೈ ಹಾಕಲು ಕೆಲವು ದಿನ ಕಾಯುವುದು ಒಳ್ಳೆಯದು. ನಿರುದ್ಯೋಗಿಗಳು ಸ್ವಯಂ ಉದ್ಯೋಗದ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ದೊರೆಯಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.
ವೃಷಭ: ಪ್ರೀತಿ ಪಾತ್ರರನ್ನು ಭೇಟಿಯಾಗಲು ಮನಸ್ಸು ಹಾತೊರೆಯಲಿದೆ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಶುಭವಾಗುವುದು. ಯಂತ್ರೋಪಕರಣಗಳ ವೃತ್ತಿಯಲ್ಲಿರುವವರಿಗೆ ಮುನ್ನಡೆಯ ಯೋಗವಿದೆ.
ಮಿಥುನ: ನಿಮ್ಮ ಮಾತಿನಿಂದಲೇ ಇಂದು ತೊಂದರೆಗೆ ಸಿಲುಕಿಕೊಳ್ಳಲಿದ್ದೀರಿ. ಕೌಟುಮಬಿಕವಾಗಿ ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕಾಗುತ್ತದೆ. ವೃತ್ತಿರಂಗದಲ್ಲಿ ಮೇಲ್ದರ್ಜೆಗೇರುವ ನಿಮ್ಮ ಪ್ರಯತ್ನಕ್ಕೆ ಶತ ಪ್ರಯತ್ನ ನಡೆಸಬೇಕಾಗುತ್ತದೆ.
ಕರ್ಕಟಕ: ವೃತ್ತಿರಂಗದಲ್ಲಿ ಉನ್ನತ ಸ್ಥಾನಕ್ಕೇರುವ ಅವಕಾಶಗಳು ಸ್ವಲ್ಪದರಲ್ಲೇ ಕೈತಪ್ಪಿ ಹೋದೀತು. ಇಂದು ಯಾರಿಗೂ ಸಾಲ ಕೊಡಲು ಹೋಗಬೇಡಿ. ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಕೂಡಿಬರಲಿದೆ.
ಸಿಂಹ: ಕಾರ್ಯಾರಂಭದಲ್ಲಿ ಉತ್ಸಾಹ ಕಂಡುಬಂದರೂ ಅಡೆತಡೆಗಳು ಬಂದಾಗ ಧೈರ್ಯ ಕಳೆದುಕೊಳ್ಳದೇ ಮುಂದುವರಿಯುವುದು ಮುಖ್ಯ. ಸಂಗಾತಿಯ ಸಂತೋಷಕ್ಕೆ ಕೆಲವೊಂದು ಅನಿರೀಕ್ಷಿತ ಖರ್ಚು ವೆಚ್ಚಗಳಾಗಬಹುದು.
ಕನ್ಯಾ: ಯಾವುದೇ ವಿಚಾರದ ಬಗ್ಗೆ ಸರಿಯಾಗಿ ಯೋಚನೆ ಮಾಡದೇ ನಿರ್ಧಾರಕ್ಕೆ ಬರಬೇಡಿ. ದಾಂಪತ್ಯದಲ್ಲಿ ಹೊಂದಾಣಿಕೆ ಮುಖ್ಯ. ನೆರೆಹೊರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ಕುಲದೇವರ ಪ್ರಾರ್ಥನೆ ಮಾಡಿದರೆ ಉತ್ತಮ.
ತುಲಾ: ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನಗಳು ಉತ್ತಮವಾಗಲಿದ್ದು, ಉನ್ನತ ಸ್ಥಾನಕ್ಕೇರುವ ಅವಕಾಶಗಳು ಒದಗಿ ಬರಲಿವೆ. ವ್ಯಾಪಾರಿಗಳಿಗೆ ಹಿತಶತ್ರುಗಳ ಭಯ ಕಾಡಲಿದೆ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ.
ವೃಶ್ಚಿಕ: ನಿಮ್ಮ ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ, ಇಷ್ಟ ಭೋಜನ ಮಾಡುವ ಯೋಗ ಕೂಡಿಬರಲಿದೆ. ಹಳೆಯ ಸಂಬಂಧಗಳು ಮರಳಿ ಕೂಡಿಕೊಳ್ಳಲಿದೆ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಕೊಂಚ ಬಿಡುವು ಸಿಗಲಿದೆ.
ಧನು: ನಿಮಗಾಗಿ ಸಿಕ್ಕ ಸಮಯದ ಸದುಪಯೋಗ ಪಡಿಸಿಕೊಳ್ಳಿ. ಸಂಗಾತಿಯ ಸಲಹೆಗಳು ಪಥ್ಯವಾಗದೇ ಇರಬಹುದು. ಆದರೆ ಮಕ್ಕಳ ವಿಚಾರದಲ್ಲಿ ಸಂತೋಷದ ವಾರ್ತೆ ಕೇಳಿಬರಲಿದೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ.
ಮಕರ: ಮನೆ, ವಾಹನ ರಿಪೇರಿ ಇತ್ಯಾದಿ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಹಿರಿಯರಿಗೆ ದೇಹಾರೋಗ್ಯದಲ್ಲಿ ಸಣ್ಣ ಪುಟ್ಟ ಸಮಸ್ಯೆ ಕಂಡುಬಂದೀತು. ಸ್ವಯಂ ವ್ಯಾಪಾರಿಗಳಿಗೆ ಆರ್ಥಿಕವಾಗಿ ಲಾಭ ಗಳಿಸುವ ಅವಕಾಶಗಳಿವೆ. ಚಿಂತೆ ಬೇಡ.
ಕುಂಭ: ಕೆಳಹಂತದ ನೌಕರರಿಗೆ ಭವಿಷ್ಯದ ಚಿಂತೆ ಕಾಡಲಿದೆ. ಹಿರಿಯರಿಗೆ ಧಾರ್ಮಿಕ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ಸಿಗುವುದು. ಪ್ರೀತಿ ಪಾತ್ರರಿಗೆ ಅನಿರೀಕ್ಷಿತ ಉಡುಗೊರೆ ಕೊಡಲಿದ್ದೀರಿ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ ಕೇಳಿಬರುವುದು.
ಮೀನ: ಅಧಿಕ ಕಾರ್ಯದೊತ್ತಡದಿಂದ ದೇಹಾಯಾಸವಾದೀತು. ಆದರೆ ಸಾಂಸಾರಿಕವಾಗಿ ನೆಮ್ಮದಿಯ ದಿನಗಳಿವು. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗಲಿದೆ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ ಕೂಡಿಬರಲಿದೆ.