Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಸೋಮವಾರ, 16 ಆಗಸ್ಟ್ 2021 (08:37 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ನಿಮ್ಮ ಉದ್ದೇಶಿತ ಕೆಲಸಗಳಿಗೆ ಅಡೆತಡೆಗಳುಂಟಾದೀತು. ಆದರೂ ಆತ್ಮಸ್ಥೈರ್ಯದಿಂದ ಮುನ್ನಡೆಯಿರಿ. ಮಾಡದ ತಪ್ಪಿನ ಬಗ್ಗೆ ಅನಗತ್ಯ ಕೀಳರಿಮೆ ಬೇಕಾಗಿಲ್ಲ. ಆಪ್ತರೊಂದಿಗೆ ಮನಸ್ಸು ಬಿಚ್ಚಿ ಮಾತನಾಡಲಿದ್ದೀರಿ. ಚಿಂತೆ ಬೇಡ.

ವೃಷಭ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಕೆಲಸಗಳು ಸಹೋದ್ಯೋಗಿಗಳೂ ಅಸೂಯೆಪಡುವಂತೆ ಇರಲಿದೆ. ಉನ್ನತ ಸ್ಥಾನಕ್ಕೇರುವ ನಿಮ್ಮ ಕನಸು ಸದ್ಯದಲ್ಲೇ ನನಸಾಗಲಿದೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ.

ಮಿಥುನ: ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲು ಇದು ಸಕಾಲ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಕರ್ಕಟಕ: ವಾಹನ, ಭೂಮಿ ಖರೀದಿ ಮಾಡುವ ನಿಮ್ಮ ಕನಸು ಸದ್ಯದಲ್ಲೇ ನನಸಾಗಲಿದೆ. ನಿಮ್ಮ ಕೆಲಸಗಳಲ್ಲಿ ಸಂಗಾತಿಯ ಸಹಕಾರ ಸಿಗಲಿದೆ. ಕೌಟುಂಬಿಕವಾಗಿ ನೆಮ್ಮದಿಯ ದಿನಗಳಿವು. ವೃತ್ತಿರಂಗದಲ್ಲಿ ಶತ್ರುಭಯ ಕಾಡೀತು. ತಾಳ್ಮೆಯಿರಲಿ.

ಸಿಂಹ: ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಉನ್ನತಾಧಿಕಾರದ ಕನಸು ಸದ್ಯದಲ್ಲೇ ನನಸಾಗಲಿದೆ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಶುಭವಾಗಲಿದೆ. ಕಿರು ಓಡಾಟ ನಡೆಸಬೇಕಾಗುತ್ತದೆ.

ಕನ್ಯಾ: ಕೌಟುಂಬಿಕವಾಗಿ ಕೆಲವು ಮಹತ್ವದ ನಿರ್ಧಾರ ಕೈಗೊಳ್ಳುವ ಮುನ್ನ ಸಂಗಾತಿಯೊಂದಿಗೆ ಪರಾಮರ್ಶಿಸುವುದು ಉತ್ತಮ. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಕೊಡು-ಕೊಳ್ಳುವ ವ್ಯವಹಾರದಲ್ಲಿ ಲಾಭ ಪಡೆಯಲಿದ್ದೀರಿ.

ತುಲಾ: ನಿರುದ್ಯೋಗಿಗಳು ಸೂಕ್ತ ಉದ್ಯೋಗಕ್ಕಾಗಿ ಹುಡುಕಾಟ ಮುಂದುವರಿಸಲಿದ್ದೀರಿ. ಸ್ವಯ ವೃತ್ತಿಯವರಿಗೆ ಲಾಭದ ಚಿಂತೆ ಕಾಡೀತು. ಹಣಗಳಿಕೆಗೆ ಅನ್ಯ ಮಾರ್ಗಗಳತ್ತ ಚಿಂತನೆ ನಡೆಸಲಿದ್ದಾರೆ. ಹಳೆಯ ಮಿತ್ರರನ್ನು ಭೇಟಿಯಾಗಲಿದ್ದೀರಿ.

ವೃಶ್ಚಿಕ: ವೃತ್ತಿರಂಗದಲ್ಲಿ ಅಡೆತಡೆಗಳಿದ್ದರೂ ಅಂತಿಮ ಜಯ ನಿಮ್ಮದಾಗುವುದು. ಮಕ್ಕಳ ಭವಿಷ್ಯಕ್ಕಾಗಿ ಮಹತ್ವದ ನಿರ್ಧಾರ ಕೈಗೊಳ‍್ಳಲಿದ್ದೀರಿ. ಅನಿರೀಕ್ಷಿತವಾಗಿ ಖರ್ಚು ವೆಚ್ಚಗಳಾದೀತು. ವಾಹನ ಸಂಚಾರ ಮಾಡುವಾಗ ಅಪಘಾತದ ಭಯ ಕಾಡಲಿದೆ.

ಧನು: ನಿಮ್ಮದಲ್ಲದ ತಪ್ಪಿಗೆ ಕೊರಗುತ್ತಾ ಕೂರುವುದರಲ್ಲಿ ಅರ್ಥವಿಲ್ಲ. ವ್ಯವಹಾರ ಕ್ಷೇತ್ರದಲ್ಲಿ ಇನ್ನೊಬ್ಬರ ಮೇಲೆ ಅತಿಯಾದ ಅವಲಂಬನೆಯೂ ಒಳ್ಳೆಯದಲ್ಲ. ಸಂಗಾತಿಯ ಸಲಹೆಗಳನ್ನು ಸ್ವೀಕರಿಸಿ. ಕುಲದೇವರ ಪ್ರಾರ್ಥನೆ ಮಾಡಿ.

ಮಕರ: ನಿಮ್ಮ ಮಾತಿಗೆ ಯಾರೂ ಬೆಲೆಕೊಡುತ್ತಿಲ್ಲ ಎಂಬ ಬೇಸರ ಕಾಡೀತು. ಮಾನಸಿಕವಾಗಿ ಋಣಾತ್ಮಕ ಚಿಂತನೆಗಳಿಗೆ ಅವಕಾಶ ಕೊಡಬೇಡಿ. ಪ್ರೇಮಿಗಳ ಗುಟ್ಟು ಮನೆಯವರ ಎದುರು ಬಹಿರಂಗವಾಗಲಿದೆ. ತಾಳ್ಮೆ, ಸಂಯಮ ಅಗತ್ಯ.

ಕುಂಭ: ನಿಮ್ಮ ಮನಸ್ಸಿನಲ್ಲಿ ನಡೆಯುತ್ತಿರುವ ದ್ವಂದ್ವಗಳಿಗೆ ಪ್ರೀತಿ ಪಾತ್ರರು ಪರಿಹಾರ ಕೊಡಲಿದ್ದಾರೆ. ಮಕ್ಕಳ ವಿಚಾರದಲ್ಲಿ ಸಂತೋಷದ ವಾರ್ತೆ ಕೇಳಿಬಂದೀತು. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ. ಅನಗತ್ಯ ಚಿಂತೆ ಬೇಡ.

ಮೀನ: ಅಂದುಕೊಂಡ ಕೆಲಸಗಳು ನಿರೀಕ್ಷಿತ ರೀತಿಯಲ್ಲಿ ಸಾಗಲಿವೆ. ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಕಂಡುಬಂದೀತು. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿಗೆ ಖರ್ಚು ವೆಚ್ಚಗಳಾಗಲಿವೆ. ದಾಯಾದಿ ಕಲಹಗಳಿಗೆ ಅಂತ್ಯ ಸಿಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ