Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಮಂಗಳವಾರ, 17 ಆಗಸ್ಟ್ 2021 (08:37 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಬೆಂಬಲಕ್ಕೆ ಸಹೋದ್ಯೋಗಿಗಳು ಬರಲಿದ್ದಾರೆ. ಹೊಸ ಯೋಜನೆಗಳಿಗೆ ಕೈ ಹಾಕಲು ಇದು ಸಕಾಲ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ದುಂದು ವೆಚ್ಚಗಳಿಗೆ ಕಡಿವಾಣ ಹಾಕಿ.

ವೃಷಭ: ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ವಿಚಾರವಂತರ ಮಾತುಗಳಿಗೆ ಕಿವಿಗೊಡುವುದರಿಂದ ಹೊಸ ಐಡಿಯಾಗಳು ಹೊಳೆಯಲಿವೆ. ಕಿರು ಸಂಚಾರ ಮಾಡಲಿದ್ದೀರಿ.

ಮಿಥುನ: ಭವಿಷ್ಯದ ಯೋಜನೆಗಳಿಗೆ ಬಂಡವಾಳ ಹೂಡಲಿದ್ದೀರಿ. ಸನ್ಮಿತ್ರರ ಸಂಗದಿಂದ ಒಳಿತೇ ಆಗಲಿದೆ. ನಿಮ್ಮ ಕೆಲಸಗಳಿಗೆ ಸಂಗಾತಿಯ ಸಾಥ್ ಸಿಗುವುದು. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ.

ಕರ್ಕಟಕ: ಕಾರ್ಯರಂಗದಲ್ಲಿ ನೀವು ಅಂದುಕೊಂಡ ಕೆಲಸಗಳಿಗೆ ವಿಘ್ನ ಭಯ ತೋರೀತು. ವೈಯಕ್ತಿಕವಾಗಿ ದೇಹಾರೋಗ್ಯದ ಬಗ್ಗೆ ಗಮನಕೊಡುವುದು ಮುಖ್ಯ. ಸಂಗಾತಿಯ ಮಾತುಗಳಿಗೆ ಕಿವಿಗೊಡಬೇಕಾಗುತ್ತದೆ. ತಾಳ್ಮೆಯಿರಲಿ.

ಸಿಂಹ: ರಾಜಕೀಯ ರಂಗದಲ್ಲಿರುವವರಿಗೆ ಮುನ್ನಡೆಯ ಯೋಗವಿದೆ. ಕಳೆದು ಹೋದ ಸಂಬಂಧಗಳನ್ನು ಮತ್ತೆ ಬೆಸೆಯಲು ಪ್ರಯತ್ನಿಸಲಿದ್ದೀರಿ. ಹಿರಿಯರಿಗೆ ತೀರ್ಥ ಕ್ಷೇತ್ರಗಳಿಗೆ ಭೇಟಿ ನೀಡುವ ಯೋಗ ಕೂಡಿಬರಲಿದೆ. ಚಿಂತೆ ಬೇಡ.

ಕನ್ಯಾ: ವ್ಯವಹಾರ ಕುದುರಿಸುವಾಗ ಕೆಲವೊಂದನ್ನು ಪಡೆಯಬೇಕಾದರೆ ಕೆಲವೊಂದನ್ನು ಕಳೆದುಕೊಳ್ಳಬೇಕಾಗುತ್ತದೆ. ಅತಿಯಾಗಿ ಯಾವುದರ ಮೇಲೂ ವ್ಯಾಮೋಹ ಬೇಡ. ಮಹಿಳೆಯರಿಗೆ ಚಿನ್ನಾಭರಣಗಳ ಖರೀದಿ ಯೋಗವಿದೆ.

ತುಲಾ: ಮಕ್ಕಳ ವಿಚಾರದಲ್ಲಿ ಮಹತ್ವದ ತೀರ್ಮಾನ ತೆಗೆದುಕೊಳ್ಳಲಿದ್ದೀರಿ. ವ್ಯವಹಾರ ನಿಮಿತ್ತ ದೂರದೂರಿಗೆ ಪ್ರಯಾಣ ಮಾಡಬೇಕಾಗಿ ಬಂದೀತು. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ. ಕುಲದೇವರ ಪ್ರಾರ್ಥನೆ ಮಾಡಿ.

ವೃಶ್ಚಿಕ: ಬಂಧು ಮಿತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಇಷ್ಟಭೋಜನ ಯೋಗ ಕೂಡಿಬರಲಿದೆ. ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದ್ದು, ನೆಮ್ಮದಿ ಮೂಡಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ಧನು: ಮನಸ್ಸಿನ ಮಾತುಗಳನ್ನು ಆಪ್ತರೊಂದಿಗೆ ಹಂಚಿಕೊಂಡು ಹಗುರವಾಗಲಿದ್ದೀರಿ. ಅನಗತ್ಯವಾಗಿ ಇನ್ನೊಬ್ಬರ ವಿಚಾರದಲ್ಲಿ ಮೂಗು ತೂರಿಸುವ ಪ್ರಯತ್ನ ಬೇಡ. ಮಕ್ಕಳ ದೇಹಾರೋಗ್ಯ ಚಿಂತೆಗೆ ಕಾರಣವಾದೀತು.

ಮಕರ: ಕೌಟುಂಬಿಕ ವಿಚಾರದಲ್ಲಿ ಸಂಗಾತಿಯೊಂದಿಗೆ ಭಿನ್ನಾಭಿಪ್ರಾಯಗಳು ತಲೆದೋರೀತು. ಮಾತಿನ ಮೇಲೆ ನಿಗಾ ಇರಲಿ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಕಂಡುಬರಲಿದೆ. ವಾಹನ ಖರೀದಿ ಮಾಡುವ ನಿಮ್ಮ ಕನಸು ಸದ್ಯದಲ್ಲೇ ನನಸಾಗಲಿದೆ.

ಕುಂಭ: ಬೇರೆಯವರು ನಿಮ್ಮ ಬಗ್ಗೆ ಏನಂದುಕೊಳ್ಳುವರೋ ಎಂಬ ಕೀಳರಿಮೆ ಬೇಡ. ಅತಿಯಾಗಿ ಯಾರ ಮೇಲೂ ಅವಲಂಬನೆ ಒಳ್ಳೆಯದಲ್ಲ. ಸರಕಾರಿ ಉದ್ಯೋಗಿಗಳಿಗೆ ಕಾರ್ಯದೊತ್ತಡ ಕಂಡುಬರಲಿದೆ. ಆರೋಗ್ಯದ ಮೇಲೆ ಕಾಳಜಿಯಿರಲಿ.

ಮೀನ: ನಿಮ್ಮ ಉಜ್ವಲ ಭವಿಷ್ಯಕ್ಕಾಗಿ ಇಂದೇ ಯೋಜನೆ ಹಾಕಿಕೊಳ್ಳಲಿದ್ದೀರಿ. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ಒದಗಿಬರಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯಕ್ಕೆ ಸಿದ್ಧತೆ ನಡೆಯಲಿದೆ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ದೀಪ ಹಚ್ಚುವಾಗ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

Shani Mantra: ಶನಿದೋಷ ಪರಿಹಾರಕ್ಕೆ ಶನಿ ಅಷ್ಟೋತ್ತರ ಶತನಾಮಾವಳಿ: ಕನ್ನಡದಲ್ಲಿ ಇಲ್ಲಿದೆ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Vaikunta Ekadashi: ವೈಕುಂಠ ಏಕಾದಶಿಯಂದು ಯಾವ ಮಂತ್ರ ಪಠಿಸಬೇಕು

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments