Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಬುಧವಾರ, 18 ಆಗಸ್ಟ್ 2021 (08:38 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಮನಸ್ಸಿನಲ್ಲಿ ಒಂದು ರೀತಿಯ ಬೇಸರದ ಛಾಯೆ ಇರುವುದು. ನೀವು ಅಂದುಕೊಂಡ ರೀತಿಯಲ್ಲಿ ಕೆಲಸಗಳು ನಡೆಯುತ್ತಿಲ್ಲ ಎಂಬ ನೋವು ಕಾಡಲಿದೆ. ಆಪ್ತರೊಂದಿಗೆ ದುಃಖ ಹಂಚಿಕೊಂಡು ಹಗುರವಾಗಲಿದ್ದೀರಿ.

ವೃಷಭ: ಹಿಂದೆ ಹೂಡಿಕೆ ಮಾಡಿದ್ದ ಯೋಜನೆಗಳು ಇಂದು ಫಲ ಕೊಡಲಿವೆ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ಮನೆಗೆ ಅನಿರೀಕ್ಷಿತ ನೆಂಟರಿಷ್ಟರ ಆಗಮನ ಸಾಧ್ಯತೆ. ಹಿರಿಯರ ದೇಹಾರೋಗ್ಯದಲ್ಲಿ ಏರುಪೇರು ಕಂಡುಬಂದೀತು.

ಮಿಥುನ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಕ್ರಿಯಾತ್ಮಕ ಕೆಲಸಗಳಿಗೆ ಮೇಲಧಿಕಾರಿಗಳಿಂದ ಮೆಚ್ಚುಗೆ ಸಿಗಲಿದೆ. ಸರಕಾರಿ ಉದ್ಯೋಗಿಗಳಿಗೆ ಕಾರ್ಯದೊತ್ತಡದಿಂದ ಕೊಂಚ ಬಿಡುವು ಸಿಗಲಿದೆ. ಕಿರು ಸಂಚಾರ ಮಾಡಬೇಕಾಗಬಹುದು.

ಕರ್ಕಟಕ: ನೀವು ಅಂದುಕೊಂಡಿದ್ದು ಒಂದು ಆಗುವುದು ಇನ್ನೊಂದು ಎಂಬ ಪರಿಸ್ಥಿತಿ ಎದುರಾದೀತು. ಶನಿದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ನಿರುದ್ಯೋಗಿಗಳ ಕಂಟಕಗಳು ದೂರವಾಗಲಿದೆ. ತಾಳ್ಮೆಯಿರಲಿ.

ಸಿಂಹ: ಬೇರೆಯವರು ನಿಮ್ಮ ಬಗ್ಗೆ ಹೇಳುವ ಅಭಿಪ್ರಾಯಗಳಿಗೆ ಕೆಲವೊಮ್ಮೆ ಕಿವಿಗೊಡಬೇಕಾಗುತ್ತದೆ. ಸಂಗಾತಿಗೆ ಅಚ್ಚರಿಯ ಉಡುಗೊರೆ ನೀಡಿ ಸಂತೋಷ ಕೊಡಲಿದ್ದೀರಿ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಕೊಂಚ ವಿರಾಮ ಸಿಗಲಿದೆ.

ಕನ್ಯಾ: ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಅಂದುಕೊಂಡ ಕೆಲಸ ಸುಗಮವಾಗಿ ನೆರವೇರಲಿದೆ. ಕೊಡು-ಕೊಳ್ಳುವ ವ್ಯವಹಾರದಿಂದ ಲಾಭ ಕಂಡುಬರಲಿದೆ. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗಲಿದೆ.

ತುಲಾ: ಉದ್ಯೋಗ ಕ್ಷೇತ್ರದಲ್ಲಿ ಉನ್ನತ ಸ್ಥಾನಕ್ಕೇರುವ ಅವಕಾಶಗಳು ಎದುರಾದಾಗ ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಿ. ಕೃಷಿಕರಿಗೆ ವ್ಯವಹಾರದಲ್ಲಿ ಮುನ್ನಡೆಯ ಯೋಗವಿದೆ. ಕೌಟುಂಬಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಿದ್ದೀರಿ.

ವೃಶ್ಚಿಕ: ಇಂದು ನೀವು ಕೈಹಾಕುವ ಕೆಲಸದಲ್ಲಿ ಗೆಲುವು ಶತಸ್ಸಿದ್ಧ. ಆದರೆ ಹಿತಶತ್ರುಗಳ ಹುನ್ನಾರ ಅರಿತು ನಡೆಯಿರಿ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡಲಿದ್ದೀರಿ.

ಧನು: ಹಿಂದೆ ಮಾಡಿದ ತಪ್ಪುಗಳ ಬಗ್ಗೆ ಯೋಚಿಸುತ್ತಾ ಕೂರುವುದರಲ್ಲಿ ಅರ್ಥವಿಲ್ಲ. ಹೊಸ ದಾರಿ ಕಂಡುಕೊಳ್ಳಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಫಲ ಸಿಗಲಿದೆ. ವ್ಯಾಪಾರ, ವಹಿವಾಟಿನಲ್ಲಿ ಅಡೆತಡೆಯಿದ್ದರೂ ಮುನ್ನಡೆ ಕಂಡುಬರಲಿದೆ.

ಮಕರ: ಯಾವುದೇ ವಿಚಾರವಾದರೂ ಕುಟುಂಬ ಸದಸ್ಯರೊಂದಿಗೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುವುದು ಉತ್ತಮ. ನೀವು ಇಂದು ಇಡುವ ಹೆಜ್ಜೆ ಭವಿಷ್ಯಕ್ಕೆ ಪೂರಕವಾಗಲಿದೆ. ಕಳೆದು ಹೋದ ವಸ್ತುವಿಗಾಗಿ ಹುಡುಕಾಟ ನಡೆಸಲಿದ್ದೀರಿ.

ಕುಂಭ: ಸರಕಾರಿ ಉದ್ಯೋಗಿಗಳಿಗೆ ಮುಂಬಡ್ತಿ ಯೋಗ ಕಂಡುಬಂದೀತು. ಆರ್ಥಿಕವಾಗಿ ಹಣಕಾಸಿನ ಸ್ಥಿತಿಗತಿ ಸುಧಾರಿಸಲಿದ್ದು, ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ. ಪ್ರೀತಿ ಪಾತ್ರರ ಸಮಾಗವಾಗಲಿದೆ.

ಮೀನ: ದಾಯಾದಿ ಕಲಹಗಳಿಗೆ ಹಿರಿಯರ ಮಧ್ಯಸ್ಥಿಕೆ ಪಡೆಯಲಿದ್ದೀರಿ. ಧಾರ್ಮಿಕ ಕಾರ್ಯಗಳಿಗಾಗಿ ಧನವಿನಿಯೋಗ ಮಾಡಲಿದ್ದೀರಿ. ಹಿರಿಯರಿಗೆ ದಾನ ಧರ್ಮಾದಿಗಳಿಂದ ನೆಮ್ಮದಿ ಸಿಗುವುದು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ