Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಗುರುವಾರ, 19 ಆಗಸ್ಟ್ 2021 (08:36 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಮನಸ್ಸಿನಲ್ಲಿ ಗೊಂದಲಕ್ಕೆ ಅವಕಾಶ ಮಾಡಿಕೊಡಬೇಡಿ. ಉತ್ತಮ ಜನಮನ್ನಣೆ ಸಿಗಲಿದ್ದು, ಇತರರ ಪ್ರೀತಿ ವಿಶ್ವಾಸ ಗಳಿಸಲಿದ್ದೀರಿ. ಉದ್ಯೋಗ ಕ್ಷೇತ್ರದಲ್ಲಿ ಭಿನ್ನಾಭಿಪ್ರಾಯಗಳಿಗೆ ಅವಕಾಶ ಕೊಡಬೇಡಿ. ತಾಳ್ಮೆ, ಸಂಯಮವಿರಲಿ.

ವೃಷಭ: ನಿಮ್ಮ ಕಾರ್ಯಕ್ಷೇತ್ರದಲ್ಲಿ ಸಫಲತೆ ಸಿಗಲಿದೆ. ಸಾಮಾಜಿಕವಾಗಿ ಎಲ್ಲರ ಪ್ರೀತಿ ವಿಶ್ವಾಸಕ್ಕೆ ಕಾರಣವಾಗಲಿದ್ದೀರಿ. ಆರ್ಥಿಕವಾಗಿ ಹಣಕಾಸಿನ ವ್ಯವಹಾರ ಮಾಡುವ ಎಚ್ಚರಿಕೆ ಅಗತ್ಯ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಲಿದ್ದೀರಿ.

ಮಿಥುನ: ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗ ನಿಮಿತ್ತ ದೂರದೂರಿಗೆ ಪ್ರಯಾಣ ಬೆಳೆಸಬೇಕಾಗಿತ್ತು. ಅನಿರೀಕ್ಷಿತವಾಗಿ ಕಾರ್ಯಸಾಧನೆಯಾಗಲಿದೆ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗೆ ಸಿದ್ಧರಾಗಬೇಕಾಗುತ್ತದೆ. ತಾಳ್ಮೆಯಿರಲಿ.

ಕರ್ಕಟಕ: ಬಯಸಿದ ವ್ಯಕ್ತಿಗಳನ್ನು ಆಕಸ್ಮಿಕವಾಗಿ ಭೇಟಿಯಾದಾಗ ಸಂತೋಷವಾಗಲಿದೆ. ಸರಕಾರಿ ಲೆಕ್ಕಪತ್ರಗಳ ಬಗ್ಗೆ ನಿಗಾ ಇರಲಿ. ದಾಯಾದಿ ಕಲಹಗಳಿಗೆ ಅಂತ್ಯ ಸಿಗಲಿದೆ. ಹಿರಿಯರಿಗೆ ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಯೋಗವಿದೆ.

ಸಿಂಹ: ದಾಂಪತ್ಯದಲ್ಲಿ ಹೊಂದಾಣಿಕೆ ಕೊರತೆಯಿಂದ ಭಿನ್ನಾಭಿಪ್ರಾಯಗಳಾದೀತು. ಮಾತಿನ ಮೇಲೆ ನಿಗಾ ಇರಲಿ. ಧನಾರ್ಜನೆಗೆ ಉತ್ತಮ ಅವಕಾಶಗಳಿದ್ದು, ಸರಿಯಾಗಿ ಬಳಸಿಕೊಳ್ಳಿ. ದೇವತಾ ಪ್ರಾರ್ಥನೆ ಮಾಡಿ.

ಕನ್ಯಾ: ನಿಮ್ಮ ಮನಸ್ಸಿಗೆ ಇಷ್ಟವಾದವರ ಜೊತೆ ಕಾಲ ಕಳೆಯಲಿದ್ದೀರಿ. ಇಷ್ಟಭೋಜನ ಮಾಡುವ ಯೋಗ ಕೂಡಿಬರಲಿದೆ. ಮಕ್ಕಳಿಂದ ಸಂತೋಷ ಸಿಗಲಿದೆ. ಉದ್ಯೋಗ ಅರಸುತ್ತಿರುವವರಿಗೆ ಉತ್ತಮ ಅವಕಾಶಗಳು ಸಿಗಲಿವೆ.

ತುಲಾ: ಅತಿಯಾದ ಕಾರ್ಯದೊತ್ತಡದಿಂದ ದೇಹಾಯಾಸವಾದೀತು. ಆರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ವಿದ್ಯಾರ್ಥಿಗಳು ಸ್ವಂತ ಪರಿಶ್ರಮಕ್ಕೆ ತಕ್ಕ ಫಲ ಪಡೆಯಲಿದ್ದಾರೆ. ನಿಮ್ಮ ಹಿತ ಶತ್ರುಗಳ ಹುನ್ನಾರಗಳು ಬಯಲಿಗೆ ಬರಲಿವೆ.

ವೃಶ್ಚಿಕ: ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದು, ಮನಸ್ಸಿಗೆ ಸಂತೋಷ ಸಿಗಲಿದೆ. ದೇಹಾರೋಗ್ಯದಲ್ಲಿ ಇದುವರೆಗೆ ಇದ್ದ ಸಮಸ್ಯೆಗಳು ನಿವಾರಣೆಯಾಗಲಿವೆ. ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧ ಕೂಡಿಬರಲಿದೆ.

ಧನು: ವ್ಯಾಪಾರ, ವ್ಯವಹಾರದಲ್ಲಿ ಸಮಾಧಾನ, ಅಭಿವೃದ್ಧಿ ಕಂಡುಬರಲಿದ್ದು, ಚಿಂತೆಗೆ ಅವಕಾಶವಿಲ್ಲ. ಆದರೆ ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ಸಂಗಾತಿಯ ಕಿವಿ ಮಾತುಗಳು ಅಪಥ್ಯವೆನಿಸೀತು. ವಾಹನ ಸಂಚಾರದಲ್ಲಿ ಎಚ್ಚರಿಕೆಯಿರಲಿ.

ಮಕರ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ತಲ್ಲೀನತೆ ಇತರರ ಮೆಚ್ಚುಗೆಗೆ ಪಾತ್ರವಾಗಲಿದೆ. ಕ್ರಿಯಾತ್ಮಕ ಯೋಚನೆಗಳಿಂದ ಸಮಸ್ಯೆಗಳನ್ನು ಬಗೆಹರಿಸಲಿದ್ದೀರಿ. ನೂತನ ದಂಪತಿಗಳಿಗೆ ಸುಂದರ ಕ್ಷಣ ಕಳೆಯುವ ಯೋಗ ಸಿಗಲಿದೆ.

ಕುಂಭ: ನಿಮ್ಮ ವ್ಯವಹಾರ ನಿಮಿತ್ತ ದೂರ ಸಂಚಾರ ಮಾಡಬೇಕಾಗಿಬರಬಹುದು. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಭರವಸೆ ಸಿಗಲಿದೆ. ಮಹಿಳೆಯರಿಗೆ ಗೃಹಕೃತ್ಯಗಳಿಂದ ದೇಹಾಯಾಸವಾದೀತು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮೀನ: ಹೊಸ ಮಿತ್ರರ ಭೇಟಿಯಿಂದ ನಿಮ್ಮ ಕಾರ್ಯಸಾಧನೆಗೆ ಅನುಕೂಲವಾಗಲಿದೆ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆ ಪಡೆಯಲಿದ್ದೀರಿ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ದಿನದಂತ್ಯಕ್ಕೆ ಅಚ್ಚರಿ ಸುದ್ದಿ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ